Author: admin

ಕೊರಟಗೆರೆ: ಅನಾರೋಗ್ಯದ ನಡುವೆಯೂ ಅಭಿಮಾನಿಗಳು ಆಯೋಜಿಸಿದ್ದ ಬೃಹತ್ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಸಾವಿರಾರು ಕಾರ್ಯಕರ್ತರು ಅದೂರಿ ಸ್ವಾಗತ ಕೋರಿದರು. ಸಿಡಿಮದ್ದಿನ ಸಂಭ್ರಮ, ಘೋಷಣೆಗಳು ಹಾಗೂ ಮಹಿಳೆಯರ ನೃತ್ಯದ ಮೂಲಕ ನೆಚ್ಚಿನ ನಾಯಕರಿಗೆ ಭಾವಪೂರ್ಣ ಸ್ವಾಗತ ದೊರೆಯಿತು. ಕೊರಟಗೆರೆಯ ಜೂನಿಯರ್ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಾ .ಜಿ ಪರಮೇಶ್ವರ್, ಎರಡನೇ ಬಾರಿ ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಲ್ಲಲು ಕೊರಟಗೆರೆ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ. ಹೈಕಮಾಂಡ್ ಅವಕಾಶ ನೀಡಿರಬಹುದು, ಆದರೆ ನೀವು ಗೆಲ್ಲಿಸದಿದ್ದರೆ ಈ ಸ್ಥಾನ ನಮಗೆ ದೊರೆಯುತ್ತಿರಲಿಲ್ಲ ಎಂದು ಕೃತಜ್ಞತೆ ಸಲ್ಲಿಸಿದರು. ನನಗೆ ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿ ಉಪಮುಖ್ಯಮಂತ್ರಿಯಾಗಿ ಹಾಗೂ ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುವ ಅವಕಾಶ ಸಿಕ್ಕಿರುವುದಕ್ಕೆ ಕೊರಟಗೆರೆ ಕ್ಷೇತ್ರದ ಜನರ ಬೆಂಬಲವೇ ಕಾರಣ. ಸಿದ್ದರಾಮಯ್ಯರ ಮಾರ್ಗದರ್ಶನ ಪಕ್ಷಕ್ಕೆ ಅತ್ಯಗತ್ಯವಾಗಿದ್ದು, 3 ವರ್ಷಗಳ ಕಾಲ…

Read More

ತಿಪಟೂರು: ಹೇಮಾವತಿ ಲಿಂಕ್ ಕೆನಾಲ್ (ಸಂಪರ್ಕನಾಲೆ) ಯೋಜನೆಯಿಂದ ತುಮಕೂರು ಜಿಲ್ಲೆಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ದೊಡ್ಡ ಅನ್ಯಾಯವಾಗುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಪಟೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ಜಿಲ್ಲೆಯ ರೈತರ ಪಾಲಿಗೆ ಕರಾಳ ಶಾಸನವಾಗಲಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಜಿ.ಎಸ್. ಪರಮೇಶ್ವರ್ ಅವರು ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಬಳಿಕ ಹೇಮಾವತಿ ಸಂಪರ್ಕನಾಲೆ ವಿಚಾರದಲ್ಲಿ ತಮ್ಮ ವರಸೆಯನ್ನೇ ಬದಲಾಯಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಒತ್ತಡಕ್ಕೆ ಮಣಿದು, ಜಿಲ್ಲೆಯ ಹಿತಾಸಕ್ತಿಯನ್ನು ಬಲಿಗೊಟ್ಟು ಕೆನಾಲ್ ಕೆಲಸ ಪ್ರಾರಂಭಿಸುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಜಿಲ್ಲೆಯ ಜನತೆಗೆ ಮಾಡುತ್ತಿರುವ ದ್ರೋಹ” ಎಂದು ಶಾಂತಕುಮಾರ್ ಕಿಡಿಕಾರಿದರು. ಯೋಜನೆಯ ತಾಂತ್ರಿಕ ಲೋಪಗಳ ಕುರಿತು ಮಾತನಾಡಿದ ಅವರು, “ಈ ನೀರು ಕುಣಿಗಲ್ ದಾಟಿ ರಾಮನಗರ ಮತ್ತು ಬಿಡದಿಯತ್ತ ಹರಿಯಲಿದೆ. ಅಷ್ಟೇ ಅಲ್ಲದೆ, ಗುರುತ್ವಾಕರ್ಷಣೆ (Gravity) ಮೂಲಕ ಪೈಪ್‌ಲೈನ್ ಕಾಮಗಾರಿ ನಡೆಸಿರುವುದರಿಂದ ಅಗತ್ಯಕ್ಕಿಂತ ಹೆಚ್ಚಿನ ನೀರು ಕುಣಿಗಲ್ ದಾಟಿ ಮುಂದೆ…

Read More

ತುಮಕೂರು: ಫಾರ್ಮಸಿ ಕ್ಷೇತ್ರದಲ್ಲಿ ವೃತ್ತಿಪರ ಶಿಕ್ಷಣ ಅಭ್ಯಾಸ ಮಾಡುವ ಆಸಕ್ತಿ ಹೊಂದಿರುವ ಆರ್ಥಿಕವಾಗಿ ಹಿಂದುಳಿದ, ಅಂಗವಿಕಲರಿಗೆ, ಅಥವಾ ಒಬ್ಬರೇ ಪೋಷಕರು, ಅನಾಥ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಪಡೆಯುವ ಅವಕಾಶವನ್ನು ತುಮಕೂರಿನ ಮಯೂರ ಕಾಲೇಜು ಆಫ್ ಫಾರ್ಮಸಿ ಕಲ್ಪಿಸಿದೆ. ಈ ಯೋಜನೆಯಲ್ಲಿ 30 ವಿದ್ಯಾರ್ಥಿಗಳಿಗೆ ಸಂಪೂರ್ಣ ಬೋಧನಾ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಮೇಲೆ ತಿಳಿಸಿದ ಅರ್ಹ ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಮಂಡಳಿ ಶುಲ್ಕ ಹಾಗೂ ಇತರೆ ಕನಿಷ್ಠ ಕಡ್ಡಾಯ ಶುಲ್ಕಗಳನ್ನು ಮಾತ್ರ ಭರಿಸಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಸುಮಾರು ಆರರಿಂದ ಏಳು ಸಾವಿರದವರೆಗೆ ಮಾತ್ರ ವೆಚ್ಚವಾಗುವ ಸಾಧ್ಯತೆ ಇದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ. ಡಿ.ಫಾರ್ಮ್ ಎರಡು ವರ್ಷಗಳ ವೃತ್ತಿಪರ ಕೋರ್ಸ್ ಆಗಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ಯಿಂದ ಮಾನ್ಯತೆ ಪಡೆದಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ವಿದ್ಯಾರ್ಥಿಗಳು ಮತ್ತು ಪೋಷಕರು 9480150808 ಮೊಬೈಲ್ ನಂಬರಿಗೆ ಕರೆ ಮಾಡಬಹುದು, ಅಥವಾ…

Read More

ಸಿರಾ: ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಜೂ.16 ರಂದು 2069ನೆ ಮದ್ಯ ವರ್ಜನ ಶಿಬಿರವನ್ನು ಏರ್ಪಡಿಸಲಾಗಿದೆ. ಜೂ.16 ರಿಂದ 23ರವರೆಗೆ ಶಿಬಿರವು ನಡೆಯಲಿದ್ದು, ಜೂ.16ರಂದು ಬೆಳಿಗ್ಗೆ 11 ಗಂಟೆಗೆ ಶಿಬಿರವನ್ನು ನಗರಸಭೆಯ ಅಧ್ಯಕ್ಷ ಜೀಶಾನ್ ಮೊಹಮೂದ್ ಉದ್ಘಾಟಿಸುವರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ರಾಮಚಂದ್ರಗುಪ್ತ ಅಧ್ಯಕ್ಷತೆ ವಹಿಸುವರು. ವಿಪ ಸದಸ್ಯ ಚಿದಾನಂದ್ ಎಂ.ಗೌಡ, ಮಾಜಿ ಶಾಸಕ ಡಾ.ಸಿ.ಎಂ ರಾಜೇಶ್ ಗೌಡ, ಜಿಲ್ಲಾ ಯೋಜನಾ ನಿರ್ದೇಶಕ ಪ್ರವೀಣ್‌ಕುಮಾರ್, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್ ಗೌಡ, ಕನಕಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ ಮಂಜುನಾಥ್, ಜೈಪಾಲ್, ಅಶ್ವತ್ಥ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಳ್ಳುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವಿಜಯನಗರ (ಕೂಡ್ಲಿಗಿ): “ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯು ಒಂದು ದೊಡ್ಡ ಪಿಡುಗಾಗಿದ್ದು, ಇದರ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ನಾಗರಿಕರು ಹಾಗೂ ವಿದ್ಯಾರ್ಥಿಗಳು ಕೈಜೋಡಿಸಬೇಕು. ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ಸಿವಿಲ್ ಕಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಜೆ. ಶಿಲ್ಪ ಅವರು ಕರೆ ನೀಡಿದರು. ಪಟ್ಟಣದ ಹಿರೇಮಠ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಜೂನ್ 12ರಂದು ಆಯೋಜಿಸಲಾಗಿದ್ದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ”ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜವಾಬ್ದಾರಿಯುತ ನಾಗರಿಕರಾಗಲು ಕರೆ: ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸಕ್ಕೆ ಸೀಮಿತವಾಗದೆ, ಸಾಮಾಜಿಕ ಕಾಳಜಿ ಮತ್ತು ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳ ನಿವಾರಣೆಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಹಕರಿಸಬೇಕು. ಯುವ ಪೀಳಿಗೆಯು ತಮ್ಮ ಮೂಲಭೂತ ಕರ್ತವ್ಯಗಳು ಮತ್ತು ನೈತಿಕ ಜವಾಬ್ದಾರಿಗಳನ್ನು ಅರಿತು, ದೇಶಪ್ರೇಮ ಹಾಗೂ ನಾಡಿನ ಬಗ್ಗೆ ಅಭಿಮಾನವನ್ನು ಹೊಂದಿರಬೇಕು ಎಂದು ನ್ಯಾಯಾಧೀಶರು ತಿಳಿಸಿದರು. ಇದೇ ಸಂದರ್ಭದಲ್ಲಿ…

Read More

ತುಮಕೂರು: ತುಮಕೂರು ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 2026–27ನೇ ಸಾಲಿನ 2ನೇ ವರ್ಷದ (3ನೇ ಸೆಮಿಸ್ಟರ್) ಲ್ಯಾಟರಲ್ ಎಂಟ್ರಿ ಡಿಪ್ಲೊಮಾ ಪ್ರವೇಶಾತಿ ಸಂಬಂಧ 2 ವರ್ಷಗಳ ಐಟಿಐ / ದ್ವಿತೀಯ ಪಿಯುಸಿ (ವಿಜ್ಞಾನ / ತಾಂತ್ರಿಕ) ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 20ರ ಸಂಜೆ 5 ಗಂಟೆಯೊಳಗಾಗಿ ತುಮಕೂರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ. ಪ್ರವೇಶಾತಿ ಪ್ರಕ್ರಿಯೆ ವಿವಿಧ ಹಂತ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 8310068320, 9844434206, 9008106036, ದೂ.ವಾ.ಸಂ. 0816–2970104 / 2006134 ನ್ನು ಸಂಪರ್ಕಿಸಬೇಕೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ : ತಾಲೂಕಿನ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾಶಾಖಾ ಮಠದಲ್ಲಿ ಜೂ.21 ರಂದು ನಡೆಯುವ 20ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನ ಶ್ರೀ ಮಠದಲ್ಲಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಜೀ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಜಗದ್ಗುರು ರೇಣುಕಾಚಾರ್ಯರ, ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಬಡವರಿಗೆ ದಾರಿ ದೀಪವಾದ ಉಚಿತ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾರಂಭ ಕಾರ್ಯಕ್ರಮವನ್ನ ಏರ್ಪಡಿಸಲಾಗಿದ್ದು, ಶ್ರೀಮಠದ ಭಕ್ತರು ಈ ಎಲ್ಲಾ ಕಾರ್ಯಕ್ರಮಕ್ಕೆ ಆಗಮಿಸಿ ಸಮಾರಂಭವನ್ನ ಯಶ್ವಸಿಗೊಳಿಸಲು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಶ್ರೀ ಮಠದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಹಕಾರದಿಂದ ನಡೆದುಕೊಂಡು ಬರುತ್ತಿದ್ದು, 20ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಭಕ್ತರು ನಡೆಸಿಕೊಡಲಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು, ಹೊಸ ಚಿಂತನೆ ಬಂದಿದ್ದು ನಮ್ಮ ಪುರ್ವಜರು ಸಿದ್ದರಬೆಟ್ಟದ ಆರಾಧ್ಯ ದೈವ ಸಿದ್ದೇಶ್ವರ ಸ್ವಾಮಿಗೆ ಪ್ರಸಾದವನ್ನಾಗಿ ಹೊಳಿಗೆ ಮಾಡುತ್ತಿದ್ದರು…

Read More

ತುಮಕೂರು: ತುಮಕೂರಿನ ಗಾಜಿನ ಮನೆಯಲ್ಲಿ ಜೂನ್ 26, 27, 28 ರಂದು ಪುಸ್ತಕ ಸಂತೆ ಏರ್ಪಡಿಸಲಾಗಿದೆ. ಪುಸ್ತಕ ಪ್ರದರ್ಶನ ಮಾರಾಟ, ಚರ್ಚೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಪತ್ರದ ಮೂಲಕ ಆಹ್ವಾನಿಸಿ ಇನ್ ಲ್ಯಾಂಡ್ ಲೆಟರ್ ಪತ್ರದ ಪ್ರತಿಯನ್ನು ಎನ್.ಎಸ್. ರಸ್ತೆ ಮೆಡಿಕಲ್ ಅಥವಾ ಎನ್.ಎಸ್.ಟೆಕ್ಸ್ ಟೈಲ್ ಗೆ ತಲುಪಿಸಲು ಕೋರಿದೆ. ಸಾಂಪ್ರದಾಯಿಕ ಶೈಲಿಯಲ್ಲಿ ಬರೆದ ಉತ್ತಮ ಪತ್ರಗಳಿಗೆ ಬಹುಮಾನ ನೀಡಿ ಗೌರವಿಸಲಾಗುವುದು. ಮಹಿಳೆಯರು ಪುರುಷರು ಶಿಕ್ಷಕರು ಶಿಕ್ಷಕಿಯರು ಕಾಲೇಜ್ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಗೃಹಿಣಿಯರು ಯಾರು ಬೇಕಾದರೂ ಭಾಗವಹಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ರುಡ್‌ ಸೆಟ್ ಸಂಸ್ಥೆ ವತಿಯಿಂದ ಜೂನ್ 23 ರಿಂದ ಅಣಬೆ ಬೇಸಾಯ ಕುರಿತು 10 ದಿನಗಳ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್ 20 ಕಡೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9481778047ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ…

Read More

ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೊಡ್ಲಹಳ್ಳಿ ಅಶ್ವಥ ನಾರಾಯಣ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್ ತಿಳಿಸಿದ್ದಾರೆ. ಪಟ್ಟಣದ ರಾಜೀವ ಭವನದಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಅಭಿಮಾನಿಗಳಿಂದ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನಾಳೆ ಬೆಳಗ್ಗೆ 10 ಗಂಟೆಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದು ಎಲ್ಲಾ ಮತ ಬಾಂಧವರು ಹಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದ್ದಾರೆ. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಡಾ.ಜಿ. ಪರಮೇಶ್ವರ ರವರನ್ನು ಸಮಾರಂಭಕ್ಕೆ ಮುಂಚಿತವಾಗಿ ಹೂವಿನ ರಥದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಟ್ ನಿಲ್ದಾಣದಿಂದ ಪದವಿ ಪೂರ್ವ ಕಾಲೇಜು ಮೈದಾನದ ವರೆಗೆ ವಿವಿಧ ಜಾನಪದ ತಂಡಗಳು, ಕುಂಭ ಕಳಶಗಳು…

Read More