Author: admin

ಪಾವಗಡ: ಪಾವಗಡ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿಸಿರುವ  ಹೆಚ್.ವಿ.ವೆಂಕಟೇಶ್ ಅವರನ್ನು ಗ್ರಾಮದ ಮುಖಂಡರು ಹಾಗೂ ಶಾಲಾ ಸಿಬ್ಬಂದಿಗಳು ಗುರುವಾರ ಹನುಮಂತನಹಳ್ಳಿಯ ತೋಟದ ಮನೆಯಲ್ಲಿ ಭೇಟಿಯಾಗಿ ಅಭಿನಂದಿಸಿ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಶಿಕ್ಷಣ ಕ್ಷೇತ್ರಕ್ಕೆ  ವೆಂಕಟೇಶ್ ಅವರು ಮಾಡಿರುವ ಕೊಡುಗೆ ಅಮೂಲ್ಯವಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆ ಮಂಜೂರಾತಿಯಿಂದ ಗ್ರಾಮದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಮದಕರಿ ನಾಯಕ, ಮಂಜುನಾಥ್, ರಾಮು ಹಾಗೂ ಶಿಕ್ಷಕರಾದ ರಾಜಗೋಪಾಲ್, ಜಯಣ್ಣ, ಹನುಮಂತರಾಜು, ಚನ್ನಬಸಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಇತ್ತೀಚೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು, “ಆರ್. ಅಶೋಕ್ ಅವರು ಕಸದ ಮಾಫಿಯಾ ಗ್ಯಾಂಗ್‌ನ ವಕ್ತಾರರಂತೆ ಮಾತನಾಡುತ್ತಿದ್ದಾರೆ. ನಾನು ಸಿಎಂ ಆಗಿರುವುದನ್ನು ಸಹಿಸಲಾಗದೇ ಅಸೂಯೆ ರಾಜಕೀಯ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆಗೆ ಆರ್. ಅಶೋಕ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ಕಡಕ್ ಆಗಿ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ನೇರ ಸವಾಲು ಹಾಕಿರುವ ಅಶೋಕ್, “ಸಿಎಂ ಡಿ.ಕೆ. ಶಿವಕುಮಾರ್ ಅವರೇ, ಹೌದು, ನಾನು ಏಜೆಂಟ್ ಆಗಿಯೇ ಮಾತನಾಡುತ್ತಿದ್ದೇನೆ! ಆದರೆ ನಿಮ್ಮ ತರಹ ಯಾವುದೋ ‘ಮಾಫಿಯಾ’ ಹಿತಾಸಕ್ತಿ ಕಾಯುವ ಕಮಿಷನ್ ಏಜೆಂಟ್ ಆಗಿ ಅಲ್ಲ. ಕರ್ನಾಟಕದ ಏಳೂವರೆ ಕೋಟಿ ಕನ್ನಡಿಗರ ಹಕ್ಕಿಗಾಗಿ, ಬೆಂಗಳೂರಿನ ಒಂದೂವರೆ ಕೋಟಿ ನಾಗರಿಕರ…

Read More

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಅಪರೂಪದ ವಿಸ್ಮಯ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ದಿಢೀರ್ ಪತ್ತೆಯಾಗಿದ್ದು, ಹೆತ್ತ ತಾಯಿಯ ಮಡಿಲು ಸೇರಿದ್ದಾರೆ. ಆ ಮೂಲಕ ಸಾಯುವ ಮುನ್ನ ಮಗನನ್ನು ನೋಡಬೇಕೆಂಬ ತಾಯಿಯ ದಶಕಗಳ ಕನಸು ಕೊನೆಗೂ ನನಸಾಗಿದೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದ ವ್ಯಕ್ತಿ. 2000ನೇ ಇಸವಿಯಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದೊಂದಿಗೆ ಸತೀಶ್ ಓಡಿಹೋಗಿದ್ದ. ಬಳಿಕ 26 ವರ್ಷಗಳ ನಂತರ ಈಗ ಆತ ಮರಳಿ ಮನೆ ಸೇರಿದ್ದಾನೆ. ಅಂದು ಸರ್ಕಸ್ ತಂಡದೊಂದಿಗೆ ಊರು ಬಿಟ್ಟಿದ್ದ ಸತೀಶ್, ಸರ್ಕಸ್ ತಂಡದ ಜೊತೆ ದೇಶದ ವಿವಿಧೆಡೆ ಸುತ್ತಾಡಿ ಅಂತಿಮವಾಗಿ ಮಹಾರಾಷ್ಟ್ರ ಸೇರಿಕೊಂಡಿದ್ದನು. ಕಳೆದ 26 ವರ್ಷಗಳಿಂದ ಮಹಾರಾಷ್ಟ್ರದಲ್ಲೇ ನೆಲೆ ನಿಂತು ಕೆಲಸ ಮಾಡಿಕೊಂಡಿದ್ದ ಆತ, ನಿರಂತರ ದುಡಿಮೆಯ ನಡುವೆ ತನ್ನ ಸ್ವಂತ…

Read More

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಮೃತದೇಹಕ್ಕೆ ಬೆಂಕಿ ಹಚ್ಚಿರುವ ಧಾತೂsetup ಘಟನೆ ಬೆಳಕಿಗೆ ಬಂದಿದೆ. ಜೂನ್ 8ರಂದು ಸಂಜೆ 7:00 ರಿಂದ ರಾತ್ರಿ 10:15 ರ ಅವಧಿಯಲ್ಲಿ ಕನಕಗಿರಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿ ನಿವಾಸಿ (43 ವರ್ಷ) ಎಂದು ಗುರುತಿಸಲಾಗಿದೆ. ಈಕೆ ಕುಷ್ಟಗಿ ತಾಲೂಕಿನ 30 ವರ್ಷದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಘಟನೆ ನಡೆದ ರಾತ್ರಿ ಆರೋಪಿ ಪ್ರಿಯಕರನು ಮಹಿಳೆಯನ್ನು ಕನಕಗಿರಿಯ ನಿರ್ಮಾಣ ಹಂತದಲ್ಲಿದ್ದ ಮನೆಗೆ ಕರೆತಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ತೀವ್ರ ಜಗಳ ನಡೆದಿದ್ದು, ಆಕ್ರೋಶಗೊಂಡ ಆರೋಪಿ ಮಹಿಳೆಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ತದನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹಕ್ಕೆ ಕಂಬಳಿ ಸುತ್ತಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ. ಘಟನೆಗೆ…

Read More

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ತಮ್ಮ ಜಮೀನನ್ನು ನೀಡಲು ಒಪ್ಪಿಕೊಂಡ ರೈತರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜೂನ್ 8ರಂದು ಬಿಡದಿ ಪೊಲೀಸ್ ಠಾಣೆಯಲ್ಲಿ ರಾಜಣ್ಣ ಎಚ್.ಸಿ. ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ (FIR) ದಾಖಲಿಸಲಾಗಿದೆ. ದೂರುದಾರರಾದ ರಾಜಣ್ಣ ಅವರು, ಬಿಡದಿ ಟೌನ್‌ಶಿಪ್ ಯೋಜನೆಗಾಗಿ ತಮ್ಮ ಜಮೀನು ಸ್ವಾಧೀನಕ್ಕೆ ನೀಡಲು ಒಪ್ಪಿಕೊಂಡ ರೈತರಲ್ಲಿ ತಾವೂ ಒಬ್ಬರು ಎಂದು ತಿಳಿಸಿದ್ದಾರೆ. ಜೂನ್ 6ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೈರಮಂಗಲ ಗ್ರಾಮದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ರವಿ ಕೃಷ್ಣಾ ರೆಡ್ಡಿ ಅವರು ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನು ನೀಡಲು ಒಪ್ಪಿದ ರೈತರನ್ನು ಅವರು “ರಾಕೆಟಿಯರ್‌ಗಳು” ಹಾಗೂ “ರಿಯಲ್ ಎಸ್ಟೇಟ್ ಏಜೆಂಟ್‌ಗಳು” ಎಂದು ಕರೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.…

Read More

ಸಿರಾ: ಸುಮಾರು 50 ವರ್ಷಗಳ ರಾಜಕೀಯ ಜ್ಞಾನ ಹೊಂದಿರುವ ಸಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರಿಗೆ ಸರ್ಕಾರದಲ್ಲಿ ಕಾನೂನಿನ ಪೂರ್ಣ ಅರಿವಿದೆ. ಇಡೀ ಸರ್ಕಾರವನ್ನು ಎಚ್ಚರಿಕೆಯಿಂದ ನಡೆಯುವಂತೆ ಶ್ರಮಿಸುವಲ್ಲಿ ಹೆಚ್ಚಿನ ಶಕ್ತಿಯೂ ಇದೆ. ಆದರೆ ಸಂಪುಟದ ಮೊದಲ ಪಟ್ಟಿಯಲ್ಲಿ ಅವರ ಹೆಸರನ್ನು ಪ್ರಕಟಿಸಿಲ್ಲ. ಎರಡನೆಯ ವಿಸ್ತರಣೆಯಲ್ಲಿ ಅವರಿಗೂ ಸೂಕ್ತ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕದ ಅಧ್ಯಕ್ಷ ಪಿ.ಆರ್. ಮಂಜುನಾಥ್ ಒತ್ತಾಯಿಸಿದರು. ಪ್ರವಾಸಿ ಮಂದಿರದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಲಕ್ಷಾಂತರ ಕುಂಚಿಟಿಗ ಒಕ್ಕಲಿಗ ಮತದಾರರಿದ್ದು, ಜಯಚಂದ್ರ ಅವರು ಕುಂಚಿಟಿಗ ಸಮುದಾಯದ ಏಕೈಕ ಶಾಸಕರಾಗಿದ್ದಾರೆ. ಈ ಸಮುದಾಯಕ್ಕೆ ಸಚಿವ ಸಂಪುಟ ಸ್ಥಾನ ಲಭ್ಯವಾಗದೆ ಇದ್ದಲ್ಲಿ ಈ ಸಮುದಾಯ ಬೇರೆ ತೀರ್ಮಾನಗಳ ಬಗ್ಗೆ ಯೋಚಿಸುವ ಮುನ್ನ ಡಿಕೆಶಿ ಸರ್ಕಾರದಲ್ಲಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಒತ್ತಾಯ ಮಾಡಿದರು. ಸಿರಾ ಕ್ಷೇತ್ರವನ್ನಷ್ಟೇ ಅಲ್ಲದೆ…

Read More

ತುಮಕೂರು: ತುಮಕೂರಿನ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ (University College of Science) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ ಪದವಿ ಕೋರ್ಸ್‌ಗಳ ಉಳಿಕೆ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ವರ್ಷದ ಬಿ.ಎಸ್ಸಿ (B.Sc), ಬಿ.ಸಿ.ಎ (BCA) ಮತ್ತು ಬಿ.ಸಿ.ಎ ಡಾಟಾ ಸೈನ್ಸ್ [BCA (Data Science)] ಪದವಿಗಳ ಪ್ರವೇಶಾತಿಗೆ ಎರಡನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ತುಮಕೂರು ಯೂನಿವರ್ಸಿಟಿ ಜಾಲತಾಣ tumkuruniversity.ac.in ಅಥವಾ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ವೆಬ್‌ಸೈಟ್ ucst.ac.in ಗೆ ಭೇಟಿ ನೀಡಿ, UUCMS ಮುಖಾಂತರ ತಮ್ಮ ಆಯ್ಕೆಯ ಆದ್ಯತೆಯ ಅನುಕ್ರಮದಂತೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ ಲೈನ್‌ ನಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿಯೊಂದಿಗೆ (Printout) ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಲಗತ್ತಿಸಿ, ಕಾಲೇಜಿನ ಕಚೇರಿಗೆ ಸಲ್ಲಿಸತಕ್ಕದ್ದು. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12–06–2026 ಬಿ.ಸಿ.ಎ (BCA) ಎರಡನೇ ಸುತ್ತಿನ ಕೌನ್ಸಿಲಿಂಗ್ ದಿನಾಂಕ:…

Read More

ನವದೆಹಲಿ/ಬೆಂಗಳೂರು: ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಷಡಕ್ಷರಿ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದರು. ದೆಹಲಿಯ ಕರ್ನಾಟಕ ಭವನದಲ್ಲಿದ್ದ ಸಂದರ್ಭದಲ್ಲಿ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅವರ ಜೊತೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ (ಎಮ್‌ ಎಲ್‌ ಸಿ) ರಾಜೇಂದ್ರ ರಾಜಣ್ಣ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಷಡಕ್ಷರಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಯಮಿತ (ಲಿಡ್‌ಕರ್) ವತಿಯಿಂದ ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 6 ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಲೇಔಟ್ (6ನೇ ಬ್ಲಾಕ್), ಉಲ್ಲಾಳು ಉಪನಗರ ಬಸ್ ನಿಲ್ದಾಣದ ಹತ್ತಿರವಿರುವ ‘ಕರ್ನಾಟಕ ಚರ್ಮ ಮತ್ತು ಫ್ಯಾಷನ್ ತಾಂತ್ರಿಕ ಸಂಸ್ಥೆ’ಯಲ್ಲಿ ಈ ಸ್ಪರ್ಧೆ ನಡೆಯಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುಂಡರಗಿ ನಾಗರಾಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿದ್ದಲಿಂಗಪ್ಪ ಬಿ. ಪೂಜಾರ್ ಅವರು ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಪೊಲೀಸರು ಬಿಗಿ ಪಂಜಾ ಚಾಚಿದ್ದಾರೆ. ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಪೊಲೀಸರು, ಒಟ್ಟು ₹14.50 ಲಕ್ಷ ಮೌಲ್ಯದ 25 ಕೆ.ಜಿ. ಗಾಂಜಾ ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ. ಜೂನ್ 10 ರಂದು ನಗರದ ಇರಾನಿ ಗಲ್ಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮತ್ತು ಸಾಗಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕ (SP) ಪ್ರದೀಪ ಗುಂಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಹಾಗೂ ಡಿವೈಎಸ್ಪಿ ದೂದ್ ಪೀರ್ ಹುಸೇನಸಾಬ್ ಮುಲ್ಲಾ ಅವರ ಮಾರ್ಗದರ್ಶನದಲ್ಲಿ, ಗಾಂಧಿಗಂಜ್ ಠಾಣೆಯ ಇನ್ಸ್ಪೆಕ್ಟರ್ ಆನಂದರಾವ್ ಎಸ್.ಎನ್. ನೇತೃತ್ವದ ವಿಶೇಷ ತಂಡ ಎರಡು ಪ್ರತ್ಯೇಕ ಕಾರ್ಯಾಚರಣೆಗಳನ್ನು ಕೈಗೊಂಡಿತು. ಮೊದಲ ದಾಳಿ: ಇರಾನಿ ಗಲ್ಲಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು,…

Read More