Author: admin

ತುಮಕೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲು ಎಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. ಚುನಾವಣೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ಚುನಾವಣಾ ನೋಂದಣಾಧಿಕಾರಿಗಳು (ERO), ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು(DEO) ಅಥವಾ ರಾಜ್ಯ ಮಟ್ಟದಲ್ಲಿ ಮುಖ್ಯ ಚುನಾವಣಾಧಿಕಾರಿಗಳು(CEO) ಬಗೆಹರಿಸಲಾಗದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಲಹೆಗಳನ್ನು ಕ್ರೂಢೀಕರಿಸಿ 2025ರ ಏಪ್ರಿಲ್ 30ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಈ ಕುರಿತು ಆಯೋಗದಿಂದ ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿರುವ ವೈಯಕ್ತಿಕ ಪತ್ರದಲ್ಲಿ, ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ಸದಸ್ಯರೊಂದಿಗೆ ಪರಸ್ಪರ ಅನುಕೂಲಕರ ಸಮಯದಲ್ಲಿ, ಸ್ಥಾಪಿತ ಕಾನೂನಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಸಂವಾದವನ್ನು ರೂಪಿಸಲು ವೇದಿಕೆಯನ್ನು ಸೃಜಿಸಲಾಗಿದೆ. ಇದಕ್ಕೂ ಮೊದಲು, ಕಳೆದ ವಾರ ನಡೆದ ಭಾರತ ಚುನಾವಣಾ ಆಯೋಗದ ಎಲ್ಲಾ ರಾಜ್ಯಗಳ ಮುಖ್ಯ…

Read More

ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ತೋಟಗಾರಿಕೆ ಬೆಳೆಗಳು ಒಣಗುವ ಸಾಧ್ಯತೆಯಿದ್ದು, ಹೆಚ್ಚಿನ ಇಳುವರಿಗಾಗಿ ತೋಟಗಾರಿಕೆ ಬೆಳೆಗಾರರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಇಲಾಖೆ ಸಲಹೆ ನೀಡಿದೆ. ಬೇಸಿಗೆ ಹಂಗಾಮಿನಲ್ಲಿ ತರಕಾರಿ ಬೀಜ ಅಥವಾ ಸಸಿಗಳನ್ನು ನಾಟಿ ಮಾಡುವ ಮುಂಚೆ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ನಂತರ ನಾಟಿ ಮಾಡಿದ್ದಲ್ಲಿ ಉತ್ತಮ ಬೆಳೆ ಮತ್ತು ಇಳುವರಿ ಪಡೆಯಬಹುದು. ಪ್ರಮುಖ ಹಣ್ಣಿನ ಬೆಳೆಗಳಾದ ಮಾವು, ಬಾಳೆ, ಸಪೋಟ, ದಾಳಿಂಬೆ, ಪಪ್ಪಾಯ ಮತ್ತು ಇತರೆ ಹಣ್ಣಿನ ಬೆಳೆಗಳಿಗೆ ಹನಿ ನೀರಾವರಿ ಮುಖಾಂತರ ನೀರು ಉಣಿಸುವುದು, ಮರದ ಬುಡದ ಸುತ್ತ ಸಾವಯವ ಹೊದಿಕೆ(ಮಲ್ಚಿಂಗ್), ಅಂತರ ಬೆಳೆಯಾಗಿ ಹಸಿರೆಲೆ ಗೊಬ್ಬರಗಳಾದ ಡಯಾಂಚ ಅಥವಾ ಸೆಣಬು ಹಾಕುವುದರಿಂದ ಉತ್ತಮ ಫಸಲು ಪಡೆಯಬಹುದಲ್ಲದೆ ಕೀಟ ಮತ್ತು ರೋಗಗಳನ್ನು ನಿಯಂತ್ರಿಸಬಹುದು. ತೋಟದ ಬೆಳೆಗಳಾದ ತೆಂಗು ಮತ್ತು ಅಡಿಕೆ ಬೆಳೆಗಳಿಗೆ ಹನಿ ನೀರಾವರಿ ಮುಖಾಂತರ ನೀರು ಉಣಿಸಬೇಕು. ಇದರಿಂದ ಬೇಸಿಗೆ ಕಾಲದಲ್ಲಿ ಮರ ಒಣಗದಂತೆ ನೋಡಿಕೊಳ್ಳಬಹುದು. ಬುಡದ ಸುತ್ತ ಗುಣ ಮಾಡಿ…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ತುಯಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಹಿಂದೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸವರಾಜು ಎಸ್. ಮಠ ಅವರು ದಿನಾಂಕ:14-10-2010ರಂದು ಸೇವೆಗೆ ಸೇರಿ ನಂತರ ದಿನಾಂಕ: 9—6–2017 ರಿಂದ 15—3–2023ರವರೆಗೆ ಕರ್ತವ್ಯಕ್ಕೆ ಅನಧಿಕೃತ ದೀರ್ಘಕಾಲ ಗೈರು ಹಾಜರಾಗಿದ್ದಾರೆ. ನಂತರ ವರ್ಗಾವಣೆ ಹೊಂದಿದ ಶಾಲೆಯಲ್ಲಿಯೂ ಸಹ ಕರ್ತವ್ಯಕ್ಕೆ ಹಾಜರಾಗಿರುವುದಿಲ್ಲ. ಕರ್ತವ್ಯಕ್ಕೆ ಹಾಜರಾಗುವಂತೆ ಬಸವರಾಜು ಎಸ್. ಮಠ ಅವರಿಗೆ ಹಲವಾರು ಬಾರಿ ನೋಟೀಸ್ಗಳನ್ನು ನೋಂದಾಯಿತ ಅಂಚೆ ಮೂಲಕ ಜಾರಿ ಮಾಡಿದ್ದರೂ ಹಾಜರಾಗಿರುವುದಿಲ್ಲವಾದ ಹಿನ್ನಲೆಯಲ್ಲಿ ಸದರಿಯವರಿಗೆ ಸರ್ಕಾರಿ ಸೇವೆಯಲ್ಲಿ ಮುಂದುವರೆಯಲು ಆಸಕ್ತಿ ಇಲ್ಲದಿರುವುದು ಕಂಡು ಬರುತ್ತದೆ. ಆದ್ದರಿಂದ 15 ದಿನಗಳೊಳಗಾಗಿ ಶಾಲಾ ಕರ್ತವ್ಯಕ್ಕೆ ಹಾಜರಾಗಲು ಬಸವರಾಜು ಅವರಿಗೆ ಪ್ರಕಟಣೆ ಮೂಲಕ ಅಂತಿಮವಾಗಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಸಿ.ಸಿ.ಎ ನಿಯಮ 1957ರ ನಿಯಮದಡಿ ಸದರಿ ನೌಕರರನ್ನು ಸೇವೆಯಿಂದ ವಜಾ ಮಾಡಲು/ತೆಗೆದುಹಾಕಲು ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಸ್ತುಪ್ರಾಧಿಕಾರಿ ಮನಮೋಹನ ಹೆಚ್.ಕೆ. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ತುಮಕೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಿದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ https://ssp.postmatric.karnataka.gov.in   ಮೂಲಕ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in  ಅಥವಾ ಸಹಾಯವಾಣಿ ಸಂಖ್ಯೆ: 8050770005, ದೂ.ವಾ.ಸಂ.1902ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಮತದಾರರ ಪಟ್ಟಿ ತಯಾರಿಕೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರು ಉಪವಿಭಾಗ ಮಟ್ಟದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ತಯಾರಿಕೆ ಸಂಬಂಧ ಮತದಾರರ ನೋಂದಣಾಧಿಕಾರಿಗಳ ಕರಡು ಕೈಪಿಡಿ ಕುರಿತು ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಅಭಿಪ್ರಾಯಗಳನ್ನು ಪಡೆಯುವ ಸಂಬಂಧ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಉಪವಿಭಾಗ ವ್ಯಾಪ್ತಿಗೊಳಪಡುವ ಪ್ರತಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಿಂದ ಅನರ್ಹರ ಹೆಸರನ್ನು ಕೈಬಿಡಬೇಕು. ಮತದಾರರು ಎರಡು ಕಡೆ ಹೆಸರನ್ನು ನೋಂದಾಯಿಸಿಕೊಂಡಿದ್ದರೆ ಒಂದು ಕಡೆ ಅವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಮತದಾರರು ಮೃತರಾಗಿದ್ದರೆ, ವರ್ಗಾವಣೆಯಾಗಿದ್ದರೆ ಅಂತಹವರ ಹೆಸರನ್ನು ಕೈಬಿಟ್ಟು ನಿಖರವಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕೆಂದು ನಿರ್ದೇಶನ ನೀಡಿದರು. ಮತದಾರರ ಪಟ್ಟಿಗೆ ಹೆಸರನ್ನು ಹೊಸದಾಗಿ ಸೇರ್ಪಡೆ, ಕೈಬಿಡುವ, ತಿದ್ದುಪಡಿ ಮತ್ತಿತರ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿರುತ್ತವೆ…

Read More

ಬೀದರ್ : ಶಾಲಾ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಲಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀರಖಲ್ ಗ್ರಾಮದ ಬಳಿ ನಡೆದಿದೆ. ಮೀರಖಲ್ ತಾಂಡಾದ ನಿವಾಸಿ ದೀಪಕ್ ರಾಠೋಡ (31) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಬುಧವಾರ ರಾತ್ರಿ ಸುಮಾರು 9 ಗಂಟೆಗೆ ದೀಪಕ್ ಮೀರಖಲ್ ತಾಂಡಾದಿಂದ ಬರುತ್ತಿರುವಾಗ ಎದುರಿನಿಂದ ಬಂದ ಶಾಲಾ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಸುದ್ದಿ ತಿಳಿದ ಹುಲಸೂರ್ ಠಾಣೆಯ ಪಿಎಸ್ ಐ ಶಿವಪ್ಪ ಮೇಟಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಹುಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ನಿತ್ಯ ನೂರಾರು ಕುರಿಗಳು ಹಾಗೂ ದನಕರುಗಳಿಗೆ ಜೀವನಾಡಿಯಾಗಿದ್ದ ಗೋಕಟ್ಟೆಗೆ ತಂತಿ ಬೇಲಿ ಹಾಕಲಾಗಿದ್ದು,  ನೇಜಂತಿ ಕೆರೆಯ ಹಳ್ಳವನ್ನು ಒತ್ತುವರಿ ಮಾಡಿಕೊಂಡು ಕಾರೆಹಳ್ಳಿಯಿಂದ  ಬೆಜ್ಜಿಹಳ್ಳಿಗೆ ಹೋಗುವ ನಕಾಶೆ ರಸ್ತೆಗೆ ಬೆಂಗಳೂರು ರಿಯಲ್ ಎಸ್ಟೇಟ್ ಉದ್ಯಮಿ ತಂತಿ ಬೇಲಿ ಹಾಕಿದ್ದಾರೆ. ಇದನ್ನು ಸಂಬಂಧಪಟ್ಟ ಇಲಾಖೆಯವರು ಕಂಡೂ ಕಾಣದಂತಿದ್ದಾರೆ ಎಂದು ಕಂದಾಯ ಇಲಾಖೆ ವಿರುದ್ಧ   ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಗೋ ಕಟ್ಟೆಗೆ ಹಾಕಿರುವ ತಂತಿಬೇಲಿ ತೆರವುಗೊಳಿಸುವಂತೆ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಒತ್ತಾಯಿಸಿದ್ದಾರೆ. ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ನೇಜಂತಿ ಸರ್ವೆ ನಂಬರ್. 19ರಲ್ಲಿ 20.ಎಕರೆ ಜಮೀನು ಖರೀದಿಸಿರುವ ಭೂಮಾಲಿಕ  ಜಯಸಿಂಹ ಮತ್ತು ಇತರರು ಈ ಸರ್ವೇ ನಂಬರ್ ನಲ್ಲಿ ಕಳೆದ 50 ವರ್ಷಗಳಿಂದ ಗೋಕಟ್ಟೆ ಇದ್ದು, ನೇಜಂತಿ, ದ್ವಾರನ ಕುಂಟೆ, ವಾ ಜರಹಳ್ಳಿ, ಕಾರೆಹಳ್ಳಿ ಗ್ರಾಮಗಳ ಸಾವಿರಾರು ಕುರಿಗಳಿಗೆ ನೀರು ಕುಡಿಯಲು ಈ ಗೋ ಕಟ್ಟೆಯೇ ಅವಲಂಬಿತವಾಗಿತ್ತು. ಇದೀಗ ಭೂ ಮಾಲೀಕ ಇದು ನನ್ನ ಜಮೀನು ವ್ಯಾಪ್ತಿಯಲ್ಲಿ…

Read More

ಬೆಂಗಳೂರು: ರನ್ಯಾರಾವ್ ಪ್ರಕರಣದ ತನಿಖೆ ಮುಗಿಯುವವರೆಗೆ ಬಿಜೆಪಿಯವರು ಕಾಯಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಪ್ರತಿಪಕ್ಷಗಳ ಆರೋಪಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಬಿಐ ತನಿಖೆ ನಡೆಯುತ್ತಿದೆ, ಕಾಯಬೇಕು. ಏರ್ ಪೋರ್ಟ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತೆ. ಅದು ಕೇಂದ್ರ ಸರ್ಕಾರದ ಜವಾಬ್ದಾರಿ. ಸಚಿವರ ಬಗ್ಗೆ ಮಾತನಾಡಿದರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ ಎಂದು ಸವಾಲು ಹಾಕಿದರು. ಕೆಪಿಸಿಸಿ ಅಧ್ಯಕ್ಷರ ಡಿನ್ನರ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರು ಡಿನ್ನರ್ಗೆ ಕರೆದಿದ್ದಾರೆ, ಹೋಗುತ್ತೇನೆ. ಹೋಗಲು ಬೇಕಾಗುತ್ತದೆ. ಅವರು ಪಾರ್ಟಿ ಹೆಸರಲ್ಲಿ ಡಿನ್ನರ್ ಕೊಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ, ವರದಿಗಾರರ ಸಂಘದ ಕಚೇರಿ ಉದ್ಘಾಟನೆ ಉಡುಪಿ: ಪತ್ರಿಕಾರಂಗದಲ್ಲಿ ಸತ್ಯವನ್ನು ಬರೆಯುವ ಮತ್ತು ಸುಳ್ಳನ್ನು ಬರೆಯುವ ರಂಗವಿದೆ. ನಾವು ಹನ್ನೆರಡು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ, ನಮ್ಮ ಸುದ್ದಿಗಳು ಯಾವುದೇ ಮಾಧ್ಯಮಗಳಲ್ಲಿ ಬರುತ್ತಿಲ್ಲ ಎಂದು ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘ (ರಿ) ವತಿಯಿಂದ ಜಿಲ್ಲಾ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೇ ದೊಡ್ಡವರು ತಪ್ಪು ಮಾಡಿದರೂ ಪತ್ರಕರ್ತರು ಸತ್ಯವನ್ನೇ ಬರೆಯಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ  ಶಶಿಕಾಂತ್,  ರಾಜ್ಯ ಸಂಚಾಲಕರಾದ ಯಶಸ್ವಿನಿ, ವಿಭಾಗೀಯ ಅಧ್ಯಕ್ಷರಾದ ವಿಜಯ್ ಮುನಿಯಪ್ಪ,  ಪ್ರಚಾರ ಸಮಿತಿ ಅಧ್ಯಕ್ಷರಾದ ಆರತಿ ಗಿಳಿಯಾರ್ (ಉಡುಪಿ) ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಹಿತಾಸಕ್ತಿ, ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಮಾಧ್ಯಮ ಕ್ಷೇತ್ರದ ಸವಾಲುಗಳು ಕುರಿತಾಗಿ ಚರ್ಚೆ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ಕಳೆದ 5 ವರ್ಷ ಗಳಲ್ಲಿ 5200 ಕೋಟಿ ರೂ. ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಮಾತ್ರವಲ್ಲದೆ, ಭಾರತ ಮತ್ತು ಪ್ರಪಂಚದಾದ್ಯಂತದ ಸಾರ್ವಜನಿಕ ಸಾರಿಗೆ ಸೇವೆಗಳು ಲಾಭಕ್ಕಿಂತ ಹೆಚ್ಚಿನ ನಷ್ಟವನ್ನೇ ಎದುರಿಸುತ್ತಿವೆ ಎಂದು ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳಾದ ಕೆಎಸ್ ಆರ್ ಟಿಸಿ, ಕೆಕೆಆರ್ ಟಿಸಿ, ಎನ್ ಡಬ್ಲ್ಯೂಕೆಆರ್ ಟಿಸಿ ಮತ್ತು ಬಿಎಂಟಿಸಿಗಳಿಗೆ 5,200 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More