Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಬೆಂಗಳೂರು: ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಕುರಿತು ನಾನು ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಒಂದು ವೇಳೆ ಸಾಬೀತು ಮಾಡದಿದ್ದರೆ ನನ್ನ ವಿರುದ್ಧ ಆರೋಪಿಸುವ ಬಿಜೆಪಿ ನಾಯಕರು ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ ಎಂದು ಸವಾಲು ಹಾಕಿದರು. ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಲು ನನಗೆ ತಲೆ ಕೆಟ್ಟಿಲ್ಲ. ನಾನು ನೀಡಿದ ಸಂದರ್ಶನದಲ್ಲಿ ಸತ್ಯ ಮಾತನ್ನಾಡಿದ್ದೇನೆ ಹಾಗೂ ನನ್ನ ರಾಜಕೀಯ ನಿಲುವು ತಿಳಿಸಿದ್ದೇನೆ. ನಾನು ಈ ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷದ ಸದಸ್ಯ. ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಕನಸಲ್ಲೂ ಚಿಂತಿಸುವುದು ನಮ್ಮ ಜಾಯಮಾನವಲ್ಲ ಎಂದರು. ಬಿಜೆಪಿಯವರು ಸುಖಾಸುಮ್ಮನೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದಾರೆ. ತಮ್ಮ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ. ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ ಎಂದು ಆರೋಪಿಸಿದರು. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ.ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ. ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು. ಆದರೆ ಮಂಗಳವಾರ ಮತ್ತೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 270(ಸಾರ್ವಜನಿಕ ತೊಂದರೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ರಜತ್ ಹಾಗೂ ವಿನಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು ಇಂದು ಇಬ್ಬರು ಆರೋಪಿಗಳನ್ನು ಠಾಣೆ ಕರೆತಂದು, ರೀಲ್ಸ್ನಲ್ಲಿ ಬಳಸಿದ್ದ ಅಸಲಿ ಮಚ್ಚು ತೋರಿಸುವಂತೆ ಸೂಚಿಸಿದ್ದಾರೆ. ಆದರೆ ಪೊಲೀಸರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ. ಹೀಗಾಗಿ ಪೊಲೀಸರು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ನಾಗರಬಾವಿಯ ಅಕ್ಷಯ ಸ್ಟುಡಿಯೋಗೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದ್ದಾರೆ. ಅಕ್ಷಯ ಸ್ಟುಡಿಯೋದ ಮೂಲೆಮೂಲೆಯಲ್ಲಿ ಹುಡುಕಿದರೂ ಲಾಂಗ್ ಪತ್ತೆ ಆಗಿಲ್ಲ. ಮಚ್ಚು ಎಲ್ಲಿದೆ ಎಂದು ಕೇಳಿದರೂ ರಜತ್ ಹಾಗೂ ವಿನಯ್ ಗೌಡ ಬಾಯಿ…
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜಣ್ಣ, ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲಿಖಿತ ಮನವಿ ನೀಡಿದರು. ಬಳಿಕ ರಾಜಣ್ಣ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪರಮೇಶ್ವರ ಅವರು, ಈ ವಿಚಾರದಲ್ಲಿ ನಾನು ದೂರು ಸ್ವೀಕರಿಸಲು ಸಾಧ್ಯವಿಲ್ಲ. ಪೊಲೀಸ್ ಠಾಣೆಯಲ್ಲೇ ದೂರು ಸಲ್ಲಿಸಬೇಕು. ನಾನು ಮನವಿ ಮಾತ್ರ ಸ್ವೀಕರಿಸಿದ್ದೇನೆ. ಈ ಮನವಿ ಆಧಾರದ ಮೇಲೆ ಕಾನೂನು ತಜ್ಞರ ಜೊತೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.27 ಹಾಗೂ 28 ರಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರಾಧ್ಯಕ್ಷ ಮಂದಾಕೃಷ್ಣ ಮಾದಿಗ ಅವರ ಮಾರ್ಗದರ್ಶನದಲ್ಲಿ ಒಳ ಮೀಸಲಾತಿ ಜಾರಿ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ಅವರು ಹೇಳಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಾ.27ರಂದು ಕಾರ್ಯಾಗಾರ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆ ಜರುಗುವುದು. ಹಾಗೆಯೇ ಮಾ.28ರಂದು ಒಳ ಮೀಸಲಾತಿ ಬೆಂಬಲಿಸುವ ಎಲ್ಲ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಐಎಎಸ್, ಐಪಿಎಸ್, ಕೆಎಎಸ್ ಹಾಲಿ ಮತ್ತು ಮಾಜಿ ಅಧಿಕಾರಿಗಳು, ಹಾಲಿ ಮತ್ತು ಮಾಜಿ ಶಾಸಕ, ಸಚಿವರು ಜೊತೆಗೆ ಮಾದರ ಚನ್ನಯ ಸ್ವಾಮಿಜಿ ಅವರು ಸೇರಿದಂತೆ ಇತರೆ ಮಠಾಧೀಶರು ಪಾಲ್ಗೊಳ್ಳುವರು ಎಂದು ತಿಳಿಸಿದರು ಅಂದು ಮಧ್ಯಾಹ್ನದ ಬಳಿಕ ಮುಂದಿನ ಹೋರಾಟದ ಬಗ್ಗೆ ಮಂದಾಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಮೇಲಿನ ಎಲ್ಲ ಮಹನೀಯರ ಜೊತೆ ಮುಂದಿನ ಹೋರಾಟದ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಅಂತ್ಯವಾಗಿದ್ದು, ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. ಡಿಆರ್ ಐ ಪರ ವಕೀಲ ಮಧು ರಾವ್ ಅವರು ವಾದ ಮಂಡನೆ ಮಾಡಿದ್ದಾರೆ. ರನ್ಯಾ ರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ಪ್ರತಿವಾದ ಮಾಡಿದ್ದಾರೆ. ಎರಡೂ ಕಡೆಯ ವಾದವನ್ನು ಕೋರ್ಟ್ ಆಲಿಸಿತು. ಮಾರ್ಚ್ 27ರಂದು ರನ್ಯಾ ಅವರ ಜಾಮೀನು ಬಗ್ಗೆ ಆದೇಶ ಪ್ರಕಟವಾಗಲಿದ್ದು, ಜಾಮೀನು ಸಿಗುತ್ತದೆಯೇ ಅಥವಾ ನಟಿಗೆ ಜೈಲೇ ಗತಿಯೇ ಎನ್ನುವುದನ್ನು ಕಾದು ನೋಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಹನಿಟ್ರ್ಯಾಪ್ ಮಾಡಲು ಬಂದಿದ್ದ ಇಬ್ಬರು ಹುಡುಗಿಯರು ಸಚಿವ ರಾಜಣ್ಣ ಅವರ ಬೆಂಗಳೂರಿನ ಮನೆಯ ಬಳಿ ಬಂದು ʼನಿಮ್ಮ ಬಳಿ ಏನೋ ಗುಪ್ತವಾಗಿ ಮಾತನಾಡಬೇಕಿದೆʼ ಎಂದಿದ್ದಳು. ಈ ಬಗ್ಗೆ ಸ್ವತಃ ರಾಜಣ್ಣ ಅವರೆ ಹೇಳಿಕೆ ನೀಡಿದ್ದು, ಎರಡು ಬಾರಿ ನನ್ನನ್ನು ಭೇಟಿಯಾಗಿದ್ದರು. ʼಮೊದಲ ದಿನ ಒಬ್ಬ ಹುಡುಗ ಬಂದಿದ್ದ, ಎರಡು ಸಲವೂ ಹುಡುಗ ಅವನೇ ಆಗಿದ್ದ, ಆದ್ರೆ ಎರಡೂ ಸಲ ಹೆಣ್ಣು ಮಕ್ಕಳು ಬೇರೆ ಬೇರೆ ಇದ್ದರು. ಹುಡುಗಿಯರು ಒಂದು ಜೀನ್ಸ್ ಬ್ಲೂ ಟಾಪ್ ಹಾಕಿದ್ದರು. ಹುಡುಗಿಯು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡಿದ್ದರುʼ ಎಂದಿದ್ದಾರೆ. ಮೊದಲು ಬಂದಾಗ ಹೈಕೋರ್ಟ್ ಲಾಯರ್ ಎಂದು ಹೇಳಿರಲಿಲ್ಲ. ಎರಡನೇ ಬಂದಾಗ ಲಾಯರ್ ಎಂದು ಹೇಳಿಕೊಂಡಿದ್ದಳು. ಯಾವುದೆ ಪ್ರಕರಣದ ಬಗ್ಗೆ ಮಾತನಾಡಲು ಅಲ್ಲ, ಬದಲಾಗಿ ನಿಮ್ಮ ಬಳಿ ಏನೋ ಗುಪ್ತವಾಗಿ ಮಾತನಾಡಬೇಕಿದೆ ಎಂದು ಹೇಳಿದ್ದಳು. ಅವರ ಪೋಟೋ ತೋರಿಸಿದರೆ ಗುರುತು ಹಿಡಿಯುತ್ತೇನೆ. ಈ ಕುರಿತಂತೆ ಎಲ್ಲವೂ ದೂರಿನಲ್ಲಿ ಬರೆದಿದ್ದೇನೆ ಎಂದರು. ಗೃಹಮಂತ್ರಿಗೆ ದೂರು ಕೊಡುತ್ತೇನೆ, ಆ ದೂರಿನಲ್ಲಿ…
ಬೀದರ್: ನಗರದ ಹಳೆ ನಾವದಗೇರಿಯ ಶೆಟರ್ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದ 3,99,534 ರೂ. ಮೌಲ್ಯದ ಸುಮಾರು 117 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಅನೌಪಚಾರಿಕ ಪಡಿತರ ಪ್ರದೇಶದ ಆಹಾರ ನಿರೀಕ್ಷಕ ಉಪನಿರ್ದೇಶಕರು ಹಾಗೂ ಜಿಲ್ಲಾ ಆಹಾರ ನಿರೀಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ನಗರದ ಹಳೆ ನಾವದಗೇರಿ ಹತ್ತಿರ ಒಂದು ಶೆಟರ್ ಅಂಗಡಿಯಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುವ ಪಡಿತರ ಆಹಾರ ಧಾನ್ಯ ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ, ಎಸ್ಪಿ ಪ್ರದೀಪ್ ಗುಂಟಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಪೂಜಾರಿ ಅವರ ನಿರ್ದೇಶನದಂತೆ ಹಾಗೂ ಪ್ರಭಾರಿ ಪೊಲೀಸ್ ಉಪಾಧೀಕ್ಷಕ ಎಮ್.ಡಿ.ಸನಾದಿ ಅವರ ಮಾರ್ಗದರ್ಶನದಂತೆ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಿದ್ದಣ್ಣ ಗಿರಿಗೌಡರ್ ಮತ್ತು ತಂಡ ದಾಳಿ ನಡೆಸಿತ್ತು. ನಾವದಗೇರಿಯ ರಸ್ತೆ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು. ನಾಡಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸರು ಪ್ರಥಮ ಆಯೋಗವನ್ನು ರಚಿಸಿ ಅದಕ್ಕೆ ಹಾವನೂರರನ್ನು ಅಧ್ಯಕ್ಷರನ್ನಾಗಿ ನೇಮಿಸಿದರು. ಅದರನ್ವಯ ಹಾವನೂರರು ಸುಮಾರು 400 ಗ್ರಾಮಗಳು ಮೂರು ಲಕ್ಷದ ಐವತ್ತು ಸಾವಿರ ಜನರನ್ನು ಖುದ್ದು ಬೇಟಿ ಮಾಡಿ ಅವರ ಸ್ಥಿತಿಗತಿಗಳನ್ನು ತಿಳಿದು, ಇವರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ ಜೀವನ ಶೋಚನೀಯವಾಗಿದೆ. ಇವರ ಪ್ರಗತಿ ಕ್ರಮ ಕೈಗೊಳ್ಳವುದು ಅನಿವಾರ್ಯ ಎಂಬ ಅಂಶಗಳುಳ್ಳ ಹಾವನೂರು ವರದಿಯನ್ನು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತಾರೆ. ಆ ನಂತರ ಈ ವರದಿಯ ಆಧಾರದ ಮೇಲೆ ಹಲವು ಸೌಲಭ್ಯಗಳು ಸಂಬಂದಿಸಿದ ವರ್ಗಗಳಿಗೆ ದೊರೆಯುತ್ತವೆ. ಆದರೆ ಈ ವರ್ಗಗಳು ದೇವರಾಜು ಅರಸರನ್ನಾಗಲಿ ಅಥವಾ ಹಾವನೂರರನ್ನಾಗಲಿ ಸ್ಮರಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ. ಸರ್ಕಾರಗಳು ಸಹಾ ಹಾವನೂರ ವ್ಯಕ್ತಿತ್ವ ಮತ್ತು…
ಕನ್ನಡದ ದಿ ವಿಲನ್ ಚಿತ್ರದ ನಟಿ ಆ್ಯಮಿ ಜಾಕ್ಸನ್ ಅವರು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಶುಭವಾರ್ತೆಯನ್ನು ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಗಂಡು ಮಗುವನ್ನು ಪಡೆದ ಆ್ಯಮಿ ಮತ್ತು ಎಡ್ ವೆಸ್ಟ್ವಿಕ್ ದಂಪತಿ ಖುಷಿಯಲ್ಲಿದ್ದಾರೆ. ಇದೀಗ ಮಗುವನ್ನು ಹಿಡಿದುಕೊಂಡು ಪತಿಯ ಜೊತೆ ನಟಿ ಪೋಸ್ ಮಾಡಿರುವ ಪೋಸ್ಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಗನಿಗೆ ‘ಆಸ್ಕರ್ ಅಲೆಕ್ಸಾಂಡರ್ ವೆಸ್ಟ್ವಿಕ್’ ಹೆಸರಿಡಲಾಗಿದೆ. ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4