Author: admin

ಬೆಂಗಳೂರು:  ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್‌‍ ಜಾತ್ಯತೀತ ದಳದ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಮಂಗಳವಾರ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಹಾಗೂ ಇತರ ನಾಯಕರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಬುಧವಾರ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸ್ವಂತ ಹಣವೆಂಬಂತೆ ಕಾಂಗ್ರೆಸ್‌‍ ನಡೆದುಕೊಳ್ಳುತ್ತಿದೆ. ಯಾವಾಗ ಬೇಕೋ ಆಗ ಮಾತ್ರ ಜಮೆ ಮಾಡುತ್ತಾರೆ. ಬಹುತೇಕ ಚುನಾವಣಾ ಸಂದರ್ಭದಲ್ಲೇ ಗೃಹಲಕ್ಷ್ಮಿ ಹಣ ಬಿಡುಗಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಾದ ಶರವಣ, ಮಂಜೇಗೌಡ, ಎಂ.ಟಿ.ಕೃಷ್ಣಪ್ಪ, ಶಾರದ ಪೂರ್ವಿನಾಯಕ್‌, ಕರ್ರೆಯಮ, ಹರೀಶ್‌ಗೌಡ, ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನವದೆಹಲಿ: ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ವ್ಯವಸ್ಥೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಕೆಲವೆಡೆ ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ. ಅದು ಬಡವರಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ  ಗ್ಯಾರಂಟಿ ಬಿಟ್ಟು ಕೊಡುವ ವ್ಯವಸ್ಥೆ ತರುವ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದೇನೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ, ಮೂರು ತಿಂಗಳ ಕಂತುಗಳು ಬಾಕಿ ಉಳಿದಿವೆ. ಈಗ ಅದನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು:  ಸದನದ ಕಾರ್ಯಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗುತ್ತಿಲ್ಲ ಎಂದು ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಸಂಬಂಧ ಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಕಲಾಪವನ್ನು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ಪ್ರತಿಪಕ್ಷ ನಾಯಕರ ಭಾಷಣ ಪ್ರಸಾರವಾಗಿರಲಿಲ್ಲ.  ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ಕೈಗೊಂಡು ಸಂಬಂಧಪಟ್ಟ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಇದಕ್ಕೆ ಬಿಜೆಪಿ ಸದಸ್ಯರು ಕಿರಿಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳದೆ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಾದ ಕೆಲವು…

Read More

ಬೆಂಗಳೂರು: ಯಡಿಯೂರಪ್ಪ ಲಿಂಗಾಯತರೇ ಅಲ್ಲ, ಬಳೆಗಾರ ಶೆಟ್ಟರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಮತ್ತೆ ಯಡಿಯೂರಪ್ಪ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದಿದ್ದಾರೆ. ವೀರೇಂದ್ರ ಪಾಟೀಲ, ಜೆ.ಎಚ್‌.ಪಟೇಲ್‌ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದು  ಯತ್ನಾಳ್ ಆರೋಪಿಸಿದರು. ಬಿಜೆಪಿಯನ್ನು ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್‌ ಅನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ ಎಂದು ಯತ್ನಾಳ್ ಹೇಳಿದರು. ರೇಣುಕಾಚಾರ್ಯ ಯತ್ನಾಳ್ ಅವರನ್ನು ನಾಯಿ ನರಿ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು…

Read More

ತುಮಕೂರು: ಶಿರಾ ತಾಲೂಕಿನಲ್ಲಿ ಪ್ರತಿನಿತ್ಯ 50  ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹೈನುಗಾರಿಕೆ ಬಗ್ಗೆ ರೈತರಿಗೆ ಹೆಚ್ಚು ತರಬೇತಿ ನೀಡಿ 1 ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವುದು ಈ ನಮ್ಮ ಗುರಿ, ಪ್ರತಿದಿನ 25 ಲೀಟರ್ ಹಾಲು ಉತ್ಪಾದನೆ ಮಾಡಿ ಡೈರಿಗೆ ಹಾಕುವ 160 ರೈತರಿಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು,  ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು. ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿರುವ ಡಾ.ವರ್ಗಿಸ್ ಕುರಿಯನ್ ಸಭಾಂಗಣದಲ್ಲಿ ಮಂಗಳವಾರ ಪ್ರಗತಿಪರ ಹಾಲು ಉತ್ಪಾದಕರಿಗೆ ಆಯೋಜಿಸಿದ್ದ  ವೈಜ್ಞಾನಿಕ ಹೈನುಗಾರಿಕೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿ ನೀಡುವಂತಹ ಮಾಹಿತಿಯನ್ನು ಪಡೆದು ತಮ್ಮ ಹೈನುಗಾರಿಕೆಯಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಹಾಲು ಉತ್ಪಾದಕರಾಗಬಹುದು.  ಹಾಲು ಉತ್ಪಾದಕರು ಮ್ಯಾಟ್ ಸೇರಿದಂತೆ…

Read More

ತುಮಕೂರು:  ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯು ಕಾಡ್ಗಿಚ್ಚಿಗೆ ಬಲಿಯಾಗಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಯಡವಟ್ಟಿನಿಂದ  ಚಿರತೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಿಪಟೂರು ತಾಲ್ಲೋಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಅರಣ್ಯ ಇಲಾಖೆ ಮದ್ಲೇಹಳ್ಳಿ ಗ್ರಾಮದ ಸರ್ವೇನಂಬರ್ 10ರಲ್ಲಿ ನಾರಾಯಣಪ್ಪ ಬಿನ್ ಶಂಕರಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇರಿಸಿತ್ತು. ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿತ್ತು. ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಬೋನಿಗೆ ಬಿದ್ದಿದ್ದ ಚಿರತೆ ಹೊರಬರಲಾಗದೆ ಬೆಂಕಿ ಕೆನ್ನಾಲಿಗೆಗೆ ಉಸಿರುಗಟ್ಟಿ ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳುಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಚಿರತೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ ಕ್ರಮಕ್ಕೆ ಸಾರ್ವಜನಿಕರು…

Read More

ತುಮಕೂರು: ದೊಡ್ಡ ಹೊಸೂರಿನಗಾಂಧಿ ಸಹಜ ಬೇಸಾಯ ಆಶ್ರಮದ ಗಾಂಧಿ ರೈತ ವಿಜ್ಞಾನ ಕೇಂದ್ರ–ಜೈವಿಕ ಸಂಪನೂಲಕ ಕೇಂದ್ರವನ್ನು ಶನಿವಾರ ತಿಪಟೂರಿನ ಗುರುಕುಲ ಆಶ್ರಮದ ಮುಮ್ಮಡಿಕರಿಬಸವ ದೇಶೀ ಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿಷ ಮುಕ್ತವಾಗಿರುವ ಆಹಾರ ಮತ್ತು ಭೂಮಿಯನ್ನು ಸರಿಪಡಿಸಲು ರೈತರು ಸಾವಯವ ಕೃಷಿ ಮಾಡುವ ಅನಿವಾರ್ಯತೆ ಎದುರಾಗಿದ್ದು, ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ದೊರಕಬೇಕು. ಸಹಜ ಬೇಸಾಯ, ಸಾವಯವ ಬೇಸಾಯ ಮಾಡುವ ಮೂಲಕ ಪ್ರಕೃತಿಯ ಧರ್ಮವನ್ನು ಉಳಿಸಬೇಕು. ಯಾವುದೇ ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸದೆ ಕೃಷಿ ಮಾಡುವುದರ ಜೊತೆಗೆ ಅವುಗಳನ್ನು ಸರಿಯಾದ ಬೆಲೆಗೆ ಮಾರುವುದನ್ನು ರೈತರು ಕಲಿಯಬೇಕು ಎಂದು ತಿಳಿಸಿದರು. ಕೃಷಿ ವಿಜ್ಞಾನಿ ಮಂಜುನಾಥ್ ಮಾತನಾಡಿ, ಸಾವಯವ ಕೃಷಿ ಬೆಂಬಲಕ್ಕೆ ಸರ್ಕಾರಗಳು ಜಾರಿಗೆ ತರುತ್ತಿರುವ ಯೋಜನೆಗಳು ಕೇವಲ ಜಾಹಿರಾತಿಗೆ ಸೀಮಿತವಾಗಿದ್ದು, ಅರ್ಹರೈತ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕುತ್ತಿಲ್ಲ. ಸರ್ಕಾರ ಸಾವಯವ ಕೃಷಿಕರಿಗೆ ಸರಿಯಾದ ಬೆಂಬಲ ನೀಡಿದಾಗ ಸಾವಯವ ಕೃಷಿಕರ ಸಂಖ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಪರಿಸರವಾದಿ ಸಿ.ವೈ…

Read More

ತುಮಕೂರು: ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಪಾಲಿಕೆ ವತಿಯಿಂದ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತೆ ಅಶ್ವಿಜಾ ತಿಳಿಸಿದ್ದಾರೆ. ತುಮಕೂರು ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಕೆರೆಯ ಸಾಮರ್ಥ್ಯ 363 ಎಂ.ಸಿ.ಎಫ್.ಟಿ ಇದ್ದು, ಪ್ರಸ್ತುತ ನೀರಿನ ಪ್ರಮಾಣ 204 ಎಂ.ಸಿ.ಎಫ್.ಟಿ ಇರುತ್ತದೆ. ಲಭ್ಯವಿರುವ ನೀರನ್ನು ಜೂನ್ ಅಂತ್ಯದವರೆಗೆ ನಗರಕ್ಕೆ ನೀರು ಸರಬರಾಜು ಮಾಡಬಹುದಾಗಿರುತ್ತದೆ ಹಾಗೂ ಪಾಲಿಕೆಗೆ ಸಂಬಂಧಿಸಿದ ಕೊಳವೆಬಾವಿಗಳ ಮೂಲಕ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲು ಕ್ರಮವಹಿಸಲಾಗಿದೆ ಎಂದಿದ್ದಾರೆ. ಪ್ರಸ್ತುತ ಲಭ್ಯವಿರುವ ನೀರನ್ನು ಬೇಸಿಗೆ ಅಂತ್ಯದವರೆಗೆ ಸರಬರಾಜು ಮಾಡಲು ಅನುವಾಗುವಂತೆ ಪಂಪಿಂಗ್ ಸಮಯವನ್ನು ಮಾರ್ಪಾಡು ಮಾಡಲಾಗಿದೆ ಹಾಗೂ ಸಾರ್ವಜನಿಕರಿಗೆ ನೀರಿನ ಮಿತಬಳಕೆ ಮಾಡಲು ಕೋರಿದ್ದಾರೆ. ತುಮಕೂರು ನಗರಕ್ಕೆ ನೀರು ಸರಬರಾಜು ಮಾಡಲು ಸಂಬಂಧಿಸಿದಂತಹ ಎಲ್ಲಾ ಜಲಶುದ್ಧೀಕರಣ ಘಟಕಗಳು, ಜ್ಯಾಕ್ ವೆಲ್ ಗಳು ಹಾಗೂ ಪಂಪ್ ಹೌಸ್ಗಳ ಪರವೀಕ್ಷಣೆ ನಡೆಸಿದ್ದು, ಪಂಪ್–ಮೋಟಾರ್ ಗಳು ಸುಸ್ಥಿತಿಯಲ್ಲಿದ್ದು, ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ ಎಂದಿದ್ದಾರೆ.…

Read More

ಪಾವಗಡ: ತಾಲೂಕು ನಾಗೇನಹಳ್ಳಿ ಗ್ರಾಮ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಂಗಳವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತುಮಕೂರು ಕ್ಲಸ್ಟರ್ ನ CRP ನಾರಾಯಣ್ ನಾಯ್ಕ, ತಿರುಮಣಿ ಶಾಲೆ ಮುಖ್ಯ ಶಿಕ್ಷಕರು ಚಂದ್ರಶೇಖರ್, ರೆಡ್ಡಿವಾರಹಳ್ಳಿ ಶಾಲೆಯ ಮುಖ್ಯ ಶಿಕ್ಷಕರು ಸಂಧ್ಯಾ ನಾಗೇನಹಳ್ಳಿ ಶಾಲೆಯ ಶಿಕ್ಷಕರು ಪ್ರಭಾಕರ್, ಪಾರ್ವತಿ, ಸುಲ್ತಾನಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನರಸಿಂಹ ಮೂರ್ತಿ, ಮುಖ್ಯ ಅತಿಥಿಗಳಾಗಿ ಜಾನಪದ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಶಿಕ್ಷಕರಾದ ಶಿವಲಿಂಗಪ್ಪ ಜೆ. ನಾಗೇನಹಳ್ಳಿ, ತಾಂಡ ಶಾಲೆಯ ಶಿಕ್ಷಕರಾದ ವಿಜಯಭಾವಿ ಸೇರಿದಂತೆ ಹಲವರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪಾವಗಡ: ಪಟ್ಟಣದ ಚಳ್ಳಕೆರೆ ಕ್ರಾಸ್ ಬಳಿ ಇರುವ ಶ್ರೀ ಶಾಲಾ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಮೆಹತಾಬ್ ತಮ್ಮ ಅಪೂರ್ವ ಪ್ರತಿಭೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿದ್ದಾರೆ. ಕೇವಲ ಬಾಲ್ಯದಲ್ಲೇ ಅಪೂರ್ವ ಸಾಧನೆ ಮಾಡಿದ ಈ ಪುಟ್ಟ ಪ್ರತಿಭೆ ತನ್ನ “ಗಾಂಧಾರಿ ವಿದ್ಯೆ” ಯ ಮೂಲಕ ಗಮನ ಸೆಳೆದಿದ್ದಾರೆ. ಮೆಹತಾಬ್ ಪಾವಗಡದ ಬ್ರೈಟ್ ಫ್ಯೂಚರ್ ಸಂಸ್ಥೆಯಲ್ಲಿ ಗಾಂಧಾರಿ ವಿದ್ಯೆಯ ತರಬೇತಿ ಪಡೆದಿದ್ದು, ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ, ತನ್ನ ಮುಂದೆ ಇರಿಸಿದ ಬಣ್ಣಗಳು, ಸಂಖ್ಯೆಗಳು ಮತ್ತು ನೋಟುಗಳನ್ನು ಸುಲಭವಾಗಿ ಗುರುತಿಸುವ ಅಪೂರ್ವ ಪ್ರತಿಭೆ ಪ್ರದರ್ಶಿಸಿದ್ದಾರೆ. ಈ ವಿಶಿಷ್ಟ ಸಾಮರ್ಥ್ಯವನ್ನು ಗುರುತಿಸಿದ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಮೆಹತಾಬ್ ಅವರ ಸಾಧನೆಯನ್ನು ದಾಖಲು ಮಾಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ಶಾಲಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಮೆಹತಾಬ್ ಮತ್ತು ಅವರ ಪೋಷಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಂಜುಳಾ ನಾಗಭೂಷಣ್ ಮಾತನಾಡಿ, “ನಮ್ಮ ಶಾಲೆಯ…

Read More