Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತಿಪಟೂರು: ತಾಲೂಕಿನ ಶಕ್ತಿ ದೇವತೆಯಾದ 33 ಗ್ರಾಮಗಳ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಮೂಲಸ್ಥಾನ ಶ್ರೀ ಕೆಂಪಮ್ಮ ದೇವಿ ದೇವಾಲಯವಿದೆ. ಸಂಜೆ ಪೂಜೆ ನಂತರ ರಾತ್ರಿ ವೇಳೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರದಲ್ಲಿ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದು ಅದು ಸಂಪೂರ್ಣ ಬಾಗಿಲಿಗೆ ಬೆಂಕಿ ಹೊತ್ತಿಕೊಂಡಿದೆ. ವಾಮಾಚಾರ ಮಾಡಿ ದೇವಾಲಯಕ್ಕೆ ದಿಗ್ಬಂದನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಿನ ಜಾವ ಪೂಜಾ ಕೈಂಕರ್ಯಗಳನ್ನು ನಡೆಸಲು, ದೇವಾಲಯವನ್ನು ಸ್ವಚ್ಛತೆ ಮಾಡಲು ಬಂದಾಗ ಗ್ರಾಮಸ್ಥರು ನೋಡಿ ಬೆಂಕಿ ನಂದಿಸಿದ್ದಾರೆ. ಬಾಗಿಲು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಹಳೇ ಸೀರೆ, ವಾಮಾಚಾರ ವಸ್ತುಗಳು ಸುಟ್ಟು ಸ್ಥಿತಿಯಲ್ಲಿ ದೊರೆತಿದ್ದು, ಸ್ಥಳೀಯ ಗ್ರಾಮಸ್ಥರು, ಭಕ್ತರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು…
ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ನಗರದ ಎಂಪ್ರೆಸ್ ಪದವಿಪೂರ್ವ ಕಾಲೇಜಿನ ಆಡಿಟೋರಿಯಂನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ–1ರ ಸಂಬಂಧ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟು 129 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ವಿದ್ಯಾರ್ಥಿಗೂ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಾತಾವರಣ ಹಾಗೂ ಏಕ ರೀತಿಯಾದ ಗುಣಮಟ್ಟದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು. ಪರೀಕ್ಷಾ ಕಾರ್ಯವು ಅತ್ಯಂತ ಸೂಕ್ಷ್ಮ ಕಾರ್ಯವಾಗಿದ್ದು, ಯಾವುದೇ ಸಮಯದಲ್ಲಿ ತೊಂದರೆಗಳು ಸಂಭವಿಸಿದಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು…
ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1, 2, 3; ಗ್ರಾಮೀಣ ಉಪವಿಭಾಗ–1, 2; ಗುಬ್ಬಿ ಹಾಗೂ ನಿಟ್ಟೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಕೃಷಿ ನೀರಾವರಿ ಪಂಪ್ ಸೆಟ್‌ಗಾಗಿ 50 ರೂ. ಶುಲ್ಕ ಪಾವತಿಸಿ ನೋಂದಾಯಿಸಿಕೊಂಡಿರುವ ರೈತರು ಉಳಿದ ನಿಗಧಿತ ಶುಲ್ಕ 10,000 ರೂ.ಗಳನ್ನು ಪಾವತಿಸಿ ಸಕ್ರಮೀಕರಣಗೊಳಿಸಿಕೊಳ್ಳುವ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಗ್ರಾಹಕರು ನಿಗದಿತ ಶುಲ್ಕ ಹಾಗೂ ಅಗತ್ಯ ದಾಖಲೆಗಳನ್ನು ಮಾರ್ಚ್ 31ರೊಳಗಾಗಿ ಸಂಬಂಧಿಸಿದ ಉಪವಿಭಾಗ ಶಾಖೆಗಳಿಗೆ ಸಲ್ಲಿಸಿ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು ಸಕ್ರಮೀಕರಣಗೊಳಿಸಿಕೊಳ್ಳಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮೈಸೂರು ಜಿಲ್ಲೆ ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ದಾಖಲಾತಿಗಾಗಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 7ನೇ ತರಗತಿ ಉತ್ತೀರ್ಣರಾಗಿರಬೇಕು. 8ನೇ ತರಗತಿ ದಾಖಲಾತಿಗೆ ಪರಿಶಿಷ್ಟ ಜಾತಿಗೆ ಸೇರಿದ 2 ಗಂಡು ಮಕ್ಕಳು ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ 2 ಗಂಡು ಮಕ್ಕಳನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 7ನೇ ತರಗತಿ ಅಂಕಪಟ್ಟಿ, ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರು ಸಂಬAಧಿಸಿದ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರ/ಗುರುತಿನ ಚೀಟಿಯೊಂದಿಗೆ ಮಾರ್ಚ್ 24ರೊಳಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ, ಮೈಸೂರು–57200020 ಇಲ್ಲಿ ಏಪ್ರಿಲ್ 12ರಂದು ಬೆಳಿಗ್ಗೆ 10 ಗಂಟೆಗೆ ಪ್ರವೇಶ…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ನಿರ್ಮಾಣ್ ಆರ್ಗನೈಜೇಷನ್ ಅಸೋಸಿಯೇಷನ್ ಹಾಗೂ ಅನನ್ಯ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಅವರ ಸಹಯೋಗದಲ್ಲಿ ಮಾರ್ಚ್ 17ರಂದು ನಗರದ ಬಿ.ಹೆಚ್. ರಸ್ತೆ ಟೌನ್ ಹಾಲ್ ಸರ್ಕಲ್ ಬಳಿಯಿರುವ ಅನನ್ಯಾ ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮೇಳದಲ್ಲಿ 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು. ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಶಾಲಾ ದಾಖಲಾತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಮೇಳದಲ್ಲಿ 18 ರಿಂದ 35 ವರ್ಷದೊಳಗಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0816–2278488, 9071021143, 9513136642, 9916193797 ಹಾಗೂ 9632220899ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಸಮಾಜದಲ್ಲಿ ಸ್ತ್ರೀಯರು ವೃತ್ತಿ ಕೌಶಲ್ಯಗಳನ್ನು ಬೆಳಸಿಕೊಂಡು ಎಲ್ಲಾ ವಿಷಯಗಳ ಸಮಗ್ರ ಅಧ್ಯಯನ ಮಾಡಬೇಕೆಂದು ಶ್ರೀ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಶಾಲಿನಿ ಎಂ. ಕರೆ ನೀಡಿದರು. ನೆಹರು ಯುವ ಕೇಂದ್ರ, ತಿಪಟೂರಿನ ಡಾ.ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಔಷಧ ಮಹಾವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ತ್ರೀಯರು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲಾಗಲೀ ದೂರದೃಷ್ಠಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ನೆಹರು ಯುವ ಕೇಂದ್ರದ ಕಾರ್ಯಕ್ರಮ ಅಧಿಕಾರಿ ರಾಜಶೇಖರ್ ಕೆ ಮಾತನಾಡಿ, ಪೌಷ್ಠಿಕ ಆಹಾರವನ್ನು ಸೇವಿಸಿ ಆರೋಗ್ಯದ ಕಡೆ ಹೆಚ್ಚು ಗಮನವನ್ನು ಹರಿಸಬೇಕು. ಮಹಿಳೆಯರು ಬೇರೆಯವರಿಂದ ಏನನ್ನೂ ನಿರೀಕ್ಷಿಸದೇ ತಮ್ಮದೇ ಆದ ರೀತಿಯಲ್ಲಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಎಂದರು. ಅಧ್ಯಕ್ಷೀಯ ನುಡಿಗಳನ್ನಾಡಿದ ಶ್ರೀಸಿದ್ದಗಂಗಾ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಸುರೇಶ್ ವಿ. ಕುಲಕರ್ಣಿ ಮಹಿಳೆಯರು…
ಚಿಕ್ಕನಾಯಕನಹಳ್ಳಿ: ಪಟ್ಟಣದ ಪುರಸಭೆಯಲ್ಲಿ ಆರ್ಥಿಕ ಲೋಪದೋಷಗಳ ಅನುಮಾನ ವ್ಯಕ್ತಪಡಿಸಿರುವ ಪುರಸಭಾ ಸದಸ್ಯ ರೇಣುಕಾಪ್ರಸಾದ್, ತಮ್ಮ RTI ಅರ್ಜಿಗೆ ತಕ್ಕ ಉತ್ತರ ನೀಡಲಾಗಿಲ್ಲ ಎಂಬ ಕಾರಣಕ್ಕಾಗಿ ಪುರಸಭೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ರೇಣುಕಾಪ್ರಸಾದ್ ಹೇಳುವಂತೆ, ಪುರಸಭೆಯ ಜಮಾ–ಖರ್ಚು ವಿವರಗಳ ಕುರಿತು ಮಾಹಿತಿ ಕೇಳಿದರೂ, ಅಧಿಕಾರಿಗಳು ಸ್ಪಷ್ಟವಾದ ಉತ್ತರ ನೀಡಲು ತಯಾರಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ಇಲ್ಲದ ಹಿನ್ನೆಲೆಯಲ್ಲಿ, ಅವರು ಪುರಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ಆರ್ ಟಿಐ ಮಾಹಿತಿಗಾಗಿ ಪ್ರತಿಭಟನೆ ನಡೆಸುವ ಹಂತಕ್ಕೆ ಬಂದಿದ್ದಾರೆ. “ಸಾರ್ವಜನಿಕ ಹಣದ ಖರ್ಚು ಬಳಕೆಯಾಗಿರುವ ಬಗ್ಗೆ ಜನರಿಗೆ ಸ್ಪಷ್ಟತೆ ಅಗತ್ಯವಿದೆ. ಆದರೆ ಪುರಸಭೆ ಅಧಿಕಾರಿಗಳು ಮಾಹಿತಿ ನೀಡಲು ತಯಾರಿಲ್ಲ. ಇದು ಪ್ರಜಾಪ್ರಭುತ್ವದ ಅವಮಾನ!” ಎಂದು ಪ್ರತಿಭಟನೆಯ ವೇಳೆ ರೇಣುಕಾಪ್ರಸಾದ್ ಕಿಡಿಕಾರಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬೆಸ್ಕಾಂ ಗ್ರಾಮೀಣ ಉಪ ವಿಭಾಗ–2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೆಗ್ಗೆರೆ ಹೊಸ ಬಡಾವಣೆ, ವಕ್ಕೋಡಿ, ಭೀಮಸಂದ್ರ ಹಳೆಗ್ರಾಮ, ಹೆಗ್ಗೆರೆ ಹಳೆಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ವಿದ್ಯುತ್ ವ್ಯತ್ಯಯ: ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 12ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಓಡೆಯರಪುರ, ಹೊನ್ನೇನಹಳ್ಳಿ, ಕಾರೇನಹಳ್ಳಿ, ಹೊನಸಿಗೆರೆ ಫೀಡರ್ ವ್ಯಾಪ್ತಿಗೊಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಗ್ರಾಮದಲ್ಲಿ ಮಾರ್ಚ್ 6 ರಿಂದ 18ರವರೆಗೆ ನಡೆಯಲಿರುವ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆ ಪ್ರಯುಕ್ತ ಮಾ.13ರಂದು ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರೆ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಶ್ರೀಕ್ಷೇತ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ನಿಷೇಧಾದೇಶವು ಮಾ. 12ರ ಸಂಜೆ 6 ರಿಂದ ಮಾ.14ರ ಸಂಜೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲ ತರಹದ ಮದ್ಯದಂಗಡಿಗಳನ್ನು ಮುಚ್ಚಬೇಕೆಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಜಿಲ್ಲೆಯ ಗುಬ್ಬಿ ಪಟ್ಟಣದ ಬೆಂಚಗೆರೆ ರೈಲ್ವೇ ಗೇಟ್ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ರೈಲು ಚಲಿಸುವಾಗ ರೈಲ್ವೆ ಗೇಟ್ ಮುಚ್ಚುವುದರಿಂದ ಸುಮಾರು 2 ಕಿ.ಮೀ.ನಷ್ಟು ವಾಹನ ದಟ್ಟಣೆ ಉಂಟಾಗಿ ವಾಹನ ಸಂಚಾರ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತ್ವರಿತವಾಗಿ ಸೇತುವೆ ನಿರ್ಮಾಣ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಒಟ್ಟು 1.6 ಎಕರೆ ಭೂಸ್ವಾಧೀನ ಅಗತ್ಯವಿದ್ದು, ಆದಷ್ಟು ಬೇಗ ಭೂಸ್ವಾಧೀನಪಡಿಸಿಕೊಂಡು ಭೂಮಾಲೀಕರಿಗೆ ಪರಿಹಾರ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶೀಘ್ರ ಭೂಸ್ವಾಧೀನ ಪ್ರಕ್ರಿಯೆ ಮುಗಿಸಿ, ಕಾಮಗಾರಿಗೆ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಥಳೀಯರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ಭೂಮಾಪನ…