Subscribe to Updates
Get the latest creative news from FooBar about art, design and business.
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
- ಗುಬ್ಬಿ: SBI ಬ್ಯಾಂಕ್ ನ ಎಟಿಎಂನಿಂದ ಹಣ ದೋಚಿದ ಕಳ್ಳರು
Author: admin
ತುಮಕೂರು: ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ, ಸರ್ಕಾರದಲ್ಲಿ ಸೊರಗಿದ ಕನ್ನಡ ಪ್ರೇಮ ವಿಚಾರಗಳು ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲೂ ಪ್ರತಿಧ್ವನಿಸಿದವು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಸುಫಿಯ ಕಾನೂನು ಮಹಾವಿದ್ಯಾಲಯದಿಂದ ಅಯೋಜಿಸಿದ್ದ ಕಾನೂನು ವಿದ್ಯಾರ್ಥಿಗಳ ವಲಯ ಮಟ್ಟದ `ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ ಕಲಾಪದ ಬಗ್ಗೆ ಪರಿಚಯಿಸಿತು. ತೀರ್ಪುಗಾರರು ಸ್ಪರ್ಧಾರ್ಥಿಗಳಿಗೆ ಮಾದರಿ “ನಡೆ ನುಡಿ ಕುರಿತು ತಿಳಿಸಿಕೊಟ್ಟರು. ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ವಿಂಗಡಿಸಿ ಸ್ಪರ್ಧೆಗೆ ಅಣಿಗೊಳಿಸಲಾಯಿತು. ವಿಧಾನಸಭಾ ಸಭಾಪತಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರಾಗಿಯೂ ಕೆಲವರು ಗಮನ ಸೆಳೆದರು. ‘ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. 100 ಜನ ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆಯಾದರೆ ಕನಿಷ್ಠ ಒಬ್ಬರಿಗೂ ಕೂಡ ಶಿಕ್ಷೆಯಾಗುತ್ತಿಲ್ಲ’ ಎಂದು ಪ್ರಶೋತ್ತರ ಅವಧಿಯಲ್ಲಿ ವಿರೋಧ ಪಕ್ಷದ ಶಾಸಕರು ಸರ್ಕಾರವನ್ನು ಇಕ್ಕಟ್ಟಿಗೆ…
ತುಮಕೂರು: ತುಮಕೂರಿನ ಶ್ರೀ ರಂಗರಂಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ!?” ಶೀರ್ಷಿಕೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಸಹಯೋಗದಲ್ಲಿ ನ.12 ಮತ್ತು 13 ನವೆಂಬರ್ 2025ರ ಸಂಜೆ 4-00 ಗಂಟೆಯಿಂದ 7-30 ಗಂಟೆವರೆಗೆ ತುಮಕೂರು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ. 1987ರಲ್ಲಿ ರಿಚರ್ಡ್ ಜಿ. ಲೂಯಿಸ್ ಅವರ ಮಾರ್ಗದರ್ಶದಲ್ಲಿ ಆರಂಭವಾಗಿ ನವೆಂಬರ್ 12 ಮತ್ತು 13 ರಂದು ರಂಗಶಕ್ತಿ ರಿಚರ್ಡ್ ಜಿ. ಲೂಯಿಸ್ ಅವರಿಂದ ಉದ್ಘಾಟನೆಯಾಗುತ್ತಿದೆ. ಅಧ್ಯಕ್ಷತೆಯನ್ನು ಕಲಾವೃಂದದ ಬೆನ್ನೆಲುಬಾಗಿರುವ ಪತ್ರಿಕಾ ಕ್ಷೇತ್ರದ ಡಾ.ಎಸ್.ನಾಗಣ್ಣನವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಣ ಮತ್ತು ಸಹಕಾರಿ ಕ್ಷೇತ್ರದ ರೂವಾರಿ ಡಾ. ಲ್ಯಾನ್ಸಿ ಹೆಚ್. ಪಾಯಸ್ ಆಗಮಿಸುವರು. ಜೊತೆಯಲ್ಲಿ ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲರಾದ ಮಾಲಿನಿ ಎಸ್., ತುಮಕೂರು ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಪಂಚಾಯತ್ ನ ಲೆಕ್ಕ ಪರಿಶೋಧಕರು, ಕಲಾವಿದರೂ…
ಔರಾದ: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬೋಸ್ಕೋ ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕತ್ವ ಯೋಜನೆ ಪಾಲನೆ–ಪೋಷಣೆಯಿಂದ ವಂಚಿತರಾದ ಮಕ್ಕಳಿಗೆ ಸೂಕ್ತ ಪರಿವಾರದ ವ್ಯವಸ್ಥೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದರಿಂದ ಮಕ್ಕಳು ಮಾನಸಿಕ, ದೈಹಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಾನ್ ಬೋಸ್ಕೋ ಬೀದರ್ ಸಂಸ್ಥೆಯ ಪೋಷಕತ್ವ ಯೋಜನೆ ಜಿಲ್ಲಾ ಸಂಯೋಜಕರಾದ ರಮೇಶ್ ಸೂರ್ಯವಂಶಿ ಹೇಳಿದರು. ಸೋಮವಾರ ಔರಾದ ತಾಲೂಕಿನ ಅಂಬರೀಶ್ವರ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಳು ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪೋಷಕತ್ವ ಯೋಜನೆ ಕುರಿತು ಕುಲಂಕುಶವಾಗಿ ಮಾಹಿತಿಯನ್ನು ನೀಡಲಾಯಿತು. ಪೋಷಕತ್ವ ಯೋಜನೆಯ ಲಾಭ ಅರ್ಹ ಮಕ್ಕಳಿಗೆ ದೊರೆಯಬೇಕಾದರೆ ಕಾಲೇಜಿನ ವಿದ್ಯಾರ್ಥಿಗಳ ಪಾತ್ರ ಏನು ಎಂಬುದರ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ತಾವು ತಮ್ಮ ತಮ್ಮ ಊರುಗಳಲ್ಲಿ ಹೋಗಿದ್ದಾಗ ಇಂಥ ಪ್ರಕರಣಗಳು (ತಂದೆ, ತಾಯಿಯನ್ನು ಕಳೆದುಕೊಂಡ ಮಕ್ಕಳ ಮಾಹಿತಿ) ನಿಮ್ಮ ಗಮನಕ್ಕೆ…
ಪಾವಗಡ: ಭಾರತೀಯ ಪರಿವರ್ತನ ಸಂಘ –BPS ಪಾವಗಡ ತಾಲ್ಲೂಕು ವತಿಯಿಂದ ಪಾವಗಡ ಟೌನ್ ಆದರ್ಶ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳ ಆಯ್ಕೆ ಹಾಗೂ ಬೊಮ್ಮತನಹಳ್ಳಿ ಗ್ರಾಮದ ವಿದ್ಯಾರ್ಥಿ ಎಂಬಿಬಿಎಸ್ ವೈದ್ಯಕೀಯ ಸೀಟು ಪಡೆದಿರುವುದರಿಂದ ಸನ್ಮಾನ ಮಾಡಲಾಯಿತು. ಈ ವಿದ್ಯಾರ್ಥಿಯು ಕಡು ಬಡತನದಲ್ಲಿ ಬೆಳೆದು ಒಂದರಿಂದ ಹತ್ತನೇ ತರಗತಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ, ಪಿಯುಸಿ ವಿಜ್ಞಾನ ವಿಭಾಗವನ್ನು ತೆಗೆದುಕೊಂಡು 94% ಅಂಕಗಳನ್ನು ಪಡೆದುಕೊಂಡು ಎಂಬಿಬಿಎಸ್ ಕೋರ್ಸ್ ಮಾಡಲು ಕನಸು ಹೊಂದಿದ್ದರು, ಇವರ ಪ್ರತಿಭೆಯನ್ನು ಗುರುತಿಸಿದ ಭಾರತೀಯ ಪರಿವರ್ತನ ಸಂಘ ಪಾವಗಡ ವತಿಯಿಂದ ಬಿಪಿಎಸ್ ರಾಜ್ಯಾಧ್ಯಕ್ಷರಾದ ಪ್ರೊ.ಹರಿರಾಮ್ ಮತ್ತು ದೇವನಹಳ್ಳಿಯ ಮಹೇಶ್ ದಾಸ್ ರವರು ಬೆಂಗಳೂರಿನ ಪ್ರತಿಷ್ಠಿತ ಪರಿಶ್ರಮ ನೀಟ್ ಅಕಾಡೆಮಿಯಲ್ಲಿ ಎರಡು ವರ್ಷ ತರಬೇತಿಯನ್ನು ಕೊಡಿಸಿದರ ಪರಿಣಾಮ ನೀಟ್ ಪರೀಕ್ಷೆ ಪಾಸ್ ಮಾಡಿ, ಈಗ ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪಾವಗಡ ತಾಲೂಕಿನಾದ್ಯಂತ ಎಲ್ಲಾ ಸಮುದಾಯದ ಬಡ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೆ…
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಎರಡು ಬದಿಗಳಲ್ಲೂ ಬೆಳೆದಿರುವ ಗಿಡಗಂಟಿಗಳು, ಪೊದೆಗಳನ್ನು ತೆರವು ಮಾಡಬೇಕೆಂದು ಆಗ್ರಹಿಸಿ ಸೋಮವಾರದಂದು ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುನಿಲ್ ಟಿ.ಆರ್., ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾಮಗಾರಿಗೆ ಹಣ ಮಂಜೂರಾಗಿ ಹಲವು ತಿಂಗಳುಗಳು ಕಳೆದಿದ್ದರು, ಇದುವರೆಗೂ ರಸ್ತೆ ಕಾಮಗಾರಿ ಕೆಲಸ ಪ್ರಾರಂಭವಾಗಿಲ್ಲ. 2024ರ ಡಿಸೆಂಬರ್ 13ರಂದು ಬಂದು ಜನವರಿಯಿಂದ ಕೆಲಸ ಪ್ರಾರಂಭ ಮಾಡಿ ಏಪ್ರಿಲ್ ಒಳಗೆ ಕಾಮಗಾರಿ ಮುಗಿಸುವುದಾಗಿ ತಿಳಿಸಿ ಹೋದವರು ಇದುವರೆಗೂ ಸಹ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಕಿಡಿಕಾರಿದರು. ಕಳೆದ 20 ದಿನಗಳಲ್ಲಿ ಈಗಾಗಲೇ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಜೊತೆಗೆ ಗಿಡ ಗಂಟಿಗಳು, ಪೊದೆಗಳು, ಎತ್ತರವಾಗಿ ಬೆಳೆದ ಕಾರಣ ಹುಲಿ ಸೇರಿದಂತೆ ಕಾಡು ಪ್ರಾಣಿಗಳು ಓಡಾಟ ಹೆಚ್ಚಾಗಿದೆ. ಆನೆ ಬಂದು ನಿಂತರು ಸಹ ಗೊತ್ತಾಗುವುದಿಲ್ಲ .ಇದರಿಂದಾಗಿ ಬೆಳಿಗ್ಗೆ…
ಸರಗೂರು: ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಬ್ರಾಹ್ಮಣ್ಯವಾದಿ ಆರ್ ಎಸ್ ಎಸ್ ಅಧಿಕಾರವನ್ನು ಅನುಭವಿಸುತ್ತಿದೆ ಎಂದು ಆರೋಪಿಸಿ ತಾಲೂಕಿನ ತಹಶೀಲ್ದಾರ್ ಕಚೇರಿ ಬಳಿ ದಸಂಸ (ಅಂಬೇಡ್ಕರ್ ವಾದ) ಸಂಘಟನೆ ಶಾಂತಿಯುತ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಸಂಘಟನೆ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಡಾ.ಬಾಬಾ ಸಾಹೇಬ ಅಂಬೇಡ್ಕರರವರು ಯಾವುದೆ ಕಾರಣಕ್ಕೂ ಆರ್ ಎಸ್ ಎಸ್ ಹಾಗೂ ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು. ರಾಜಕೀಯ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಣಾಳಿಕೆಯಲ್ಲಿ ಎಚ್ಚರಿಕೆ ನೀಡಿದ್ದರು. ಆರ್ ಎಸ್‌ಎಸ್ ಅಪಾಯಕಾರಿ ಸಂಘಟನೆ ಎಂದೂ ಘೋಷಿಸಿದ್ದರು. ಆ ಮೂಲಕ ಮನುವಾದಿಗಳು ಮನುಸ್ಮೃತಿಯನ್ನು ಪೂಜಿಸಿ ಭಾರತದ ಸಂವಿಧಾನವನ್ನು ಅಂದಿನಿಂದಲು ತಿರಸ್ಕಾರದ ಮನೊಭಾವದಿಂದಲೇ ನೋಡುತ್ತಾ ಬಂದಿರುತ್ತಾರೆ. ಸಂವಿಧಾನದ ಮೇಲೆ ಯುದ್ಧ ಸಾರಿರುವ ಆರ್ ಎಸ್ ಎಸ್ ಮತ್ತು ಬಿಜೆಪಿಯವರ ಆಟ ಅತಿರೇಖಾವಾಗಿದೆ ಎಂದರು. ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಲಂಕೆ ದೇವರಾಜು ಮಾತನಾಡಿ, ಮುಂಗಡವಾಗಿ…
ತಿಪಟೂರು: ನಗರದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಅಳವಡಿಸಿರುವ ಸಿಗ್ನಲ್ ಗಳು ಸರಿಯಾದ ನಿರ್ವಹಣೆ ಮಾಡುತ್ತಿಲ್ಲ. ಪದೇ ಪದೇ ಕೆಟ್ಟು ಹೋಗುತ್ತಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ನಗರಸಭೆ ಎದುರು, ನಗರದ ಸಿಂಗೀ ನಂಜಪ್ಪ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಅಳವಡಿಸಿರುವ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಬೆಳಗ್ಗೆ ಮತ್ತು ಸಂಜೆ ಸಿಗ್ನಲ್ ನಿಂತುಹೋಗುವ ಘಟನೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಯಾವುದೇ ವೃತ್ತದಲ್ಲಿ ವಾಹನ ಸಂಚಾರ ನಿಯಂತ್ರಣ ಮಾಡಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ರೂಲ್ಸ್ ನಾವು ಪಾಲಿಸುತ್ತೇವೆ. ಆದ್ರೆ ಸಿಗ್ನಲ್ ಗಳೇ ಕಾರ್ಯ ನಿರ್ವಹಿಸದಿದ್ದರೆ, ಸಾರ್ವಜನಿಕರು ಹೇಗೆ ಸಂಚಾರಿ ನಿಯಮವನ್ನು ಪಾಲಿಸಬೇಕು ಅಂತ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕೊಡಿಗೇನಹಳ್ಳಿ: ಕನಕದಾಸರು ಕಾಯಕ ಮತ್ತು ಅಧ್ಯಾತ್ಮಿಕ ಮಾರ್ಗದಲ್ಲಿ ನಡೆದು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು ಎಂದು ಚೈತನ್ಯ ಸಿಂಚನ ಸಾಮಾಜಿಕ ಮತ್ತು ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಸಿ.ವಿ.ಕುಮಾರ್ ಹೇಳಿದರು. ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲ್ಲೂಕು ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮನುಜಕುಲಂ ತಾನೊಂದೇ ವಲಂ ಎನ್ನುವ ಹಾಗೆ ಕುಲದ ನೆಲೆಯನ್ನು ಪ್ರಶ್ನಿಸಿದವರು. ದೀನ ದಮನಿತರಿಗೆ ಅನ್ನ, ಆಶ್ರಯ, ಅಕ್ಷರ ಜ್ಞಾನವನ್ನು ಕಲ್ಪಿಸುವವನು ನಿಜವಾದ ಸಾಮಾಜಿಕ ಸ್ನೇಹಿ ವ್ಯಕ್ತಿಯಾಗಿ ಉಳಿಯುತ್ತಾನೆ ಎಂದರು. ಸಿ.ವಿ.ಕುಮಾರ್ ಅವರನ್ನು ಸರ್ಕಾರಿ ಶಾಲಾ ಶಿಕ್ಷಕರು ಸನ್ಮಾನಿಸಿದರು. ಸಿಆರ್ ಪಿ ಮಂಜುನಾಥ, ಹನುಮಯ್ಯ, ಎಂ.ಎಸ್.ನರಸಿಂಹಮೂರ್ತಿ, ಮನೋಹರ್, ಕರಿಯಣ್ಣ, ಲಕ್ಷ್ಮಿ, ದೇವರಾಜಮ್ಮ, ಇಮ್ರಾನ್, ಶಾಂತಲಕ್ಷ್ಮಿ, ಸಿ.ಒ. ಶಾಂತಕುಮಾರ್, ನರೇಂದ್ರಕುಮಾರ್, ನಾಗರಾಜ್ ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಅವೈಜ್ಞಾನಿಕವಾಗಿ ಹೊರಡಿಸಿರುವ ಸುತ್ತೋಲೆ ಹಿಂಪಡೆಯುವುದು, ಖಾಲಿ ಹುದ್ದೆ ಭರ್ತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ, ಉಪನ್ಯಾಸಕರ ಸಂಘದಿಂದ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರ ಕಾಲೇಜುಗಳಿಗೆ ಪೂರಕವಲ್ಲದ ಅದೇಶ ಹೊರಡಿಸುತ್ತಿದೆ. ಇದು ದೈನಂದಿನ ಚಟುವಟಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರಾಂಶುಪಾಲರು, ಉಪನ್ಯಾಸಕರು ಆತ್ಮಸ್ಥೆರ್ಯ ಕುಗ್ಗಿಸುತ್ತದೆ ಎಂದು ಪ್ರಾಂಶುಪಾಲರ ಸಂಘದ ಅಧ್ಯಕ್ಷ ನೇ.ರಂ.ನಾಗರಾಜು ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಜಂಟಿಯಾಗಿ ಹೊರಡಿಸಿರುವ ಸುತ್ತೋಲೆ ಹಿಂಪಡೆಯಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯನ್ನು ಬಲವರ್ಧನೆ ಮಾಡಬೇಕು. ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಿಸಬೇಕು. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಇಲಾಖೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು. ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಸಂಭಾವನೆಯ ಬಾಕಿ 13.5 ಕೋಟಿ ಬಿಡುಗಡೆ, ಉನ್ನತ ಶಿಕ್ಷಣದಂತೆ ಪದವಿ ಪೂರ್ವ ಹಂತದಲ್ಲಿಯೂ ಅಕಾಡೆಮಿಕ್ ಕೌನ್ಸಿಲ್…
ತುಮಕೂರು: ನಗರದ ಮರಳೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರಾಗಿರುವ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ಒಂದನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಯಾವುದೇ ನಿರ್ಮಾಣ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಸೂಚಿಸಿದ್ದು, ಸಂಬಂಧಿಸಿದವರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ. ಈ ಆದೇಶದಿಂದಾಗಿ ಸದ್ಯಕ್ಕೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಹಿನ್ನಡೆಯಾಗಿದೆ. ಮರಳೂರಿನ ಸರ್ವೆ ನಂ 87/2ರಲ್ಲಿ 2 ಎಕರೆ ಜಾಗವನ್ನು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ನಗರಾಭಿವೃದ್ಧಿ ಇಲಾಖೆ ಆದೇಶದಂತೆ ಮಹಾನಗರ ಪಾಲಿಕೆಯು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಭೂಮಿಯನ್ನು ನೋಂದಣಿ ಮಾಡಿಕೊಟ್ಟಿತ್ತು. ಈ ಜಮೀನು ತಮಗೆ ಸೇರಿದ್ದು ಎಂದು ವಾದಿಸಿ ಗಂಗಮ್ಮ ಎಂಬುವರು ಕೋರ್ಟ್ ಮೊರೆ ಹೋಗಿದ್ದರು. ವಿವಾದ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿ ಇರುವಾಗಲೇ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಭೂಮಿ ಮಂಜೂರು ಮಾಡಲಾಗಿತ್ತು. ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಂಜೂರಾತಿ ಅದೇಶದಲ್ಲಿ ಷರತ್ತು ವಿಧಿಸಲಾಗಿತ್ತು. ಕಾಂಗ್ರೆಸ್ ಭವನಕ್ಕೆ ಜಮೀನು ಮಂಜೂರು…