Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುಮಕೂರು: ಜಿಲ್ಲೆಯಲ್ಲಿ ಒಟ್ಟು 8 ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 11 ಪ್ರಕರಣಗಳಲ್ಲಿ ಒಟ್ಟು 23,01,000 ರೂ. ಮೌಲ್ಯದ ಸರಗಳು ಕಳ್ಳತನವಾಗಿದ್ದು, ಈ ಪೈಕಿ 8 ಪ್ರಕರಣಗಳನ್ನು ಪತ್ತೆ ಮಾಡಿ 17,65,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ತಿಳಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4 ಸುಲಿಗೆ ಪ್ರಕರಣಗಳು ದಾಖಲಾಗಿ 9,80,000 ರೂ. ಮೌಲ್ಯದ ಸ್ವತ್ತು ಕಳ್ಳತನವಾಗಿದ್ದು, ಈ ಪೈಕಿ ಅಮೃತೂರು, ಪಟ್ಟನಾಯಕನಹಳ್ಳಿ, ಜಯನಗರ ಈ 3 ಪ್ರಕರಣಗಳನ್ನು ಪತ್ತೆ ಮಾಡಿ 9,60,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧುಗಿರಿ, ಶಿರಾ, ಹುಲಿಯೂರುದುರ್ಗ, ಹೊಸ ಬಡಾವಣೆ, ಕೊಡಿಗೇನಹಳ್ಳಿ, ಕೋರ, ಅಮೃತೂರು, ತಿಪಟೂರು ನಗರ ವ್ಯಾಪ್ತಿಯ ಒಟ್ಟು 8 ಸರಗಳ್ಳತನ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದರು. ಈ ಪೈಕಿ ಅಮೃತೂರು, ಪಟ್ಟನಾಯಕನಹಳ್ಳಿ, ಜಯನಗರ ಈ 3 ಪ್ರಕರಣಗಳನ್ನು ಪತ್ತೆ ಮಾಡಿ 9,60,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧುಗಿರಿ, ಶಿರಾ, ಹುಲಿಯೂರುದುರ್ಗ,…
ತುಮಕೂರು: ತುಮಕೂರು ನಗರವು ದಿನೇ ದಿನೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೆಚ್ಚಾಗುತ್ತಿರುವ ವಾಹನ ದಟ್ಟಣೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಅಪಘಾತಗಳನ್ನು ತಡೆಗಟ್ಟಲು ಮಹಾನಗರಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡುಗಳ ಮುಖ್ಯರಸ್ತೆಗಳಲ್ಲಿ 76 ಸೈಂಟಿಫಿಕ್ ಹಂಪ್ಸ್(ರಸ್ತೆ ಉಬ್ಬು), ಸ್ಪೀಡ್ ಬ್ರೇಕರ್ ಹಾಗೂ 31 ಆಟೋ ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ನಿರ್ಮಾಣಕ್ಕಗಿ ಸ್ಥಳವನ್ನು ಗುರುತಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ಅದೇ ರೀತಿ ವಾರ್ಡ್ ನಂ. 4ರ ಗಾರ್ಡನ್ ರಸ್ತೆಯ ತಿರುಮಲ ಚೌಲ್ಟ್ರಿ ಹಾಗೂ ದಿಬ್ಬೂರು ಜಂಕ್ಷನ್ ಬಳಿ ಹೈಟ್ ಗೇಜ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬೆಸ್ಕಾಂ ಶಿರಾ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಶಿರಾ ನಗರ, ಯಲಿಯೂರು ಹಾಗೂ ಕೊಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮಾರ್ಚ್ 9ರ ಮಧ್ಯಾಹ್ನ 12 ರಿಂದ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಈ.ಶಾಂತರಾಜು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮಹಿಳಾ ಸಮಾನತೆ ಮನೆಯಿಂದಲೇ ಆರಂಭವಾಗಬೇಕು. ಮಹಿಳೆಯರನ್ನು ಸಮಾನವಾಗಿ ಕಾಣುವ ಮನಸ್ಥಿತಿಯನ್ನು ಗಂಡುಮಕ್ಕಳಲ್ಲಿ ಎಳವೆಯಲ್ಲೇ ಬಿತ್ತಬೇಕು. ಗಂಡ–ಹೆಂಡತಿ ಪರಸ್ಪರ ಗೌರವಿಸಿಕೊಂಡು ಬಾಳುವ ಮನೋಭಾವ ಬೆಳೆಯಬೇಕು ಎಂದು ಲೇಖಕಿ ನೇಮಿಚಂದ್ರ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಹಿಳೆಯರ ಪರಿಸ್ಥಿತಿ ಮೊದಲಿಗಿಂತ ಈಗ ಸುಧಾರಿಸಿದೆ. ಆದರೆ ಸಮಾನತೆಯ ಸಂಸ್ಕೃತಿ ಇನ್ನೂ ನಮ್ಮಲ್ಲಿ ಪಕ್ವವಾಗಿಲ್ಲ ಎಂದರು. ಹುಟ್ಟಿನಿಂದಲೇ ಯಾರೂ ಶ್ರೇಷ್ಠರಲ್ಲ, ಕನಿಷ್ಠರೂ ಅಲ್ಲ. ಸ್ತ್ರೀ ಪುರುಷರ ವಿಷಯದಲ್ಲೂ ಇದು ಸರಿ. ಈ ಚಿಂತನೆ ಎಲ್ಲರಲ್ಲೂ ಮೂಡಿಬರಬೇಕು. ಆದರೆ ನಮ್ಮ ಸಮಾಜದ ದೃಷ್ಟಿಕೋನ ಬದಲಾಗಿಲ್ಲ. ಹೆಂಡತಿ ಗಂಡನಿಗೆ ವಿಧೇಯಳಾಗಿರಬೇಕು, ಗಂಡ ಹೆಂಡತಿಗೆ ಹೊಡೆಯುವುದು ಸರಿ ಎಂಬ ಮನಸ್ಥಿತಿ ಈಗಲೂ ಬಹುಪಾಲು ಇದೆ. ಹೀಗೆ ಭಾವಿಸುವವರಲ್ಲಿ ಮಹಿಳೆಯರೂ ಇದ್ದಾರೆ ಎಂಬುದು ಆಶ್ಚರ್ಯಕರ ಎಂದರು. ಶೈಕ್ಷಣಿಕ ರಂಗದಲ್ಲಿ ಯಾವುದೇ ಪರೀಕ್ಷೆ ಫಲಿತಾಂಶ ಬಂದಾಗಲೂ ಬಾಲಕಿಯರದೇ ಮೇಲುಗೈ ಎಂದಿರುತ್ತದೆ. ಆಮೇಲೆ ಇವರೆಲ್ಲ ಎಲ್ಲಿ ನಾಪತ್ತೆಯಾಗುತ್ತಾರೆ ಎಂದೇ ತಿಳಿಯುವುದಿಲ್ಲ. ಅವಕಾಶಗಳ…
ತುಮಕೂರು: ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿರುವ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ 2022 ಜುಲೈ 1ರಿಂದ ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳು ಬರುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳನ್ವಯ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿ, ಅಂಗಡಿ ಮಾಲೀಕರು, ಇ–ಕಾಮರ್ಸ್ ಕಂಪನಿ, ಬೀದಿ ವ್ಯಾಪಾರಿ, ವಾಣಿಜ್ಯ ಸಂಸ್ಥೆ(ಮಾಲ್, ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರ) ಸಿನಿಮಾ ಮನೆ, ಪ್ರವಾಸೋದ್ಯಮ ಸ್ಥಳ, ಶಾಲೆ/ಕಾಲೇಜು, ಕಚೇರಿ ಸಂಕೀರ್ಣ/ಆಸ್ಪತ್ರೆ, ಇತರೆ ಸಂಸ್ಥೆಗಳು ಹಾಗೂ ಸಾರ್ವಜನಿಕರು ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ/ಆಮದು/ಸಂಗ್ರಹಣೆ/ವಿತರಣೆ/ ಮಾರಾಟ/ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ಹಿಂದೆ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದರೂ ಹಲವು ಹೊಟೇಲ್ ಹಾಗೂ ರಸ್ತೆ ಬದಿ ವ್ಯಾಪಾರಿಗಳು ನಿಷೇಧಿತ…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ., ಬಿ.ಎಸ್ಸಿ(General & I.T) ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶ ಪಡೆಯಲು ಮಾರ್ಚ್ 31 ಕಡೆಯ ದಿನವಾಗಿದೆ. ರಜಾ ದಿನವೂ ಕಾರ್ಯ ನಿರ್ವಹಿಸುವ ಕೆಎಸ್ ಓಯು ಪ್ರಾದೇಶಿಕ ಕೇಂದ್ರ :- ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಮಾರ್ಚ್ 31ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಪ್ರವೇಶಾತಿಗೆ ಅವಕಾಶ ಮಾಡಿಕೊಡಲಾಗಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯಗಳ ದೂರಶಿಕ್ಷಣದ ಪದವಿ ಮತ್ತು ಸಾಂಪ್ರದಾಯಿಕ ವಿ.ವಿ.ಗಳು ನೀಡುವ ಶಿಕ್ಷಣ ಕ್ರಮಗಳ ಪದವಿಗಳಿಗೆ ಸಮಾನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ…
ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಮಾರ್ಚ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ “ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ ಎ.ವಿ. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮಾಡುವ ಸಂದರ್ಭದಲ್ಲಿ ಕಲಿಯುವ ಕಡೆಗೆ ಗಮನ ಹರಿಸಿದರೆ ತಮ್ಮ ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಮುಖಾಂತರ ಏನಾದರೂ ಸಾಧಿಸಬಹುದು ಎಂದೂ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಪವನ್ ಕುಮಾರ್ ರೆಡ್ಡಿ ತಿಳಿಸಿದರು. ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ದಾ ಪೂಜೆ ಮತ್ತು ತಂದೆ– ತಾಯಿ ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಶಿಕ್ಷಣ ಸಂಯೋಜಕ ಶ್ರೀನಿವಾಸ ಕೆ.ಟಿ. ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲು ಶಿಕ್ಷಕರು ಶ್ರಮಪಡಬೇಕು, ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು ಓದುವಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಗ್ರಾಮಗಳಿಗೆ ಹೆಸರು ತರಬೇಕೆಂದು ತಿಳಿಸಿದರು. ಬರಹಗಾರರಾದ ಎನ್.ಎಸ್.ಈಶ್ವರಪ್ರಸಾದ್ ಮಾತನಾಡಿ, ಶಾಲೆಗಳಲ್ಲಿ ಶಾರದಾ ಪೂಜೆ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗೆ ಎಷ್ಟು ಒತ್ತು ನೀಡುತ್ತಿರೋ, ಅದೇ ರೀತಿ ಇತಿಹಾಸದಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡುವಲ್ಲಿ ಶ್ರಮಿಸಿದ ಸಾವಿತ್ರಿ ಫುಲೆಗೆ ಅಷ್ಟೆ ಗೌರವ ನೀಡಬೇಕು ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪುರಸಭೆಯ ಆಡಳಿತದಲ್ಲಿ ನಡೆದ ಖರ್ಚು ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಕೇಳಿದರೂ, ಸಂಬಂಧಪಟ್ಟ ಅಧಿಕಾರಿಗಳು ದಾಖಲೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಪುರಸಭಾ ಸದಸ್ಯರು ಆರೋಪಿಸಿದ್ದಾರೆ. ಪುರಸಭಾ ಸದಸ್ಯ ರೇಣುಕಾ ಪ್ರಸಾದ್ ಅವರು ಪುರಸಭಾ ನಿದಿ ಅಡಿಯಲ್ಲಿ ಆಡಳಿತಧಿಕಾರಿಗಳ ಅವಧಿಯಲ್ಲಿ ಜಮಾ ಮತ್ತು ಖರ್ಚಾಗಿರುವ ಹಣದ ವಿವರಗಳನ್ನು RTI ಮೂಲಕ ಕೇಳಿದ್ದರು. ಆದರೆ, ಅಧಿಕಾರಿಗಳು ತಕ್ಕ ಸಮಯದಲ್ಲಿ ಮಾಹಿತಿ ನೀಡದೆ, ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ರೇಣುಕಾ ಪ್ರಸಾದ್, “ಮಾಹಿತಿ ಹಕ್ಕು ಕಾಯ್ದೆ ಪ್ರಕಾರ, ಸಾರ್ವಜನಿಕರಿಗೆ 30 ದಿನಗಳೊಳಗೆ ಮಾಹಿತಿ ನೀಡಬೇಕು. ಆದರೆ ಅಧಿಕಾರಿಗಳು ಇದನ್ನು ಉಲ್ಲಂಘಿಸಿ ದಾಖಲೆಗಳನ್ನು ಮರೆಮಾಚುತ್ತಿದ್ದಾರೆ. ಇದು ಜನತೆಗೆ ಉತ್ತರದಾಯಿತ್ವ ತಲುಪಿಸುವ ಆಡಳಿತದ ಮೇಲಿನ ವಿಶ್ವಾಸವನ್ನು ಕುಂದಿಸುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಅಧಿಕಾರಿಗಳ ಈ ನಡೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗೂ ಸಾರ್ವಜನಿಕ ಹಣದ ಬಳಕೆಯ ವಿವರಗಳನ್ನು ಬಹಿರಂಗಪಡಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ…
ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರು ಬದಲಿಸಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲಾಗಿದೆ. 1991ರಲ್ಲಿ ಭಾರತದಲ್ಲಿ ಉದಾರೀಕರಣ ಆರ್ಥಿಕ ನೀತಿ ಜಾರಿಗೆ ತರಲಾಯಿತು. ಆಗ ಜಾಗತೀಕರಣಕ್ಕೆ ಭಾರತ ಇಟ್ಟ ಮೊದಲ ಹೆಜ್ಜೆಯಾಗಿತ್ತು. ಅಂದು ಪ್ರಧಾನಿಯಾಗಿದ್ದವರು ಪಿ.ವಿ. ನರಸಿಂಹರಾವ್. ಆ ಸರ್ಕಾರದಲ್ಲಿ ಡಾ. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರು. ಈ ಉದಾರೀಕರಣ ನೀತಿಯ ರೂವಾರಿ ಮನಮೋಹನ್ ಸಿಂಗ್ ಅವರೇ ಆಗಿದ್ದರು. 2004ರಿಂದ 2014ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯೂ ಆಗಿದ್ದರು. ಇದೀಗ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಅವರ ಹೆಸರನ್ನೇ ಇಡಲು ಮುಖ್ಯಮಂತ್ರಿ…