Author: admin

ಪಾವಗಡ: ತಾಲ್ಲೂಕಿನ ಇಂದ್ರಬೆಟ್ಟ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇಶಕ್ಕೆ ಅಂಬೇಡ್ಕರ್ ಅವರ ಕೊಟ್ಟ ಕೊಡುಗೆ ಅಪಾರವಾದದ್ದು. ಅವರ ಸಾಧನೆ ಒಂದು ಮಾರ್ಗದರ್ಶಿಯಾದದ್ದು, ಎಲ್ಲರಿಗೂ ಬದುಕುವ ಹಕ್ಕನ್ನು ಒದಗಿಸಿಕೊಟ್ಟರು ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ತುಮಕೂರಿನ ಹೋರಾಟಗಾರರಾದ ರಂಗದಾಮಯ್ಯ ಜೆ.ಸಿ. ಅವರು ಮಾತನಾಡುತ್ತಾ, ಅಂಬೇಡ್ಕರ್ ಅವರನ್ನು ವಿಶ್ವವೇ ಜ್ಞಾನದ ಸಂಕೇತವಾಗಿ ಗ್ರಹಿಸಿರುವಾಗ ಭಾರತವು ಇನ್ನೂ ಜಾತಿಗ್ರಸ್ಥವಾಗಿಯೇ ಕಾಣುತ್ತಿರುವುದು ದುರಂತ ಎಂದರು. ಇಂದು ದಲಿತ ಸಮುದಾಯವು ದೇವರ ಹೆಸರಿನಲ್ಲಿ ಧರ್ಮದ ಹೆಸರಿನಲ್ಲಿ ಮತ್ತಷ್ಟು ಶೋಷಣೆಗೆ ಒಳಗಾಗುತ್ತಾರೆ. ಆದ್ದರಿಂದ ದೇವರು ಜಾತ್ರೆ ಉತ್ಸವಗಳ ಆಚರಣೆಯನ್ನು ಬಿಡಬೇಕು. ಸೀರಿಯಲ್ ನೋಡುವುದನ್ನು ತ್ಯಜಿಸಬೇಕು. ಮಕ್ಕಳಿಗೆ ಒಳ್ಳೇ ಉತ್ತಮ ಶಿಕ್ಷಣ ಕೊಡಿಸಬೇಕು. ಗುಡಿಸಲುಗಳಲ್ಲಿ ರಾಜರು ಹುಟ್ಟುವ ಕಾಲ ಇದಾಗಿದೆ. ಇದರಿಂದ ನನ್ನ ಜನ ರಾಜರಾಗಿ ದೇಶ ಆಳುವುದು ಕನಸು ನನಸಾಗಿಸಬೇಕು ಎಂದು ಅಭಿಪ್ರಾಯಪಟ್ಟರು. ಇದೇ ಸಮಯದಲ್ಲಿ ಇಂದ್ರಬೆಟ್ಟ…

Read More

ಕಲಬುರಗಿ: ಮಹಿಳೆಯೊಬ್ಬರ ಜೊತೆ ತಮ್ಮ ಮಗ ಲಿವಿಂಗ್ ಟುಗೆದರ್ ನಲ್ಲಿರುವ ವಿಚಾರದ ತಿಳಿದ ಪೋಷಕರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ನಾಗನಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಲಿವಿಂಗ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಮಹಿಳೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದು ಯುವಕನ ಮನವೊಲಿಸಲು ಯತ್ನಿಸಿದ್ದಾಳೆ. ಆದರೆ ಇದಕ್ಕೆ ಕಿವಿಗೊಡದ ಶಿವಕುಮಾರ್ ರೈಲಿಗೆ ರೈಲಿನ ಮುಂದೆ ಬಿದ್ದಿದ್ದಾನೆ. ಈ ವೇಳೆ ಮಹಿಳೆ ಆತನ ರಕ್ಷಣೆಗೆ ಮುಂದಾಗಿದ್ದು ರಕ್ಷಿಸಲು ಸಾಧ್ಯವಾಗಿಲ್ಲ. ರಕ್ಷಿಸಲು ಹೋಗಿದ್ದ ಮಹಿಳೆಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಅಲೆಮಾರಿ ಸಮುದಾಯದ ಕಾಲೋನಿಯಲ್ಲಿ 50 ಲಕ್ಷ ರೂಪಾಯಿಗಳ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ತುಮುಲ್ ಅಧ್ಯಕ್ಷರಾದ ಹೆಚ್.ವಿ. ವೆಂಕಟೇಶ್ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಅಲೆಮಾರಿ ಸಮುದಾಯದವರು ಮೊದಲು ಅಭಿವೃದ್ಧಿಯಾಗಬೇಕು. ಜೊತೆಗೆ ಈ ಕಾಲೋನಿಯಲ್ಲಿ ನೀರಿನ ಸಮಸ್ಯೆ ಇದೆ ಎಂದು ನನ್ನ ಕಿವಿಗೆ ಮುಖಂಡರು ತಿಳಿಸಿದ್ದಾರೆ. ಕೇವಲ ಮೂರು ದಿನದಲ್ಲಿ ಬೋರ್ ವೆಲ್  ಹಾಕಿಸಿ ಕೊಡುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ  ಶಂಕರ್, ಎಲ್.ಕೆ. ರಾಘವೇಂದ್ರ, ಮುಖಂಡರುಗಳಾದ ST ನಾಗರಾಜು, ಸಂಶುದ್ದಿನ್, ಎನ್.ಆರ್.ಅಶ್ವಥ್ ಕುಮಾರ್, ವಿಶ್ವನಾಥ್ , ಉಮೇಶ್. ಟಿ, SVT ಪ್ರಸಾದ್, ಶಿವಾನಂದಪ್ಪ, ಜಯಕಿರ್ತಪ್ಪ, ಆನಂದ್, ಜಾಫರ್, ಗ್ಯಾಸ್ ಕೃಷ್ಣಪ್ಪ , MC ರಾಜಣ್ಣ, MC ಜಯರಾಮ್, ಮುನ್ನಾ, ಖಲಿಲ್,  ಸೇರಿ ಇನ್ನೂ ಅನೇಕ ಪ್ರಮುಖ ಮುಖಂಡರು ಇದ್ದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ…

Read More

ಪಾವಗಡ: ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಕಳೆದ ಹತ್ತು ವರ್ಷಗಳ ಹಿಂದೆ ಪಾವಗಡದಿಂದ ಬೆಂಗಳೂರಿನವರಿಗೂ ಪಾದಯಾತ್ರೆ ನಡೆಸಿದಂತಹ ಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆ, ರೈತ ಸಂಘ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಮತ್ತಿತರ  ಹೋರಾಟಗಾರರ ಹೋರಾಟದ ಫಲವಾಗಿ ಪಾವಗಡ ತಾಲೂಕಿಗೆ ತುಂಗಭದ್ರಾ ಡ್ಯಾಮ್ ನಿಂದ ಶುದ್ಧ ಕುಡಿಯುವ ನೀರು ಸರಬರಾಜಾಗಲು ಕ್ಷಣಗಣನೆ ಶುರುವಾಗಿದೆ. ಈ ಹಿನ್ನಲೆಯಲ್ಲಿ  ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಏ.21ನೇ ತಾರೀಕಿನ ಸೋಮವಾರದಂದು ಬೃಹತ್ ಸನ್ಮಾನ ಕಾರ್ಯಕ್ರಮವನ್ನು ಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು   ವೇದಿಕೆಯ ಅಧ್ಯಕ್ಷರಾದ ಎಸ್.ಶಿವಪ್ರಸಾದ್ ತಿಳಿಸಿದರು ಪಟ್ಟಣದ ನಿರಕ್ಷಣಾ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾವಗಡ ತಾಲೂಕು ಅನೇಕ ವರ್ಷಗಳಿಂದ ಶಾಶ್ವತ ಕುಡಿಯಲು ಮತ್ತು ಕೃಷಿಗೆ ನೀರಿಲ್ಲದೆ ನಲುಗಾಡಿದ್ದು 10 ವರ್ಷಗಳ ಹಿಂದೆ ನಡೆದ ಅನೇಕ ಪ್ರತಿಭಟನೆ,ಹೋರಾಟಗಳ ಫಲವಾಗಿ ತುಂಗಭದ್ರಾ ಕುಡಿಯುವ ನೀರು ಬರುತ್ತಿದ್ದು, ಈ ಶುಭಗಳಿಗೆಯಲ್ಲಿ ಹೋರಾಟಗಾರರ ಸನ್ಮಾನಿಸಲು…

Read More

ತುಮಕೂರು:  ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಏಪ್ರಿಲ್ 22ರಂದು ಶಿರಾ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯು ಏಪ್ರಿಲ್ 22ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ ಎ.ವಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರ ನೀರಿನ ಬವಣೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಈ ನಿಟ್ಟಿನಲ್ಲಿ ಏತ್ತಿನಹೊಳೆ, ಕೆ.ಸಿ.ವ್ಯಾಲಿ, ಹೆಚ್‌ ಎನ್‌ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಯಂತಹ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಗೊರವನಹಳ್ಳಿಯಲ್ಲಿ ಕೊರಟಗೆರೆ ತಾಲ್ಲೂಕಿನಲ್ಲಿ ಅಂತರ್ಜಲ ಅಭಿವೃದ್ದಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರನ್ನು ತುಂಬಿಸುವ ಕಾಮಗಾರಿಗೆ ಗೃಹ ಸಚಿವರಾದ ಪರಮೇಶ್ವರ್‌ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿಸಲಿದೆ. ಈ ಕೆರೆಗಳಲ್ಲಿ ಸುಮಾರು 826 ಎಂಸಿಎಫ್ಟಿ ನಷ್ಟು ನೀರು ಸಂಗ್ರಹವಾಗುವುದರಿಂದ ತಾಲೂಕಿನ ಕುಡಿಯುವ ನೀರಿನ ಬವಣೆ ಗಣನೀಯವಾಗಿ ಇಳಿಕೆಯಾಗಲಿದೆ. ಇದರಲ್ಲಿ ನಮ್ಮ ಸಣ್ಣ ನೀರಾವರಿ ಇಲಾಖೆಯ 43 ಕೆರೆಗಳು ಸೇರಿವೆ.…

Read More

ತುಮಕೂರು: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ–ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ–ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಯಾತ್ರೆಯನ್ನು ಆಯೋಜಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 17ರಂದು ರಥಯಾತ್ರೆಗೆ ಚಾಲನೆ ನೀಡಿದ್ದು, ರಥಯಾತ್ರೆಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸಲಿದೆ ಎಂದು ತಿಳಿಸಿದರು. ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸ್ವಾತಂತ್ರö್ಯದ ಬಗ್ಗೆ ನಾವೆಲ್ಲಾ ಮಾತನಾಡುತ್ತಿದ್ದೇವೆ. ಆದರೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ…

Read More

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ,     ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು. ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು…

Read More

ಕೊರಟಗೆರೆ : ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸುವ ಕಾಮಗಾರಿಗಳ ಚಾಲನೆ ತಾಲ್ಲೂಕಿನ ಇತಿಹಾಸ ಪುಟ ಸೇರಿದೆ ಎಂದು ಗೃಹ  ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಸುಪ್ರಸಿದ್ದ ಯಾತ್ರಾಸ್ಥಳ ಗೊರವನಹಳ್ಳಿಯಲ್ಲಿ ಸುಮಾರು 453 ಕೋಟಿ ರೂಗಳ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆಗಳನ್ನು ನೆರವೇರಿಸಿ ಮಾತನಾಡಿ, 2008 ರಲ್ಲಿ ನಾನು ಕೊರಟಗೆರೆ ಕ್ಷೇತ್ರಕ್ಕೆ ಚುನಾವಣೆಗೆ ಬಂದಾಗ ಕೊಡ್ಲಹಳ್ಳಿಯ ಒಬ್ಬ ರೈತ ಮಹಿಳೆ ನನ್ನನ್ನು ಈ ಭಾಗಕ್ಕೆ ನೀರು ಹರಿಸುವಂತೆ ಕೋರಿದ್ದರು. ನಾನು ಅಂದು ಆಕೆಗೆ ಮಾತು ನೀಡಿ ಚುನಾವಣೆಯಲ್ಲಿ ಗೆದ್ದಾಗ ಸರ್ಕಾರ ಬರಲ್ಲಿಲ್ಲ, 2013ರಲ್ಲಿ ನಾನು ಈ ಕ್ಷೇತ್ರದಲ್ಲಿ ಸೋತೆ ಸರ್ಕಾರ ಬಂತು ಆದರೆ ನಾನು ಸರ್ಕಾರದ ಭಾಗವಾಗಲ್ಲಿಲ್ಲ, ಆದರೂ ಎರಡು ವರ್ಷವಾದ ನಂತರ ನಾನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಈ ಭಾಗದ ಜನರಿಗೆ ಎತ್ತಿನಹೊಳೆ ಯೋಜನೆಯನ್ನು ರೂಪಿಸಿ 6,500 ಸಾವಿರ ಕೋಟಿ ಮಂಜೂರು ಮಾಡಿಸಲಾಯಿತು ಎಂದರು. 2023 ರಲ್ಲಿ ನಮ್ಮ ಸರ್ಕಾರ…

Read More

ತುಮಕೂರು: ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುತ್ತದೆ. ಯುವ ಜನತೆ ಎಲ್ಲಾ ರೀತಿಯ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಗೋಪಾಲ್ ತಿಳಿಸಿದರು. ಅವರು ಭಾರತ ಸರ್ಕಾರದ ಕೇಂದ್ರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಚೇಳೂರು ಸಂಜೀವಿನಿ ಯುವಜನ ಸಂಘ, ಸುಫಿಯಾ ಕಾನೂನು ಮಹಾವಿದ್ಯಾಲಯ ಹಾಗೂ ಇನ್ಹರ್ ವೀಲ್‌ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಇವರ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನ, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಯುವಜನರು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರ್ದೈವದ ಸಂಗತಿ ಎಂದರು. ಸೈಬರ್ ಕ್ರೈಮ್ ಕುರಿತು ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದರು. ಇತ್ತೀಚೆಗೆ ಶಾಲಾ…

Read More