Subscribe to Updates
Get the latest creative news from FooBar about art, design and business.
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
- ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
- ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
Author: admin
ಸರಗೂರು: ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷ ಪಿ. ಚಿನ್ನಣ್ಣ ಹೇಳಿದರು.ಪಟ್ಟಣದ ಬಿಡುಗಲು 11ನೇ ವಾರ್ಡ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಾನವ ಹಕ್ಕುಗಳ ಮಿಷನ್ ವತಿಯಿಂದ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಬುಧವಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರದ್ಧೆಯಿಂದ ಅಧ್ಯಯನ ಮಾಡಿ ಶಾಲೆ ಹಾಗೂ ಪಾಲಕರಿಗೆ ಉತ್ತಮ ಹೆಸರು ತಂದುಕೊಟ್ಟಾಗ ಮಾತ್ರ ಇಂತಹ ನೋಟ್‌ಬುಕ್ ವಿತರಣೆ ಕಾರ್ಯಕ್ರಮಗಳು ಸಾರ್ಥಕವಾಗುತ್ತವೆ. ಬಾಲ್ಯದಿಂದಲೇ ದೇಶಭಕ್ತಿ, ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಹಾಗೂ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರ ತ್ಯಾಗವನ್ನು ಎಂದಿಗೂ ಮರೆಯಬಾರದು ಎಂದು ತಿಳಿಸಿದರು. ಎಚ್.ಡಿ. ಕೋಟೆ ಮಾನವ ಹಕ್ಕುಗಳ ಮಿಷನ್ ನಿರ್ದೇಶಕ…
ಸರಗೂರು: ತಾಲೂಕಿನ ಆದಿಕರ್ನಾಟಕ ಮಹಾಸಭಾದ ಮಾಜಿ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ವರ್ಷದ ಹುಟ್ಟುಹಬ್ಬವನ್ನು ಆದಿಕರ್ನಾಟಕ ಮಹಾಸಭಾ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಣ್ಣ ಅವರಿಗೆ ಸಂಪ್ರದಾಯಬದ್ಧವಾಗಿ ಪೇಟ ತೊಡಿಸಿ, ಶಾಲು ಹೊದಿಸಿ ಹಾಗೂ ಬೃಹತ್ ಹಾರ ಹಾಕುವ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು. ಬಳಿಕ ಕೇಕ್ ಕತ್ತರಿಸಿ ಜನ್ಮದಿನವನ್ನು ಆಚರಿಸಿ, ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷ ಪಿ. ಚಿನ್ನಣ್ಣ ಮಾತನಾಡಿ, “ಶಿವಣ್ಣ ಅವರು ಸಮಾಜಮುಖಿ ಚಟುವಟಿಕೆಗಳು ಹಾಗೂ ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಶ್ರಮಿಸಿದ್ದಾರೆ,” ಎಂದು ಅವರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಮುಂಬರುವ ದಿನಗಳಲ್ಲೂ ಅವರು ಜನಪರ ಕಾರ್ಯಗಳನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿಆದಿಕರ್ನಾಟಕ ಮಹಾಸಭಾದ ಅಧ್ಯಕ್ಷ ಇಟ್ನ ರಾಜಣ್ಣ, ನಾಗಣ್ಣ ತುಂಬಸೋಗೆ, ಯಶವಂತಪುರ ಶ್ರೀನಿವಾಸ, ಚನ್ನೀಪುರ ಮಲ್ಲೇಶ್, ಲಂಕೆ ರಮೇಶ್, ಮರಿಲಿಂಗಯ್ಯ, ಸೋಮಣ್ಣ, ಗ್ರಾಮೀಣ ಮಹೇಶ್, ಸೂರ್ಯ…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ (General & I.T.), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಸೇರ ಬಯಸುವ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬುದ್ಧಿಸ್ಟ್ ಮತ್ತು ಪಾರ್ಸಿ ಜನಾಂಗದ ಅಭ್ಯರ್ಥಿಗಳು ಜಾಲತಾಣ https://dom.karnataka.gov.in ನಲ್ಲಿರುವ ಕರಾಮುವಿಯ ಪ್ರವೇಶಾತಿ ಪೋರ್ಟಲ್ನ ಲಿಂಕ್ https://minority.ksouportal.com ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೇರವಾಗಿ ಅಗತ್ಯ ದಾಖಲಾತಿಗಳೊಂದಿಗೆ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಬಹುದಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯೇ…
ತುಮಕೂರು: ಜಿಲ್ಲೆ ಗುಬ್ಬಿ ತಾಲೂಕು ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮನವಿ ಮಾಡಿದ್ದಾರೆ. ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯು ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಗುಬ್ಬಿ ತಾಲೂಕಿನಲ್ಲಿ ಸುಮಾರು 37439.80 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಕಾಯಿ ಅಥವಾ ಎಳನೀರು ಕೊಯ್ಯು ಮಾಡುವ ಗೋನೆಗಾರರ ಸುರಕ್ಷತಾ ದೃಷ್ಟಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಗೋನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ಕೇರಾ ಸುರಕ್ಷಾ ವಿಮಾ ಯೋಜನೆಯಡಿ ವಿವಿಧ ಸೌಲಭ್ಯ ಒದಗಿಸಲಾಗುವುದು. ತೆಂಗಿನ ಮರ ಹತ್ತುವವರು/ ತೆಂಗಿನಕಾಯಿ ಕೀಳುವವರು/ ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ ಅಥವಾ ಅಂಗವಿಕಲರಾದಲ್ಲಿ ದುರ್ಘಟನೆ/ ಅಪಘಾತವಾದ 7 ದಿನಗಳೊಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ನೀಡಬೇಕು. ಮರಣ ಹೊಂದಿದಲ್ಲಿ 7 ಲಕ್ಷ ರೂ., ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ 3.50 ಲಕ್ಷ ರೂ., ಆಸ್ಪತ್ರೆ ವೆಚ್ಚ(24 ಲೀಟರ್ ಇಆ) 2 ಲಕ್ಷ…
ತುಮಕೂರು: ತುಮಕೂರು ಜಿಲ್ಲೆ ಗೊಲ್ಲಹಳ್ಳಿ ಜವಾಹರ ನವೋದಯ ವಿದ್ಯಾಲಯದಲ್ಲಿ 2027–28ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜಾಲತಾಣ https://cbseitms.rcil.gov.in/nvs ನಲ್ಲಿ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು 2026ರ ನವೆಂಬರ್ 28ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ ದೂ.ವಾ.ಸಂ. 9481707188ನ್ನು ಸಂಪರ್ಕಿಸಬೇಕೆಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಗಾಂಜಾ ಸಾಗಣೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಲ್ಲಯ್ಯ ಎಂಬುವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಕಠಿಣ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು. ಏನಿದು ಪ್ರಕರಣ: 2019ರ ನವೆಂಬರ್ 29 ರಂದು ಅಬಕಾರಿ ಪೊಲೀಸರು ಗಾಂಜಾ ಸಾಗಣೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ತಿಪಟೂರಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ದುಪ್ಪಟ್ಟೆ ಮಲ್ಲಯ್ಯ ಅವರನ್ನು ಬಂಧಿಸಿದ್ದರು. ಈ ವೇಳೆ 15.430 ಕೆ.ಜಿ. ಗಾಂಜಾ ಪತ್ತೆಯಾಗಿತ್ತು. ಅಬಕಾರಿ ಡಿವೈಎಸ್ಪಿ ವಿಜಯಕುಮಾರ್ ಜಿ.ವಿ. ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದು ನ್ಯಾಯಾಧೀಶರಾದ ಜಯಂತ್ ಕುಮಾರ್ ಅವರು ಮೇಲ್ಕಂಡಂತೆ…
ತುಮಕೂರು: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 2026-27ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಅಡಕೆ ಮತ್ತು ಮಾವು ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೊರಟಗೆರೆ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಾಮಾಂಜನಪ್ಪ ರೈತರಲ್ಲಿ ಮನವಿ ಮಾಡಿದ್ದಾರೆ. ಕೊರಟಗೆರೆ ತಾಲೂಕಿನಲ್ಲಿ ಮಾವು ಬೆಳೆಯನ್ನು ವಿಮಾ ಸೌಲಭ್ಯಕ್ಕೆ ಒಳಪಡಿಸಲಾಗಿದ್ದು, ಮಾವು ಬೆಳೆಯನ್ನು ನೋಂದಾಯಿಸಲು ಜುಲೈ 31 ಕಡೆಯ ದಿನವಾಗಿದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 80,000 ರೂ. ಹಾಗೂ ಶೇ.5ರಂತೆ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 4000 ರೂ.ಗಳಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈತರು ಹೋಬಳಿವಾರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಕಸಬಾ–8453650483, ಸಿ.ಎಸ್.ದುರ್ಗ–9449245960, ಹೊಳವನಹಳ್ಳಿ–9986456750, ಕೋಳಾಲ–9663457195, ಕೊರಟಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು–9448001644ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಮುಂದಾಗಿರುವ ಕೇಂದ್ರ, ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ರಾಜಧಾನಿ ಬೆಂಗಳೂರಿಗೆ ಪರ್ಯಾಯ ನಗರವಾಗಿ ಬೆಳೆಯುತ್ತಿರುವ ತುಮಕೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸದೆ ರಾಜಧಾನಿ ಸುತ್ತಮುತ್ತಲೇ ಮಾಡಲು ಪ್ರಸ್ತಾಪಿಸಿರುವುದು ಸರಿಯಲ್ಲ. ತುಮಕೂರು ಜಿಲ್ಲೆಯಲ್ಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಿದರೆ ರಾಜಧಾನಿ ಬೆಂಗಳೂರು ಸಂಚಾರ ದಟ್ಟಣೆಯಿಂದ ಮುಕ್ತಿ ಸೇರಿದಂತೆ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಭಾಗದವರಿಗೂ ಅನುಕೂಲವಾಗಲಿದೆ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಕನಕಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ವಿಶೇಷ ಆಸಕ್ತಿ ವಹಿಸಿದ್ದಾರೆ. ತಾಂತ್ರಿಕ ಸಮಿತಿ ಪರಿಶೀಲಿಸಿರುವ ಸ್ಥಳಗಳಲ್ಲಿ ತುಮಕೂರನ್ನು ಸೇರಿಸಲಾಗಿಲ್ಲ. ವಿಪಕ್ಷ ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಉತ್ತರ ಕರ್ನಾಟಕದ 19 ಜಿಲ್ಲೆಗಳ 37 ಚುನಾಯಿತ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೇಂದ್ರ ಸರ್ಕಾರಕ್ಕೆ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಮನವಿ ಮಾಡಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣ…
ತುಮಕೂರು: ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಇಂದು ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಬಳಿಯಿರುವ ಸಿಡಾಕ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಯೋಜನೆಗಳ ಆಯ್ಕೆ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮತ್ತು ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ನೀಡಲಾಗುವುದು. ಸ್ವಂತ ಉದ್ಯಮ ಸ್ಥಾಪಿಸಲು ಆಸಕ್ತಿ ಇರುವ ತುಮಕೂರು ಜಿಲ್ಲೆಯ ವಿದ್ಯಾವಂತ ಯುವಕ/ಯುವತಿಯರು ಹಾಗೂ ನಿರುದ್ಯೋಗಿಗಳು ಈ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ, 1ನೇ ಮಹಡಿ, ಕೈಗಾರಿಕಾ ಎಸ್ಟೇಟ್, ರಿಸರ್ವ್ ಪೊಲೀಸ್ ಮೈದಾನದ ಎದುರು,…
ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ ಸಾಮಾನ್ಯ ತರಕಾರಿಯಾಗಿದೆ. ಆದರೆ ಶಾಂಘೈನ ರೆಸ್ಟೋರೆಂಟ್ ಒಂದರಲ್ಲಿ ಈ ಸಾಮಾನ್ಯ ಖಾದ್ಯಕ್ಕೆ ಒಂದು ಪ್ಲೇಟ್ಗೆ 520 ಯುವಾನ್ (ಸುಮಾರು ₹7,300) ವಿಧಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಣ್ಣ ಖಾದ್ಯಕ್ಕೆ ಇಷ್ಟೊಂದು ದುಬಾರಿ ಬೆಲೆ ಏಕೆ? ಶಾಂಘೈನ ಹಾಂಗ್ಕೌ ಜಿಲ್ಲೆಯಲ್ಲಿರುವ ‘ಜಿನ್ಲಾಂಗ್ ದಾಬಿಯಾನ್ಲು’ (Jinlong Dabianlu) ಎಂಬ ರೆಸ್ಟೋರೆಂಟ್ನಲ್ಲಿ ಈ ದುಬಾರಿ ಖಾದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಜರ್ಮನಿಯಿಂದ ಆಮದು ಮಾಡಿಕೊಂಡ ಈಮು ಮೊಟ್ಟೆ: ಇಲ್ಲಿ ಸಾಮಾನ್ಯ ಕೋಳಿ ಅಥವಾ ಬಾತುಕೋಳಿ ಮೊಟ್ಟೆಯ ಬದಲಿಗೆ ಜರ್ಮನಿಯಿಂದ ಆಮದು ಮಾಡಿಕೊಂಡ ಬೃಹತ್ ಗಾತ್ರದ ಈಮು (Emu) ಹಕ್ಕಿಯ ಮೊಟ್ಟೆಯನ್ನು ಬಳಸಲಾಗುತ್ತದೆ. ಈ ಒಂದೇ ಒಂದು ಮೊಟ್ಟೆಯ ಬೆಲೆ ಸುಮಾರು 150 ಯುವಾನ್ (₹2,100) ಆಗಿದೆ. ಇದರ ದಪ್ಪನೆಯ ಹೊರಕವಚವನ್ನು ಒಡೆಯಲು ಶೆಫ್ ಸಣ್ಣ ಸುತ್ತಿಗೆಯನ್ನು ಬಳಸಬೇಕಾಗುತ್ತದೆ! ನೆದರ್ಲ್ಯಾಂಡ್ಸ್ನ ಪ್ರೊವೆನ್ಸ್ ಟೊಮೆಟೊ:…