Author: admin

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೈಕ್ ಸವಾರರನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ  ತಮ್ಮ ಬೆಂಗಾವಲು ಪಡೆಯ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಶಿರೂರು ಪಾರ್ಕ್ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಸಚಿವರು ಬೆಂಗಾವಲು ಪಡೆ ವಾಹನದೊಂದಿಗೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿರುವುದು ಕಂಡುಬಂದಿತ್ತು. ಗಾಯಾಳುಗಳ ಸ್ಥಿತಿ ನೋಡಿದ ಸಚಿವರು, ತಕ್ಷಣವೇ ತಮ್ಮ ಬೆಂಗಾವಲು ಪಡೆಯ ವಾಹನದಲ್ಲಿ ಕಿಮ್ಸ್‌ಗೆ ಕಳುಹಿಸಿಕೊಟ್ಟರು. ಅಲ್ಲದೇ, ಕಿಮ್ಸ್ ನಿರ್ದೇಶಕರಿಗೆ ಸ್ವತಃ ಕರೆ ಮಾಡಿದ ಗಾಯಾಳುಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡಿ, ಉಪಚರಿಸುವಂತೆ ನಿರ್ದೇಶನ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು/ತುರುವೇಕೆರೆ : ರಾಜ್ಯದಲ್ಲಿ ಜಾತಿ ವಿಷ ಬೀಜವನ್ನ ಬಿತ್ತಬೇಡಿ. ನಾವೆಲ್ಲಾ ಕಾವೇರಿ ತಾಯಿಯ ಮಕ್ಕಳು, ನಾವೆಲ್ಲಾ ಒಂದೇ. ನಿಮ್ಮ ಕುರ್ಚಿ ಉಳಿಸಿಕೊಳ್ಳೋಕೆ ಜಾತಿ ರಾಜಕೀಯ ಮಾಡಬೇಡಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ತುರುವೇಕೆರೆ ಬೃಹತ್ ಪ್ರತಿಭಟನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು,  ಜಾತಿ ಗಣತಿ ಮಾಡುವ ಅಧಿಕಾರ ಸಂವಿಧಾನದಡಿ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಆರ್ಥಿಕ, ಸಾಮಾಜಿಕ ಶೈಕ್ಷಣಿಕವಾಗಿ ಸಮೀಕ್ಷೆ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶವಿರುವುದು ಆದರೆ ಜಾತಿ ಎಂಬ ವಿಷ ಬೀಜವನ್ನ ಬಿತ್ತಬೇಡಿ ಎಂದು ಕಿಡಿಕಾರಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಕೇವಲ ಎರಡು ವರ್ಷದಲ್ಲಿ ಭ್ರಷ್ಟಾಚಾರ, ದುರಾಡಳಿತ ವೈಫಲ್ಯಗಳೇ ಹೆಚ್ಚಾಗಿ ಕಾಣುತ್ತಿದೆ. ಗಾಳಿ ಒಂದನ್ನ ಹೊರತುಪಡಿಸಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಅವರು ಕಿಡಿಕಾರಿದರು. ರೈತರಿಗೆ ಸಿಗಬೇಕಾದ…

Read More

ತುಮಕೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಾವತಿಯಾಗಲು ಕಾರಣನಾಗಿದ್ದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ POCSO ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 3 ಲಕ್ಷ ರೂಪಾಯಿಗಳ ದಂಡ ವಿಧಿಸಿದೆ. ಈ ಪ್ರಕರಣ ದಂಡಿನಶಿವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಜಬೀವುಲ್ಲಾ(42) ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನ್ನ ಅಣ್ಣ, ತಂದೆ, ತಾಯಿಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಆರೋಪಿಗೆ ಇಬ್ಬರು ಮಕ್ಕಳಿದ್ದರೂ ಅಪ್ರಾಪ್ತ ಬಾಲಕಿಯ ಮೇಲೆ ಆತ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ನೊಂದ ಬಾಲಕಿಯ ತಾಯಿ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತುರುವೇಕೆರೆ ಸಿಪಿಐ ಗೋಪಾಲ ನಾಯ್ಕ ಅವರು ಈ ಪ್ರಕರಣದ ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್. ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪಣಾಪಟ್ಟಿಯನ್ನು ಸಲ್ಲಿಸಿದರು. ಈ…

Read More

ಪಾವಗಡ: ಕಳೆದ ಹತ್ತು ವರ್ಷಗಳ ಹಿಂದೆ ಪಾವಗಡ ತಾಲ್ಲೂಕಿಗೆ ನದಿ ನೀರು ತರುವ ಉದ್ದೇಶದಿಂದ ಹೋರಾಟ ನಡೆಸಿದ ಹೋರಾಟಗಾರರು, ಸಂಘ ಸಂಸ್ಥೆಗಳ ಸದಸ್ಯರು ಹಾಗೂ ರೈತರಿಗೆ ಸೋಮವಾರ ಪಾವಗಡ ತಾಲ್ಲೂಕು ಸಮಗ್ರ ನೀರು ಹೋರಾಟ ವೇದಿಕೆಯಿಂದ ಪಟ್ಟಣದ ಎಸ್‌ ಎಸ್‌ ಕೆ ಸಮುದಾಯ ಭವನದಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹತ್ತು ವರ್ಷಗಳ ಹಿಂದೆ ಪಾವಗಡದಿಂದ ಬೆಂಗಳೂರಿನವರೆಗೆ ನಡೆದ ಬೃಹತ್ ಪಾದಯಾತ್ರೆಯು ಬಹುಮಾನ್ಯ ಫಲ ನೀಡಿದ್ದು, ಅದರ ಪರಿಣಾಮವಾಗಿ ಕರ್ನಾಟಕ ಸರ್ಕಾರವು 2,352 ಕೋಟಿ ರೂಪಾಯಿ ವೆಚ್ಚದಲ್ಲಿ ತುಂಗಭದ್ರಾ ಜಲಾಶಯದಿಂದ ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದೆ ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕಾರ್ಯಕ್ರಮದ ಮೊದಲು ಪಟ್ಟಣದ ಗುರುಭವನ ಮೈದಾನದಿಂದ ಆರಂಭವಾಗಿ ವಿವಿಧ ಕಲಾತಂಡಗಳೊಂದಿಗೆ ಹೋರಾಟಗಾರರು, ರೈತರು ಭಾಗವಹಿಸಿ ಮೆರವಣಿಗೆ ನಡೆಸಲಾಯಿತು. ಜಪಾನಂದ ಸ್ವಾಮೀಜಿ, ಹನುಮಂತನಾಥ ಸ್ವಾಮೀಜಿ ಹಾಗೂ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಮೂರ್ತಿ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಅಂಬೇಡ್ಕರ್…

Read More

ತುಮಕೂರು:   ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಯಾರು ಉರುಳಿಸಲು ಸಾಧ್ಯವಿಲ್ಲ, ಬದಲಾಗಿ ಜನರೇ ಅದನ್ನು ಭವಿಷ್ಯದಲ್ಲಿ ಉರುಳಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಇಂದು ತುರುವೇಕೆರೆ ಪಟ್ಟಣದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎನ್ ಡಿ ಎ ಮೈತ್ರಿ ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜಾತಿ ಗಣತಿ ಸಮೀಕ್ಷೆ ಮಾಡುವ ಹಕ್ಕು ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದು. ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ. ಜಾತಿಗಣತಿ ಯಾವ ರೀತಿ ನಡೆದಿದೆ ಎಂಬ ಬಗ್ಗೆ ಯಾರಿಗೂ ಕೂಡ ವಿಶ್ವಾಸವಿಲ್ಲ ಎಂದು ಹೇಳಿದರು. ಆರು ವರ್ಷದಿಂದ ಪೂರ್ಣಗೊಳಿಸಲು ಆಗದಂತಹ ಜಾತಿಗಣತಿ ಸಮೀಕ್ಷೆ ಕೇವಲ ಮೂರು ತಿಂಗಳಲ್ಲಿ ಹೇಗೆ ಸಾಧ್ಯ ಆಯ್ತು ಎಂಬುದು ಪ್ರಶ್ನಾರ್ಥ ಎಂದರು ಇದೇ ಸಂದರ್ಭದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಟಿ.ಕೃಷ್ಣಪ್ಪ,…

Read More

ಮಂಗಳೂರು: ಹಿಂದೂಗಳೇ ನೀವು ಧೈರ್ಯವಾಗಿ ಮತಾಂತರ ಮಾಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಮಂಗಳೂರಿನ ಉಜಿರೆಯಲ್ಲಿ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರಾದರೂ ನಿಮ್ಮನ್ನು ಮತಾಂತರ ಆಗಿ ಎಂದ ಹೇಳಿದರೆ ನೀವು ನಮ್ಮ ಸಮಾಜ ನಿಮ್ಮನ್ನು ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಎಂದು ಕರೆಯಿರಿ ಎಂದು ಹೇಳಿದರು. ಇತ್ತೀಚೆಗೆ ಬಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಎಂದು ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಆದರೆ ನಮ್ಮ ಜನ ನಾಲ್ಕೈದು ಮಕ್ಕಳನ್ನ ಮಾಡ್ತಾರಾ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ತಾಕತ್ತು ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಎಂದು ಕರೆ ನೀಡಿದರು.…

Read More

ತುಮಕೂರು:  ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚೀಲಗಾನಹಳ್ಳಿ ಬಳಿ ಭಾನುವಾರ ರಾತ್ರಿ ನಡೆದಿದೆ. ಚೀಲಗಾನಹಳ್ಳಿಯ ಸಿ.ಎನ್. ಯೋಗೀಶ್ (42) ಮೃತಪಟ್ಟವರಾಗಿದ್ದಾರೆ. ಬೈಕ್ ನಲ್ಲಿದ್ದ ಮತ್ತೊಬ್ಬ ಸವಾರರಾದ ಸಿ.ಎನ್. ನರಸಿಂಹರಾಜು ತೀವ್ರ ಗಾಯಗೊಂಡಿದ್ದಾರೆ. ಪೇಟಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ನರಸಿಂಹರಾಜು ಕೆಲಸ ಮುಗಿಸಿ ಊರಿಗೆ  ವಾಪಾಸ್ಸಾಗಿದ್ದರು. ಗ್ರಾಮದ ತಲುಪುವ ವೇಳೆ ಬಿರುಗಾಳಿ ಸಹಿತ ಬಿದ್ದ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ನಡೆದಿದೆ. ಅಪಘಾತ ನಡೆದ ವೇಳೆ  ವಿಷಯ ತಿಳಿದ  ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರೇಂದ್ರ, ಮುಖಂಡರಾದ ಮಾರುತಿ, ಸತೀಶ ಎಂಬುವರು ಸ್ಥಳಕ್ಕೆ ದಾವಿಸಿ ವಿದ್ಯುತ್ ನಿಷ್ಕ್ರಿಯಗೊಳಿಸಿದರು. ಗಾಯಗೊಂಡಿರುವ ನರಸಿಂಹರಾಜು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಸಿ.ಇ.ಟಿ. ಪರಿಕ್ಷಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಯ ವಿರುದ್ಧ ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿತು. ನಗರದ ಬಿ.ಹೆಚ್. ರಸ್ತೆಯ ಶಂಕರಮಠದಲ್ಲಿ ಜಿಲ್ಲಾ ಬಾಹ್ಮಣ ಸಭಾದ ನೇತೃತ್ವದಲ್ಲಿ ಸಮಾವೇಷಗೊಂಡ ಆರ್ಯವೈಶ್ಯ, ವಿಶ್ವಕರ್ಮ ಹಾಗೂ ಜೈನ ಸಮುದಾಯದ ಮುಖಂಡರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಕುರಿತು ನಿರ್ಣಯ ಮಾಡಿದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣಾ ವೇದಿಕೆ ಮುಖಂಡ ಜಿ.ಎಸ್. ಬಸವರಾಜು ಸ್ವಾತಂತ್ರ್ಯ ಭಾರತದಲ್ಲಿ ಈ ರೀತಿಯ ಘಟನೆ ಎಂದೂ ಸಹ ನಡೆದಿರಲಿಲ್ಲ. ಈ ಘಟನೆ ಒಂದು ಸಮುದಾಯದ ಮೇಲೆ ನಡೆದ ದೌರ್ಜನ್ಯವಲ್ಲ ಬದಲಾಗಿ ಸಂವಿಧಾನದ ಮೇಲೆ ನಡೆದ ದೌರ್ಜನ್ಯ. ಸಮಸ್ತ ಹಿಂದೂ ಸಮಾಜ ಇದನ್ನು ಖಂಡಿಸಬೇಕು ಎಂದರು. ಆರ್ಯವೈಶ್ಯ ಸಮಾಜದ ಮುಖಂಡರಾದ ಡಾ. ರಮೇಶ್ ಬಾಬು ಮಾತನಾಡಿ, ನಿರಂತರವಾಗಿ ಬಹುಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಂಘಟನೆಯ ಕೊರತೆ ಕಾರಣವಾಗಿದೆ. ಬೇರೆ ದೇಶದ ಜನರು ಇಂದು ಸನಾತನ ಧರ್ಮದ ಕಡೆಗೆ ಆಕರ್ಷಿತವಾಗುತ್ತಿರುವ ಸಂದರ್ಭದಲ್ಲಿ…

Read More

ಬೆಂಗಳೂರು: ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಓಂ ಪ್ರಕಾಶ್ ಅವರನ್ನು ಅವರ ಧರ್ಮಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ. ಈ ಕೊಲೆಗೆ ನಿಖರ ಕಾರಣವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದುತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ಕೊರಟಗೆರೆ : ಕಣ್ವಸೌಹಾರ್ದ ಕೋ–ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 417 ಜನ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡೇನಹಳ್ಳಿ ಸರ್ವೆ ನಂ.5/4ರಲ್ಲಿ 2 ಎಕರೇ 37 ಕುಂಟೆ ಜಮೀನು ಮತ್ತು 0.26ಕುಂಟೆ ಕಣ್ವ ಇಂಟರ್ ನ್ಯಾಷನಲ್ ಶಾಲೆ ಮತ್ತು ಶಾಲಾ ಕಟ್ಟಡವನ್ನು ಕೆಪಿಐಡಿಎಫ್ ಇ ಕಾಯ್ದೆಯಡಿ ಸರಕಾರ ಮುಟ್ಟುಗೋಲು ಹಾಕಿಕೊಂಡಿದೆ. ಶಾಲೆಯ ಕಾರ್ಯದರ್ಶಿ ಶಿಕ್ಷಣಗೆ ಮನವಿ ಮಾಡಿ ನಿರ್ವಹಣೆಗೆ ಬಿಇಓರನ್ನು ಆಡಳಿತಾಧಿಕಾರಿ ಆಗಿ ನೇಮಿಸಲು ಮಾಡಿದ ಮನವಿಗೂ ಈಗ ಅವಕಾಶ ಇಲ್ಲದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೇಗೆ ಶಾಲೆ ಮುಂದುವರೆಸಲು ಸರಕಾರ ಚಿಂತನೆ ನಡೆಸುತ್ತಿದೆ. ಆದರೇ ಶಾಲೆಯ ಐಸಿಎಸ್ ಸಿ ಮಾನ್ಯತೆ…

Read More