Subscribe to Updates
Get the latest creative news from FooBar about art, design and business.
- ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
- ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
- ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
- ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್ ನಲ್ಲೂ ಸಿಸಿಬಿ ಶೋಧ!
- ವಿಬಿ ಜಿ ರಾಮ್ ಜಿ ಹಣ ಬರುತ್ತಿಲ್ಲ, ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
Author: admin
ತುಮಕೂರು: ನಗರದ ಮಂಡಿಪೇಟೆಯ ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಜನಾಂಗದ ಮುಖಂಡ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್ ಅಂಡ್ ಅಕಾಡೆಮಿ ಅಧ್ಯಕ್ಷ ನಿಸಾರ್ ಅಹಮದ್ (ಆರಿಫ್), ’ದೇಶದಲ್ಲಿ ಎಲ್ಲ ಸಮುದಾಯದವರಿಗೂ ಅವರದ್ದೇ ಆದ ಹಬ್ಬ, ಆಚರಣೆ, ಪೂಜೆ, ನಮಾಜ್ ಮಾಡುವ ಹಕ್ಕನ್ನು ಕಾನೂನಿನಲ್ಲಿ ನೀಡಲಾಗಿದೆ. ಆದರೆ ಈಗಿನ ಕೇಂದ್ರ ಸರ್ಕಾರ ಸಮಾಜದಲ್ಲಿ ಶಾಂತಿ ಭಂಗ ಮಾಡುವಂತಹ, ಜನ ವಿರೋಧಿ ಕಾನೂನುಗಳನ್ನು ರೂಪಿಸಲು ಮುಂದಾಗಿದ್ದು, ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ದ್ವೇಷಪೂರಿತ ಕಾನೂನಾಗಿದೆ’ ಎಂದರು. ಇಸ್ಲಾಮಿಕ್ ಕಾನೂನಿನ ಪ್ರಕಾರ, ವಕ್ಫ್ ಎಂದರೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ನಿರ್ಮಿಸಲಾದ ಆಸ್ತಿಯಾಗಿದೆ. ಅಂತಹ ಆಸ್ತಿಗಳಿಂದ ಬರುವ ಆದಾಯವನ್ನು ಸಾಮಾನ್ಯವಾಗಿ ಮಸೀದಿಗಳನ್ನು ನಿರ್ವಹಿಸಲು, ಶಾಲೆಗಳಿಗೆ ಹಣಕಾಸು ಒದಗಿಸಲು ಅಥವಾ ಬಡವರಿಗೆ ನೆರವಾಗಲು ಬಳಸಲಾಗುತ್ತದೆ. ವಕ್ಫ್ (ತಿದ್ದುಪಡಿ) ಮಸೂದೆ 2024, ಭಾರತದಲ್ಲಿ…
ತುಮಕೂರು: ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಾವತಿಯಾಗಲು ಕಾರಣನಾದ ಮತ್ತು ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) 20 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 2.50 ಲಕ್ಷ ರೂ. ದಂಡ ವಿಧಿಸಿದೆ. ಶಶಿಕುಮಾರ್ ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು, ಬಾಲಕಿಯನ್ನು ಪ್ರೀತಿ ಪ್ರೇಮದ ಹೆಸರಿನಲ್ಲಿ ಪುಸಲಾಯಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ನಂತರ ಆಕೆಯನ್ನು ಬಲವಂತವಾಗಿ ಬಾಲ್ಯವಿವಾಹ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ತನಿಖಾಧಿಕಾರಿ ಕುಣಿಗಲ್ ನ ಸಿಪಿಐ ವಿ.ಎಂ.ಗುರುನಾಥ್ ಘನ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿ ಶಶಿಕುಮಾರ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 2.50 ಲಕ್ಷ ದಂಡವನ್ನು…
ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯು ಏಪ್ರಿಲ್ 17ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ…
ತಿಪಟೂರು: ತಾಲೂಕಿನಲ್ಲಿ ಮೂರು ಬಾರಿ ಶಾಸಕರಾಗಿ ಇತಿಹಾಸ ಸೃಷ್ಟಿಸಿರುವ ಶಾಸಕ ಕೆ.ಷಡಕ್ಷರಿ 77ನೇ ಹುಟ್ಟುಹಬ್ಬ ಆಚರಣೆ ಗೆ ಸಕಲ ಸಿದ್ಧತೆಗಳು ನಡೆದಿವೆ ಎಂದು ಶಾಸಕ ಅಭಿಮಾನಿಗಳ ಬಳಗ ತಿಳಿಸಿದರು. ಕೆ.ಷಡಕ್ಷರಿಯವರು ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿದ ದಿನದಿಂದ ಇಲ್ಲಿಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಚಯಿಸುವ ಉದ್ದೇಶದಿಂದ ನಾಡಿನ ಎಲ್ಲ ಮಠಮಾನ್ಯಗಳು ಸ್ವಾಮಿಗಳು, ಸಚಿವರು, ಶಾಸಕರುಗಳ ಉಪಸ್ಥಿತಿಯಲ್ಲಿ ಜಾತ್ಯಾತೀತವಾಗಿ ಏಪ್ರಿಲ್ 13 ರಂದು ನಗರದ ವೈಭವ ಮಾಲ್ ಹಿಂಭಾಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ನಗರಸಭಾ ಸದಸ್ಯ ಅಣ್ಣಯ್ಯ ತಿಳಿಸಿದರು. ಈ ಕಾರ್ಯಕ್ರಮಕ್ಕೆ ನಾಡಿನ ಸ್ವಾಮೀಜಿಗಳು ಜಾತ್ಯಾತೀತವಾಗಿ ಆಗಮಿಸುವರು ಸುತ್ತೂರು ಮಠದ ಶಿವರಾತ್ರಿ ದೇಶಿಯ ಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಗುರು ಪರದೇಶಿ ಕೇಂದ್ರ ಸ್ವಾಮೀಜಿ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿರುಶಭ ದೇಶಿ ಕೇಂದ್ರ ಶಿವಯೋಗಿ ಶ್ವರಶಬಕೇಂದ್ರಿಯ ಸ್ವಾಮೀಜಿ, ಆದಿ ಚುಂಚನಗಿರಿಯ ನಿರ್ಮಲಾನಂದಸ್ವಾಮೀಜಿ ನಾಡಿನ ಹಲವಾರು ಸ್ವಾಮೀಜಿಗಳು ಹರ ಗುರು ಚರಣರು ರಾಜಕೀಯ ಧುರೀಣರು…
ಶಿರಾ : ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ನಂಬಿದ್ದ ಮಹಾತ್ಮ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಹೆಚ್ಚು ಮಹತ್ವವನ್ನು ನೀಡಿದ್ದರು. ಗ್ರಾಮಗಳಲ್ಲಿ ನಡೆಯುವ ಗ್ರಾಮ ಸಭೆಗಳು ಇಂದಿಗೂ ಗ್ರಾಮ ಸ್ವರಾಜ್ಯದ ಜೀವಾಳವಾಗಿ ಹೊರಹೊಮ್ಮಿವೆ. ಗ್ರಾಮ ನೈರ್ಮಲ್ಯ, ಆರೋಗ್ಯ, ಶಿಕ್ಷಣ, ನೀರು ಸರಬರಾಜು, ವಿದ್ಯುತ್, ರಸ್ತೆಗಳು ಮೊದಲಾದ ಮೂಲಭೂತ ಸೌಕರ್ಯಗಳನ್ನು ಪ್ರತಿಯೊಂದು ಗ್ರಾಮಗಳು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ. ಈ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಾಲ ಕಾಲಕ್ಕೆ ಜನರಿಗೆ ತಲುಪಿಸಲು ಸುಸಜ್ಜಿತ ಗ್ರಾಮ ಪಂಚಾಯಿತಿ ಕಟ್ಟಡದ ಅವಶ್ಯಕತೆ ಇದ್ದೂ, ಆ ನಿಟ್ಟಿನಲ್ಲಿ ಸಾರ್ವಜನಿಕರನ್ನ ಕೈ ಬೀಸಿ ಕರೆದು ಸಕಲ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ಸಿಗುವಂತೆ ಆತ್ಮವಿಶ್ವಾಸ ಹುಟ್ಟಿಸುವ ರೀತಿಯಲ್ಲಿ ಇಡೀ ಜಿಲ್ಲೆಗೆ ಮಾದರಿಯೆಂಬಂತೆ ರತ್ನಸಂದ್ರ ಗ್ರಾಮ ಪಂಚಾಯಿತಿ ಕಟ್ಟಡ ಹೈ-ಟೆಕ್ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಇದೇ ಏ.16 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ. ಕಿರಿದಾದ ಕಟ್ಟಡದಲ್ಲಿ ಈ ಹಿಂದೆ ಕೆಲಸ ನಿರ್ವಹಿಸುತ್ತಿದ್ದ ಕಾರಣ ಗ್ರಾಮ ಪಂಚಾಯಿತಿ ಹಂತದ ಜನಪ್ರತಿನಿಧಿಗಳು,…
ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) 20 ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದೂವರೆ ಲಕ್ಷ ರೂ. ದಂಡ ವಿಧಿಸಿದೆ. ರಘು ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುಗಾದಿ ಹಬ್ಬದ ಹಿನ್ನೆಲೆ ಪೋಷಕರು ದೇವಸ್ಥಾನಕ್ಕೆ ತೆರಳಿದ್ದರು. ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿದ್ದ ವೇಳೆ ಆಕೆಯ ಮನೆಗೆ ಹೋಗಿ ಅಪರಾಧಿಯು ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿಗಳಾದ ನವೀನ್ ಕುಮಾರ್ ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ವಿರುದ್ಧ ಇರುವ ಆರೋಪ ಸಾಬೀತಾದ ಹಿನ್ನೆಲೆ 20 ವರ್ಷಗಳ ಜೈಲು ಶಿಕ್ಷೆ 1.50 ಲಕ್ಷ ರೂಪಾಯಿ ದಂಡ ವಿಧಿಸಿದೆ. ಇದೇ ವೇಳೆ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ. ಗಳ ಪರಿಹಾರ ಸೇರಿದಂತೆ ಒಟ್ಟು…
ಬೆಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ ಘಟನೆ ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಅವರ ಪ್ರಕಾರ, ಬುರ್ಖಾ ಧರಿಸಿದ ಮಹಿಳೆಯೊಬ್ಬರು ಯುವಕನೊಂದಿಗೆ ಸ್ಕೂಟರ್ ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ. ಈ ಸಂಬಂಧ ಮಹಿಳೆ ನಮಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದೇವೆ’ ಎಂದು ಗಿರೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ‘ಈ ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಈ ಪ್ರಕರಣದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದೇವೆ’ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು. ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ…
ತುಮಕೂರು: ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಅಭಿವೃದ್ದಿ ಆಗಲಿದೆ. ಉತ್ತಮವಾದ ವಿಮಾನ ನಿಲ್ದಾಣ ಜಾರಿಗೆ ಬರಲು , 150 ಕಿ.ಮೀ. ದೂರ ಇರಬೇಕು. ಶಿರಾ ಉತ್ತಮವಾಗಿದೆ, ಪಕ್ಕದ ಆಂಧ್ರಪ್ರದೇಶ ಹಾಗೂ ಕರ್ನಾಟಕಕ್ಕೂ ಅನುಕೂಲವಾಗಲಿದೆ ಎಂದು ರಾಜ್ಯದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬಂದ ವೇಳೆ ನಾನು ಕೂಡ ಅಂದು ಸರಕಾರದ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೆ ಎಂದರು. ಶಂಕಿತ ಆತಂಕವಾದಿ ತಹವೂರ್ ರಾಣ ನನ್ನು ಈಗಾಗಲೇ ಎನ್ ಐ ಎ ಬಂಧಿಸಿ ಭಾರತಕ್ಕೆ ಕರೆದುಕೊಂಡು ಬಂದಿದೆ ಇನ್ನು ಮುಂದಿನ ದಿನಗಳಲ್ಲಿ ನ್ಯಾಯಾಲಯ ತೆಗೆದುಕೊಳ್ಳುವಂತಹ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಈಗಾಗಲೇ ಅಮೆರಿಕದಿಂದ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ ಎನ್ಐಎ ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಮೆಜೆಸ್ಟಿಕ್ ನಲ್ಲಿರುವ ಅಣ್ಣಮ್ಮ ದೇಗುಲಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿ ಶ್ರೀದೇವಿಗೆ ಹರಕೆ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು ಎಂದು ಹೇಳಲಾಗಿದೆ. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ದರ್ಶನ್ ಪತ್ನಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ. ರಾಜಸ್ಥಾನದಲ್ಲಿ ನಡೆದ ‘ಡೆವಿಲ್’ ಶೂಟಿಂಗ್ ನಲ್ಲಿ ಕೂಡ ದರ್ಶನ್ ಜೊತೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಕೂಡ ಭಾಗಿಯಾಗಿದ್ದರು. ಕಳೆದ ವಾರ ಏ.4ರಂದು ಬೆಂಗಳೂರಿಗೆ ಚಿತ್ರೀಕರಣ ಮುಗಿಸಿ ವಾಪಸ್ ಬಂದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————