Subscribe to Updates
Get the latest creative news from FooBar about art, design and business.
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
- ಗುಬ್ಬಿ: SBI ಬ್ಯಾಂಕ್ ನ ಎಟಿಎಂನಿಂದ ಹಣ ದೋಚಿದ ಕಳ್ಳರು
Author: admin
ತುಮಕೂರು: ನಗರದಲ್ಲಿ ಸಂಗ್ರಹವಾಗುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ ಮಾಡುವ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದಲ್ಲಿ ಶುಕ್ರವಾರ ಹೊಸದಾಗಿ ಜಿಲ್ಲಾ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ನಿರ್ಮಾಣಗೊಂಡಿರುವ ತುರ್ತು ತೀವ್ರ ನಿಗಾ ಘಟಕ, 100 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, 100 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ, 22 ಕೋಟಿ ವೆಚ್ಚದ ನರ್ಸಿಂಗ್ ಕಾಲೇಜು ಹಾಸ್ಟೆಲ್ ಕಟ್ಟಡ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕಸದ ಸಮಸ್ಯೆ ನಿವಾರಿಸಲು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಆರಂಭಿಸುವ ಅಗತ್ಯವಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬೇಡಿಕೆಗೆ ಸ್ಪಂದಿಸಿದ ಸಚಿವರು, ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ಸಮಯದಲ್ಲಿ ಬಿಡದಿ ಬಳಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ ಮಾಡಿಸಿದ್ದ. ನಗರದಲ್ಲೂ ಕಸದ ಸಮಸ್ಯೆ ಗಮನಕ್ಕೆ ಬಂದಿದ್ದು, ವಿದ್ಯುತ್ ಘಟಕ ನಿರ್ಮಾಣ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿಸಿದರು. ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಂದನಕೆರೆ ಗ್ರಾಮದಲ್ಲಿರುವ ಗಿರಿಸಿದ್ದೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಿಸಲಾಯಿತು. ತಾಲ್ಲೂಕಿನಲ್ಲಿ ಬುಧವಾರ ನಡೆದ ಕಾರ್ತಿಕ ಮಾಸದ ಪೂಜೆ ಅಂಗವಾಗಿ ಪಂಜುರ್ಲಿಗೆ ಪೂಜೆ ಸಲ್ಲಿಸಲಾಯಿತು. ಕೌಶಲ್ಯ ಅಭಿವೃದ್ಧಿ ನಿಗಮದ ಜಿಲ್ಲಾ ಮಾಜಿ ಅಧ್ಯಕ್ಷ ಮುರುಳಿಧರ ಹಾಲಪ್ಪ ಹಾಗೂ ಗಿರಿಸಿದ್ದೇಶ್ವರ ಮಠದ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ರಾಜಕೀಯ ಬೆಳವಣಿಗೆ ಕುರಿತು ಕಾಂಗ್ರೆಸ್ ಮುಖಂಡರೊಬ್ಬರು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯುವ ಕುರಿತು ದೈವದಲ್ಲಿ ಪ್ರಶ್ನಿಸಿದಾಗ, ಇಲ್ಲಿಯವರೆಗೂ ಅವರು ಮಾಡಿದ ಪ್ರಯತ್ನವು ಕುಂಠಿತವಾಗಿದ್ದರೂ, ಇನ್ನು ಮುಂದೆ ಅವರು ಕೈಗೊಳ್ಳುವ ಪ್ರಯತ್ನಗಳಿಗೆ ನಾನು ಖಂಡಿತವಾಗಿ ಫಲಿತಾಂಶ ನೀಡುತ್ತೇನೆ ಎಂದು ದೈವ ಅಭಯ ನೀಡಿತು. ಮುರುಳಿಧರ ಹಾಲಪ್ಪ, ದೈವದ ಕೃಪೆಯಿಂದ ಯುವಕರು ದುಶ್ಚಟಗಳನ್ನು ತ್ಯಜಿಸಿ, ಮಾನವ ತತ್ವದ ಮೌಲ್ಯಗಳನ್ನು ಮತ್ತು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್, ಕವಿತ ಕಿರಣ್ ಕುಮಾರ್, ಕೃಷ್ಣಗೌಡ, ಇತರರು…
ಮಧುಗಿರಿ: ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ರಾಜ್ಯ ಜೀತದಾಳು ಮತ್ತು ಕೃಷಿ ಕೂಲಿ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜೀವಿಕ ಸಂಘಟನೆಯ ಜಿಲ್ಲಾ ಸಂಚಾಲಕ ಡಾ.ಸಂಜೀವಮೂರ್ತಿ, , ತಾಲ್ಲೂಕಿನಲ್ಲಿ 1,600ಕ್ಕೂ ಹೆಚ್ಚು ಜೀತ ವಿಮುಕ್ತರಿದ್ದು, ಅವರಿಗೆ ಉಚಿತವಾಗಿ ನಿವೇಶನ ಮತ್ತು ಮನೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು. ಜೀತ ವಿಮುಕ್ತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ ಸೌಲಭ್ಯ ನೀಡಬೇಕು. ಜೀತ ವಿಮುಕ್ತ ಕುಟುಂಬದವರಿಗೆ ಉನ್ನತ ಶಿಕ್ಷಣದವರೆಗೂ ಉಚಿತ ಶಿಕ್ಷಣ ನೀಡಬೇಕು. ಸರ್ಕಾರಿ ಕೆಲಸಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು. ಎಸ್ ಇಪಿ ಟಿಎಸ್ ಪಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಸಾಗುವಳಿ ಚೀಟಿ ನೀಡಬೇಕು. ಜಮೀನು ಇರುವ ಪ್ರತಿ ಜೀತ ವಿಮುಕ್ತರಿಗೆ ಕೊಳವೆ ಬಾವಿ ಮಂಜೂರಾತಿ ಮಾಡಲು ಸರ್ಕಾರ ಆದೇಶಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜೀವಿಕ ಸಂಘಟನೆಯ ಹನುಮಂತರಾಯಪ್ಪ, ತಾಲ್ಲೂಕು ಸಂಚಾಲಕ ನರಸಿಂಹಮೂರ್ತಿ, ಸರ್ವೋದಯ…
ಕೊರಟಗೆರೆ: ಕೊರಟಗೆರೆ ಪಟ್ಟಣ ಪಂಚಾಯಿತಿ ಇದೀಗ ಪುರಸಭೆಯಾಗಿ ಮೇಲ್ದರ್ಜೆಗೇರಿದೆ. ಎರಡು ದಶಕಗಳಲ್ಲಿ ಪಟ್ಟಣದ ಜನಸಂಖ್ಯೆ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಹೆಚ್ಚಳ ಕಂಡುಬಂದಿರುವ ಕಾರಣ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ವರದಿಗಳ ಪ್ರಕಾರ, ಹೊಸದಾಗಿ ರಚಿಸಲಾದ ಕೊರಟಗೆರೆ ಪುರಸಭೆ ವ್ಯಾಪ್ತಿಗೆ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 13 ಗ್ರಾಮಗಳು ಒಳಪಡಲಿವೆ. ಹುಲಿಕುಂಟೆ ಗ್ರಾಮ ಪಂಚಾಯಿತಿಯಿಂದ: ದೇವರಹಳ್ಳಿ, ಹೊಸಹಳ್ಳಿ, ಕಾಮೇನಹಳ್ಳಿ, ಓಬಳದೇವರಹಳ್ಳಿ, ಗುಂಡಿನಪಾಳ್ಯ, ಚಿಕ್ಕೇಗೌಡನಹಳ್ಳಿ, ಕಾಮರಾಜನಹಳ್ಳಿ, ತುಂಬಾಡಿ ಗ್ರಾಮ ಪಂಚಾಯಿತಿಯಿಂದ ಕಂಬದಹಳ್ಳಿ, ಹಂಚಿಹಳ್ಳಿ ಗ್ರಾಮ ಪಂಚಾಯಿತಿಯಿಂದ: ಬೋಡಬಂಡೇನಹಳ್ಳಿ, ಮಲ್ಲೇಶಪುರ. ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯಿಂದ: ಜಂಪೇನಹಳ್ಳಿ, ಕಲ್ಲುಗುಟ್ಟರಹಳ್ಳಿ, ಜಟ್ಟಿ ಅಗ್ರಹಾರ ಗ್ರಾಮಗಳು ಈಗ ಕೊರಟಗೆರೆ ಪುರಸಭೆಯ ವ್ಯಾಪ್ತಿಗೆ ಸೇರಲಿದೆ. 2011ರ ಜನಗಣತಿ ಪ್ರಕಾರ ಕೊರಟಗೆರೆ ಪ್ರದೇಶದಲ್ಲಿ 24,264 ಜನ ವಾಸವಿದ್ದು, 17.53 ಚದರ ಕಿಲೋಮೀಟರ್ ವಿಸ್ತೀರ್ಣವಿದೆ. ಪ್ರತಿ ಚದರ ಕಿಲೋಮೀಟರಿಗೆ 1,384 ಜನರ ಸಾಂದ್ರತೆ ದಾಖಲಾಗಿದೆ. ಪುರಸಭೆ ರಚನೆಗೆ ಸಂಬಂಧಿಸಿದ ಆಡಳಿತಾತ್ಮಕ ಕ್ರಮಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಹೊಸ ಗಡಿನಿರ್ಣಯ, ಆಡಳಿತ ವಿಂಗಡಣೆ, ಬಜೆಟ್ ವ್ಯವಸ್ಥೆ…
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ(Pavithra Gowda) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ತನ್ನ ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಅರ್ಜಿ ವಿಚಾರಣೆ ವೇಳೆ ನಾವು ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಮುಂದುವರಿದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದು, ತಿಂಗಳ ಅಂತರದಲ್ಲಿ ಮೂರು ಸಾವು ಸಂಭವಿಸಿದೆ. ತಾಲೂಕಿನ ಹಳೇಹೆಗ್ಗುಡಿಲು ಗ್ರಾಮದ ರೈತ ಚೌಡಪ್ಪ ನಾಯಕ ಆನೆ ದಾಳಿಯಿಂದ ಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದ ವ್ಯಕ್ತಿ ಹುಲಿ ದಾಳಿಗೆ ಬಲಿಯಾದ ಮೃತ ದುರ್ದೈವಿ. ಚೌಡಪ್ಪ ನಾಯಕ (39 ವರ್ಷ) ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ನುಗು ಹಿನ್ನೀರು ಸಮೀಪದ ಕಾಡಂಚಿನ ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಹುಲಿಯೊಂದು ಏಕಾಏಕಿ ದಾಳಿ ನಡೆಸಿದ್ದು, ರೈತ ಚೌಡಪ್ಪನನ್ನ ಬಲಿ ಪಡೆದಿದೆ. ಬಳಿಕ ಮೃತದೇಹವನ್ನು ಪಕ್ಕದ ಹಳ್ಳವೊಂದರಲ್ಲಿ ಇಟ್ಟುಕೊಂಡು ಕುಳಿತಿದೆ. ಉಳುಮೆ ಮಾಡುತ್ತಿದ್ದ ರೈತ ಕಾಣೆಯಾದನ್ನು ಗಮನಿಸಿದ ಅಕ್ಕಪಕ್ಕ ಜಮೀನಿನ ರೈತರು ಬಂದು ನೋಡಲಾಗಿ ದಾಳಿ ಮಾಡಿರುವುದು ತಿಳಿದುಬಂದಿದ್ದು, ಜನರ ಕೂಗಾಟ ಕೇಳುತ್ತಿದ್ದಂತೆಯೇ ಹಳ್ಳದಲ್ಲಿ ಹುಲಿ ಮೃತದೇಹವನ್ನು ಬಿಟ್ಟು ಓಡಿದೆ ಎನ್ನಲಾಗಿದೆ. ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ: ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸ್ಥಳೀಯರು…
ಬೀದರ್: ಜಿಲ್ಲೆಯ ಗದಗ ನಗರದಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಯಾಟ್ ಲೈಟ್ ಮೀಡಿಯಾ ಅಸೋಸಿಯೇನ್ ಆಗ್ರಹಿಸಿದೆ. ಅಸೋಸಿಯೇಷನ್ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೀದರ್ ಉಪ ವಿಭಾಗಾಧಿಕಾರಿ ಮುಹಮ್ಮದ್ ಶಕೀಲ್ ಅವರಿಗೆ ಸಲ್ಲಿಸಿದರು. ಅಸೋಸಿಯೇಷನ್ ಅಧ್ಯಕ್ಷ ಮಲ್ಲಿಕಾರ್ಜುನ ಮರಕಲೆ ಮಾತನಾಡಿ, ಮತದಾರರ ಪಟ್ಟಿಗೆ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ವರದಿ ಮಾಡಲು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಜನ ಸಂಪರ್ಕ ಕಚೇರಿಗೆ ಹೋಗಿದ್ದ ನ್ಯೂಸ್ ಫಸ್ಟ್ ವರದಿಗಾರ ಸುರೇಶ್ ಕಡ್ಲಿಮಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದರು. ವಿಡಿಯೋ ಚಿತ್ರೀಕರಿಸಿ ವಾಪಸ್ ಬರುವಾಗ ವರದಿಗಾರನ ಕ್ಯಾಮೆರಾ ಕಸಿಯಲು ಯತ್ನಿಸಲಾಗಿದೆ. ಸಂಕನೂರ ವರದಿಗಾರನ ಕೈ, ಕೊರಳಪಟ್ಟಿ ಹಿಡಿದು ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪತ್ರಿಕಾ ರಂಗ…
ತುಮಕೂರು: ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಕಬ್ಬು ಖರೀದಿ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ನಗರದಲ್ಲೂ ಪ್ರತಿಭಟನೆ ನಡೆಸಿದರು. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನಲ್ಲಿ ಕಳೆದ ಒಂದು ತಿಂಗಳಿಂದ ಕಸ ವಿಲೇವಾರಿ ಘಟಕದ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿದರು. ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಟನ್ ಕಬ್ಬಿಗೆ 3,500 ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. ಪಕ್ಕದ ಮಹಾರಾಷ್ಟ್ರ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಗೆ 3,400– 3,500 ಬೆಲೆ ನೀಡುತ್ತಿವೆ. ಆದರೆ ರಾಜ್ಯದಲ್ಲಿ 3,100 ಕೊಡಲಾಗುತ್ತಿದೆ. ಬೆಲೆ ಹೆಚ್ಚಿಸಲು ಸರ್ಕಾರ ಮನಸ್ಸು ಮಾಡುತ್ತಿಲ್ಲ ಎಂದು ದೂರಿದರು. ರಾಜ್ಯದ 81 ಸಕ್ಕರೆ ಕಾರ್ಖಾನೆಗಳಲ್ಲಿ 50ಕ್ಕೂ ಹೆಚ್ಚು ಕಾರ್ಖಾನೆಗಳು…
ಕುಣಿಗಲ್: ತಾಲ್ಲೂಕಿನಲ್ಲಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದು, ಅಧಿಕಾರಿಗಳು ಶಾಸಕರ ಮರ್ಜಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ಆರೋಪಿಸಿದರು. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮಲ್ಲಾಘಟ್ಟದಲ್ಲಿ 9 ಎಕರೆ ಜಮೀನನ್ನು ಆಶ್ರಯ ನಿವೇಶನಗಳ ಹಂಚಿಕೆಗೆ ಮೀಸಲಿಟ್ಟು 20 ವರ್ಷ ಕಳೆದಿವೆ. ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಸಾವಿರ ಆಶ್ರಯ ನಿವೇಶನ ಆಕಾಂಕ್ಷಿಗಳು ಹತ್ತು ಹಲವು ಬಾರಿ ಅರ್ಜಿಗಳನ್ನು ಸಲ್ಲಿಸಿ ಹತ್ತಾರು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಶಾಸಕ ರಂಗನಾಥ್ ಆರು ಮಂದಿ ಅನರ್ಹರಿಗೆ ಯಾವುದೇ ಮಾನದಂಡಗಳನ್ನು ಪರಿಪಾಲಿಸದೆ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಶಾಸಕರ ಬಲವಂತಕ್ಕೆ ಮಾಡಲಾಗಿದೆ ತಮ್ಮದೇನು ಪಾತ್ರವಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. ಈ ಹಿಂದೆ ಈ 6 ಮಂದಿ ಆಶ್ರಯ ನಿವೇಶನಗಳಿಗೆ ಮೀಸಲಿಟ್ಟ ಜಾಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಸೂಚನೆ ಮೇರೆಗೆ ಮನೆಗಳನ್ನು ನಿರ್ಮಿಸುತ್ತಿದ್ದು, ತಡೆದ ಸಮಯದಲ್ಲಿ ಅಧಿಕಾರಿಗಳು ನಿರುತ್ತರರಾಗಿದ್ದರು. ಆಶ್ರಯ ನಿವೇಶನ ಹಂಚಿಕೆಗೆ ಇರುವ ಮಾನದಂಡಗಳನ್ನು…
ತುಮಕೂರು: ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಆಸ್ಪತ್ರೆಗೆ ಖಾಸಗಿ ವೈದ್ಯಕೀಯ ಕಾಲೇಜಿನ ಸಹಭಾಗಿತ್ವ (ಪಿಪಿಪಿ) ಹೊಂದುವ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಸಾವಿರಾರು ಕೋಟಿ ಬೆಲೆ ಬಾಳುವ 32 ಎಕರೆ ಜಾಗದಲ್ಲಿ ಜಿಲ್ಲಾ ಆಸ್ಪತ್ರೆ ಇದೆ. ಇಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರೆ ಮುಂದೆ ಆಸ್ತಿ ಖಾಸಗಿಯವರ ಪಾಲಾಗಲಿದೆ. ಇದರಿಂದಾಗಿ ಬಡವರ ಮಕ್ಕಳು ವೈದ್ಯರಾಗುವ ಕನಸು ನನಸಾಗುವುದಿಲ್ಲ. ಇಂತಹ ಆಲೋಚನೆ ಕೈಬಿಟ್ಟು ಸರ್ಕಾರವೇ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ‘ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ನವೀಕರಿಸುವ ನೆಪದಲ್ಲಿ ಕಟ್ಟಡ ನೆಲಸಮ ಮಾಡಿ ಖಾಸಗಿ ಸಹಭಾಗಿತ್ವಕ್ಕೆ ಒಪ್ಪಿಸಲು ಸಿದ್ಧತೆ ನಡೆದಿದೆ. ಆಸ್ಪತ್ರೆಗೆ ಸೇರಿದ 32 ಎಕರೆಯಲ್ಲಿ 5 ಎಕರೆ ಒತ್ತುವರಿಯಾಗಿದೆ. ಕಡಿಮೆ ಬಂಡವಾಳದ ಮೂಲಕ ಸರ್ಕಾರ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬದಲಿಗೆ ಖಾಸಗಿ ಸಹಭಾಗಿತ್ವದ ಮೊರೆ ಹೋಗಿರುವುದು ಸರಿಯಲ್ಲ.…