Subscribe to Updates
Get the latest creative news from FooBar about art, design and business.
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
- ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
- ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
- ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
Author: admin
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯ ಪುತ್ರಿ ಮತ್ತು ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಬುಧವಾರ ಈ ಕುರಿತು ಪೊಲೀಸ್ ಇಲಾಖೆಯಿಂದ ಆಂತರಿಕ ವರದಿ ಕೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಪ್ರಕರಣದ ತನಿಖೆ ನಡೆಯುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಪ್ರಕರಣದ ತನಿಖೆ ನಡೆಸುತ್ತಿದೆ. ಅವರು ಖಚಿತ ಮಾಹಿತಿ ನೀಡುವವರೆಗೆ, ನಾನು ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದರು. ನಾನು ಈ ವಿಷಯವನ್ನು ಪೊಲೀಸ್ ಮುಖ್ಯಸ್ಥರೊಂದಿಗೆ ಚರ್ಚಿಸಿದ್ದೇನೆ. ಇಲಾಖೆಯು ಪರಿಶೀಲಿಸುವಂತೆ ಸೂಚಿಸಿದೆ. ಅವರು ಖಂಡಿತವಾಗಿಯೂ ಕೆಲವು ಮಾಹಿತಿಯನ್ನು ಪಡೆಯುತ್ತಾರೆ ಎಂದರು. ಪೊಲೀಸ್ ಇಲಾಖೆಯಲ್ಲಿ ಡಿಜಿಪಿಯಾಗಿ ಕೆಲಸ ಮಾಡುತ್ತಿರುವ ರಾಮಚಂದ್ರರಾವ್ ಅವರ ಮಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಡಿಅರ್ಐ ನವರೇ ತನಿಖೆಯನ್ನು ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ. ಪ್ರಕರಣ ತನಿಖಾ ಹಂತದಲ್ಲಿದೆ, ಹಾಗಾಗಿ ಏನನ್ನೂ ಹೇಳಲಾಗದು ಎಂದರು. ನಮ್ಮತುಮಕೂರಿನ…
ಲಕ್ನೋ: ಪ್ರಯಾಗ್ ರಾಜ್ ನ ನಾವಿಕ ಕುಟುಂಬವೊಂದು 45 ಗಳ ಕಾಲ ಸುಮಾರು 130 ದೋಣಿಗಳ ಮೂಲಕ 30 ಕೋಟಿ ರೂ. ಆದಾಯ ಬಂದಿದೆ. ಪ್ರತಿನಿತ್ಯ ದೋಣಿಯಿಂದ 50,000–52,000 ರೂಪಾಯಿ ಆದಾಯಗಳಿಸಿದೆ. ಈ ದೋಣಿಯು 45 ದಿನದಲ್ಲಿ 23 ಲಕ್ಷ ರೂಪಾಯಿಯಷ್ಟು ಗಳಿಕೆ ಮಾಡಿದೆ. ಅಂದ್ರೆ ಪ್ರತಿನಿತ್ಯ ಒಂದು ದೋಣಿಯಿಂದ 50,000–52,000 ರೂಪಾಯಿ ಆದಾಯ ಬಂದಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಪ್ರಯಾಗ್ ರಾಜ್ ನ ಅರೈಲ್ ಪ್ರದೇಶದ ದೋಣಿ ಚಾಲಕ ಪಿಂಟು ಮಹಾರ, ಮಹಾಕುಂಭದ ಸಮಯದಲ್ಲಿ ವಿವಿಐಪಿಗಳನ್ನು ಮತ್ತು ಸಾಮಾನ್ಯ ಭಕ್ತರನ್ನು ಸ್ನಾನದ ಘಾಟ್ ಗಳಿಗೆ ಕರೆದೊಯ್ಯುವ ಮೂಲಕ 30 ಕೋಟಿ ರೂ.ಗಳನ್ನು ಗಳಿಸಿದರು. ಇದು ದೈವಿಕ ಅನುಗ್ರಹ ಮತ್ತು ಆಶೀರ್ವಾದ. ನನಗೆ 100 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಕುಟುಂಬವಿದೆ. ಭಕ್ತರ ಬೃಹತ್ ಆಗಮನವನ್ನು ನಿರೀಕ್ಷಿಸಿ, ಮಹಾಕುಂಭಕ್ಕೆ ಮುಂಚಿತವಾಗಿ ಒಟ್ಟು 130 ದೋಣಿಗಳನ್ನು ತೆಗೆದುಕೊಂಡೆ, ಅಲ್ಲಿಯವರೆಗೆ ನನ್ನ ಬಳಿ 60 ದೋಣಿಗಳಿದ್ದವು ಎಂದು ಪಿಂಟು ಹೇಳುತ್ತಾರೆ.…
ಬೆಂಗಳೂರು: ಗುತ್ತಿಗೆದಾರರ ಬಾಕಿ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಜೆಡಿಎಸ್ ಎಂಎಲ್ಸಿ ಟಿಎ ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಣ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿ ಗುತ್ತಿಗೆದಾರರಿಗೆ ಸುಮಾರು 9,000 ಕೋಟಿ ರೂ.ಗಳನ್ನು ಪಾವತಿಸುವುದಾಗಿ ತಿಳಿಸಿದರು. ಲೋಕೋಪಯೋಗಿ ಇಲಾಖೆಗೆ 10,023 ಕೋಟಿ ರೂ.ಗಳ ಬಜೆಟ್ ಹಂಚಿಕೆ ಇದ್ದು, 8,392 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು. ಉಳಿದ ಸುಮಾರು 1400 ಕೋಟಿ ರೂ.ಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಬಿಡುಗಡೆ ಮಾಡಲಾಗುವುದು. ಆದಾಗ್ಯೂ, 2021 ಮತ್ತು 2022 ವರ್ಷಗಳಿಗೆ 8,925 ಕೋಟಿ ರೂ.ಗಳ ಬಿಲ್ಗಳು ಬಾಕಿ ಉಳಿದಿವೆ ಮತ್ತು ಈ ಕಾಮಗಾರಿಗಳಿಗೆ ಯಾವುದೇ ಬಜೆಟ್ ಹಂಚಿಕೆಯಾಗಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಶ್ರವಣಬೆಳಗೊಳ: ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಪಟ್ಟಾಭಿಷಕ್ತರಾಗಿ ಎರಡು ವಸಂತ ಸಂದಿದೆ. ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿ ಪುರಪ್ರವೇಶ ಮಾಡಿದರು. ಶ್ರೀಗಳ ಆಗಮನ ಹಿನ್ನೆಲೆಯಲ್ಲಿಅವರನ್ನು ಭವ್ಯ ಹಾಗೂ ಭಕ್ತಿಪೂರ್ವಕ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ತರುವಾಯ ದೇಶದ ಅತಿದೊಡ್ಡ ಬ್ರಹ್ಮಕಮಲ ಆಡಿಟೋರಿಯಂನ ಯಶೋಭೂಮಿ ಕನ್ವೆಷನ್ಹಾಲ್ ನಲ್ಲಿ ಮಹಾಸ್ವಾಮೀಜಿ ಅವರ ಅದ್ಧೂರಿ ಹಾಗೂ ಭಕ್ತಿಪೂರ್ವಕ ಸ್ವಾಗತ ಸಮಾರಂಭವನ್ನು ಆಯೋಜಿಸಿ ಅಪಾರ ಮಂದಿ ಸೇರಿ ಅಭಿನಂದಿಸಿ ಸತ್ಕರಿಸಿದರು. ಸ್ವಾಮೀಜಿ ಅವರು ಪ್ರಪ್ರಥಮವಾಗಿ ದೆಹಲಿಗೆ ಪದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಮೊದಲಾದವರು ಸೇರಿ ಪೂಜ್ಯಶ್ರೀ ಸ್ವಾಮೀಜಿ ಅವರನ್ನು ವಿನಮ್ರವಾಗಿ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೆಹಲಿಯ ಮೂವರು ಸಂಸದರು, ಶಾಸಕರು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಾಗೆಯೇ ದೆಹಲಿಯ ಅನೇಕ ಸಮಾಜ, ಸಮುದಾಯಗಳ ಪ್ರಮುಖರು, ಉದ್ಯಮಿಗಳು, ಅಧಿಕಾರಿಗಳು ಹಾಗೂ ದೆಹಲಿಯಲ್ಲಿ ನೆಲೆಸಿರುವ ಮೂರು ಸಾವಿರಕ್ಕೂ ಹೆಚ್ಚು ಶ್ರವಣಬೆಳಗೊಳದ ಭಕ್ತ ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು,…
ತುಮಕೂರು: ಜಿಲ್ಲಾಸ್ಪತ್ರೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನರ್ಸಿಂಗ್ ಕಾಲೇಜಿಗೆ ಇದೇ ಮೊದಲ ಬಾರಿಗೆ 10 ರ‍್ಯಾಂಕುಗಳು ಲಭಿಸಿದ್ದು, ರ‍್ಯಾಂಕು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಅಸ್ಗರ್ ಬೇಗ್ ಹಾಗೂ ಸ್ಥಾನೀಯ ವೈದ್ಯಾಧಿಕಾರಿ ಡಾ.ನಾಗರಾಜ್ ಜಿ. ಅಭಿನಂದನೆ ತಿಳಿಸಿದ್ದಾರೆ. ಸರ್ಕಾರಿ ನರ್ಸಿಂಗ್ ಕಾಲೇಜು 2019ರಲ್ಲಿ ಪ್ರಾರಂಭವಾಗಿದ್ದು, ಇದುವರೆಗೆ ಒಟ್ಟು 6 ತಂಡಗಳು ನರ್ಸಿಂಗ್ ತರಗತಿಗೆ ದಾಖಲಾಗಿವೆ. 2020–24ನೇ ಸಾಲಿನ 2ನೇ ತಂಡವು ವಿಷಯವಾರು ರಾಜ್ಯದ 10 ರ‍್ಯಾಂಕುಗಳಲ್ಲಿ ತುಮಕೂರು ಸರ್ಕಾರಿ ನರ್ಸಿಂಗ್ ಕಾಲೇಜಿಗೆ ಇದೇ ಪ್ರಥಮ ಬಾರಿಗೆ 10 ರ‍್ಯಾಂಕುಗಳು ಲಭಿಸಿದ್ದು, 1ನೇ ಬಿ.ಎಸ್ಸಿ ನರ್ಸಿಂಗ್ ತರಗತಿಯ ವಿದ್ಯಾರ್ಥಿನಿಯರಾದ ಸುಷ್ಮಾ 8ನೇ ರ‍್ಯಾಂಕ್, ಸಂಗೀತಾ ಮಾದರ್ 9 ಹಾಗೂ ಅಂಜಲಿ ಕಿರಸೂರು ಹಾಗೂ ಗಗನ ಎಂ.ಎಸ್. 10ನೇ ರ‍್ಯಾಂಕ್; 2ನೇ ಬಿ.ಎಸ್ಸಿ ನರ್ಸಿಂಗ್ ತರಗತಿ ವಿದ್ಯಾರ್ಥಿನಿ ದಿವ್ಯ ಎನ್. 8ನೇ ರ‍್ಯಾಂಕ್, 3ನೇ ಬಿ.ಎಸ್ಸಿ ನರ್ಸಿಂಗ್ ತರಗತಿ ವಿದ್ಯಾರ್ಥಿನಿ ಅಂಜಲಿ ಕಿರಸೂರು ಹಾಗೂ ಗಗನ್ ಕುಮಾರ್ ಹೆಚ್. 4ನೇ ರ‍್ಯಾಂಕ್; 4ನೇ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಹಳೇವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಾಲಯದ ಜಾತ್ರಾ ಮಹೋತ್ಸವವು ಮಾರ್ಚ್ 16 ರಿಂದ 21ರವರೆಗೆ ನಡೆಯಲಿದೆ. ಜಾತ್ರೆ ಅಂಗವಾಗಿ ಮಾ.16ರಂದು ಬೆಳಿಗ್ಗೆ 6 ಗಂಟೆಗೆ ಹೊನ್ನಾರು, ರಾತ್ರಿ 9 ಗಂಟೆಗೆ ಅರಮನೆ ಆರತಿ; ಮಾ.17ರಂದು ಮಧ್ಯಾಹ್ನ ಕುರ್ಜಿನ ಉತ್ಸವ, ರಾತ್ರಿ ಘಟೆ ಉತ್ಸವ, ಸೂರ್ಯಮಂಡಲೋತ್ಸವ, ದೇವರ ಉತ್ಸವ, ಹುಯಿಲ್ ಬಂಡಿ ಉತ್ಸವ; ಮಾ.18ರಂದು ಬೆಳಿಗ್ಗೆ ಅಗ್ನಿಕೊಂಡೋತ್ಸವ, ಸಂಜೆ ರಥೋತ್ಸವ, ಅರವಂಟಿಕೆ ಹಾಗೂ ಪಲ್ಲಕ್ಕಿ ಉತ್ಸವ; ಮಾ.19ರಂದು ಕುದುರೆ ವಾಹನೋತ್ಸವ; ಮಾ. 20ರಂದು ಹುಲಿ ವಾಹನೋತ್ಸವ; ಮಾ.21ರಂದು ಮಧ್ಯಾಹ್ನ ಉಯ್ಯಾಲೋತ್ಸವ, ಸಂಜೆ ತೆಪ್ಪೋತ್ಸವ, ಅರವಂಟಿಕೆ ಮತ್ತು ಕಂಭ ವಿಸರ್ಜನೆ ಕಾರ್ಯಕ್ರಮಗಳು ಜರುಗಲಿವೆ. ಈ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವ ಮೂಲಕ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಪ್ರಸಕ್ತ ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಮುನ್ನವೇ ಕೆಲವು ಖಾಸಗಿ ಶಾಲೆಗಳು ಮಕ್ಕಳನ್ನು ದಾಖಲು ಮಾಡುವಂತೆ ಪೋಷಕರನ್ನು ಒತ್ತಾಯ ಮಾಡುತ್ತಿರುವ ಬಗ್ಗೆ ಜಿಲ್ಲಾ ಖಾಸಗಿ ಶಾಲಾ ಮಕ್ಕಳ ಪೋಷಕರ ಸಂಘ ಆರೋಪಿಸಿದೆ. ಮಕ್ಕಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾಗದ ಕಾರಣ 2025–26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೂ ಮುನ್ನ ಮಕ್ಕಳ ದಾಖಲಾತಿ ಮಾಡಿಕೊಂಡ ಬಗ್ಗೆ ಪೋಷಕರಿಂದ/ಸಾರ್ವಜನಿಕರಿಂದಾಗಲಿ ದೂರುಗಳು ಬಂದಲ್ಲಿ ಸಂಬಂಧಿಸಿದ ಶಾಲೆ/ ಶಾಲಾ ಆಡಳಿತ ಮಂಡಳಿಯನ್ನು ನೇರ ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತುಮಕೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ತುಮಕೂರು ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಕೆರೆಯಲ್ಲಿ ಪ್ರಸ್ತುತ 204 ಎಂ.ಸಿ.ಎಫ್.ಟಿ ನೀರು ಲಭ್ಯವಿದ್ದು, ಲಭ್ಯವಿರುವ ನೀರನ್ನು ಬೇಸಿಗೆ ಅಂತ್ಯದವರೆಗೂ ಸರಬರಾಜು ಮಾಡಬೇಕಾಗಿರುವುದರಿಂದ ನಾಗರಿಕರು ನೀರಿನ್ನು ಮಿತವಾಗಿ ಬಳಕೆ ಮಾಡಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದರು. ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಜಲಸಂಗ್ರಹಗಾರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, 363 ಎಂ.ಸಿ.ಎಫ್.ಟಿ. ಸಾಮರ್ಥ್ಯದ ಬುಗುಡನಹಳ್ಳಿ ಕೆರೆಯಲ್ಲಿ ಲಭ್ಯವಿರುವ 204 ಎಂ.ಸಿ.ಎಫ್.ಟಿ. ನೀರನ್ನು ಜೂನ್ ಅಂತ್ಯದವರಗೆ ನಗರಕ್ಕೆ ನೀರು ಸರಬರಾಜು ಮಾಡಬಹುದಾಗಿದೆ. ನೀರಿನ ಸಮಸ್ಯೆ ತಲೆದೋರದಂತೆ ಕೊಳವೆಬಾವಿಗಳ ಮೂಲಕವೂ ನಾಗರಿಕರಿಗೆ ನೀರು ಸರಬರಾಜು ಮಾಡಲು ಕ್ರಮವಹಿಸಲಾಗಿದೆ. ನಗರಕ್ಕೆ ನೀರು ಸರಬರಾಜು ಮಾಡುವ ಎಲ್ಲಾ ಜಲಶುದ್ಧೀಕರಣ ಘಟಕ, ಜ್ಯಾಕ್ ವೆಲ್ ಹಾಗೂ ಪಂಪ್‌ಹೌಸ್‌ಗಳ ಪರಿವೀಕ್ಷಣೆ ನಡೆಸಲಾಗಿದೆ. ಪಂಪ್–ಮೋಟಾರ್‌ಗಳು ಸುಸ್ಥಿತಿಯಲ್ಲಿದ್ದು, ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ. ಪಾಲಿಕೆಗೆ ಸಂಬಂಧಿಸಿದ 4 ವಾಟರ್ ಟ್ಯಾಂಕರ್‌ಗಳಿದ್ದು ಅವಶ್ಯವಿರುವ ಕಡೆ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲು ಟ್ಯಾಂಕರ್‌ಗಳನ್ನು ಉಪಯೋಗಿಸಲಾಗುತ್ತಿದೆ.…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಏಮ್’ ಸ್ಕ್ವೇರ್ ಕಾರ್ಪೊರೇಷನ್ ಹಾಗೂ ಅಗಸ್ತ್ಯ ಫೌಂಡೇಶನ್ ವತಿಯಿಂದ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಿರುದ್ಯೋಗಿಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಎಸ್.ಎಸ್.ಎಲ್.ಸಿ, ಬಿ.ಎಸ್ಸಿ ಬಿ.ಎಡ್, ಎಂ.ಎಸ್ಸಿ ಬಿ.ಎಡ್, ಬಿ.ಎ ಬಿ.ಎಡ್ ಹಾಗೂ ಎಂ.ಕಾಂ ತೆರ್ಗಡೆಯಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4