Author: admin

ಹುಳಿಯಾರು : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ಪ್ರತಿ ಚೀಲಕ್ಕೂ ಸರ್ಕಾರ ನಿಗದಿಪಡಿಸಿದ ತೂಕದಷ್ಟು ಮಾತ್ರವೇ ರಾಗಿ ತೂಕ ಮಾಡಬೇಕೆಂದು ಹಾಗೂ ಖರೀದಿ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳಿಗೂ ಅವಕಾಶ ಕೊಡದಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು. ಹುಳಿಯಾರು ರಾಗಿಖರೀದಿ ಕೇಂದ್ರಕ್ಕೆ ಆಗಮಿಸಿದ ಸುಮಾರು 25ಕ್ಕೂ ಹೆಚ್ಚಿನ ರೈತ ಸಂಘದ ಪದಾಧಿಕಾರಿಗಳು ಖರೀದಿ ಕೇಂದ್ರದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಧ್ವನಿ ಎತ್ತಿದರು. ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆಗೆದು ರಾಗಿ ಖರೀದಿಸುತ್ತಿರುವುದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಿಂದ ಖರೀದಿಸಲು ಮುಂದಾಗುತ್ತಿರುವುದು ಸರಿಯಷ್ಟೇ. ಪ್ರತಿ ಗೋಣಿಚೀಲದಲ್ಲಿ 50 ಕೆ.ಜಿ. ರಾಗಿ ಹಾಗೂ ಚೀಲದ ತೂಕ 650 ಗ್ರಾಂ ಸೇರಿ ಅಷ್ಟು ರಾಗಿಯನ್ನು ಮಾತ್ರವೇ ಹೆಚ್ಚುವರಿ ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದರೂ ಸಹ ಇಲ್ಲಿನ ಸಿಬ್ಬಂದಿ 52 ಕೆ.ಜಿ. ರಾಗಿ ತರಬೇಕು ಎಂದು ರೈತರಿಗೆ…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ ಆದೇಶದಂತೆ ಅಕ್ಕಿರಾಂಪುರ ಗ್ರಾಮದಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ ಪ್ರಾರಂಭವಾಗಿದೆ ಎಂದು ಕೊರಟಗೆರೆ ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಗುರುವಾರ ಏರ್ಪಡಿಸಲಾಗಿದ್ದ ರಾಗಿ ಖರೀದಿ ಕೇಂದ್ರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು. ಗ್ರಾಮೀಣ ರೈತರ ಮನವಿಯಿಂದ ಪ.ಪಂ. ಕಚೇರಿಯಲ್ಲಿ ಕಳೆದ 15 ದಿನದ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಕೊರಟಗೆರೆಯಲ್ಲಿ ರಾಗಿ ಕೇಂದ್ರ ತೆರೆಯುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಸೂಚನೆಯಂತೆ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. ಕೊರಟಗೆರೆ ಆಹಾರ ನಿಗಮದ ವ್ಯವಸ್ಥಾಪಕ ಟಿ.ಹೆಚ್.ರುದ್ರಪ್ಪ ಮಾತನಾಡಿ, ಅಕ್ಕಿರಾಂಪುರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಗುರುವಾರ, ಶುಕ್ರವಾರ ಮತ್ತು ಶನಿವಾರ ರೈತರಿಂದ ರಾಗಿ ಖರೀದಿ ಮಾಡಲಾಗುತ್ತೆ. ಪ್ರತಿ ಕ್ವಿಂಟಾಲ್ ರಾಗಿ ಖರೀದಿಗೆ…

Read More

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ನಿರ್ಧಾರಿಸಿರುವುದಾಗಿ ಮುಖ್ಯುಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿಯನ್ನು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮಕ್ಕೆ ಉದ್ಯಮ ಸ್ಥಾನಮಾನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ ನೀಡಲಾಗುವುದು ಮತ್ತು ಕೈಗಾರಿಕಾ ನೀತಿಯಡಿಯಲ್ಲಿ ಒದಗಿಸಲಾದ ಸೌಲಭ್ಯಗಳನ್ನು ಚಲನಚಿತ್ರೋದ್ಯಮಕ್ಕೂ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್​ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ  ಒಪ್ಪಿದ್ದು,  ಬಜೆಟ್​ ನಲ್ಲಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರಗಳನ್ನು 200 ರೂಪಾಯಿಗೆ ಸಿಎಂ ನಿಗದಿಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಮೈಸೂರು ಏರ್ ​ಪೋರ್ಟ್​​ ರನ್​ ವೇ ವಿಸ್ತರಣೆಗೆ ನಿರ್ಧರಿಸಲಾಗಿದೆ. ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ವಿಜಯಪುರದಲ್ಲಿ 348 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತದೆ. ರಾಯಚೂರು ಏರ್ ​ಪೋರ್ಟ್​ ಕಾಮಗಾರಿಗೆ 53 ಕೋಟಿ ರೂ. ಅನುದಾನ ನೀಡಲಾಗುವುದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೊರಟಗೆರೆ : ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರ್ಯಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯ ಪರಿಣಾಮ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಟ್ರ್ಯಾಕ್ಟರ್ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸಮೀಪದ ಟ್ರ್ಯಾಕ್ಟರ್ ಮತ್ತುದ್ವಿಚಕ್ರ ವಾಹನದ ನಡುವೆ ಅಪಘಾತ ನಡೆದಿದ್ದು, ಅಲಪನಹಳ್ಳಿಯ ಲಿಂಗಪ್ಪ(50) ಮೃತ ದುರ್ದೈವಿ ಆಗಿದ್ದಾನೆ. ಕ್ಯಾಮೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಂಪುಗಾನಹಳ್ಳಿಯಿಂದ ಲಂಕೇನಹಳ್ಳಿ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯೆ ಈ ಘಟನೆ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ಅಕ್ರಮ ಮಣ್ಣು ಸಾಗಾಟ ಮಾಡಲಾಗುತ್ತಿತ್ತು. ಅಪಘಾತವಾದ ತಕ್ಷಣವೇ ಟ್ರ್ಯಾಕ್ಟರ್ ಚಾಲಕ ಸಮೇತ ಪರಾರಿ ಆಗಿದ್ದಾನೆ. ಅಪಘಾತ ಸ್ಥಳಕ್ಕೆ ಕೊರಟಗೆರೆ ಸಿಪಿಐ ಅನಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಟ್ರ್ಯಾಕ್ಟರ್ ಚಾಲಕನ ಬಂಧನಕ್ಕೆ ಈಗಾಗಲೇ ಪೊಲೀಸರು ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ…

Read More

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಬಜೆಟ್ ಭಾಷಣದಲ್ಲಿ ಈ ಮಹತ್ವದ ಘೋಷಣೆ ಮಾಡಿದ ಅವರು, ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: 2025–26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿದ್ದಾರೆ. ಮುಖ್ಯಾಂಶಗಳು: ರಾಜ್ಯ ಬಜೆಟ್ ನಲ್ಲಿ  ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್​ ಬುಕಿಂಗ್ ​ಗೆ ವ್ಯವಸ್ಥೆ ಕಲ್ಪಿಸಲಾಗುವುದು. ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಮಲ್ಟಿಫ್ಲೆಕ್ಸ್‌ಗಳು ಸಿನಿಮಾ ಮಂದಿರಗಳಲ್ಲಿ ದುಬಾರಿ ದರ ನಿಗದಿ ತಡೆಗೆ ರಾಜ್ಯದಾದ್ಯಂತ ಏಕರೂಪದ ಟಿಕೆಟ್‌ ದರ ನಿಗದಿ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಗುರುವಾರ ಜೆಡಿಎಸ್‌ ನ ಗೋವಿಂದರಾಜು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಟಿಕೆಟ್‌ ದರಗಳನ್ನು ನಿಗದಿ ಮಾಡುವ ಅಧಿಕಾರವನ್ನು ಚಿತ್ರಮಂದಿರಗಳ ಮಾಲೀಕರಿಗೆ ನೀಡಲಾಗಿದೆ. ದರವನ್ನು ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕೂ ಇದ್ದು, ಅಗತ್ಯವೆನಿಸಿದರೆ ಅದನ್ನು ಬಳಸಬಹುದು ಎಂದರು. 2017–18ನೇ ಸಾಲಿನ ಆಯವ್ಯಯದಲ್ಲಿ ಎಲ್ಲಾ ಚಿತ್ರಮಂದಿರಗಳನ್ನು ಏಕ ರೂಪದ ದರ ಜಾರಿ ಮಾಡಲು ಘೋಷಣೆ ಮಾಡಲಾಗಿತ್ತು. ಆಯವ್ಯಯದ ಘೋಷಣೆಯಂತೆ 2018, ಮೇ 11ರಂದು ಸರ್ಕಾರದ ಆದೇಶವೂ ಸಹ ಆಗಿತ್ತು. ಆದರೆ ಆ ಸರ್ಕಾರಿ ಆದೇಶಕ್ಕೆ ತಡೆಯಾಜ್ಞೆ ತಂದ ನಿಟ್ಟಿನಲ್ಲಿ ಆದೇಶವನ್ನು ವಾಪಸ್ಸು ತೆಗೆದುಕೊಳ್ಳಲಾಯಿತು. ಚಿತ್ರಮಂದಿರಗಳ ಟಿಕೆಟ್ ದರಗಳನ್ನು ಚಿತ್ರಮಂದಿರಗಳ ಮಾಲೀಕರೇ ನಿರ್ಧಾರ ಮಾಡುವ ಪದ್ದತಿ ಜಾರಿಯಲ್ಲಿದೆ. ಮಲ್ಟಿಪ್ಲೆಕ್ಸ್ ಚಿತ್ರಮಂದಿಗಳ ಮಾಲಿಕರು ಚಿತ್ರಮಂದಿಗಳನ್ನು ವಾಣಿಜ್ಯ ಚಟುವಟಿಕೆಗಳಾಗಿ ರೂಪಿಸಿಕೊಂಡಿದ್ದಾರೆ. ಆವಶ್ಯವೆನಿಸಿದಲ್ಲಿ…

Read More

ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು,   ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More