Subscribe to Updates
Get the latest creative news from FooBar about art, design and business.
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
- ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
Author: admin
ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ವೇಳೆ ಒಳಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಹೆಚ್‌ಎಸ್‌ಆರ್ ಲೇಔಟ್ ಎ.ವಿಜಯಕುಮಾರ್, ಎಸ್.ಎಸ್.ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂಬವನಗರದ ಎಂ.ರಾಜರತ್ನಂ ಸರ್ಜಾಪುರದ ಎಸ್.ವಿ.ಸುರೇಶ್, ಚೊಕ್ಕಸಂದ್ರದ ಎನ್.ವೇಣುಗೋಪಾಲ್. ಸರ್ಜಾಪುರ ಅಂಬೇಡ್ಕರ್ ಕಾಲೊನಿಯ ಎಸ್.ವಿ.ಶ್ರೀನಿವಾಸ್ ಬಂಧಿತ ಒಳ ಮೀಸಲಾತಿ ಹೋರಾಟಗಾರರು. ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಎಲ್ಲ ವರ್ಗದ ಜನರು ಸಂತೋಷ ಪಡುವ ಉಡುಗೊರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ” ಎಂದು ತಿಳಿಸಿದರು. 1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು. ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ 42,018 ಕೋಟಿ ರೂ.ಗಳ ಅನುದಾನವನ್ನು ಎಸ್ ಸಿಪಿ/ಟಿಎಸ್ ಪಿ ಅಡಿ ಒದಗಿಸಲಾಗಿದೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ ರೂ., ಬುಡಕಟ್ಟು ಉಪಯೋಜನೆಯಡಿ 12,026 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಸೌಲಭ್ಯಕ್ಕೆ ಪ್ರಗತಿ ಕಾಲೋನಿ ಯೋಜನೆಯಡಿ 559 ಕೋಟಿ ರೂ. ಹಿಂದಿನ ವರ್ಷದ ಕಾಮಗಾರಿ ಪೂರ್ಣಗೊಳಿಸಲು 222 ಕೋಟಿ ರೂ. ಒದಗಿಸಲಾಗಿದೆ. ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಹೊಸ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ. ಎಸ್ ಸಿ/ಎಸ್ ಟಿ, ಓಬಿಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ವಸತಿ ಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. 26 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 1292 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿಯ 40, ಪರಿಶಿಷ್ಟ ಪಂಗಡದ 7, ಹಿಂದುಳಿದ ವರ್ಗಗಳ 14…
ಬೀದರ್: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅತ್ಯಂತ ಸ್ವಾಗತಾರ್ಹವಾಗಿದೆ’ ಎಂದು ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ್ ಸಾದುರೆ ಬಣ್ಣಿಸಿದ್ದಾರೆ. ಬೀದರ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಾರೆ. ನೂತನ ಹುಲಸೂರು, ಕಮಲನಗರ್, ಚಿಡಗುಪ್ಪ, ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕಾಗಿ ಅನುಮೋದನೆ ನೀಡಿದ್ದಾರೆ. ಕ.ಕ.ಭಾಗದಲ್ಲಿ 24 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ನಗರ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ 10 ಮೇಲ್ದರ್ಜೆಗೇರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸಮಾಜಮುಖಿ ಬಜೆಟ್ ಆಗಿದೆ. ಎಲ್ಲ ವರ್ಗಗಳು, ಸಮುದಾಯಕ್ಕೂ ಅನುದಾನ ಕೊಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಒಳ್ಳೆಯ ಅನೇಕ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯಕ್ಕೆ ಬರೋಬ್ಬರಿ 4.9 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದಾರೆ ಎಂದು ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ್ ಸಾದುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮಾರ್ಚ್ 8ರಂದು ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿ ಹಲವಾರು ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಮಹಿಳಾ ಸ್ಪರ್ಧೆಗಳು ಮಾ. 8ರ ಬೆಳಿಗ್ಗೆ 9 ಗಂಟೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕವಿಲ್ಲ. ಸ್ಪರ್ಧೆಯಲ್ಲಿ 13 ರಿಂದ 15 ವರ್ಷದೊಳಗಿನವರಿಗೆ ಮ್ಯೂಸಿಕಲ್ ಚೇರ್, 30 ರಿಂದ 40 ವರ್ಷ–ಲೆಮನ್ ಅಂಡ್ ಸ್ಪೂನ್, 15 ರಿಂದ 30ವರ್ಷ—ಹಗ್ಗ–ಜಗ್ಗಾಟ, 40 ರಿಂದ 50ವರ್ಷ–ಸೂಜಿಗೆ ದಾರ ಪೋಣಿಸುವುದು, 50 ರಿಂದ 60 ವರ್ಷ-ಬಾಲ್ ಇನ್ ದ ಬಕೆಟ್ ಕ್ರೀಡೆಗಳು ನಡೆಯಲಿವೆ ಹಾಗೂ ಅಂತ್ಯಾಕ್ಷರಿ…
ತುಮಕೂರು: ಬೆಸ್ಕಾಂ ನಗರ ಉಪ ವಿಭಾಗ–1ರ ವ್ಯಾಪ್ತಿಯಲ್ಲಿ ಎಂಎಸ್ ಬಿಲ್ಡಿಂಗ್ ಗೆ ವಿದ್ಯುತ್ ಸಂಪರ್ಕ ನೀಡುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾರ್ಚ್ 9ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಬಾರ್ ಲೈನ್, ಕೆ.ಆರ್. ಬಡಾವಣೆ ಹಾಗೂ ಎಮ್.ಜಿ.ರಸ್ತೆಯ 3 ಮತ್ತು 4ನೇ ಕ್ರಾಸ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ವಿಶ್ವದ ಅತಿ ದೊಡ್ಡ ಚುನಾವಣೆಗೆ ಹೆಸರಾಗಿರುವ ಭಾರತದ 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಸಮಗ್ರ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಈ ದತ್ತಾಂಶವು ಏಕಕಾಲದಲ್ಲಿ ನಡೆದ 2024ರ ಲೋಕಸಭಾ ಚುನಾವಣೆ(543 ಕ್ಷೇತ್ರ) ಹಾಗೂ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಹಾಗೂ ಸಿಕ್ಕಿಂ ಸೇರಿದಂತೆ 4 ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಸಂಕ್ಷಿಪ್ತ ಅಂಕಿ–ಅಂಶಗಳನ್ನು ಈ ದತ್ತಾಂಶ ಒಳಗೊಂಡಿದೆ. ಚುನಾವಣಾ ವಿಶ್ಲೇಷಣೆ ಮಾಡಲು ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಹಾಗೂ ಮತದಾರರಿಗೆ ಈ ದತ್ತಾಂಶ ಅನುಕೂಲವಾಗಲಿದೆ. ಚುನಾವಣಾ ಆಯೋಗದ ಈ ಸ್ವಯಂಪ್ರೇರಿತ ದತ್ತಾಂಶ ಬಿಡುಗಡೆ ಕಾರ್ಯವು ಭಾರತದ ಚುನಾವಣಾ ವ್ಯವಸ್ಥೆಯ ಆಧಾರವಾಗಿರುವ ಸಾರ್ವಜನಿಕ ನಂಬಿಕೆಯನ್ನು ಹೆಚ್ಚಿಸುವ ಉದ್ದೇಶವನ್ನೊಳಗೊಂಡಿದೆ. ಈ ಸವಿವರವಾದ ದತ್ತಾಂಶ ಬಿಡುಗಡೆಯು ಶೈಕ್ಷಣಿಕ ಸಂಶೋಧನೆ ಹಾಗೂ ಸಾರ್ವಜನಿಕರು ಸೇರಿದಂತೆ ಎಲ್ಲಾ ಪಾಲುದಾರರಿಗೆ ಚುನಾವಣೆ ಸಂಬಂಧಿಸಿದ ದತ್ತಾಂಶವನ್ನು ಬಹಿರಂಗಪಡಿಸುವ ಮೂಲಕ ಹೆಚ್ಚಿನ ಪಾರದರ್ಶಕತೆ ಕಾಪಾಡಿಕೊಳ್ಳುವುದಾಗಿದೆ. ಮತದಾರರ ವಿವರ :- 2024ರ ಲೋಕಸಭಾ ಚುನಾವಣೆಯಲ್ಲಿ 97,97,51,847 ನೋಂದಾಯಿತ ಮತದಾರರಿದ್ದು,…
ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಏಪ್ರಿಲ್ 3 ರಿಂದ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, 30 ದಿನಗಳ ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 9380162042, 9740982585, 9113880324ನ್ನು…
ತುಮಕೂರು: ತುಮಕೂರು ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ 2024ರ ಮೇ 1ರಂದು ಅಂತಿಮ ದಿನಾಂಕವನ್ನು ನಿಗದಿಗೊಳಿಸಿ ಅರ್ಜಿ ಆಹ್ವಾನಿಸಲಾಗಿತ್ತು. ನಿಗದಿತ ದಿನಾಂಕದೊಳಗೆ ಅರ್ಜಿಗಳು ಸ್ವೀಕೃತವಾಗದ ಕಾರಣ ಮತ್ತೊಮ್ಮೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಲಿತಪರ/ ಹಿಂದುಳಿದ ಪರ ಸಂಘಟನೆಗಳಲ್ಲಿ ಜನಾಂಗದ ಪರವಾಗಿ ನಿಷ್ಪಕ್ಷಪಾತವಾಗಿ ಶ್ರಮಿಸಿರುವ ಜಿಲ್ಲೆಯ ಆಸಕ್ತ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಇತರೆ ವರ್ಗದ ಎನ್.ಜಿ.ಒ. ಸಂಸ್ಥೆಗಳ ಪ್ರತಿನಿಧಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ, ಬಿ.ಹೆಚ್. ರಸ್ತೆ, ತುಮಕೂರು ತಾಲ್ಲೂಕು ಇವರಿಗೆ ಮಾರ್ಚ್ 20ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ಹಾಗೂ ಮತ್ತಿತರೆ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು ಅಥವಾ ದೂ.ವಾ.ಸಂ. 0816–20063051ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಈ ಹಿಂದೆ ಅಥವಾ ಪ್ರಸ್ತುತ ಜಿಲ್ಲಾ/ ಉಪ…
ಕೊರಟಗೆರೆ: ಜನಸ್ನೇಹಿ ವೈದ್ಯರ ವರ್ಗಾವಣೆ ವಿರೋಧಿಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ನಡೆಯಿತು. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಕಮರ್ ತಪ್ಸಮ್ ವರ್ಗಾವಣೆ ಹಿನ್ನೆಲೆ ದಿಡೀರ್ ಪ್ರತಿಭಟನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿಭಟನೆ ನಡೆಯಿತು. ತುಮಕೂರು ಡಿಎಚ್ ಓ ಡಾ.ನಾಗೇಂದ್ರಪ್ಪ ಮತ್ತು ಕೊರಟಗೆರೆ ಟಿಹೆಚ್ ಓ ವಿಜಯಕುಮಾರ್ ವಿರುದ್ದ ಆಕ್ರೋಪ್ರತಿಭಟನಾಕಾರರು ಆಕ್ರೋಶ ಭುಗಿಲೆದ್ದಿದೆ. ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಜನಸ್ನೇಹಿ ವೈದ್ಯೆಯ ವರ್ಗಾವಣೆ ಖಂಡಿಸಿ ಅಕ್ಕಿರಾಂಪುರ ಸೇರಿದಂತೆ ಅಕ್ಕಪಕ್ಕದ ಸ್ಥಳೀಯರು ಆಸ್ಪತ್ರೆಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು. ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಡಾ.ಕಮರ್ ತಪ್ಸಮ್ ಹಿರಿಯರು, ಮಹಿಳೆಯರು ಮತ್ತು ಮಕ್ಕಳ ಜೊತೆ ಸೌಜನ್ಯದಿಂದ ವರ್ತಿಸಿ ಪ್ರತಿನಿತ್ಯ ಸಂಜೆ 6 ಗಂಟೆವರೆಗೂ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಜನಸ್ನೇಹಿ…