Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ತುಮಕೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಕುಣಿಗಲ್ ನಲ್ಲಿ 2026–27ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಆ.31 ರವರಗೆ ಪ್ರವೇಶ ಪಡೆಯಲು ಅವಕಾಶವಿದೆ ಎಂದು ಸಂಸ್ಥೆಯ ಪ್ರಾಚಾರ್ಯ ನರಸಿಂಹಮೂರ್ತಿ ಡಿ., ತಿಳಿಸಿದ್ದಾರೆ. ಸಂಸ್ಥೆಯಲ್ಲಿ ಪ್ರಸ್ತುತ ಮೆಕ್ಯಾನಿಕ್ ಡೀಸೆಲ್, ಡ್ರೆಸ್ ಮೇಕಿಂಗ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ಡ್ ಸಿ.ಎನ್.ಸಿ. ಮಷಿನಿಂಗ್ ಟೆಕ್ನಿಷಿಯನ್, ಬಿ.ಡಿ.ವಿ.ವಿ., ಇಂಡಸ್ಟ್ರಿಯಲ್ ರೋಬೋಟಿಕ್ಸ್, ಎಮ್.ಪಿ.ಸಿ.ಎ. ಹಾಗೂ ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ ವೃತ್ತಿಗಳಲ್ಲಿ ಖಾಲಿ ಸೀಟುಗಳು ಲಭ್ಯವಿವೆ. ವಿದ್ಯಾರ್ಥಿಗಳು ಉದ್ಯೋಗಮುಖಿ ಕೌಶಲ್ಯಗಳನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಈ ಕೋರ್ಸ್‌ಗಳು ಸಹಕಾರಿಯಾಗಲಿವೆ. ವಿಶೇಷವಾಗಿ ಎಸ್ ಎಸ್ ಎಲ್ ಸಿ ಅನುತ್ತೀರ್ಣರಾದ ಅಭ್ಯರ್ಥಿಗಳೂ ಡ್ರೆಸ್ ಮೇಕಿಂಗ್ ವೃತ್ತಿಗೆ ಪ್ರವೇಶ ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸರ್ಕಾರಿ ಐಟಿಐ, ಕುಣಿಗಲ್ ಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 97318 09886ನ್ನು ಸಂಪರ್ಕಿಸಲು ಕೋರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 14ರ ಭಾನುವಾರದಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೆತ್ತೇನಹಳ್ಳಿ, ಗಳಿಗೆೇನಹಳ್ಳಿ ಹಾಗೂ ಹೊಳಕಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಸಹಕರಿಸಬೇಕಾಗಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಮುತ್ತು ಬಂದಿದೆ ಕೇರಿಗೆ ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ ಕಾರ್ಯಕ್ರಮವನ್ನು ಜೂ.15 ಸೋಮವಾರ ಸಂಜೆ 7 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂತ ಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರವು ಒಂದು ವಿಶೇಷ ನೃತ್ಯ ರೂಪಕವನ್ನು ಸಿದ್ಧಪಡಿಸಿದ್ದು, ಕನಕದಾಸರ ಮಹತ್ವದ ಕೀರ್ತನೆ ಮತ್ತು ಕಾವ್ಯ ಭಾಗವನ್ನು ಆಯ್ದು ಅವರ ತತ್ತ್ವಾದರ್ಶಗಳನ್ನು ಜನತೆಗೆ ತಲುಪಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಸ್ನೇಹಾ ಕಪ್ಪಣ್ಣ ಅವರ ನೃತ್ಯ ಸಂಯೋಜನೆ, ಅಷ್ಟೇ ಪ್ರಸಿದ್ಧರಾಗಿರುವ ನೃತ್ಯ ರೂಪಕದ ಸಂಗೀತ ತಜ್ಞ ಡಾ.ಪ್ರವೀಣ್ ಡಿ ರಾವ್ ಅವರ ನೃತ್ಯ ಸಂಯೋಜನೆ ಒಳಗೊಂಡ ನೃತ್ಯರೂಪಕ ಇದಾಗಿದೆ. ಹದಿನೈದು ಹದಿನಾರೂ ಶತಮಾನದ ನಡುವೆ ಬಾಳಿದ ಸಂತಕವಿ ಕನಕದಾಸರು ಸಾಮಾಜಿಕ ಕಾಳಜಿ ಮತ್ತು ಧಾರ್ಮಿಕ ಚಿಂತನೆಗಳ ಮೂಲಕ ಮಹತ್ವವನ್ನು ಸಾಧಿಸಿದ…
ತುಮಕೂರು: ಇಲ್ಲಿನ ಚಿಕ್ಕಪೇಟೆಯ ಶ್ರೀ ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಸಂಸ್ಥಾಪನಾ ದಿನದ ಅಂಗವಾಗಿ ಜೂ.14ರಂದು ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 2ರವರೆಗೆ ಸಂಘದ ಸದಸ್ಯರು ಹಾಗೂ ಅವರ ಕುಟುಂಬವರ್ಗದವರಿಗಾಗಿ ಉಚಿತ ಆರೋಗ್ಯ ತಪಾಸಣೆ, ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಸಂಘದ ಬಳಿ ಆಯೋಜಿಸಲಾಗಿದೆ. ಶ್ರೀ ಶಾರದಾ ದೇವಿ ಕಣ್ಣಾಸ್ಪತ್ರೆ, ಸಂಶೋಧನಾ ಕೇಂದ್ರ ಪಾವಗಡ, ಶ್ರೀ ಗುರುಕುಲ ಕ್ಲಿನಿಕ್, ಡಯಾಗ್ನಸ್ಟಿಕ್ ಸೆಂಟರ್ ಸಹಯೋಗದಲ್ಲಿ ಈ ಶಿಬಿರ ನೆರವೇರಲಿದ್ದು, ಸಂಜೆ 4ಗಂಟೆಗೆ ಸಂಸ್ಥಾಪನಾ ದಿನದ ಕಾರ್ಯಕ್ರಮ ಸ್ವಾಮಿ ಜಪಾನಂದಜೀ ಅವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ. ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಎಸ್‌ಎಂಎಸ್ ಸೇವೆಗೆ ಚಾಲನೆ ಕೊಡುವರು. ಅಧ್ಯಕ್ಷತೆಯನ್ನು ಸಹಕಾರಿ ಅಧ್ಯಕ್ಷ ಎಸ್.ಹರೀಶ್ ಆಚಾರ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಗುರುಕುಲ ಸಹಕಾರಿ ಸಂಸ್ಥೆಯ ಜಿ.ಮಲ್ಲಿಕಾರ್ಜುನಯ್ಯ, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಹೆಬ್ಬೂರು ನಾಗರಾಜಚಾರ್, ನಿವೃತ್ತ ಪ್ರಾಚಾರ್ಯ ಡಾ.ಕೆ.ವಿ.ಕೃಷ್ಣಮೂರ್ತಿ, ಚಿನ್ನಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಟಿ.ಎ.ರವಿಕುಮಾರ್, ಉಪಾಧ್ಯಕ್ಷ ಗೋವರ್ಧನಚಾರ್ ಹಾಗೂ ಹಾಲಿ, ಮಾಜಿ…
ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ (ಪಿ.ಯು.ಸಿ., ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗಾಗಿ ತಮ್ಮ ಅರ್ಜಿಯನ್ನು ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0816–2251736 ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ಹುಸೇನ್ ಪುರ ಗ್ರಾಮದಲ್ಲಿ 400/220 ಕೆ.ವಿ. ವಿದ್ಯುತ್ ಸ್ಥಾವರ ನಿರ್ಮಾಣ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ನೇರ ಖರೀದಿ ಮೂಲಕ ಸ್ವಾಧೀನಪಡಿಸಿಕೊಳ್ಳುವ ಸಂಬಂಧ ದರ ನಿರ್ಧಾರಣಾ ಸಲಹಾ ಸಮಿತಿಯ ಸಭೆಯು ಇಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ದರ ನಿರ್ಧಾರಣಾ ಸಲಹಾ ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯೋಚಿತ ಪರಿಹಾರದ ಹಕ್ಕು ಪುನರ್ವಸತಿ ಮತ್ತು ಪುನರ್ವ್ಯವಸ್ಥೆ ಹಕ್ಕು ಕಾಯ್ದೆ–2013ರ ಕಲಂ 46ರ ಅನ್ವಯ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂಮಾಲೀಕರಿಂದ ನೇರವಾಗಿ ಖರೀದಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರದ ಮಾರ್ಗಸೂಚಿಯಂತೆ 100 ಎಕರೆ ವಿಸ್ತೀರ್ಣ ಮೀರದ ಭೂಮಿಯನ್ನು ನೇರ ಖರೀದಿ ಮೂಲಕ ಪಡೆಯಲು ಅವಕಾಶವಿದ್ದು, ಈ ಸಂಬಂಧ ಭೂಕೋರಿಕೆ ಇಲಾಖೆಯಾದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ತುಮಕೂರು ವತಿಯಿಂದ ಸಲ್ಲಿಸಲಾದ ಪ್ರಸ್ತಾವನೆಯ ಮೇರೆಗೆ ಕ್ರಮ ಕೈಗೊಳ್ಳಲಾಗಿರುತ್ತದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಮಧುಗಿರಿ ಉಪವಿಭಾಗಾಧಿಕಾರಿಗಳು ಸಂಬಂಧಿತ ಭೂಮಿಗಳ…
ತುಮಕೂರು: ಜಿಲ್ಲೆಗೆ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಾಗಿರುವ ಹೇಮಾವತಿ ನೀರಿನ ನಮ್ಮ ಪಾಲನ್ನು ಮೀಸಲಿರಿಸಬೇಕು. ರೈತರ ಹಾಗೂ ಸಾರ್ವಜನಿಕರ ಹಿತ ಕಾಪಾಡುವುದು ಹಾಗೂ ಜಿಲ್ಲೆಯ ಕುಡಿಯುವ ನೀರಿಗೆ ಮಾರಕವಾಗಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಸ್ಥಗಿತಗೊಳಿಸಬೇಕು ಎಂದು ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಸರ್ಕಾರವನ್ನು ಒತ್ತಾಯಿಸಿದರು. ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಸ್ಥಗಿತಗೊಳಿಸಬೇಕು ಎಂದು ಬಹು ದಿನಗಳಿಂದ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸರ್ಕಾರ ಜಿಲ್ಲೆಯ ಜನರಪರವಾಗಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಈ ಯೋಜನೆಯಿಂದ ತುಮಕೂರು ಜಿಲ್ಲೆಗೆ ಮೀಸಲಿರುವ ಹೇಮಾವತಿ ನೀರಿನ ಪಾಲು ನ್ಯಾಯ ಸಮ ತವಾಗಿ ನಮಗೆ ದೊರೆಯುವುದಿಲ್ಲ ಎಂಬ ಆತಂಕ ನಮ್ಮದಾಗಿದೆ. ಈ ಯೋಜನೆಯು ಜಾರಿಗೊಂಡರೆ ಜಿಲ್ಲೆಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ಮರಣ ಶಾಸನವಾಗಲಿದೆ ಎಂದು ಹೇಳಿದರು. ಹೇಮಾವತಿ ನಾಲಾ ವಲಯಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲಾ ಆಧುನೀಕರಣ ಕಾಮಗಾರಿಯು ಚಾಲ್ತಿಯಲ್ಲಿದ್ದು ಮುಗಿಯುವ ಹಂತದಲ್ಲಿದೆ. ಆದರೆ ಏಕಾಏಕಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಅನುಷ್ಠಾನಕ್ಕೆ ತಂದಿರುವುದರಿಂದ ಸಾವಿರಾರು…
ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ಕೊರಟಗೆರೆ ಬೆಸ್ಕಾಂ ಉಪ ವಿಭಾಗದ ಕಚೇರಿ ಮುಂದೆ ಬೆಸ್ಕಾಂ ನೌಕರರು ಹಾಗೂ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಸಾಂಕೇತಿಕವಾಗಿ ಬೃಹತ್ ಪ್ರತಿಭಟನೆ ನಡೆಸಿದವು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೊರಟಗೆರೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ. ಪ್ರಸನ್ನ ಕುಮಾರ್, “ಕೇಂದ್ರ ಸರ್ಕಾರವು ವಿದ್ಯುತ್ ಪ್ರಸರಣ ಹಾಗೂ ಸರಬರಾಜು ನಿಗಮಗಳನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಜಾರಿ ಮಾಡಲು ಹೊರಟಿರುವ ‘ವಿದ್ಯುತ್ ತಿದ್ದುಪಡಿ ಕಾಯ್ದೆ–೨೦೨೬’ ಅನ್ನು ತಕ್ಷಣವೇ ವಾಪಸ್ ಪಡೆಯಬೇಕು. ಬೆಸ್ಕಾಂ ಸೇರಿದಂತೆ ರಾಜ್ಯದ ಇನ್ನಿತರ ವಿದ್ಯುತ್ ಪ್ರಸರಣಾ ಕೇಂದ್ರಗಳು ಸಾವಿರಾರು ಕೋಟಿ ಮೌಲ್ಯದ ಸಾರ್ವಜನಿಕ ಆಸ್ತಿಯಾಗಿದೆ. ಬೃಹತ್ ಸೌಕರ್ಯ, ಉಪ ಕೇಂದ್ರಗಳು ಹಾಗೂ ಯಂತ್ರೋಪಕರಣಗಳನ್ನು ಹೊಂದಿರುವ ಈ ಸಂಸ್ಥೆಗಳ ಮೂಲಕ ನೌಕರರು ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ಹೀಗಿದ್ದೂ ಇದನ್ನು ಖಾಸಗಿ ಕಂಪನಿಗಳಿಗೆ ವಹಿಸಲು ಹೊರಟಿರುವುದು ಖಂಡನೀಯ” ಎಂದು…
ತುಮಕೂರು: ನಗರದ ಅಮಾನಿಕೆರೆ ಗಾಜಿನ ಮನೆ ಉದ್ಯಾನವನದ ಆವರಣದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ದಲಿತ ಕವಿ ಡಾ. ಸಿದ್ದಲಿಂಗಯ್ಯನವರ 5ನೇ ಪುಣ್ಯ ಸ್ಮರಣೆ ಹಾಗೂ ದಲಿತ ಚಳುವಳಿಯ ಹರಿಕಾರ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ಹಂಚುವ ಮೂಲಕ ಗೌರವ ಸಮರ್ಪಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎನ್. ಕೆ. ನಿಧಿ ಕುಮಾರ್, “ಡಾ. ಸಿದ್ದಲಿಂಗಯ್ಯನವರು ಬಂಡಾಯ ಸಾಹಿತ್ಯದ ಸಾರಥಿ ಹಾಗೂ ಸರಳತೆ ಮತ್ತು ಹಾಸ್ಯಪ್ರಜ್ಞೆಯ ಅಪರೂಪದ ಕವಿ. ತಮ್ಮ ಕಾವ್ಯ ಹಾಗೂ ಸಾಮಾಜಿಕ ಹೋರಾಟಗಳ ಮೂಲಕ ಶೋಷಿತ ಸಮುದಾಯಗಳ ಧ್ವನಿಯಾಗಿ ಅವರು ಹೊರಹೊಮ್ಮಿದರು,” ಎಂದರು. “ನಿಮ್ಮ ಬೇಟೆಯುತ್ಸವದಲಿ ಕುರಿಗಳಾಗಿ ಸತ್ತ ಜನರು ಬಂದಿರುವರು ಹುಲಿಗಳಾಗಿ…
ಮಂತ್ರಾಲಯ: ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ ದರ್ಶನ” ಆಲ್ಬಮ್ ಸಾಂಗ್ ಬಿಡುಗಡೆ ಸಮಾರಂಭಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಈ ಮಹತ್ವದ ಕಾರ್ಯಕ್ರಮಕ್ಕೆ ಆಗಮಿಸುವಂತೆ ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಭಕ್ತಿಪೂರ್ವಕವಾಗಿ ಆಹ್ವಾನ ನೀಡಲಾಗಿದೆ. ಮಂತ್ರಾಲಯದ ಶ್ರೀಗಳ ಪೂರ್ವಾಶ್ರಮದ ಪುತ್ರಿ ಶ್ರೀಮತಿ ಅಭಿಜ್ಞಾ ಹಾಗೂ ಅಳಿಯ ಶ್ರೀಶಾಜೋಯ್ ಅವರು ಕಾಡು ಸಿದ್ದೇಶ್ವರ ಮಠದ ಶ್ರೀಗಳನ್ನು ಭೇಟಿಯಾಗಿ ಅಧಿಕೃತವಾಗಿ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿದರು. ಆಹ್ವಾನ ನೀಡುವ ಈ ಸಂದರ್ಭದಲ್ಲಿ ಪ್ರಮುಖರಾದ ರಘು ಭಟ್, ಸುಗುಣ ರಘು ಭಟ್, ಕಿರುತೆರೆ ನಟ ತಿಪಟೂರು ದಯಾನಂದ ಸಾಗರ್ ಹಾಗೂ ನೊಣವಿನಕೆರೆ ಶಂಕ್ರಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಜೂನ್ 26ರಂದು ನಡೆಯಲಿರುವ ಈ ಆಲ್ಬಮ್ ಬಿಡುಗಡೆ ಸಮಾರಂಭವು ಧಾರ್ಮಿಕ ಮತ್ತು ಸಾಂಸ್ಕೃತಿಕ ಲೋಕದ ಗಣ್ಯರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ…