Subscribe to Updates
Get the latest creative news from FooBar about art, design and business.
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
Author: admin
ತುರುವೇಕೆರೆ: ಅಂತರಾಷ್ಟ್ರೀಯ ಹಾಗೂ ಏಶಿಯನ್ ಥ್ರೋಬಾಲ್ ಅಧೀನದಲ್ಲಿರುವ ಥ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಛತ್ತೀಸ್ಗರ್ ರಾಜ್ಯದ ಬಿಲಾಯಿ ನಗರದಲ್ಲಿ ದಿನಾಂಕ 28 –4– 2025ರಿಂದ ದಿನಾಂಕ 30—04–2025 ರವರೆಗೆ 32ನೇ ಸಬ್ ಜೂನಿಯರ್ ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದಲ್ಲಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದ ಎಸ್ ಬಿಜಿ ಶಾಲೆಯ ವಿದ್ಯಾರ್ಥಿ ಹಾಗೂ ಕಲ್ಪನಾ ಮುನಿರಾಜು ದಂಪತಿ ಪುತ್ರ ಮನೀತ್ ಎಂ. ಹಾಗೂ ನಿವೃತ್ತ ಸೈನಿಕರು ದಿವಂಗತ ತಿಮ್ಮಾಚಾರ್ ಅವರ ಮೊಮ್ಮಗಳು ಹಾಗೂ ವಿನೋದ್ ಪುತ್ರಿ ಕುಮಾರಿ ರೀತು ಎಂ.ವಿ. ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳು ರಾಜ್ಯಕ್ಕೆ ಮಾತ್ರವಲ್ಲದ ರಾಷ್ಟ್ರದಲ್ಲಿಯೂ ಕೂಡ ಯಶಸ್ಸನ್ನು ಗಳಿಸಲಿ ಎಂದು ಕಲ್ಪತರು ಆಶ್ರಮದ ಶ್ರೀ ಶ್ರೀ ಪ್ರಸನ್ನ ನಾಥ ಸ್ವಾಮೀಜಿಯವರು ಪ್ರಧಾನ ಕಾರ್ಯದರ್ಶಿಗಳು ಆದಿಚುಂಚನಗಿರಿ ಮಹಾಸಂಸ್ಥಾನ ಮಠ. ಎಸ್ ಬಿ ಜಿ ಶಾಲೆಯ ಮುಖ್ಯೋಪಾಧ್ಯಾಯರು ಎಲ್ಲ ಭೋದಕ, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳ…
ಬೀದರ್: ಸಹೋದರಿಯನ್ನು ಪ್ರೀತಿಸಿದಕ್ಕೆ ಯುವಕನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬಸವ ಕಲ್ಯಾಣ ತಾಲ್ಲೂಕಿನ ನಿರಗೂಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನಿರಗೂಡಿ ಗ್ರಾಮದ ನಿವಾಸಿ ಪ್ರಶಾಂತ್ ಬಿರಾದಾರ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ ತಮ್ಮ ಪಕ್ಕದ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದನು. ಇದರಿಂದ ಕೋಪಗೊಂಡ ಯುವತಿಯ ಸಹೋದರರು, ತಮ್ಮ ಸಹೋದರಿಯೊಂದಿಗಿನ ಸಂಬಂಧ ಬಿಟ್ಟು ಬಿಡುವಂತೆ ಈ ಹಿಂದೆ ಹಲವು ಬಾರಿ ಸೂಚಿಸಿದ್ದರು. ಇಷ್ಟಾದರೂ ಕೂಡ ಪ್ರಶಾಂತ್ ತನ್ನ ಪ್ರೀತಿ ಮುಂದುವರೆಸಿದ್ದ. ಇದರಿಂದ ಕೋಪಗೊಂಡ ಯುವತಿ ಸಹೋದರರಾದ ಯಲ್ಲಾಲಿಂಗ್ ಹಾಗೂ ಪ್ರಶಾಂತ್ ಎನ್ನುವವರು ಶುಕ್ರವಾರ ರಾತ್ರಿ ಗ್ರಾಮದ ವಾಲ್ಮೀಕಿ ವೃತ್ತದ ಬಳಿ ಪ್ರಶಾಂತ್ ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಆಗಮಿಸುತ್ತಿದ್ದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಲ್ಲದೆ ಜಿಲ್ಲೆಯಲ್ಲಿ ರಂಜಾನ್ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಯಾವ್ದೆ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಂದೋಬಸ್ತ್ ಹಾಕಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಈ ಬಾರಿ ತೆಂಗು ಬೆಳೆಗಾರರಿಗೆ ಬಂಪರ್ ಬೆಲೆ ಲಭಿಸುತ್ತಿದೆ. ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ಬೆಲೆ ಕ್ವಿಂಟಾಲ್ ಗೆ ಗರಿಷ್ಠ 17,500 ರೂ. ಸಿಕ್ಕಿರುವುದು ರೈತಾಪಿ ವರ್ಗದ ಸಂತೋಷಕ್ಕೆ ಕಾರಣವಾಗಿದೆ. ಪ್ರಸ್ತುತ ವಷದಲ್ಲಿ ಈ ರೀತಿಯ ಬೆಲೆ ಸಿಗುತ್ತಿರುವುದು ರೈತರಲ್ಲಿ ಸಂತಸ ಮನೆ ಮಾಡಿದೆ. ಈ ರೀತಿ ನಿರೀಕ್ಷೆಗೂ ಮೀರಿ ಕೊಬ್ಬರಿ ದರ ಹೆಚ್ಚಳಕ್ಕೆ ಇಳುವರಿ ಕಡಿಮೆಯಾಗಿರುವುದೇ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. ಕೊಬ್ಬರಿ ಧಾರಣೆ ಮಾರುಕಟ್ಟೆಯಲ್ಲಿ ಶುಕ್ರವಾರ ಕನಿಷ್ಟ ಕ್ವಿಂ. ಗೆ 17,000 ರೂ. ಗೆ ಮತ್ತು ಗರಿಷ್ಟ 17500 ರೂ. ಗೆ ಮಾರಾಟವಾಗಿದೆ. ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಟೆಂಡರ್ ನಡೆಯುತ್ತಿದ್ದು, ರವಾನೆದಾರರು ಉತ್ತರ ಭಾರತದ ವ್ಯಾಪಾರಿಗಳೊಂದಿಗೆ ಆಂತರಿಕವಾಗಿ ವ್ಯವಹರಿಸಿ ಮತ್ತೊಂದು ದರ ಪಡೆಯುವುದು ಸಾಧ್ಯವಾಗುತ್ತಿಲ್ಲ. ಇದರಿಂದ ವ್ಯಾಪಾರದಲ್ಲಿ ಲಾಭ ಕಡಿಮೆಯಾಗಿರುವುದು ರವಾನೆದಾರರ ನಿದ್ದೆ ಕೆಡಿಸಿದ್ದು ಮೊದಲಿನಂತೆ ವಾರದಲ್ಲಿ ನಾಲ್ಕು ದಿನ ಹರಾಜು ನಡೆಸಲು ಅವಕಾಶ ನೀಡುವಂತೆ ಲಾಬಿ ಮಾಡತೊಡಗಿದ್ದಾರೆ…
ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಕುರಂಕೋಟೆ ಗ್ರಾಮದಲ್ಲಿ ಸಂಸ್ಥೆಯ 798ನೇ ಕೆರೆ ಅಭಿವೃದ್ಧಿ ಕಾರ್ಯ ನಡೆಸಿ ಗ್ರಾಮ ಪಂಚಾಯಿತಿಗೆ ಸಾರ್ವಜನಿಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಉದ್ಘಾಟನೆಯನ್ನ ನೆರವೇರಿಸಿ ತಮ್ಮ ಅಮೃತಾಸ್ಥದಿಂದ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿಗೊಂಡ ಕೆರೆಯನ್ನು ಹಸ್ತಾಂತರ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುರಂಕೋಟೆ ಗ್ರಾಮ ಪಂಚಾಯತಿಯ ಅಧ್ಯಕ್ಷೆ ತಿಮ್ಮಕ್ಕ ವಹಿಸಿಕೊಂಡಿದ್ದರು. ಕುರಂಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ (ದೊಡ್ಡಕಾಯಪ್ಪ) ದೇವಸ್ಥಾನದ ಬಳಿ ಇರುವ ಗುಂಡು ತೋಪಿನಲ್ಲಿರುವ ಕೆರೆಯನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಮ್ಮೂರು ನಮ್ಮ ಕೆರೆ ಎಂಬ ಯೋಜನೆಯಡಿ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಕೆರೆ ಅಭಿವೃದ್ಧಿ ಪೂರ್ಣಗೊಂಡ ನಂತರ ಕೆರೆ ಮುಂಭಾಗ ನಾಮಫಲಕ ಅನಾವರಣ ಮಾಡಲಾಗಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಇದರಿಂದಾಗಿ ಸಮಾಜದಲ್ಲಿ ಪ್ರಗತಿ ಹಾಗೂ ಬದಲಾವಣೆ…
ಬೀದರ್: ಔರಾದ್ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇತರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಹಿಂದೇಟು ಹಾಕಲಾಗುತ್ತಿದೆ. ನಿಜವಾದ ಫಲಾನುಭವಿಗಳಿಗೆ ಸಾಲ ದೊರಕಿಸಿ ಕೊಡುವಂತೆ ಇಂಡಿಯನ್ ಯೂಥ್ ಕಾಂಗ್ರೆಸ್ ಆಗ್ರಹಿಸಿದೆ. ಮುಖಂಡ ಅನೀಲ್ ಹೇಡೆ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿ. ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬರುವ ಸಾಲದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಾಲ ನೀಡಲು ಸ್ಥಳೀಯ ಬ್ಯಾಂಕ್ ಗಳ ಸಿಬ್ಬಂದಿಯವರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಸರಕಾರದ ಯೋಜನೆಗಳು ಫಲಾನುಭವಿಗಳಿಗೆ ದೊರೆಯಬೇಕು, ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ಅನಿಲ್ ನಿರ್ಮಳೆ, ದತ್ತಾತ್ರಿ ಬಾಪುರೆ, ಚಂದು ಡಿಕೆ.ರಾಜಕುಮಾರ ಮುಧಾಳೆ, ಹರಿದೇವ ಸಂಗನಾಳ, ಸಂದೀಪ್ ಮಾನೆ, ಸಚೀನ್ ಮೇತ್ರೆ, ಅಹಿಂದ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ಪೂಲಾರಿ, ವಿನೇಕ್ ನಿರ್ಮಳೆ, ರಜನಿಕಾಂತ ದಾಮಾ, ವಿಶಾಲ್ ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ,…
ಬೆಳಗಾವಿ: ಸೈಬರ್ ವಂಚಕರ ಕಿರುಕುಳ ತಾಳಲಾರದೇ ರೈಲ್ವೆ ಉದ್ಯೋಗಿ ಮತ್ತು ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿಯ ಖಾನಾಪುರದ ಬೀಡಿ ಗ್ರಾಮದಲ್ಲಿ ನಡೆದಿದೆ. ಮಾ. 28ರಂದು ಈ ಘಟನೆ ಬೆಳಕಿಗೆ ಬಂದಿದೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಮೃತಪಟ್ಟವರು. ಈ ದಂಪತಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕೆಲ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಿದ್ದರು. ಇದನ್ನು ಗಮನಿಸಿ ಸೈಬರ್ ವಂಚಕರು ದಂಪತಿಯನ್ನು ಟಾರ್ಗೆಟ್ ಮಾಡಿದ್ದಾರೆ. ದೆಹಲಿಯಿಂದ ವಿಡಿಯೊ ಕಾಲ್ ಮಾಡಿ ದಂಪತಿಗೆ ಬೆದರಿಕೆಯೊಡ್ಡಿದ್ದರು. ದಂಪತಿಯಿಂದ 6 ಲಕ್ಷ ರೂ. ಪಡೆದರೂ ಕಿರುಕುಳ ನಿಲ್ಲಿಸಿರಲಿಲ್ಲ. ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇಪದೇ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್ನಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, ‘ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ನಿಮ್ಮ ವಿರುದ್ಧ ಸೈಬರ್ ಸೆಲ್ಗೆ ದೂರು ನೀಡಿದ್ದೇನೆ’…
ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನೇಪಿಡಾವ್ (ಮ್ಯಾನ್ಮಾರ್): ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ನಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮವಾಗಿ ಸುಮಾರು 700 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸುಮಾರು 1,700 ಜನರು ಗಾಯಗೊಂಡಿದ್ದಾರೆ. ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಅನೇಕ ಸಾವು-ನೋವುಗಳು ವರದಿಯಾಗಿವೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೇಶದ ದೊಡ್ಡ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ, ಇದು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರದಲ್ಲಿದ್ದು, ಪ್ರಕೃತಿ ವಿಕೋಪದಿಂದ ಭಾರೀ ವಿನಾಶ ಕಂಡಿದೆ. ಮ್ಯಾನ್ಮಾರ್ ಗೆ ಭಾರತ ನೆರವು, ಅಗತ್ಯ ಸಾಮಗ್ರಿಗಳ ರವಾನೆ ಭೂಕಂಪದಿಂದ ಅಪಾರ ಸಾವು-ನೋವು ನಷ್ಟ ಉಂಟಾಗಿರುವ ಮ್ಯಾನ್ಮಾರ್ ಸಹಾಯಕ್ಕೆ ಭಾರತ ಮುಂದಾಗಿದೆ. ಮಾನವೀಯ ನೆರವು ನೀಡಲು ವಿಮಾನವನ್ನು ಕಳುಹಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್…
ತುಮಕೂರು: ಯುಜಿಸಿ ನಿರ್ದೇಶನದಂತೆ ಮೈಸೂರಿನ ಕರಾಮುವಿ 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ 2025ರ ಮಾರ್ಚ್ 31 ಅಂತಿಮ ದಿನಾಂಕವಾಗಿರುವುದರಿಂದ, ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ 30ರ ಚಾಂದ್ರಮಾನ ಯುಗಾದಿ (ಭಾನುವಾರ) ಮತ್ತು ಮಾರ್ಚ್ 31ರ ರಂಜಾನ್ (ಸೋಮವಾರ) ದಿನಗಳಂದು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು. ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ:…