Author: admin

ಹಾಸನ: ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ನಟ ಡಾಲಿ ಧನಂಜಯ ಧನ್ಯತಾ ದಂಪತಿ ನಿನ್ನೆ ಯುಗಾದಿ ಹಬ್ಬ ಆಚರಿಸಿದರು. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಡಾಲಿ ಧನಂಜಯ ಧನ್ಯತಾ ದಂಪತಿ ಭೇಟಿ ಕೊಟ್ಟಿದ್ದಾರೆ. ನೆಲದ ಮೇಲೆ ಕುಳಿತು ದಂಪತಿ ಪ್ರಸಾದ ಸ್ವೀಕರಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ ದಂಪತಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ನೊಂದು ಮಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ರಕ್ಷಿತ್ ಬಾಬು (24) ಮೃತಪಟ್ಟ ಯುವಕನಾಗಿದ್ದಾನೆ. ಯುವಕ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರಕ್ಷಿತ್ ನ ತಾಯಿ ಚಂದ್ರಿಕಾ ಅವರು ಸಾಲ ಬಾಧೆಯ ಹಿನ್ನೆಲೆ ಒಂದೂವರೆ ತಿಂಗಳ ಹಿಂದೆಯಷ್ಟೇ ನೇಣಿಗೆ ಶರಣಾಗಿದ್ದರು. ಇದರಿಂದ ರಕ್ಷಿತ್ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಮಂಡ್ಯ: ನಾಮ ಹಾಕಿದ ಮಾತ್ರಕ್ಕೆ ಯಾರೂ ಹಿಂದೂ ಆಗುವುದಿಲ್ಲ, ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದರೆ ಮಾತ್ರ ಹಿಂದೂತ್ವ ಆಗುತ್ತದೆಯೇ? ಹಿಂದುತ್ವದಲ್ಲಿ ಒಂದು ಶಿಸ್ತಿದೆ, ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಸಂಬಂಧ ಅವರು ಪ್ರತಿಕ್ರಿಯೆ ನೀಡಿದರು. ಹಿಂದುತ್ವವಾದಿ ಎಂದು ಏನು ಬೇಕಾದರೂ ಮಾತನಾಡುವುದಲ್ಲ. ಮಾತನಾಡುವಾಗ ಪ್ರಜ್ಞೆ ಇರಬೇಕು. ಮಾತಿನ ಮೇಲೆ ನಿಗಾವಹಿಸಬೇಕು ಎಂದರು. ಒಂದು ಸಂಘಟನೆಯಲ್ಲಿದ್ದಾಗ ಮಾತು ಗಡಿ ಮೀರಿ ಹೋಗಬಾರದು. ಪಕ್ಷದ ಸಮಿತಿ ಒಳಗೆ ಮಾತನಾಡಬೇಕು. ಬೀದಿಯಲ್ಲಿ ಮಾತನಾಡುವುದು ಹಿಂದುತ್ವದ ಲಕ್ಷಣ ಅಲ್ಲ ಎಂದು ಭಟ್ ಪ್ರತಿಪಾದಿಸಿದರು. ಹಿಂದುತ್ವದಲ್ಲಿ ಶಿಸ್ತು ಇದೆ. ಅದು ಇಲ್ಲದಿದ್ದರೆ ಹಿಂದುತ್ವವಾದಿ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತಿನಿಂದ ಇರದಿದ್ದರೆ ಇಂತಹ ಸಮಸ್ಯೆ ಆಗುತ್ತವೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಘೋರ ದುರಂತ ನಡೆದಿದ್ದು, ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ಕೃಷ್ಣಾನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HEkqDgrW2BlJLad5kZ1DX7

Read More

ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್ ಎಎಲ್ ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ…

Read More

ನವದೆಹಲಿ: ಬೇಸಿಗೆ ರಜೆಯಲ್ಲಿ ಮಕ್ಕಳು ರಚನಾತ್ಮಕ ಮತ್ತು ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದರು. ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 120 ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೇಸಿಗೆ ರಜೆಯಲ್ಲಿ ಮಕ್ಕಳು ಹೊಸ ಕಲಿಕಾ ಅವಕಾಶಗಳನ್ನು ಒದಗಿಸುವ ಸರ್ಕಾರದ ಪ್ರಯತ್ನಗಳ ಬಗ್ಗೆ ಹೇಳಿದರು. ಬೇಸಿಗೆಯ ದೀರ್ಘ ದಿನಗಳಲ್ಲಿ ವಿದ್ಯಾರ್ಥಿಗಳು ಹೊಸ ಹವ್ಯಾಸಗಳನ್ನು ಅಳವಡಿಸಿಕೊಂಡು ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದ ಅವರು ಇದೇ ವೇಳೆ ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು. ನನ್ನ ಬಾಲ್ಯದ ದಿನಗಳು ನನಗೆ ನೆನಪಿದೆ, ಆಗ ನಾನು ಮತ್ತು ನನ್ನ ಸ್ನೇಹಿತರು ಎಲ್ಲಾ ರೀತಿಯ ಆಟಗಳಲ್ಲಿ ತೊಡಗುತ್ತಿದ್ದೆವು, ಆದರೆ ಅದೇ ಸಮಯದಲ್ಲಿ, ನಾವು ಯಾವಾಗಲೂ ರಚನಾತ್ಮಕವಾಗಿ ಏನನ್ನಾದರೂ ಮಾಡುತ್ತಿದ್ದೆವು ಮತ್ತು ಹೊಸ ವಿಷಯಗಳನ್ನು ಕಲಿತೆವು ಎಂದರು. ಬೇಸಿಗೆಯ ದಿನಗಳು ದೀರ್ಘವಾಗಿರುತ್ತವೆ, ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಮಾಡಲು ಸಾಕಷ್ಟು ಸಮಯವನ್ನು ನೀಡುತ್ತದೆ. ಹೊಸ ಹವ್ಯಾಸವನ್ನು ಅಳವಡಿಸಿಕೊಳ್ಳಲು ಮತ್ತು ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಇದು…

Read More

ಬೆಂಗಳೂರು: ಯತ್ನಾಳ್ ಉಚ್ಚಾಟನೆಯಲ್ಲಿ ನನ್ನ ಹಾಗೂ ಯಡಿಯೂರಪ್ಪಅವರ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್ ಉಚ್ಛಾಟನೆ ನಮ್ಮ ತೀರ್ಮಾನವೂ ಅಲ್ಲ. ನಾವು ಅವರ ಉಚ್ಛಾಟನೆಗೆ ಜವಾಬ್ದಾರರೂ ಅಲ್ಲ ಎಂದರು. ಕೇಂದ್ರದ ವರಿಷ್ಠರು ಯತ್ನಾಳ್ ಅವರಿಗೆ ಹಲವು ಬಾರಿ ನೋಟಿಸ್ ಕೊಟ್ಟು ತಿದ್ದುವ ಕೆಲಸ ಮಾಡಿದ್ದಾರೆ. ನಾನೂ ಕೂಡಾ ಎಲ್ಲವನ್ನು ಸರಿಪಡಿಸಿಕೊಳ್ಳೋಣ ಎಂದು ಯತ್ನಾಳ್ ಅವರಿಗೆ ಹೇಳಿದ್ದೆ ಎಂದರು. ಸದನ ನಡೆಯುವಾಗ ನಾನೂ ಕೂಡಾ ಅವರನ್ನು ವೈಯಕ್ತಿಕ ಭೇಟಿ ಮಾಡಿ ಮಾತನಾಡಿದ್ದೆ, ಭೋಜನಕ್ಕೆ ಆಹ್ವಾನಿಸಿದ್ದೆ. ಯತ್ನಾಳ್ ಜೊತೆಗಿನ ಗೊಂದಲಗಳನ್ನು, ಸಮಸ್ಯೆಗಳನ್ನು ನನ್ನ ಕಡೆಯಿಂದ ಸರಿಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು. ಹೈಕಮಾಂಡ್ನವರು ಎಲ್ಲವನ್ನೂ ತುಲನೆ ಮಾಡಿ ಕೊನೆಗೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ, ಯತ್ನಾಳ್ ಅವರ ಉಚ್ಚಾಟನೆಯನ್ನು ನಾನು ಸಂಭ್ರಮಿಸಲ್ಲ. ಹಾಗೊಂದು ವೇಳೆ ನನಗೆ ಸಂಭ್ರಮಿಸುವ ಮನಸ್ಥಿತಿ ಇದೆ ಅಂತಾದರೆ ನಾನು ರಾಜ್ಯಾಧ್ಯಕ್ಷ ಆಗಲು ನಾಲಾಯಕ್ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ ಗಳು ಬ್ರಿಟೀಷರ ಕಾಲದ ಟೋಪಿಯಿಂದ ಮುಕ್ತಿ ಪಡೆಯಲಿದ್ದಾರೆ. ಈ ಬೇಡಿಕೆ ಬಹು ವರ್ಷಗಳ ಬೇಡಿಕೆಯಾಗಿತ್ತು. ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ ಎಂದು ಹೇಳಲಾಗಿದೆ. ಬ್ರಿಟೀಷರ ಕಾಲದ ಟೋಪಿಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಿತ್ತು. ಪ್ರತಿಭಟನೆಯ ಸಂದರ್ಭಗಳಲ್ಲಿ ಓಡುವಾಗ ಟೋಪಿ ಕೆಳಗೆ ಬಿದ್ದರೆ ಸಾರ್ವಜನಿಕವಾಗಿ ಅವಮಾನವಾಗುತ್ತಿತ್ತು. ಪ್ರಸ್ತುತ ಸ್ಮಾರ್ಟ್ ಪೀಕ್ ಹ್ಯಾಟ್ ಬದಲಾವಣೆ ಮಾಡಿದರೆ, ಈ ಸಮಸ್ಯೆಗಳಿಂದ ಪೊಲೀಸರಿಗೆ ಮುಕ್ತಿ ಸಿಗಲಿದೆ. ಗ್ಲೋಚ್ ಟೋಪಿಯಿಂದ ಪೊಲೀಸ್ ಕಾನ್ಸ್ ಟೇಬಲ್ ಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ವರದಿ ನೀಡಿತ್ತು. ಈಗಾಗಲೇ ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳಿಗೆ ಪೀಕ್ ಕ್ಯಾಪ್ ಗಳನ್ನು ನೀಡಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಲು…

Read More

ನಾಗ್ಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಗ್ಪುರದ ಡಾ.ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಎರಡನೇ ಸರ್ಸಂಘಚಾಲಕ್ (ಮುಖ್ಯಸ್ಥ) ಎಂಎಸ್ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ನಮನ ಸಲ್ಲಿಸಿದರು. RSS ಆಡಳಿತ ಕೇಂದ್ರ ಕಚೇರಿಯಾದ ರೇಶಿಂಬಾಗ್ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆಗಿದ್ದರು. ಈ ಸ್ಮಾರಕಗಳು ಭಾರತೀಯ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಸಂಘಟನೆಯ ಮೌಲ್ಯಗಳಿಗೆ ಸಮರ್ಪಿತವಾಗಿವೆ ಎಂದು ಪ್ರಧಾನಿ ಮೋದಿ ಸ್ಥಳದಲ್ಲಿದ್ದ ಸಂದೇಶ ಪುಸ್ತಕದಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬಿಲಾಸ್ ಪುರ: ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಎಸ್ ಯುವಿ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ. ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೆಂಡ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಮಿ ಗ್ರಾಮದ ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎಂಟು ಜನರೊಂದಿಗೆ ಎಸ್ ಯುವಿ ಮನೇಂದ್ರಗಢ—ಚಿರ್ಮಿರಿ–ಭಾರತ್ ಪುರ (ಎಂಸಿಬಿ) ಜಿಲ್ಲೆಯಿಂದ ಬಿಲಾಸ್ಪುರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೋನ್ ನದಿಯ ಸೇತುವೆ ತಲುಪುವಷ್ಟರಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು, ನದಿಗೆ ಬಿದ್ದಿದೆ. ಅಪಘಾತದಲ್ಲಿ ಮಹಿಳಾ ಪಾದಚಾರಿ ಮತ್ತು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಸ್ ಯುವಿಯಲ್ಲಿದ್ದ ಇತರ ಏಳು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More