Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಗಡೆನಗರದ 1ನೇ ಮುಖ್ಯರಸ್ತೆ ನಿವಾಸಿ ವಲ್ಲರಮತಿ(35) ಕೊಲೆಯಾದ ಮಹಿಳೆಯಾಗಿದ್ದು, ಇವರು 13 ವರ್ಷಗಳ ಹಿಂದೆ ಮೂಲತಃ ತಮಿಳುನಾಡಿನವರಾದ ವಲ್ಲರ ಮತಿ ಹಾಗೂ ಚಂದ್ರಶೇಖರ್ ಮದುವೆಯಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ವಲ್ಲರಮತಿ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ವೃತ್ತಿ ಮಾಡುತ್ತಿದ್ದರು. ಪತಿ ಚಂದ್ರಶೇಖರ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಪತ್ನಿಯ ನಡತೆಯ ಬಗ್ಗೆ ಚಂದ್ರಶೇಖರ್ ಅನುಮಾನಗೊಂಡು ಆಗಾಗ್ಗೆ ಜಗಳವಾಡುತ್ತಿದ್ದನು. ನಿನ್ನೆಯೂ ಬೆಳಗ್ಗೆ 9:30ರ ಸುಮಾರಿಗೆ ಪತ್ನಿಯ ಜೊತೆಗೆ ಜಗಳ ನಡೆದಿದ್ದು, ಈ ವೇಳೆ ಪತಿಯು ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಪೊಲೀಸರಿಗೆ ವಿಚಾರ ತಿಳಿಸಿದ್ದಾನೆ.ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ನವದೆಹಲಿ: ಭಾರತದ ಸಾಂಪ್ರದಾಯಿಕ ಗೋಲಿ ಸೋಡಾಕ್ಕೆ ವಿದೇಶಿ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ವ್ಯಕ್ತವಾಗಿದೆ. ಗೋಲಿ ಸೋಡಾವನ್ನು ಗೋಲಿ ಪಾಪ್ ಸೋಡಾ ಎಂದು ಮರುನಾಮಕರಣ ಮಾಡಲಾಗಿದ್ದು, ವಿವಿಧ ದೇಶಗಳ ಮಾರುಕಟ್ಟೆಯಲ್ಲಿ ಉತ್ತಮ ರೆಸ್ಪಾನ್ಸ್ ದೊರಕಿದೆ. ಯುಎಸ್, ಯುಕೆ, ಯುರೋಪ್ ಮತ್ತು ಗಲ್ಫ್ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಗೋಲಿ ಸೋಡಾಕ್ಕೆ ಉತ್ತಮ ರೆಸ್ಪಾನ್ಸ್ ದೊರಕಿದೆ ಎಂದು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ. ಕಾರ್ಯತಂತ್ರದ ವಿಸ್ತರಣೆ ಮತ್ತು ನವೀನ ಮರುಶೋಧನೆಯಿಂದ ಬೇಡಿಕೆ ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಸ್ವಂತ ಗೋಲಿ ಪಾಪ್ ಸೋಡಾ ವಿಶ್ವಾದ್ಯಂತ ವಾವ್ ಟೇಸ್ಟ್ ಬಡ್ ಗಳಿಗೆ ಮರಳುತ್ತದೆ! ಸಾಂಪ್ರದಾಯಿಕ ಭಾರತೀಯ ಗೋಲಿ ಸೋಡಾದ ಪುನರುಜ್ಜೀವನವನ್ನು ಉತ್ತೇಜಿಸಿದ್ದಕ್ಕಾಗಿ ಅಭಿನಂದನೆಗಳು ಎಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ಗೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ “ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಜರ್ಲ್ಯಾಂಡ್ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ” ಎಂದು ಡೈಲಾಗ್ ಹೇಳಿದ್ದು, ಇದು ಹಿಂದೂ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ವಿರುದ್ಧ ಕೆರಳಿರೋ ಹಿಂದೂ ಮುಖಂಡರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ರಕ್ಷಕ್ ಬಹಿರಂಗ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದು, ಕಾರ್ಯಕ್ರಮ ಆಯೋಜಕರು, ತೀರ್ಪುಗಾರರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4…
ಮೈಸೂರು: ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಹೀಗಾಗಿಯೇ ಬಿಜೆಪಿ ಶಾಸಕರು, ಮಾಜಿ ಸಿಎಂ ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಹೀಗಿರುವಾಗ ಬಿಜೆಪಿಯವರಿಗೆ ನಮ್ಮ ನಾಯಕರ ಬಗ್ಗೆ ಮಾತನಾಡಲು ಏನು ಹಕ್ಕಿದೆ ಎಂದು ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಬಿಜೆಪಿಯವರ ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ ಎಂದು ಅವರು ಹೇಳಿದರು. ಸಚಿವರ ಮನೆಗೆ ಸಿಸಿಟಿವಿ ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವರು ಹನಿಟ್ರ‍್ಯಾಪ್ ಮಾಡಲೆಂದೇ ಸಚಿವರ ಮನೆಗೆ ಬರುತ್ತಾರೆ. ಈಗಾಗಿ ಸಿಸಿಟಿವಿ ಹಾಕಿಸಬೇಕು. ಸಚಿವರ ಮನೆಗಳಿಗೆ ಸಿಸಿಟಿವಿ ಇಲ್ಲದ ವಿಚಾರ ನನಗೆ ಗೊತ್ತಿಲ್ಲ ಎಂದರು. ಸಿಎಂ ಮನೆಗೆ ಸಿಸಿಟಿವಿ ಇದೆ. ನಾನು ಅಲ್ಲೇ ಇರುವುದರಿಂದ ಸಿಸಿಟಿವಿ ಇರುವ ಬಗ್ಗೆ ನನಗೆ ಗೊತ್ತಿದೆ, ಬೇರೆಯವರ ಮನೆಯ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ಭೀಮಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ನಡೆದಿದೆ. ಆದರ್ಶ ವಿದ್ಯಾಲಯದಲ್ಲಿ ಓದುತ್ತಿದ್ದ ಪ್ರಜ್ವಲ್ ಹರವಾಳ (16) ಮೃತಪಟ್ಟ ಬಾಲಕನಾಗಿದ್ದಾನೆ. ಎರಡು ದಿನಗಳ ರಜೆಯ ಹಿನ್ನೆಲೆ ಪ್ರಜ್ವಲ್ ಸ್ವಗ್ರಾಮ ಹರವಾಳಕ್ಕೆ ಬಂದಿದ್ದ. ಈ ವೇಳೆ ಸ್ನೇಹಿತರೊಂದಿಗೆ ಸೇರಿ ಭೀಮಾ ನದಿಗೆ ಈಜಲು ತೆರಳಿದ್ದ. ನೀರಿನ ಆಳ ತಿಳಿಯದೇ ಇಳಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತೆ ಎಂದು ತಿಳಿಸಿದ್ದಾರೆ. ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದ್ರೆ ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ. ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಎಂದು ಅವರು ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ರಾಜಕೀಯ ನಿರ್ಧಾರ ತೆಗೆದುಕೊಂಡಿದೆ. ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹೋಗಿ ಮಾತುಕತೆ ಮಾಡಲಾಗಿತ್ತು. ನಾವು ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು. ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ, ಯಾರೂ ನ್ಯಾಯಾಲಯಗಳಿಗಿಂತ ಮೇಲಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: RSS ಭಾರತದ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ನೀತಿಯನ್ನು ವಿರೋಧಿಸಿ ಇಂಡಿಯಾ ಬಣದ ವಿದ್ಯಾರ್ಥಿ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಆರ್ಎಸ್ಎಸ್ ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನಿಯಂತ್ರಿಸುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸಂಪನ್ಮೂಲಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮತ್ತು ದೇಶದ ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ ಎಸ್ ಗೆ ಹಸ್ತಾಂತರಿಸುತ್ತಿದೆ ಎಂದು ಆರೋಪಿಸಿದರು. ಆರ್ ಎಸ್ ಎಸ್ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ನಾಶಮಾಡಲು ಹೊರಟಿದ್ದು, ಇಂಡಿಯಾ ಮೈತ್ರಿಕೂಟ ಇದಕ್ಕೆ ಅವಕಾಶ ನೀಡುವುದಿಲ್ಲ.. ಎಂದು ರಾಹುಲ್ ಗಾಂಧಿ ಗುಡುಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಬಾಲಕಿಯನ್ನು ಚುಡಾಯಿಸಿದ್ದಕ್ಕೆ ಇಬ್ಬರು SSLC ವಿದ್ಯಾರ್ಥಿಗಳಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಮಾರ್ಚ್ 17 ರಂದು ಗಂಗೊಂಡನಹಳ್ಳಿಯ 1 ನೇ ಕ್ರಾಸ್ನಲ್ಲಿ ರಾತ್ರಿ 8:30 ರಿಂದ 9 ಗಂಟೆಯ ನಡುವೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೊಳಗಾದ ಬಾಲಕರು ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬೆನ್ನಲ್ಲೇ ಬಾಲಕನೊಬ್ಬನ ತಂದೆ ಎ.ಶಬ್ಬೀರ್ ಎಂಬುವವದು, ಸುಫಿಯಾನ್, ಜುಬೈರ್ ಮತ್ತು ಇತರ ಮೂವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯನ್ನು ಚುಡಾಯಿಸಿದ ಹಿನ್ನೆಲೆಯಲ್ಲಿ ಐವರು ಪುರುಷರಿದ್ದ ಗುಂಪು ಬಾಲಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಥಳಿಸಿ, ವಿಡಿಯೋ ಸೆರೆ ಹಿಡಿದಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕರ್ನಾಟಕದಾದ್ಯಂತ ಏಪ್ರಿಲ್ 1 ರಿಂದ ಟೋಲ್ ಸುಂಕ ಶೇ 3 ರಿಂದ 5 ರಷ್ಟು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಸೂಚನೆ ಹೊರ ಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್ ಎಚ್ ಎಐ ಮುಂದಾಗಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್ ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4