Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ಕೊರಟಗೆರೆ: ಗ್ರಾಮೀಣ ಭಾಗದಿಂದ ಸಮಸ್ಯೆಗಳನ್ನ ತರುವ ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿವರ್ಗ ಬಗೆಹರಿಸಿದ್ರೇ ಲೋಕಾಯುಕ್ತ ಇಲಾಖೆಗೆ ಅರ್ಜಿಗಳೇ ಬರೋದಿಲ್ಲ. ಜನಸಾಮಾನ್ಯರ ಅರ್ಜಿಗಳನ್ನು ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಜವಾಬ್ದಾರಿ ಎಂದು ತುಮಕೂರು ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ ಕಿವಿಮಾತು ಹೇಳಿದರು. ಕೊರಟಗೆರೆ ಪಟ್ಟಣದ ತಾಪಂ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಇಲಾಖೆಯಿಂದ ಬುಧವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದುಕೊರತೆ ಸಭೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಲ್ಲುಕ್ವಾರೆ ಮತ್ತು ಕಲ್ಲುಬಂಡೆ ಬ್ಸಾಸ್ಟ್ನಿಂದ ಬುಕ್ಕಾಪಟ್ಟಣ ರೈತರಿಗೆ ಸಮಸ್ಯೆ, ರೈತರ ಜಮೀನು ದಾಖಲೆ ಇಲ್ಲದೇ ಅಕ್ರಮವಾಗಿ ಪರಬಾರೇ, ಸುವರ್ಣಮುಖಿ ನದಿಯ ಒತ್ತುವರಿ, ರೇಷನ್ ಕಾರ್ಡಿಗಾಗಿ ಅಲೆದಾಟ, ಮನೆಗಳ ಇಸ್ವತ್ತು ಸಮಸ್ಯೆ, ಸಾಗುವಳಿ ಚೀಟಿಯಿಂದ ಪಹಣಿ, ರೈತರ ಜಮೀನು ಸರ್ವೆಗೆ ಮೀನಾಮೇಷ ಸೇರಿದಂತೆ ಹತ್ತಾರು ಸಮಸ್ಯೆಗಳು ಲೋಕಾಯುಕ್ತ ಅಧಿಕಾರಿಗಳ ಗಮನ ಸೆಳೆದವು. ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧ್ಯಕ್ಷ ಡಾ.ಸಂತೋಷ್, ಪೊಲೀಸ್ ಉಪಾಧ್ಯಕ್ಷ ಮಂಜುನಾಥ, ನಿರೀಕ್ಷಕ ರಾಜು.ಟಿ, ತಹಶೀಲ್ದಾರ್ ಮಂಜುನಾಥ, ತಾಪಂ ಇಓ ಅಪೂರ್ವ, ಸಿಪಿಐ…
ಪಾವಗಡ: ತಾಲ್ಲೂಕಿನ ತಿಪ್ಪಯ್ಯನದುರ್ಗ ಗ್ರಾಮದ ಸರ್ವೆ ನಂಬರ್ 42ರಲ್ಲಿ ನಡೆಯುತ್ತಿದ್ದ ಪ್ರಸಿದ್ಧ “ವೆಂಕಟೇಶ್ವರ ಕ್ವಾರಿ”ಗೆ (ಕಲ್ಲುಗಣಿ ಗುತ್ತಿಗೆ ಸಂಖ್ಯೆ: 826) ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಬೀಗ ಜಡಿದಿದೆ. ಕೋಟ್ಯಂತರ ರೂಪಾಯಿ ರಾಯಲ್ಟಿ ಬಾಕಿ ಉಳಿಸಿಕೊಂಡಿರುವುದು, ನಿಗದಿತ ಪ್ರದೇಶಕ್ಕಿಂತ ಹೆಚ್ಚು ಒತ್ತುವರಿ ಮಾಡಿ ಕಾನೂನುಬಾಹಿರ ಗಣಿಗಾರಿಕೆ ನಡೆಸಿರುವುದು ಹಾಗೂ ಪರಿಸರ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಇಲಾಖೆಯ ಉಪನಿರ್ದೇಶಕರು ಕಡಕ್ ಆದೇಶ ಹೊರಡಿಸಿದ್ದಾರೆ. ಹೆಚ್.ವಿ. ವೆಂಕಟೇಶ್ ಬಿನ್ ವೆಂಕಟರಮಣಪ್ಪ ರವರಿಗೆ ತಿಪ್ಪಯ್ಯನದುರ್ಗದ ಸರ್ವೆ ನಂ. 42 ರ 5–00 ಎಕರೆ ಸರ್ಕಾರಿ ಜಮೀನಿನಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗಾಗಿ 16.12.2014 ರಿಂದ 10 ವರ್ಷಗಳ ಅವಧಿಗೆ ಮೊದಲ ಬಾರಿಗೆ ಗುತ್ತಿಗೆ ನೀಡಲಾಗಿತ್ತು. ತದನಂತರ ಕೆ.ಎಂ.ಎಂ.ಸಿ.ಆರ್–1994ರ ನಿಯಮಗಳನ್ವಯ ಈ ಗುತ್ತಿಗೆ ಅವಧಿಯನ್ನು 30 ವರ್ಷಗಳವರೆಗೆ, ಅಂದರೆ ದಿನಾಂಕ 15.12.2044 ರವರೆಗೆ ವಿಸ್ತರಿಸಲಾಗಿತ್ತು. 2024–25ನೇ ಸಾಲಿನ ಅಂತ್ಯಕ್ಕೆ ಈ ಗುತ್ತಿಗೆಯ ಮೇಲೆ ಒಟ್ಟು ರೂ. 13,84,95,693/- (ಹದಿಮೂರು ಕೋಟಿ…
ಚಿಕ್ಕನಾಯಕನಹಳ್ಳಿ: ತಾಲೂಕಿನ ಬಹುದಿನಗಳ ಕನಸಾದ ಹೇಮಾವತಿ ನಾಲಾ ಕಾಮಗಾರಿಯು ತೀವ್ರಗತಿಯಲ್ಲಿ ಸಾಗುತ್ತಿದ್ದು, ನವಿಲೇ ಭಾಗದ ಕಾಮಗಾರಿಯನ್ನು ಸಾಧ್ಯವಾದಷ್ಟು ಈ ತಿಂಗಳ ಅಂತ್ಯದೊಳಗೆ ಮುಗಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೃಹತ್ ನಾಲಾ ಕಾಮಗಾರಿ ವೀಕ್ಷಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಕ್ಷೇತ್ರದ ಎಲ್ಲಾ ರೈತಪರ ಸಂಘಟನೆಗಳು, ಹೇಮಾವತಿ ಹೋರಾಟಗಾರರು, ರಾಜಕೀಯ ಮುಖಂಡರು ಮತ್ತು ಪರಮಪೂಜ್ಯ ಸ್ವಾಮೀಜಿಗಳು ಇದರಲ್ಲಿ ಭಾಗವಹಿಸಬೇಕೆಂದು ಶಾಸಕ ಸಿ.ಬಿ.ಸುರೇಶ್‌ಬಾಬು ಮನವಿ ಮಾಡಿದ್ದಾರೆ. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲೂಕಿನ ಒಟ್ಟು 26 ಕೆರೆಗಳಿಗೆ ನೀರು ಹರಿಸುವ ಈ ಮಹತ್ವದ ಯೋಜನೆಗೆ ಸುದೀರ್ಘ ಇತಿಹಾಸವಿದೆ. ಆಯಾ ಕಾಲಘಟ್ಟದಲ್ಲಿ ಅಧಿಕಾರದಲ್ಲಿದ್ದ ನಾಯಕರು ತಮ್ಮ ಪ್ರಯತ್ನಗಳ ಮೂಲಕ ಕಾಮಗಾರಿಯನ್ನು ಮುನ್ನಡೆಸಿದ್ದಾರೆ. ಈ ಹಿಂದೆ ತಾಲೂಕಿನ ಎಲ್ಲಾ ಮಠಾಧೀಶರ ನೇತೃತ್ವದಲ್ಲಿ ಕೆ.ಬಿ. ಕ್ರಾಸ್‌ವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಜೊತೆಗೆ ಹುಳಿಯಾರು, ಶೆಟ್ಟಿಕೆರೆ ಭಾಗದ ರೈತರು ಹಾಗೂ ವಿವಿಧ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿವೆ ಎಂದರು. ಈ ವರ್ಷದ ಅಂತ್ಯದೊಳಗೆ ನೀರು!…
ಪಾವಗಡ: ವೈದ್ಯನಾಗಬೇಕೆಂಬ ದೊಡ್ಡ ಕನಸು ಹೊತ್ತು ಬಿ.ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ವಿಷಕಾರಿ ಹಾವು ಕಡಿತಕ್ಕೆ ತುತ್ತಾಗಿ, ಸಕಾಲಕ್ಕೆ ಸರಿಯಾದ ಚಿಕಿತ್ಸೆ ಹಾಗೂ ಸೌಲಭ್ಯ ಸಿಗದೆ ಸಾವನ್ನಪ್ಪಿರುವ ಧೃತಿಗೆಡಿಸುವ ಘಟನೆ ತಾಲ್ಲೂಕಿನ ದವಡಬೆಟ್ಟ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದವಡಬೆಟ್ಟ ಗ್ರಾಮದ ದಿವಂಗತ ಸಣ್ಣಪ್ಪ ಪೂಜಾರ್ ಹಾಗೂ ತಾಯವ್ವ ದಂಪತಿಯ ಹಿರಿಯ ಪುತ್ರ ಶ್ರೇಯಸ್ (22) ಮೃತಪಟ್ಟ ದುರ್ದೈವಿ. ಬೆಂಗಳೂರಿನ ವರದರಾಜನ್ ಕಾಲೇಜಿನಲ್ಲಿ ಬಿ.ಫಾರ್ಮಸಿ ಓದುತ್ತಿದ್ದ ಶ್ರೇಯಸ್, ಕಾಲೇಜಿಗೆ ರಜೆ ಇದ್ದ ಕಾರಣ ಗ್ರಾಮಕ್ಕೆ ಬಂದಿದ್ದನು. ಈ ವೇಳೆ ತಮ್ಮ ತೋಟಕ್ಕೆ ತೆರಳುತ್ತಿದ್ದಾಗ ವಿಷಕಾರಿ ಹಾವೊಂದು ಕಚ್ಚಿದೆ. ತಕ್ಷಣ ಆತಂಕಗೊಂಡ ಪೋಷಕರು ಆತನನ್ನು ಪಾವಗಡ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆ ನಿರ್ಲಕ್ಷ್ಯ, ಆಂಬುಲೆನ್ಸ್ ಕೊರತೆ ಆರೋಪ! ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಕ ಚಿಕಿತ್ಸೆಯನ್ನು ತರಾತುರಿಯಲ್ಲಿ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯುವಂತೆ ಸೂಚಿಸಿದರು. ಆದರೆ, ತುರ್ತು ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಿರಲಿಲ್ಲ ಎಂದು ಹೇಳಲಾಗಿದೆ. ಪೋಷಕರು ಹರಸಾಹಸ…
ಕುಣಿಗಲ್ : ತಾಲ್ಲೂಕಿನ ಕಸಬಾ ಹೋಬಳಿ ಟಿ ಹೊಸಹಳ್ಳಿ ಗ್ರಾಮ ವ್ಯಾಪ್ತಿಯ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ರೂ.ಗಳ ವೆಚ್ಚದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ ನೆರವೇರಿಸಿದರು. ಅವರು ಟಿ.ಹೊಸಳ್ಳಿ, ಗಿರಿಗೌಡರ ಪಾಳ್ಯ, ಹಾಗೂ ಸಾಲಂದ್ರಿ ಪಾಳ್ಯ, ಗ್ರಾಮಗಳಿಗೆ ರಸ್ತೆ ಚರಂಡಿ ನಿರ್ಮಾಣಕ್ಕೆ ಸುಮಾರು 5 ಕೋಟಿ ವೆಚ್ಚದಲ್ಲಿ ಶಂಕುಸ್ಥಾಪನೆ ಮಾಡಿ ಮಾತನಾಡುತ್ತಾ, ನಾನು ಶಾಸಕನಾದ ನಂತರ ಮತದಾರರ ಋಣವನ್ನು ತಿಳಿಸಲು ತಾಲ್ಲೂಕಿನಾದ್ಯಂತ ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಬಂದಿದ್ದೇನೆ ಇನ್ನು ಮುಂದೆಯೂ ಸರ್ಕಾರದಿಂದ ವಿಶೇಷ ಅನುದಾನ ತಂದು ಹಿಂದುಳಿದ ಗ್ರಾಮಗಳನ್ನು ಗುರುತಿಸಿ ರಸ್ತೆ, ನೀರಾವರಿ ಕಾಮಗಾರಿಗೆ ಹೆಚ್ಚಿನ ಮಹತ್ವವನ್ನು ಕೊಟ್ಟು ತಾಲ್ಲೂಕನ್ನು ಅಭಿವೃದ್ಧಿ ಪಡಿಸಲು ಕಂಕಣ ಬದ್ದನಾಗಿದ್ದೇನೆ ಎಂದರು. ರಾಜ್ಯದಲ್ಲಿ ಕಸ ವಿಲೇವಾರಿ ಸಂಬಂಧ ವಿರೋಧ ಪಕ್ಷಗಳು ಉರುಳಿಲ್ಲದ ಆರೋಪವನ್ನು ಮಾಡುತ್ತಾರೆ, ಗೃಹಲಕ್ಷ್ಮಿ ಯೋಜನೆಯನ್ನು ನಿಜವಾದ ಫಲಾನುಭವಿಗಳು ತೆಗೆದುಕೊಳ್ಳಲಿ ಎಂಬ ಸದುದ್ದೇಶದಿಂದ ಬಯೋ ಮೆಟ್ರಿಕ್ ಅಳವಡಿಸಲು ಸರ್ಕಾರ ಮುಂದಾಗಿದೆ ಇದರಿಂದ ಅನರ್ಹ…
ಚಿಕ್ಕನಾಯಕನಹಳ್ಳಿ: “ನಮ್ಮ ಕ್ಷೇತ್ರದ ಪ್ರತಿ ಮನೆಯಲ್ಲೂ ಒಬ್ಬೊಬ್ಬರು ಉತ್ತಮ ಉನ್ನತ ಸ್ಥಾನಕ್ಕೇರಬೇಕು ಎಂಬ ಉದಾತ್ತ ಉದ್ದೇಶದಿಂದ, ಸಮಾಜದ ಸಮಾನ ಮನಸ್ಕರೆಲ್ಲರೂ ಒಂದಾಗಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಸಿಇಟಿ, ನೀಟ್ ಹಾಗೂ ಜೆಇಇ ತರಬೇತಿಯನ್ನು ಆಯೋಜಿಸಲಾಗಿದೆ” ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸಿಇಟಿ ಫಲಿತಾಂಶದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಕ್ಷೇತ್ರದ ಗ್ರಾಮೀಣ ಮತ್ತು ನಗರ ಭಾಗದ ಮಕ್ಕಳ ಭವಿಷ್ಯಕ್ಕಾಗಿ ಈ ‘ಜ್ಞಾನಕಲ್ಪ’ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಟ್ರಸ್ಟ್‌ನ ಉಚಿತ ತರಬೇತಿಯ ಫಲವಾಗಿ ಈ ಬಾರಿ ಸರ್ಕಾರಿ ಕೋಟಾದಡಿ ಇನ್ನು ಹೆಚ್ಚಿನ ವಿದ್ಯಾರ್ಥಿಗಳು ಸೀಟು ಪಡೆಯಲಿದ್ದಾರೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು. ಸಾಧನೆಯ ವಿವರಗಳು ಹೀಗಿವೆ: ಒಟ್ಟು ತರಬೇತಿ ಪಡೆದ 313 ವಿದ್ಯಾರ್ಥಿಗಳಲ್ಲಿ ಎಂಜಿನಿಯರಿಂಗ್‌ಗೆ 49, ಬಿ.ಎಸ್ಸಿ ನರ್ಸಿಂಗ್‌ಗೆ 29, ಬಿ.ಎಸ್ಸಿ ಅಗ್ರಿಕಲ್ಚರ್‌ಗೆ 3, ಬಿ.ಫಾರ್ಮಸಿಗೆ 7, ಬಿ.ಎಸ್ಸಿ ಅನಸ್ತೇಷಿಯಾಗೆ 2…
ಕೊರಟಗೆರೆ : ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜು (ಕೋಡ್: UU 0316), ಕೊರಟಗೆರೆ, 2025-26ನೇ ಶೈಕ್ಷಣಿಕ ಸಾಲಿನ ಪಿಯು ಬೋರ್ಡ್ ಹಾಗೂ KCET–2026 ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಕಾಲೇಜು 100% ಫಲಿತಾಂಶ ದಾಖಲಿಸಿದ್ದು, ಅಮೂಲ್ಯ ಎಸ್. 570 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶ್ರೀವತ್ಸ 556 ಅಂಕ ಹಾಗೂ ಸುಭಾಷ್ ಎಸ್.ಜಿ. 555 ಅಂಕಗಳನ್ನು ಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ. KCET–2026 ಪರೀಕ್ಷೆಯಲ್ಲಿ ಸುಭಾಷ್ ಎಸ್.ಜಿ. ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 9,828ನೇ ರ್ಯಾಂಕ್ ಗಳಿಸಿ ಕೊರಟಗೆರೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಪಶುವೈದ್ಯಕೀಯ ವಿಜ್ಞಾನದಲ್ಲಿ 4,102ನೇ, ನರ್ಸಿಂಗ್‌ನಲ್ಲಿ 4,111ನೇ ಹಾಗೂ ಕೃಷಿ ಮತ್ತು ಫುಡ್ ಸೈನ್ಸ್ ವಿಭಾಗಗಳಲ್ಲಿ 4,732ನೇ ರ್ಯಾಂಕ್ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಶ್ರೀವತ್ಸ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 28,457ನೇ ರ್ಯಾಂಕ್ ಹಾಗೂ ಅಮೂಲ್ಯ ಎಸ್. ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 28,532ನೇ ರ್ಯಾಂಕ್ ಪಡೆದು ಕಾಲೇಜಿನ ಸಾಧನೆಗೆ ಮತ್ತಷ್ಟು ಮೆರುಗು ತಂದಿದ್ದಾರೆ. ಇದರೊಂದಿಗೆ…
ಪಾವಗಡ: ಬೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಜೂನ್ 2026ರ ಬಾಕಿ ಬಿಲ್ ವಸೂಲಿಗಾಗಿ ವಿಶೇಷ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಬಾಕಿ ಹಣ ಪಾವತಿಸದ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಡಿತಗೊಳಿಸಲಾಗುವುದು ಎಂದು ಕಾರ್ಯನಿರ್ವಾಹಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ. ಕರೆಂಟ್ ಕಟ್ ಆದ ನಂತರ ಅನಧಿಕೃತವಾಗಿ ಮರುಸಂಪರ್ಕ ಪಡೆದರೆ, ವಿದ್ಯುತ್ ಕಾಯ್ದೆ–2003ರ ಪ್ರಕಾರ ಕಠಿಣ ಕಾನೂನು ಕ್ರಮ ಜರುಗಲಿದೆ. ಹಳೆಯ ಮತ್ತು ಪ್ರಸ್ತುತ ವಿದ್ಯುತ್ ಬಿಲ್ ಬಾಕಿಯನ್ನು ತಕ್ಷಣವೇ ಪಾವತಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ನಿರಂತರ ವಿದ್ಯುತ್ ಸೇವೆ ಬೇಕಾದರೆ ಇಂದೇ ಬಿಲ್ ಪಾವತಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಗ್ರಾಹಕರು ಸಮೀಪದ ಬೆಸ್ಕಾಂ ಕಚೇರಿಯನ್ನು ಸಂಪರ್ಕಿಸಬಹುದು. ವರದಿ: ನಂದೀಶ್ ನಾಯ್ಕ ಪಿ. ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ ನಿರ್ವಹಣೆ ಸರಿಯಾಗಿ ಆಗದೆ ಸಾರ್ವಜನಿಕರು ಪರದಾಡುವಂತಾಗಿದೆ. ಕುಣಿಗಲ್ ಮುಖ್ಯರಸ್ತೆಯ ಸದಾಶಿವ ನಗರದ 7 ಮುಖ್ಯರಸ್ತೆಯ SBI ಬ್ಯಾಂಕ್ ಪಕ್ಕದಲ್ಲಿ UGD ಮುಚ್ಚಳ ಓಪನ್ ಆಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತಿದೆ. ಓಪನ್ ಆಗಿರುವ ಚರಂಡಿಯಿಂದಾಗಿ ಯಾವುದೇ ಕ್ಷಣದಲ್ಲಾದರೂ ದೊಡ್ಡ ಅಪಘಾತ ಸಂಭವಿಸುವ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ. “ದಿನನಿತ್ಯ ನೂರಾರು ಜನರು ಈ ರಸ್ತೆಯಲ್ಲಿ ಓಡಾಡುತ್ತಾರೆ. ಮಕ್ಕಳು, ವೃದ್ಧರು ಬೀಳುವ ಭಯದಲ್ಲೇ ಓಡಾಡಬೇಕಾಗಿದೆ. ಪಾಲಿಕೆಯವರಿಗೆ ಹಲವು ಬಾರಿ ಹೇಳಿದರೂ ಜಾಣಕುರುಡರಂತೆ ವರ್ತಿಸುತ್ತಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಹಲವು ರಸ್ತೆಗಳಲ್ಲಿ ಇದೇ ರೀತಿ UGD ಮುಚ್ಚಳಗಳು ಹಾನಿಗೊಂಡು ಅಪಾಯಕಾರಿಯಾಗಿ ಪರಿಣಮಿಸಿವೆ. ಕೂಡಲೇ ಮಹಾನಗರ ಪಾಲಿಕೆ ಎಚ್ಚೆತ್ತು, UGD ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವರದಿ: ನಂದೀಶ್…
ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಸಾವಿತ್ರಮ್ಮ ಹಾಗೂ ಕರಿಯಣ್ಣ ಕೆ.ಟಿ. ಅವರ ಪುತ್ರ ನವೀನ್ ಕೆ. ಅವರು ದಾವಣಗೆರೆ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಡಾ.ಡಿ.ಜಿ. ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ “ಭಿನ್ನ ಕ್ರಮದ ಅವಕಲ ಸಮೀಕರಣಗಳ ಪರಿಹಾರಕ್ಕಾಗಿ ಪರಿಣಾಮಕಾರಿ ಸಂಖ್ಯಾತ್ಮಕ ವಿಧಾನಗಳ ಅಭಿವೃದ್ಧಿ ಮತ್ತು ಅವುಗಳ ಪ್ರಾಯೋಗಿಕ ಅನ್ವಯಗಳು” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಒಂದು ಸಾಮಾನ್ಯ ಕುಟುಂಬದಿಂದ ಬಂದು ಉನ್ನತ ಶಿಕ್ಷಣದ ಶಿಖರ ತಲುಪಿದ ನವೀನ್ ಅವರ ಸಾಧನೆಗೆ ವಿಶ್ವವಿದ್ಯಾಲಯದ ಬೋಧಕವರ್ಗ, ಸಂಶೋಧಕ ವಿದ್ಯಾರ್ಥಿಗಳು ಹಾಗೂ ಊರಿನ ಹಿತೈಷಿಗಳು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ವರದಿ : ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC