Author: admin

ವಾಷಿಂಗ್ಟನ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ನಾಸಾ ಗಗನಯಾತ್ರಿಳಾದ ಸುನಿತಾ ವಿಲಿಯಮ್ಸ್‌ ಬುಜ್‌ ವಿಲ್ಮೋರ್‌  ಅವರನ್ನು ಕರೆತರಲು ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೇಟ್ ಉಡಾವಣೆ ಮಾಡಲಾಘಿದೆ. ಇಂದು ಮುಂಜಾನೆ ಸುಮಾರು 4:33 ಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು. ನಾಲ್ವರು ಹೊಸ ಗಗನಯಾತ್ರಿಗಳಿರುವ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಇರುವ ಫಾಲ್ಕನ್ 9 ರಾಕೆಟ್ ಇದಾಗಿದೆ. ಸದ್ಯ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿರುವ ಸುನಿತಾ ವಿಲಿಯಮ್ಸ್ ಮತ್ತು ಬುಜ್‌ ಮುಂದಿನ ಬುಧವಾರಕ್ಕಿಂತ ಮುನ್ನ ವಾಪಸಾಗುವ ನಿರೀಕ್ಷೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪಾವಗಡ: ತಾಲ್ಲೂಕಿನ ವೀರಮ್ಮನಹಳ್ಳಿ ತಾಂಡಾ ಗ್ರಾಮದಲ್ಲಿ ಮುಂದಿನ ತಿಂಗಳು ಸಂತ ಶ್ರೀ ಸೇವಾಲಾಲ್ ಮಹಾರಾಜ್ ಹಾಗೂ ಮರಿಯಮ್ಮ ದೇವಿಯ ದೇವಸ್ಥಾನ  ಪ್ರತಿಷ್ಠಾಪನೆ  ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗ್ರಾಮದಕ್ಕೆ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಹಾಗೂ ಮರಿಯಮ್ಮ ದೇವಿ ಬರಬೇಕಾಗಿದ್ದ  ವಿಗ್ರಹಗಳಿಗೆ  ಪಾವಗಡ ಪಟ್ಟಣದಿಂದ ವೀರಮ್ಮನಹಳ್ಳಿ ತಾಂಡಾ ಗ್ರಾಮದ ಅವರಿಗೂ ಮಹಿಳೆಯರು ಲಂಬಾಣಿ ನೆನಪುಗಳನ್ನು ತೊಟ್ಟು ನಮ್ಮ ಸಾಂಪ್ರದಾಯಿಕ ನೃತ್ಯವನ್ನು ಹಾಡಿದರು. ಹಿರಿಯರು ಹಾಗೂ ಯುವಕರು ಕುಣಿದು ಕುಪ್ಪಳಿಸಿದರು. ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಏಪ್ರಿಲ್ 16, 17 ಹಾಗೂ 18 ರಂದು ವೀರಮ್ಮನಹಳ್ಳಿ ತಾಂಡಾ ಗ್ರಾಮದಲ್ಲಿ ಲಂಬಾಣಿ ಸಮುದಾಯದ ಆರಾಧ್ಯ ದೈವ  ಸಂತ ಶ್ರೀ ಸೇವಾಲಾಲ್ ಮಹಾರಾಜ್ ಹಾಗೂ ಮರಿಯಮ್ಮ ದೇವಿ ದೇವಸ್ಥಾನ ಪ್ರತಿಷ್ಠಾಪನ ಕಾರ್ಯಕ್ರಮವಿದ್ದು,  ಬದರಿ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲಾ ಕುಲಬಾಂಧವರು ಬಂದು ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಬೇಕೆಂದು ವೀರಮ್ಮನಹಳ್ಳಿ ತಾಂಡ ಗ್ರಾಮಸ್ಥರು ತಿಳಿಸಿದ್ದರು. ವರದಿ:  ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಸರಗೂರು:  ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ತಾಲೂಕಿನ ಬಂಡಿಪುರ ಅಭಯಾರಣ್ಯ ಹೆಡಿಯಾಲ ವಲಯದ ವ್ಯಾಪ್ತಿಯಲ್ಲಿ ಬರುವ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನಕ್ಕೆ ಹೋಗಲು ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಹಾಗೂ ಭಕ್ತರಿಗೆ ದೇವರ ದರ್ಶನ ಪಡೆಯಲು ಅನುಮತಿ ನೀಡಿದೆ ತೊಂದರೆ ನೀಡುತ್ತಿದ್ದಾರೆ ಎಂದು ಸಭಾಧ್ಯಕ್ಷರಿಗೆ ತಿಳಿಸಿದರು. ಸುಮಾರು ವರ್ಷಗಳಿಂದ ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವವನ್ನು ಟ್ರಸ್ಟ್ ವತಿಯಿಂದ ವಿಜೃಂಭಣೆಯಿಂದ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಅದರೆ ಮೂರು ನಾಲ್ಕು ವರ್ಷಗಳಿಂದ ಅರಣ್ಯ ಅಧಿಕಾರಿಗಳು ಭಕ್ತರನ್ನು ಖಾಸಗಿ ಹಾಗೂ ಸರ್ಕಾರಿ ವಾಹನಗಳನ್ನು ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲ ಎಂದು ತೊಂದರೆ ನೀಡುತ್ತಿದ್ದಾರೆ ಎಂದರು. ಕಳೆದ ವರ್ಷದಿಂದ ಧಾರ್ಮಿಕ ದತ್ತಿ ಇಲಾಖೆ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನ ಸೇರ್ಪಡೆಗೊಂಡದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅ ಭಾಗದ ಸಚಿವರು ಹಾಗೂ ಶಾ‌ಸಕರ ಬೇಲದಕುಪ್ಪೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ. ಸಾರ್ವಜನಿಕರು ಹಾಗೂ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಬಿಡುತ್ತಿಲ್ಲ ಎಂದು ಹೇಳಿದರು. ಸರ್ಕಾರಕ್ಕೆ ದೇವಾಸ್ಥಾನ…

Read More

ಬೆಂಗಳೂರು: ಕಸ ವಿಲೇವಾರಿ ಬೆಂಗಳೂರಿನಲ್ಲಿ ದೊಡ್ಡ ಮಾಫಿಯಾ ಆಗಿದೆ, ಶಾಸಕರು ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಅವರು ಕಸ ವಿಲೇವಾರಿಗೆ ತಡೆಯಾಗಿರುವ ಬಗ್ಗೆ ಸದನದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ , ಇದೊಂದು ದೊಡ್ಡ ಮಾಫಿಯಾ. ಇದಕ್ಕೂ ಮೊದಲು, 89 ಗುಂಪು ಮಾಡಿ ಟೆಂಡರ್‌ ಕರೆದಿದ್ದರು. ಈಗ ಅವರು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯ ಕೂಡ ಈ ವಿಚಾರವಾಗಿ ಏನು ಮಾಡಬೇಕೆಂಬ ತೀರ್ಪು ನೀಡಿಲ್ಲ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ ಎಂದರು. ನಾವು ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ 50 ಕಿ.ಮೀ ದೂರದ ಹೊರಗೆ ಕಸ ವಿಲೇವಾರಿಗೆ ಪ್ರಯತ್ನ ಮಾಡುತ್ತಿದ್ದವೆ. ಆದರೆ, ಬೆಂಗಳೂರಿನ ಕೆಲವು ಶಾಸಕರು ನಮಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಬಯಸುವುದಿಲ್ಲ. ನಾನು ಸತ್ಯಾಂಶವನ್ನೇ ಹೇಳುತ್ತಿದ್ದು, ಎಲ್ಲಾ ಪಕ್ಷದವರು ಇದ್ದಾರೆ.…

Read More

ಬೆಂಗಳೂರು:  ಪರಿಶಿಷ್ಟ ಜಾತಿ-–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ರೂ.2 ಕೋಟಿ ವೆಚ್ಚದ ಕಾಮಗಾರಿಗಳು, ರೂ.1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ ​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ. ಒಂದು ಕೋಟಿವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವುದು. ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ಕೊಡಲು ನಿರ್ಧಾರ ಮಾಡಲಾಗಿದೆ. ಎಸ್​ಸಿ ಎಸ್​ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿವರೆಗಿನ ಮೊತ್ತ ವಿಸ್ತರಿಸಿ 2 ಕೋಟಿವರೆಗೆ ಮೀಸಲಾತಿ ಅವಕಾಶ ಕಲ್ಪಿಸಲಿದೆ. ವಿಧೇಯಕವನ್ನು ಇದೇ…

Read More

ತುಮಕೂರು: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ದನ–ಕರುಗಳ ಮೇವಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ. ತುಮಕೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ತಾಲೂಕು ಕಚೇರಿ ದೂರವಾಣಿ ಸಂಖ್ಯೆ: 0816–2278496ನ್ನು ಸಂಪರ್ಕಿಸಬಹುದಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಏಪ್ರಿಲ್ 5ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವದ ಅಂಗವಾಗಿ ಮಾರ್ಚ್ 29 ರಿಂದ ಏಪ್ರಿಲ್ 12ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 6ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಏಪ್ರಿಲ್ 7ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಜರುಗಲಿವೆ. ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಏಪ್ರಿಲ್ 5ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ನಿರ್ಮಾಣ್ ಆರ್ಗನೈಜೇಷನ್ ಅಸೋಸಿಯೇಷನ್ ಹಾಗೂ ಅನನ್ಯ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಅವರ ಸಹಯೋಗದಲ್ಲಿ ನಿರುದ್ಯೋಗಿಗಳಿಗಾಗಿ ಮಾರ್ಚ್ 17ರಂದು ನಗರದ ಬಿ.ಹೆಚ್. ರಸ್ತೆ ಟೌನ್ ಹಾಲ್ ಸರ್ಕಲ್ ಬಳಿಯಿರುವ ಅನನ್ಯಾ ಕ್ಯಾಂಪಸ್‌ ನಲ್ಲಿ ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮೇಳದಲ್ಲಿ 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ., ಡಿ.ಫಾರ್ಮ, ಬಿ.ಫಾರ್ಮ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಶಾಲಾ ದಾಖಲಾತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಮೇಳದಲ್ಲಿ 18 ರಿಂದ 35 ವರ್ಷದೊಳಗಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0816–2278488, 9071021143, 9513136642, 9916193797 ಹಾಗೂ 9632220899ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಕುಣಿಗಲ್ ತಾಲ್ಲೂಕು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ನೀರಿಗೆ ಸಮಸ್ಯೆಯುಂಟಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಯು. ರಶ್ಮಿ ಅವರಿಗೆ ಸೂಚನೆ ನೀಡಿದರು. ಕುಣಿಗಲ್ ಶಾಸಕ ಡಾ.ರಂಗನಾಥ ಅವರ ಸೂಚನೆ ಮೇರೆಗೆ ಶುಕ್ರವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರಿಂದ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಅವರು, ಪಕ್ಕದ ಗ್ರಾಮದ ಕೊಳವೆ ಬಾವಿಯಿಂದ ಪೈಪ್ ಲೈನ್ ಮೂಲಕ ನೀರೊದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಮಸ್ಯೆ ತಿಳಿದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಂಡ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಕುಣಿಗಲ್ ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತೂಕ ಮತ್ತು ಅಳತೆ ಪ್ರಕ್ರಿಯೆಯನ್ನು ಪರಿಶೀಲಿಸಿ ರೈತರಿಂದ ಅಹವಾಲುಗಳನ್ನು ಆಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರ ಕ್ರಮಕೈಗೊಳ್ಳಲು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮಕ್ಕೆ…

Read More

ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 11 ಕೇಂದ್ರಗಳಲ್ಲಿ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದ್ದು, ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಖರೀದಿ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ. ರಾಗಿ ಖರೀದಿಸುವಾಗ ಸರಿಯಾಗಿ ತೂಕ ಪಡೆದುಕೊಳ್ಳದೇ ಹೆಚ್ಚಿನದಾಗಿ ಪಡೆಯುತ್ತಿರುವುದಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಗಿ ಖರೀದಿಗಾಗಿ ರೈತರಿಗೆ ಟೋಕನ್ ನೀಡುವಾಗ ರೈತರು ನೋಂದಣಿ ಮಾಡಿಸಿದ ದಿನಾಂಕವನ್ನು ಗಣನೆಗೆ ತೆಗೆದುಕೊಂಡು ಕ್ರಮ ಸಂಖ್ಯೆವಾರು ಟೋಕನ್ ಕೊಡಬೇಕು. ರೈತರು ರಾಗಿಯನ್ನು ಖರೀದಿ ಕೇಂದ್ರಕ್ಕೆ ತರಬೇಕಾದ ದಿನದ ಬಗ್ಗೆ ಸ್ಪಷ್ಟವಾಗಿ ಟೋಕನ್ನಲ್ಲಿ ನಮೂದಿಸಿರಬೇಕು. ಮುಂಚಿತವಾಗಿಯೇ ಪ್ರತಿ 50 ಕೆ.ಜಿ. ಚೀಲದಲ್ಲಿ ರಾಗಿ ತರುವ ಬಗ್ಗೆ ಹಾಗೂ ಗೋಣಿಚೀಲ ಸೇರಿಸಿ ಪ್ರತಿ ಚೀಲದಲ್ಲಿ ಎಷ್ಟು ಪ್ರಮಾಣದಲ್ಲಿ ರಾಗಿ ತರಬೇಕು ಎಂಬುದನ್ನು ರೈತರಿಗೆ ತಿಳಿಸಬೇಕು. ಈ ಬಗ್ಗೆ ಎಲ್ಲರಿಗೂ ಕಾಣುವಂತೆ ಫಲಕ ಪ್ರದರ್ಶಿಸಬೇಕು. ಸರ್ಕಾರ ನಿಗಧಿಪಡಿಸಿರುವ ಪ್ರಮಾಣದಂತೆ ನಿಖರ ತೂಕದ ರಾಗಿ ಪಡೆದುಕೊಳ್ಳಬೇಕು. ಹೆಚ್ಚಿನ ತೂಕ ಪಡೆಯತಕ್ಕದಲ್ಲ.…

Read More