Author: admin

ಮೈಸೂರು: ಇಬ್ಬರು ಮೊಮ್ಮಕ್ಕಳು ಮತ್ತು ತಾತ ಜಲಸಮಾಧಿಯಾದ ಘಟನೆ ಮೈಸೂರಿನ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ ಚೌಡಯ್ಯ (70), ಭರತ್(13) ಮತ್ತು ಧನುಷ್(10) ಎಂದು ಗುರುತಿಸಲಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ, ನಾನು ಮುಗ್ದೆ ಎಂದು ನಟಿ ರನ್ಯಾ ರಾವ್  ಹೇಳಿದ್ದು, ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ಹೇಳಿದ್ದಾರೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಕಾರಾಗೃಹ ಇಲಾಖೆಯ ಮೂಲಕ ಡಿಆರ್‌ ಐಗೆ ಸಲ್ಲಿಸಿದ ಪತ್ರ ಹೆಚ್ಚು ಸುದ್ದಿಯಾಗುತ್ತಿದೆ. ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ಪತ್ರದ ಸತ್ಯಾಸತ್ಯತೆಯನ್ನು ಖಚಿತಪಡಿಸಲು ಸಾಧ್ಯವಾಗಲಿಲ್ಲ. ಬೆಂಗಳೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ ಸುರೇಶ್ ಅವರು ಮಾರ್ಚ್ 7 ರಂದು ರನ್ಯಾ ಬರೆದ ಪತ್ರವನ್ನು ಡಿಆರ್‌ಐಗೆ ಕಳುಹಿಸಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದಿರುವ ನಾಲ್ಕು…

Read More

ತುಮಕೂರು:  ಗೃಹ ಸಚಿವರ ತವರು ಜಿಲ್ಲೆಯ  ಶಾಲೆಯ ಆವರಣದಲ್ಲಿ  ಪುಂಡರ ಹಾವಳಿ ಮಿತಿಮೀರಿದ್ದು,  ಸರ್ಕಾರಿ ಶಾಲಾ ಬಾಲಕಿಯರ ಶೌಚಾಲಯದ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ್ದು, ಇದನ್ನು  ಪ್ರಶ್ನಿಸಿದ ವಿದ್ಯಾರ್ಥಿಗೆ ಪುಂಡರ‌ ಗುಂಪು ಹಿಗ್ಗಾಮುಗ್ಗ ಥಳಿಸಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು KPS ಶಾಲೆಯ ಆವರಣಕ್ಕೆ ನುಗ್ಗಿ ಪುಂಡರು  ಹಲ್ಲೆ ಮಾಡಿದ್ದಾರೆ.  10 ನೇ ತರಗತಿ ವಿದ್ಯಾರ್ಥಿ ಯಶ್ವಂತ್ ಮೇಲೆ ದೊಣ್ಣೆಯಿಂದ ಹಲ್ಲೆ   ನಡೆಸಿರುವ ಆರೋಪ ಕೇಳಿ ಬಂದಿದೆ. ಯಶ್ವಂತ್  ಮಧ್ಯಾಹ್ನ ಮೂತ್ರ ವಿಸರ್ಜನೆಗೆ ತೆರಳಿದ್ದ, ಈ ವೇಳೆ ಬಾಲಕಿಯರ ಶೌಚಾಲಯದ ಮೇಲೆ ಪುಂಡರು ಕಲ್ಲು ಎಸೆಯುತ್ತಿದ್ದರು. ಪುಂಡರನ್ನ ಯಶ್ವಂತ್ ಪ್ರಶ್ನಿಸಿದಾಗ, ಅಟ್ಟಾಡಿಸಿಕೊಂಡು ಶಾಲೆ ಆವರಣಕ್ಕೆ  ನುಗ್ಗಿ ಹಲ್ಲೆ  ನಡೆಸಿದ್ದಾರೆ ಎಂದು ಹೇಳಲಾಗಿದೆ. ಹುಳಿಯರು ನಿವಾಸಿ ಮಹಬೂಬ್ ಷರಿಫ್ ಹಾಗೂ ಆತನ ಸಹಚರರಿಂದ ಪುಂಡಾಟಿಕೆ ನಡೆಸಿದ್ದು, ವಿದ್ಯಾರ್ಥಿಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಯಶ್ವಂತ್ ಗೆ ಬೆನ್ನು ಹಾಗೂ ತಲೆಗೆ ತೀವ್ರಪೆಟ್ಟು ಬಿದ್ದಿದೆ. ಹೀಗಾಗಿ ಆತನನ್ನು ಚಿಕ್ಕನಾಯಕನಹಳ್ಳಿ …

Read More

ತುಮಕೂರು: ವಿದ್ಯಾರ್ಥಿನಿಯರ ಶಾಲಾ ಶೌಚಾಲಯದ ಮೇಲೆ ಕಲ್ಲು ತೂರಾಟ ಮಾಡಿದ್ದಲ್ಲದೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ಪುಂಡರ ಗುಂಪೊಂದು ಥಳಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಹುಳಿಯಾರು ನಿವಾಸಿಗಳಾದ ಮಹಬೂಬ್ ಷರಿಫ್, ಶಂಶುದ್ದೀನ್, ಇರ್ಫಾನ್, ಮುಬಾರಕ್, ಮುದಾಸೀರ್, ಯಾಸೀನ್ ಹಾಗೂ ತಾಝೀಮ್ ಕಲ್ಲು ತೂರಿ ಹಲ್ಲೆ ಮಾಡಿದ ಆರೋಪಿಗಳು. ಇನ್ನು ಘಟನೆ ಸಂಬಂಧ ಪುಂಡರ ವಿರುದ್ಧ ದೂರು ದಾಖಲಾಗಿದ್ದು ಐವರನ್ನು ಬಂಧಿಸಲಾಗಿದೆ. ಉಳಿದಿಬ್ಬರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಣೆ ಧಾವಿಸಿದ್ದು, ಬಂದ ಅಗ್ನಿಶಾಮಕ ಸಿಬ್ಬಂದಿ ಎರಡು ಕ್ರೇನ್ ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್ಗಳನ್ನು ಬಿಡಿ ಬಿಡಿ ಮಾಡಿ, ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ. ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ರಾಯಚೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ. ಮಾನ್ವಿಯಲ್ಲಿ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ ಎಂದರು. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೊರಟಗೆರೆ: ತಾಲೂಕಿನ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ವಿತರಿಸಲಾಗುವ 5 ಕೆ.ಜಿ. ಆಹಾರ ದಾನ್ಯದೊಂದಿಗೆ ರಾಜ್ಯ ಸರ್ಕಾರದ ಹೆಚ್ಚುವರಿ 5 ಕೆ.ಜಿ. ಆಹಾರ ದಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂ. ನಂತೆ 170 ರೂಗಳನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ವರ್ಗಾಯಿಸಲಾಗುತ್ತಿತ್ತು. ಆದರೆ ಫೆಬ್ರವರಿ ತಿಂಗಳಿಂದ ನೇರ ನಗದು ವರ್ಗಾವಣೆ ( ಡಿ.ಬಿ.ಟಿ) ಬದಲಾಗಿ ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆ.ಜಿ.ಅಕ್ಕಿಯನ್ನು ಹಂಚಿಕೆ ಮಾಡಲಿದೆ, ಫೆಬ್ರವರಿ ತಿಂಗಳು ಮುಕ್ತಾಯವಾಗಿರುವುದರಿಂದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಡಿ.ಬಿ.ಟಿ ಬದಲಾಗಿ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ಮಾರ್ಚ್ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು. ಈ ಹಂಚಿಕೆಯಂತೆ ಮಾರ್ಚ್ 2025 ನೇ ತಿಂಗಳಲ್ಲಿ ಅಂತ್ಯೋದಯ ಅನ್ನ ಯೋಜನೆಯ ಒಬ್ಬ, ಇಬ್ಬರು, ಮೂವರು ಸದಸ್ಯರಿಗೆ 35 ಕೆ.ಜಿ, 4 ಸದಸ್ಯರಿಗೆ 45 ಕೆ.ಜಿ, 5…

Read More

ನಮ್ಮ ತುಮಕೂರು ವಿಶೇಷ ವರದಿ | ಕೊರಟಗೆರೆ : ರಾಜ್ಯದ ಎಲ್ಲ ಸರಕಾರಿ ಇಲಾಖೆಗಳಲ್ಲಿ ಮಹನೀಯರ ಜಯಂತಿಗಳನ್ನು ಗೌರವಪೂರ್ವಕವಾಗಿ ಆಚರಿಸುವುದು ಕಡ್ಡಾಯ ಎಂಬ ರಾಜ್ಯ ಸರ್ಕಾರದ ನಿದರ್ಶನವಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾರ್ಗಸೂಚಿಯಂತೆ, 2025ನೇ ಸಾಲಿನ ಜಯಂತಿ ಉತ್ಸವಗಳನ್ನು ಸರಿಯಾದ ರೀತಿಯಲ್ಲಿ ಆಯೋಜಿಸಬೇಕೆಂದು ಸರ್ಕಾರದ ಆದೇಶ (ಸಂಖ್ಯೆ: ಕಸಂವಾ 340 ಕಸಧ 2015, ದಿನಾಂಕ: 18/09/2015) ಅನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆದರೆ, ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಯಲ್ಲಿ ಈ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಶ್ರೀ ಕೈವಾರ ತಾತಯ್ಯ ಯೋಗಿ ನಾರೇಣರ ಜಯಂತಿ ಆಚರಣೆಯಲ್ಲಿ ಸುಸಜ್ಜಿತ ಭಾವಚಿತ್ರವನ್ನು ಪ್ರದರ್ಶಿಸುವ ಬದಲಿಗೆ, ಕೇವಲ ಪ್ಲೇವುಡ್ ಅಥವಾ ವುಡ್ ಶೀಟ್ ಮೇಲೆ ಫೋಟೋ ಅಂಟಿಸಿ ಅವರ ಗೌರವವನ್ನು ತಗ್ಗಿಸುವ ರೀತಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಸ್ಥಳೀಯರಿಂದ ಆಕ್ರೋಶ: ಈ ಅವ್ಯವಸ್ಥೆಯ ಬಗ್ಗೆ ಸ್ಥಳೀಯರು ಮತ್ತು ಕನ್ನಡಪರ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹನೀಯರ ಆದರ್ಶ ಮತ್ತು ಅವರ ಕೊಡುಗೆಗಳಿಗೆ ಯೋಗ್ಯ ಗೌರವ ನೀಡುವ…

Read More

ತುಮಕೂರು:  ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಡೆದಾಡುವ ದೇವರ ಹೆಸರನ್ನು ತುಮಕೂರು ರೈಲ್ವೆ ನಿಲ್ದಾಣಕ್ಕೆ ಇರಿಸುವ ಬಗ್ಗೆ ಸಮ್ಮತಿಸಲು ರಾಜ್ಯ ಸರಕಾರ ಪರೋಕ್ಷವಾಗಿ ಹಿಂದೇಟು ಹಾಕುತ್ತಿದೆ. ನಾಲ್ಕು ಬಾರಿ ರಾಜ್ಯ ಸರಕಾರಕ್ಕೆ ಪತ್ರ ಬರೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ್ದೆ ರೀತಿಯಲ್ಲೂ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಶೆಟ್ಟಿಹಳ್ಳಿ ಗೇಟ್ ಬದಲಿಗೆ ಪಾದಚಾರಿ ಸಬ್ ವೇ  ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈ ಕುರಿತು ಚಚಿಸಲು ನಾನೇ ಸ್ವತಃ ಮುಖ್ಯಮಂತ್ರಿ ಬಳಿ ಹೋಗಿದ್ದೇನೆ. 90 ಕೋ . ರೂ. ಟೆಂಡರ್ ಆಗಿದೆ. ಐದು ಆರು ತಿಂಗಳಿನಿಂದ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸಂಬಂಧ ಪಟ್ಟ ಮುಖ್ಯ ಕಾರ್ಯದರ್ಶಿ ಬಳಿಯೂ ಮಾತನಾಡಿದ್ದೇನೆ. ಹಣಕಾಸು ಕಾಯದರ್ಶಿಗೂ ಮಾತನಾಡಿದ್ದೇನೆ. ರಾಜ್ಯ ಮತ್ತು ಕೇಂದ್ರ ಸರಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. 9 ತಿಂಗಳಿನಿಂದಲೂ ನಾನು ಯಾವ್ದೆ ರಾಜ್ಯ ಸರಕಾರದ ಕಾರ್ಯಕ್ರಮಗಳಿಗೆ ಹೋಗಿಲ್ಲ, ಬೇಕಿಲ್ಲ ಮಾಡಿಕೊಳ್ಳಿ ಎಂದಿದ್ದೇನೆ…

Read More

ಆಂಧ್ರಪ್ರದೇಶ:  ಹಿಂದಿ ಭಾಷೆ ವಿರೋಧಿಸುವವರು ತಮಿಳು ಸಿನಿಮಾವನ್ನು ಯಾಕೆ ಹಿಂದಿಗೆ ಡಬ್ಬಿಂಗ್‌ ಮಾಡ್ತೀರಾ ಎಂದು ನಟ ಹಾಗೂ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರಿಗೆ ತಿರುಗೇಟು ನೀಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದದ ಸಂಬಂಧ ಪ್ರತಿಕ್ರಿಯೆ ನೀಡಿರುವ ಪವನ್ ಕಲ್ಯಾಣ್, ಭಾರತದ ಭಾಷಾ ವೈವಿಧ್ಯತೆ ಬಗ್ಗೆ ತಿಳಿಸಿದರು. ದೇಶಕ್ಕೆ ಎರಡಲ್ಲ, ತಮಿಳು ಸೇರಿದಂತೆ ಬಹು ಭಾಷೆಗಳು ಬೇಕು, ತಮಿಳು ಸೇರಿದಂತೆ ಬಹು ಭಾಷೆಗಳ ಅಗತ್ಯವಿದೆ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More