Author: admin

ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ವಿರುದ್ಧ ಸಮರ ಸಾರಿದ ಮಹಾನ್ ವ್ಯಕ್ತಿ ಎಂದು ಗ್ರಂಥಾಲಯ ಮೇಲ್ವಿಚಾರಕ ಬಿಡಗಲು ಶಿವಣ್ಣ ಅಭಿಮತ ವ್ಯಕ್ತಪಡಿಸಿದರು. ಪಟ್ಟಣ ಸರ್ಕಾರಿ ಗ್ರಂಥಾಲಯದಲ್ಲಿ ಸಂತ ಕವಿ, ದಾಸಶ್ರೇಷ್ಠ. ಶ್ರೀ ಭಕ್ತ ಕನಕದಾಸರ 538ನೇ ಜಯಂತ್ಯೋತ್ಸವ. ಅಚರಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಮಾಜ ಸುಧಾರಕ, ಮೌಢ್ಯದ ವಿರುದ್ಧ ಜನರಲ್ಲಿ ಅರಿವು ಮೂಡಿಸಲು ಶ್ರಮಿಸಿದ ಮಹಾಪುರುಷ ಸರ್ವಧರ್ಮ ಸಹಿಷ್ಣುತೆಯನ್ನು ಜಗತ್ತಿಗೆ ಸಾರಿದ ಕನಕದಾಸರ ಕೀರ್ತನೆಗಳ ವಿಚಾರಗಳು ಎಂದಿಗೂ ಪ್ರಸ್ತುತ ಕನಕದಾಸರ ಕೀರ್ತನೆಗಳು ಮೌಢ್ಯವನ್ನು ಧಿಕ್ಕರಿಸುವುದರೊಂದಿಗೆ ಸ್ತ್ರೀ ಪರವಾದ ಚಿಂತನೆಗಳನ್ನು ಕಟ್ಟಿಕೊಟ್ಟು ಸಮಾಜದ ಒಳಿತಿಗಾಗಿ ಪದವಿ, ಸಿರಿತನವನ್ನು ತ್ಯಾಗ ಮಾಡಿದರ ಮೊದಲ ಸಾಲಿನಲ್ಲಿ ಕನಕದಾಸರು ಶ್ರೇಷ್ಠರಾದರು ಎಂದರು. “ಕುಲ ಕುಲವೆಂದು ಹೊಡೆದಾಡದಿರಿ. ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ ಎಂಬ ಕೀರ್ತನೆಯ ಮೂಲಕ ಸಮಾಜವನ್ನು ಪ್ರಶ್ನಿಸುವುದರಲ್ಲಿಯೇ ಪರಿಹಾರವನ್ನು ಸೂಚಿಸಿರುವುದರ ಮೂಲಕ  ಸಂತ ಕವಿ, ದಾಸಶ್ರೇಷ್ಠರಾಗಿ…

Read More

ಸರಗೂರು:  ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಮತ್ತು ಭಕ್ತಿಯ ಸಾಮ್ರಾಜ್ಯ ಕಟ್ಟಿದವರು ಕನಕದಾಸರು ಎಂದು  ತಾಲೂಕು ಕುರುಬ ಸಂಘದ ಅಧ್ಯಕ್ಷ ಎಂ.ಬಿ.ಆನಂದ ನುಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರದಂದು ಹಮ್ಮಿಕೊಂಡಿದ್ದ 538 ನೇ ಕನಕದಾಸರ ಜಯಂತಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಹಾಗೂ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕನಕದಾಸರು ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೆ ಕೊಂಡೊಯ್ದಂತಹ ಮಹಾನ್ ದಾಸರಾಗಿದ್ದರು. ದಾಸ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಮುಂದಾಗಿ ತಮ್ಮ ದಾಸ ಸಾಹಿತ್ಯದ ಮೂಲಕ ಸಮಾಜದಲ್ಲಿ ಐಕ್ಯತೆ ಮೂಡಿಸುವ ಕಾರ್ಯ ಮಾಡಿದ ಮಹಾನ ಸಂತರಾಗಿದ್ದರು ಎಂದರು. ಸಮಾಜದ ಮುಖಂಡ ಮಾಲೆಗೌಡ ಮಾತನಾಡಿ, ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯದಿಂದ ಕನ್ನಡ ಭಾಷೆಗೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆಯೇ ಹೊರತು ಹೋರಾಟದಿಂದ ಅಲ್ಲ. ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿವೆ.…

Read More

ಔರಾದ: ರಾಜ್ಯಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಔರಾದ ತಾಲೂಕಿನ ಜೋಜನ ಗ್ರಾಮದ ಡಾ.ಸತ್ಯಕ್ಕ ಗಡ್ಡೆ ಆಯ್ಕೆಯಾಗಿದ್ದಾರೆ. ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ(ರಿ) ಬೀದರ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ  ಡಾ. ಸತ್ಯಕ್ಕ ಗಡ್ಡೆ ಅವರು ಆಯ್ಕೆಯಾಗಿದ್ದು,  ನವೆಂಬರ್ 10ರಂದು (ಇಂದು) ಬೀದರನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ(ರಿ) ಬೀದರ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಪ್ರತಿ ವರ್ಷ ಆಯೋಜಿಸುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಜೋಜನ ಗ್ರಾಮದ ಡಾ. ಸತ್ಯಕ್ಕ ಗಡ್ಡೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನ.10ರಂದು (ಇಂದು) ಬೀದರನ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ  ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸರಗೂರು: ತಾಲೂಕಿನ ಮೊಳೆಯೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ರೈತರೊಬ್ಬರನ್ನು ಬಲಿ ಪಡೆದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದ ಗಂಡು ಹುಲಿಯನ್ನು ಹೊಸಕೋಟೆ ಗ್ರಾಮದ ಟ್ರಂಚ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಸಂಜೆ ಯಶಸ್ವಿಯಾಗಿ ಸೆರೆಯಾಗಿದೆ. ತಾಲೂಕಿನಲ್ಲಿ ಒಂದು ತಿಂಗಳಿಂದ ಜನರ ನಿದ್ದೆಗೆಡಿಸಿದ ನರಭಕ್ಷಕ ಹುಲಿ ಕಳೆದ ವಾರ ಕೂಡಗಿ ಗ್ರಾಮದ ದೊಡ್ಡನಿಂಗಯ್ಯ ಎಂಬ ರೈತನ ಮೇಲೆ ದಾಳಿ ಮಾಡಿ ಕೊಂದಿದ್ದ ಸುಮಾರು 9 ವರ್ಷದ ಈ ಹುಲಿಯನ್ನು ಪತ್ತೆಹಚ್ಚಲು ಅರಣ್ಯ ಇಲಾಖೆಯು ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಶನಿವಾರ ಸಂಜೆ ಮೊಳೆಯೂರು ವಲಯದಲ್ಲಿ ಹುಲಿಯ ಇರುವಿಕೆಯನ್ನು ಖಚಿತಪಡಿಸಿಕೊಂಡ ಸಿಬ್ಬಂದಿ, ಅದಕ್ಕೆ ಅರವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿ, ಬೋನಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆಸಿಕ್ಕ ಹುಲಿಯ ಕುತ್ತಿಗೆಯ ಭಾಗದಲ್ಲಿ ಆಳವಾದ ಗಾಯವಾಗಿದ್ದು, ಬಹುಶಃ ಉರುಳಿಗೆ ಸಿಲುಕಿ ಈ ಗಾಯವಾಗಿರಬಹುದು ಎಂದು ಶಂಕಿಸಲಾಗಿದೆ. ಗಾಯದಿಂದಾಗಿ ಬೇಟೆಯಾಡುವ ಶಕ್ತಿಯನ್ನು ಕಳೆದುಕೊಂಡಿದ್ದ ಹುಲಿಯು, ಸುಲಭವಾಗಿ ಆಹಾರ ಸಂಪಾದಿಸಲು ಜಾನುವಾರು ಮತ್ತು ಮನುಷ್ಯರ ಮೇಲೆ ದಾಳಿ ಮಾಡಲು…

Read More

ಸರಗೂರು: ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮೂವರನ್ನು ಬಲಿಪಡೆದಿರುವ ಹುಲಿಯ ಸೆರೆಗೆ ಶನಿವಾರವೂ ಕಾರ್ಯಾಚರಣೆ ಮುಂದುವರಿದಿದ್ದು, ಕಾಡಿನೊಳಗೆ ಸುಮಾರು 7 ಕಿ.ಮೀ. ದೂರದಲ್ಲಿ ಡ್ರೋನ್‌ ಕ್ಯಾಮೆರಾಗೆ ಹುಲಿಯೊಂದು ಸೆರೆಯಾಗಿದೆ. ತಾಲೂಕಿನ ಹಳೇಹೆಗ್ಗುಡಲು ಬಳಿಯ ಜಮೀನಿಲ್ಲಿ ಮೂರನೇ ಬಲಿ ಪಡೆದ ಹುಲಿಗಾಗಿ ಅರಣ್ಯ ಇಲಾಖೆ ಹಗಲು ರಾತ್ರಿ ಎನ್ನದೆ ತೀವ್ರ ಶೋಧ ಆರಂಭಿಸಿದ್ದು, ಸಾಕಾನೆಗಳಾದ ಭೀಮಾ, ಮಹೇಂದ್ರ, ಲಕ್ಷ್ಮಣ, ಶ್ರೀಕಂಠ ಮೂಲಕ ಶನಿವಾರ ಮುಂಜಾನೆಯಿಂದಲೂ ಶೋಧ ಆರಂಭಿಸಿದೆ. ಆದರೂ ಹುಲಿಯ ಗುರುತು ಪತ್ತೆಯಾಗಲಿಲ್ಲ. ಬಳಿಕ ಡ್ರೋನ್‌ ಕ್ಯಾಮೆರಾ ಮೂಲಕ ಕಾರ್ಯಾಚರಣೆ ನಡೆಸುವ ವೇಳೆ ಕಾಡಿನ ಒಳಭಾಗದಲ್ಲಿ ಸುಮಾರು 7 ಕಿ.ಮೀ. ಅಂತರದಲ್ಲಿ ಹುಲಿಯೊಂದರ ಚಿತ್ರ ಸೆರೆಯಾಗಿದೆ ಎನ್ನಲಾಗಿದೆ. ಸದ್ಯ ಕಾರ್ಯಾಚರಣೆಗೆ ಸಿಬ್ಬಂದಿಯ ಸಂಖ್ಯೆ ಹೆಚ್ಚಿಸುವ ಸಲುವಾಗಿ ಮೈಸೂರು ಪ್ರಾದೇಶಿಕ ವಲಯದಿಂದಲೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದು, 100ಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಹುಲಿಗಾಗಿ ಶೋಧ ಮುಂದುವರಿಸಿದ್ದಾರೆ. ಇನ್ನೊಂದು ಕಡೆ ಕಾರ್ಯಾಚರಣೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ವ್ಯಾಪ್ತಿಯಲ್ಲಿ ಮೂರು ಅರಣ್ಯ…

Read More

ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಎರಡು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಚಿರತೆ ಆಗಾಗ್ಗೆ ಕಾಣಿಸಿಕೊಂಡು ರೈತರಲ್ಲಿ ಆತಂಕವನ್ನುಂಟು ಮಾಡಿತ್ತು. ಪೊದೆಯಲ್ಲಿ ಅಡಗಿ ಕುಳಿತ ಚಿರತೆಯನ್ನು ಬಲೆ ಬೀಸಿ ಸೆರೆ ಹಿಡಿಯಲಾಯಿತು. ಅರಣ್ಯ ಅಧಿಕಾರಿ ಸುರೇಶ್, ಮುತ್ತುರಾಜ್‌ ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ದಾಸ ಸಾಹಿತ್ಯದ ಮೂಲಕ ಕನಕದಾಸರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ನೀಡಿದ ಕೊಡುಗೆ ಅಪಾರ ಎಂದು ಪ.ಪಂ. ಅಧ್ಯಕ್ಷ ಶಿವಕುಮಾರ್ ಶ್ಲಾಘಿಸಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ 538ನೇ ಕನಕದಾಸರ ಜಯಂತಿಯನ್ನು ಶನಿವಾರದಂದು ಪ.ಪಂ. ಅಡಳಿತ ವತಿಯಿಂದ ಕನಕದಾಸರ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಮಾಡದೇ ಮನುಕುಲದ ಉದ್ಧಾರಕ ಎಂದು ಭಾವಿಸಬೇಕು ಎಂದರು. ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರು ದ್ದ ಧ್ವನಿ ಎತ್ತಿ, ಸಮಾಜದ ಅಂಕು–ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದರು. ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು…

Read More

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ ತೀರ್ಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಬ್ಬಿಗೆ  ಬೆಲೆ ಏರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳಿದಾಗ 3,200 ರೂ.ಗಳಿಗೆ ಅವರು ಒಪ್ಪಿರಲಿಲ್ಲ, ನಂತರದಲ್ಲಿ ಒಪ್ಪಿಕೊಂಡರು. 50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3,100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3,200 ಜೊತೆಗೆ 100 ರೂ. ಸೇರಿದಂತೆ ಒಟ್ಟು ₹3,300 ಒದಗಿಸಲಾಗುವುದು ಎಂದು ತಿಳಿಸಿದರು. ಈ ಬಗ್ಗೆ ಸರ್ಕಾರದ ಆದೇಶ ಸಹ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ತನಿಖೆ ವೇಳೆ ಆರೋಪಿಯು ನಕಲಿ ಆಧಾರ್ ಕಾರ್ಡ್ ನ್ನು ಲಾಡ್ಜ್ ಸಿಬ್ಬಂದಿ ನೀಡಿರುವುದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು:  ಬೈಕ್ ಟಾಕ್ಸಿ ಚಾಲಕನೊಬ್ಬ ಪ್ರಯಾಣಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಬೈಕ್ ಸವಾರಿ ಮಾಡುವಾಗ ಬೈಕ್ ಚಾಲಕ ಮಹಿಳಾ ಪ್ರಯಾಣಿಕರ ಕಾಲನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಈ ಕೃತ್ಯದ ವಿಡಿಯೋ ರೆಕಾರ್ಡ್ ಕೂಡ ಮಾಡಿದ್ದು ಈ ವಿಡಿಯೋ ವೈರಲ್ ಆಗುತ್ತಿದೆ. ಇನ್ನು ಈ ಸಂಬಂಧ ಮಹಿಳೆ ರಾಪಿಡೋ ಬೈಕ್ ಟ್ಯಾಕ್ಸಿ ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ದೂರಿನ ಪ್ರಕಾರ, ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More