Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಶಿರಾ: ತಾಲ್ಲೂಕಿನಲ್ಲಿ ಮೈಕ್ರೋಫೈನಾನ್ಸ್ ಸಾಲದ ಕಿರುಕುಳಕ್ಕೆ ಸಂಬಂಧಿಸಿದ ದುರ್ಘಟನೆ ನಡೆದಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ರೇಷ್ಮಾ ಕೆ.ಎಸ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ, ಆ ಮಕ್ಕಳ ಗೋಳು ನೋಡಿ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಒಂದು ಕುಟುಂಬ ತನ್ನ ಪ್ರಿಯ ವ್ಯಕ್ತಿಯನ್ನು ಕಳೆದುಕೊಳ್ಳುವುದು ತುಂಬಾ ದುಃಖಕರ. ನಾನು ಎಲ್ಲರಿಗೂ ಈ ಸಂದೇಶ ನೀಡಲು ಬಯಸುತ್ತೇನೆ, ‘ನೀವು ಸಾಲ ಮಾಡುವಾಗ ಇರುವ ಧೈರ್ಯ, ಅದನ್ನು ತೀರಿಸುವಾಗಲೂ ಇರಬೇಕು. ಯಾವಾಗಲೂ ಪರ್ಯಾಯಗಳಿವೆ. ಯಾವುದೇ ಕಾರಣಕ್ಕೂ ಎದೆಗುಂದಬೇಡಿ” ಎಂದರು. ಸಾಲದ ಬಾಧೆಯಿಂದ ಅಥವಾ ಯಾರಾದರೂ ಕಿರುಕುಳ ನೀಡಿದರೆ, ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡಿ, ಎಂದು ಅವರು ಸಾರ್ವಜನಿಕರನ್ನು ಮನವಿ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ ಸೇರಿದಂತೆ 2023–24ನೇ ಸಾಲಿನ ಮೆಟ್ರಿಕ್ ನಂತರದ ಕೆಲವು ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ https://ssp.postmatric.karnataka.gov.in ಮೂಲಕ ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770005, ದೂ.ವಾ.ಸಂ.1902ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಬಲಿಜ ಸಂಘದ ಸಹಯೋಗದಲ್ಲಿ ಮಾರ್ಚ್ 14ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ “ಕಾಲಜ್ಞಾನಿ ಶ್ರೀ ಯೋಗಿ ನಾರೇಯಣ ಯತೀಂದ್ರರ 299ನೇ ಜಯಂತೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಏಪ್ರಿಲ್ 17 ರಿಂದ ಮೊಬೈಲ್ ರಿಪೇರಿ ಹಾಗೂ ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಹಮ್ಮಿಕೊಂಡಿದ್ದು, ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಮತ್ತು ಪೂರ್ವ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು ಸರಬರಾಜು, ಮೇವು ಪೂರೈಕೆ ಮತ್ತು ಪ್ರಕೃತಿ ವಿಕೋಪ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ತಿಳಿಸಿದ್ದಾರೆ. ಸದರಿ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದ್ದು, ಸಹಾಯವಾಣಿ ಸಂಖ್ಯೆ 0816-2213400, 155304, 7304975519(ವಾಟ್ಸ್ಪ್ ಸಂಖ್ಯೆ 7304975519)ಕ್ಕೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸಂಶೋಧನೆಯನ್ನು ಸರಿಯಾಗಿ ಮಾಡುವುದೇ ಒಂದು ಶ್ರೇಷ್ಠ ಕೆಲಸ. ಸಂಶೋಧನೆ ಮಾಡುವುದಕ್ಕೆ ಯಾವುದೇ ರೀತಿಯ ವಯಸ್ಸಿನ ಇತಿಮಿತಿಗಳಿಲ್ಲ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು. ತುಮಕೂರು ವಿವಿ ಅರ್ಥಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗ ಬುಧವಾರ ಆಯೋಜಿಸಿದ್ದ ನವದೆಹಲಿಯ ಐಸಿಎಸ್ಎಸ್ಆಎರ್ ಪ್ರಾಯೋಜಿತ ಸಂಶೋಧನಾ ವಿಧಾನ ಕುರಿತ ಹತ್ತು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸಂಶೋಧನಾರ್ಥಿ ಸಂಶೋಧನೆ ಕೈಗೊಳ್ಳುವ ಮುನ್ನ ಸಂಶೋಧನೆಯ ಉದ್ದೇಶವನ್ನು ಸ್ಪಷ್ಟಪಡಿಸಿಕೊಂಡಿರಬೇಕು. ಸಂಶೋಧನೆ ಮಾಡಲು ಮಾನಸಿಕ ಸ್ಥಿರತೆ ಇರಬೇಕು. ಮಾರ್ಗದರ್ಶಕರ ಆಯ್ಕೆ ಮತ್ತು ವಿಷಯದ ಆಯ್ಕೆಯೂ ಅಷ್ಟೇ ಮುಖ್ಯ ಎಂದರು. ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಮುಕ್ತತೆ ಸಂಶೋಧನೆಯ ಮೂರು ಪ್ರಧಾನ ಆಯಾಮಗಳು. ಸಂಶೋಧನೆ ಮಾಡುವವರಿಗೆ ಆತ್ಮವಿಶ್ವಾಸ ಇರಬೇಕೇ ಹೊರತು ಅತಿಯಾದ ಆತ್ಮವಿಶ್ವಾಸ ಇರುವುದು ಒಳ್ಳೆಯದಲ್ಲ. ವಿಧಾನ ಗೊತ್ತಿಲ್ಲದೆ ಸಂಶೋಧನೆಯನ್ನು ನಡೆಸುವುದು ಸರಿಯಾದ ಯೋಜನೆ ಇಲ್ಲದೆ ಕಟ್ಟಡವನ್ನು ನಿರ್ಮಾಣ ಮಾಡಿದ ಹಾಗೆ ಎಂದರು. ಕಾರ್ಯಾಗಾರದ ಸಹ ನಿರ್ದೇಶಕ ಡಾ. ಮುನಿರಾಜು ಎಂ. ಮಾತನಾಡಿ, ಸಂಶೋಧನೆಗೆ ದತ್ತಾಂಶ ಸಂಗ್ರಹ ಮಾಡಲು…
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ, ಗುಡಿಗೊಂಡನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯ ಬೆನ್ನಲ್ಲೇ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ. ಬಸವರಾಜು(40) ಮೃತದುರ್ದೈವಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 9:30ರ ಸಮಯದಲ್ಲಿ ಮನೆಯಿಂದ ಹೊರಗೆ ಹೋದ ಇವರು ಸಂಜೆ 5 ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಬಸವರಾಜುಗೆ ಒಬ್ಬಳು ಹೆಂಡತಿ ಇಬ್ಬರು ಗಂಡು ಮಕ್ಕಳಿದ್ದು, ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದರು. ಮೃತದೇಹದ ಮೇಲೆ ಗಾಯದ ಗುರುತುಗಳು ಹಾಗೂ ಅಲ್ಲಲ್ಲೇ ಚರ್ಮ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಸಾವು ಸಹಜವಲ್ಲ ಎಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಹನಿಟ್ರ್ಯಾಪ್ ಆರೋಪ ಹೊರಿಸಿ ಯುವತಿಯೊಬ್ಬಳ ವಿರುದ್ಧ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಹಾಸನ, ತಿಪಟೂರು, ದೊಡ್ಡಬಳ್ಳಾಪುರ, ನೆಲಮಂಗಲ ಹೀಗೆ ನಾನಾ ಕಡೆ ಕರೆದಿದ್ದ ಯುವತಿಯು ನಾನು ನಿಮ್ಮನ್ನು ಪ್ರೀತಿಸುತ್ತಿದ್ದೇನೆ ನನ್ನನ್ನು ಮದುವೆ ಮಾಡಿಕೊಳ್ಳಿ ಎಂದು ಒತ್ತಡ ಹಾಕಿದ್ದಳು. ಇದಕ್ಕೆ ಒಪ್ಪದಿದ್ದ ಕಾರಣ ಸ್ನೇಹಿತರೊಂದಿಗೆ ಸೇರಿ ಅವಳ ಜೊತೆಗಿನ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿ ಹಣದ ಬೇಡಿಕೆ ಇರಿಸಿದ್ದಾಳೆ ಎಂಬುದು ಮಾಜಿ ಅಧ್ಯಕ್ಷರ ಗಂಭೀರ ಆರೋಪ ಮಾಡಿದ್ದಾರೆ. ಕಳೆದ 45 ದಿನಗಳಿಂದ ನಡೆದಿದ್ದ ಈ ಹೈಡ್ರಾಮಾ ನಡೆದಿದೆ. ಫೇಸ್ ಬುಕ್ ಮೂಲಕ ಯುವತಿಯು ಪರಿಚಯವಾಗಿದ್ದಳು. ಸ್ನೇಹ ಬೆಳೆಸಿ ದಿನ ಕಳೆದಂತೆ ಹನಿ ಟ್ರ್ಯಾಪ್ ಗೆ ಸಿಲುಕಿಸಿದ್ದಳು ಎಂದು ಆರೋಪಿಸಲಾಗಿದೆ. ಯುವತಿಯು ಗುಬ್ಬಿ ಪಟ್ಟಣ ಪಂಚಾಯಿತಿ ಹಾಲಿ ಸದಸ್ಯ ಆಗಿರುವ ಜಿ.ಎನ್.ಅಣ್ಣಪ್ಪಸ್ವಾಮಿ ಬರೋಬ್ಬರಿ 20 ಲಕ್ಷ ರೂಗಳ ಹಣದ ಬೇಡಿಕೆಯಿಟ್ಟಿದ್ದಳು ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆ…
ತುಮಕೂರು: ಒತ್ತಡದ ಕೆಲಸದಲ್ಲಿ ನಿರತರಾಗಿರುವ ಪೊಲೀಸ್ ಸಿಬ್ಬಂದಿಗಳು ಚಟುವಟಿಕೆಯಿಂದ ಇರಲು ಅನೇಕ ರೀತಿಯ ಕ್ರೀಡಾಕೂಟಗಳಲ್ಲಿ ತೊಡಗಿಸಿಕೊಳ್ಳುತ್ತಾರೆ, ಅದೇ ರೀತಿ ತುಮಕೂರು ಪೊಲೀಸರು ವಿಭಿನ್ನವಾಗಿ ʼಕುರುಕ್ಷೇತ್ರʼ ನಾಟಕದಲ್ಲಿ ಪಾತ್ರಧಾರಿಗಳಾಗಿ ಭಾಗವಹಿಸಿರುವುದು ವಿಶೇಷವಾಗಿತ್ತು. ಹೌದು ತುಮಕೂರು ಜಿಲ್ಲಾ ಪೊಲೀಸ್ ಕವಾಯಲು ಮೈದಾನದಲ್ಲಿ ಕುರುಕ್ಷೇತ್ರ ನಾಟಕವನ್ನು ಪೊಲೀಸ್ ಸಿಬ್ಬಂದಿಗಳು ಆಯೋಜಿಸಿದ್ದರು. ಅರ್ಜುನ ಪಾತ್ರಧಾರಿಯಾಗಿ ತಿಲಕ್ ಪಾಕ್ ಸಕಲ್ ಇನ್ಸ್ ಪೆಕ್ಟರ್ ಪುರುಷೋತ್ತಮ್, ದುರ್ಯೋಧನನಾಗಿ ತುಮಕೂರು ನಗರ ಡಿವೈಎಸ್ಪಿ ಚಂದ್ರಶೇಖರ್, ಶ್ರೀಕೃಷ್ಣನ ಪಾತ್ರಧಾರಿಯಾಗಿ ತುಮಕೂರು ನಗರ ಠಾಣೆಯ ಎಲ್.ನರಸಿಂಹರಾಜು ಸೇರಿದಂತೆ ಕುರುಕ್ಷೇತ್ರದ ಎಲ್ಲಾ ಪಾತ್ರಗಳಲ್ಲಿ ಪೊಲೀಸರು, ಇಲಾಖೆ ಅಧಿಕಾರಿಗಳು ನಟಿಸಿ ತಮ್ಮ ಕಲಾಪ್ರೌಢಿಮೆಯನ್ನು ಪ್ರದಶಿಸಿದರು. ಈ ಮೂಲಕ ಪೊಲೀಸರ ಸಿಬ್ಬಂದಿಗಳು ಸಹ ತಮ್ಮೊಳಗೆ ಅಡಗಿರುವ ರಂಗಕಲೆಯನ್ನು ಅನಾವರಣಗೊಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ರೈಲು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಾರನಗೆರೆ ಗೇಟ್ ಸಮೀಪ ನೆನ್ನೆ ರಾತ್ರಿ ನಡೆದಿದೆ. ಗಾರೆ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ(31) ಬಿನ್ ವೆಂಕಟೇಶ ಮೂರ್ತಿ ಎಂಬವರು ಮೃತಪಟ್ಟವರಾಗಿದ್ದಾರೆ. ನಿನ್ನೆ ರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ನರಸಿಂಹಮೂರ್ತಿ ಅವರ ತಲೆ ಹಾಗೂ ಬೆನ್ನಿಗೆ ಗಂಭೀರವಾಗಿ ಏಟು ತಗುಲಿತ್ತು. ಕಿವಿ ಹಾಗೂ ಮೂಗಿನಿಂದ ರಕ್ತ ಸ್ರಾವವಾಗಿರುವುದು ಕಂಡು ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಅರಸೀಕೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4