Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುಮಕೂರು: ಸಂಸದನಾಗಿ ಆಯ್ಕೆ ಆದ ಮೂರು ದಿನದ ನಂತರ ನಾನು ದೆಹಲಿಗೆ ಹೋದಾಗ ಬಿ.ಎಲ್. ಸಂತೋಷ್ ಅವರು ʼಹೋಗಿ ಪ್ರಧಾನಿಗೆ ವಿಶ್ ಮಾಡಿ ಅಂದರುʼ, ನಾನು ಹೋಗಿ ಪ್ರಧಾನಿ ಮೋದಿ ಅವರಿಗೆ ವಿಶ್ ಮಾಡಿದೆ. ಪ್ರಧಾನಿ ಮೋದಿ ಅವರು ನನ್ನ ತಬ್ಬಿ ಡಬಲ್ ಕಂಗ್ರಾಜುಲೆಷನ್ ಅಂದರು. ಆಗಲೇ ಗೊತ್ತಾಗಿದ್ದು ನಾನು ಕೇಂದ್ರ ಸಚಿವನಾಗುತ್ತೇನೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಸವಲತ್ತು ವಿತರಣೆ ಹಾಗೂ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಆಗ ಅಲ್ಲಿಯೇ ಇದ್ದ ಸಂತೋಷ ಹೇಳಿದರು ʼ ಹೋಗಿ ನಿಮಗೆ ಲಾಟರಿ ಹೊಡಿತು ಅಂದರುʼ ಅದಾದ ಕೆಲವೇ ಗಂಟೆಯಲ್ಲಿ ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎಂದು ಹೇಳಿದರು. ನಾನು ಸುಮಾರು 1.80 ಲಕ್ಷ ಮತದಿಂದ ಗೆದ್ದಿದ್ದೇನೆ, ತುರುವೇಕೆರೆ ತಾಲ್ಲೂಕಿನ ಜನ 50 ಸಾವಿರ ಲೀಡ್ ಕೊಟ್ಟಿದ್ದಾರೆ. ಅವರ ಪಾದ ಹಿಡಿದು ನಾನು ನಮಸ್ಕಾರ ಮಾಡಬೇಕು ಎಂದರು. ಒಟ್ಟಾರೆ…
ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–2, ನಗರ ಉಪವಿಭಾಗ–2ಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರಂದು ಮಧ್ಯಾಹ್ನ 3 ರಿಂದ 5:30 ಗಂಟೆವರೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಭೀಮಸಂದ್ರ ನಗರ ಹಾಗೂ ಹೆಗ್ಗೆರೆ, ಮಲ್ಲಸಂದ್ರ, ದೊಡ್ಡನಾರವಂಗಲ, ಗೂಳೂರು, ಹೆತ್ತೇನಹಳ್ಳಿ, ಹೊಳಕಲ್, ನಾಗವಲ್ಲಿ, ಕಣಕುಪ್ಪೆ, ಗಂಗೋನಹಳ್ಳಿ, ಅರಿಯೂರು, ಹೆಬ್ಬೂರು ಗಳಿಗೇನಹಳ್ಳಿ, ಬಳ್ಳಗೆರೆ, ನಿಡುವಳಲು, ಸಿರಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಹಕರಿಗಾಗಿ ಹೊರಪೇಟೆಯ ಬೆಸ್ಕಾಂ ಉಪವಿಭಾಗ ಕಚೇರಿ; ಎಸ್ಎಸ್ಪುರಂ, ಸರಸ್ವತಿಪುರಂ ಮತ್ತು ಜಯನಗರ ವ್ಯಾಪ್ತಿಯ ಗ್ರಾಹಕರಿಗಾಗಿ ಜಯನಗರದಲ್ಲಿರುವ ನಗರ ಉಪವಿಭಾಗ–2ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದ್ದು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಊರ್ಡಿಗೆರೆ ವಲಯದ ಮೈದಾಳ ಗ್ರಾಮದಲ್ಲಿ ಶಿರಡಿ ಸಾಯಿಬಾಬಾ ಅನಾಥಾಶ್ರಮ ಕಟ್ಟಡ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವತಿಯಿಂದ ಎರಡು ಲಕ್ಷ ರೂಗಳ ಡಿ.ಡಿ.ಯನ್ನು ತುಮಕೂರು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಕಮಿಟಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಮೇಶ್, ಉಪಾಧ್ಯಕ್ಷರಾದ ನರಸಿಂಹಮೂರ್ತಿ, ಪೂಜ್ಯರ ಅಭಿಮಾನಿಯಾದ ಬ್ಯಾತ ಸೋಮಣ್ಣ ನವರು ಗ್ರಾಮ ಪಂಚಾಯತಿ ಸದಸ್ಯರಾದ ಶೋಭಾ, ಬಂಡಿಹಳ್ಳಿ ರವಿ, ಮಲ್ಲಿಕಾರ್ಜುನಯ್ಯ, ತಾಲ್ಲೋಕು ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮ್ ನಾಯಕ್, ವಲಯ ಮೇಲ್ವಿಚಾರಕರಾದ ಲೋಕೇಶ್ ಎಚ್.ಎಸ್. ಸೇವಾ ಪ್ರತಿನಿಧಿ ಸಿದ್ದಮ್ಮ ಹಾಗೂ ಗ್ರಾಮಸ್ಥರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಹೆಣ್ಣಿನ ಮೇಲೆ ಸಮಾಜದಲ್ಲಿ ನಿರಂತರವಾಗಿ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಬೇಕು,ಅತ್ಯಾಚಾರ,ಅನಾಚಾರ, ಧಾರ್ಮಿಕ ಮೂಢನಂಬಿಕೆಗಳು ಹೀಗೆ ಎಲ್ಲದರಲ್ಲೂ ಹೆಣ್ಣು ಶೋಷಣೆಗೆ ಒಳಗಾಗುತ್ತಿದ್ದಾಳೆ,12ನೇ ಶತಮಾನದಲ್ಲಿ ಹೆಣ್ಣಿನ ಹಕ್ಕುಗಳಿಗಾಗಿ,ಸಮಾನತೆಗಾಗಿ ಹೋರಾಟ ಪ್ರಾರಂಭವಾಯಿತು, ಪ್ರತಿ ಹೆಣ್ಣು ಆರ್ಥಿಕವಾಗಿ ಶೈಕ್ಷಣಿಕವಾಗಿ,ಸಾಮಾಜಿಕವಾಗಿ ಬೆಳೆಯಬೇಕು ತಮ್ಮ ಹಕ್ಕುಗಳಿಗಾಗಿ ಸದಾ ಹೋರಾಟ ನಡೆಸಿ ಗಂಡಸಿಗೆ ತಾವೂ ಸಹ ಸರಿಸಮಾನ ಎಂದು ಪ್ರತಿಪಾದಿಸಬೇಕು ಎಂದು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾಬಸವರಾಜುರವರು ತಿಳಿಸಿದರು. ಅವರು ಇಂದು ತುಮಕೂರು ನಗರದ ಶಿವಲಾಸ್ಯ ಸಮುದಾಯ ಭವನದಲ್ಲಿ ನಿರ್ಭಯ ಮಹಿಳಾ ಜಾಗೃತಿ ವೇದಿಕೆ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲರಾದ ಎಂ.ಆರ್.ಶೋಭಾ, ಹೆಣ್ಣಿನ ಬಗ್ಗೆ ಇರುವ ವಿವಿಧ ಕಾನೂನುಗಳನ್ನು ತಿಳಿಸುತ್ತಾ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ನಡೆಯುತ್ತಿದೆ, ಪೋಕ್ಸೋ ಕಾನೂನು ಕಠಿಣವಾಗಿದ್ದು, ವಯಸ್ಸಾದವರು ಸಹ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದು ಇಡೀ ಸಮಾಜ ತಲೆ ತಗ್ಗಿಸುವಂತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಗೀತಾ ಫ್ಯಾಷನ್ ಡಿಸೈನ್…
ಬೀದರ್: ಜಿಲ್ಲಾ ಔರಾದ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಬೀದರ್ ಜಿಲ್ಲೆಯ ಪತ್ರಕರ್ತ ಅರವಿಂದ ಮಲ್ಲೀಗೆ ಅವರು ತಮ್ಮ ಗ್ರಾಮದಲ್ಲಿ ಹೋಳಿ ಹಬ್ಬದ ಸಂಭ್ರಮ ಮಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಕರಬಸಪ್ಪಾ ಸೊರಾಳೆ, ಪರಮೇಶ್ವರ ಮೇತ್ರೆ, ಅನಿಲ್ ಪಾಂಚಾಳ್, ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಬಸವರಾಜ ಮಾಳಗೆ, ಶ್ರೀಧರ್ ರೆಡ್ಡಿ,ಮಾದೇವಸ್ವಾಮಿ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಕಾರ್ಮಿಕರು, ಬಡವರು ಹಾಗೂ ರೋಗಿಗಳ ಅನುಕೂಲಕ್ಕಾಗಿ ನಗರದ ನೌಬಾದ್ ನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕು ಎಂದು ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ ಆಗ್ರಹಿಸಿದ್ದಾರೆ. ನೌಬಾದ್, ಪ್ರತಾಪನಗರ, ಲುಂಬಿಣಿ ನಗರ, ಆಟೋನಗರ, ಜೈಭೀಮ ನಗರ, ಯಲ್ಲಾಲಿಂಗ ಕಾಲೋನಿ, ಮಾಧವನಗರ, ವಿವೇಕಾನಂದ ಕಾಲೊನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಕಾರ್ಮಿಕರು ಇದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಡ ರೋಗಿಗಳು ಹಾಗೂ ಸಂಬಂಧಿಕರು ಬರುತ್ತಾರೆ. ಆದರೆ, ಉಪಾಹಾರ ಹಾಗೂ ಊಟಕ್ಕಾಗಿ ಪರದಾಡುವ ಸ್ಥಿತಿ ಇದೆ ಎಂದು ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಸರಗೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ವಿನೂತನ ಮಾದರಿಯಲ್ಲಿ ಅಧಿಕಾರ ಪದಗ್ರಹಣ ನಡೆಯುತ್ತಿದೆ. ಕ್ರಿಯಾಶೀಲ ಅಧ್ಯಕ್ಷರ ಕಾರ್ಯಕ್ರಮ ಪ್ರತಿ ಕಾರ್ಯಕರ್ತರಿಗೂ ತಲುಪುವ ಉದ್ದೇಶದೊಂದಿಗೆ ನಾವುಗಳು ಕೆಲಸ ಮಾಡಬೇಕು ಎಂದು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಬ್ಲಾಕ್ ಕಾಂಗ್ರೆಸ್ ಎಚ್.ಡಿ.ಕೋಟೆ ಮತ್ತು ಸರಗೂರು ಸಮಿತಿ ವತಿಯಿಂದ ಪೂರ್ವಭಾವಿ ಹಮ್ಮಿಕೊಂಡಿದ್ದು, ಪಕ್ಷದ ಕಚೇರಿಯಲ್ಲಿ ಶುಕ್ರವಾರದಂದು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಹಾಗೂ ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾತನಾಡಿದರು. ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡರವರ ಮಾ.17 ರಂದು ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಭಾಗವಹಿಸುತ್ತಿದ್ದಾರೆ. ಎರಡು ತಾಲೂಕಿನ ಬ್ಲಾಕ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು…
ಅಮೆರಿಕ: ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಸಿಲುಕಿದ್ದಾರೆ. ಮಾರ್ಚ್ ನಲ್ಲಿ ಅವರು ಭೂಮಿಗೆ ಮರಳಲು ಸಕಲ ಸಿದ್ಧತೆಯೂ ನಡೆದಿದೆ. ಆದರೆ ಲಾಂಚ್ ಪ್ಯಾಡ್ ಸಮಸ್ಯೆಯಿಂದಾಗಿ ಬುಧವಾರ ಅಂತರರಾಷ್ಟ್ರೀ ಯ ಬಾಹ್ಯಾಕಾಶ ನಿಲ್ದಾಣಕ್ಕೆ ಸ್ಪೇಸ್ಎಕ್ಸ್ ರಾಕೆಟ್ ಉಡ್ಡಯನ ವಿಳಂಬವಾಗಿದೆ. ನಾಸಾ ಕಳುಹಿಸುತ್ತಿರುವ ಗಗನಯಾನಿಗಳು ಐಎಸ್ ಎಸ್ ತಲುಪಿದ ನಂತರ, ಸುನಿತಾ ಹಾಗೂ ಬುಚ್ ಅವರು ಭೂಮಿಯತ್ತ ಪಯಣ ಆರಂಭಿಸಬೇಕಿದೆ. ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ ಸಂಜೆ ಫಾಲ್ಕನ್ ರಾಕೆಟ್ ಉಡ್ಡಯನದ ನಿರ್ಣಾಯಕ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಗಗನಯಾತ್ರಿಗಳು ಭೂಮಿಗೆ ಮರಳುವುದು ಇನ್ನಷ್ಟು ತಡವಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಬೆಲೆ ಏರಿಕೆಯ ಗ್ಯಾರಂಟಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ. ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು. ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು. ನಮ್ಮತುಮಕೂರಿನ ಕ್ಷಣ…
ಮೈಸೂರು: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅನುಗನಹಳ್ಳಿಯಲ್ಲಿ ನಡೆದಿದೆ. ಸೂರ್ಯ ಎಂಬಾತ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವಿವಾಹಿತನಾಗಿದ್ದರೂ ಸೂರ್ಯ ಮತ್ತೊಬ್ಬಳ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಶ್ವೇತಾ ಎಂಬಾಕೆಯೊಂದಿಗೆ ಪರಿಚಯ ಮಾಡಿಕೊಂಡಿದ್ದ ಸೂರ್ಯ ಆಕೆಯ ಜೊತೆ ಸುತ್ತಾಡುವುದು ಖಾಸಗಿ ಫೋಟೋಗಳನ್ನ ಹಂಚಿಕೊಳ್ಳುವುದು ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಸಹ ಇಬ್ಬರು ತೋಟದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ಸೂರ್ಯನ ಹತ್ಯೆಯಾಗಿದೆ. ಈ ಕೊಲೆಯನ್ನು ಶ್ವೇತಾಳೆ ಮಾಡಿದ್ದಾಳೆ ಎಂದು ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಶ್ವೇತಾ ಆಸ್ತಿಗಾಗಿ ಸೂರ್ಯನನ್ನು ಪೀಡಿಸುತ್ತಿದ್ದಳು ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಘಟನೆ ಸಂಬಂಧ ಜಯಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4