Author: admin

ಬೀದರ್: ಹೊಕ್ರಣಾ ಗ್ರಾಮದ ಶಿವಾಜಿ ಚೌಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಪ್ಯಾಕೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಔರಾದ–ಬಿ ಪೊಲೀಸ್ ಠಾಣೆ ಪೊಲೀಸರು 1665 ರೂಪಾಯಿ ಬೆಲೆ ಬಾಳುವ ಸಾರಾಯಿ ಪ್ಯಾಕೆಟ್ ಜಪ್ತಿ ಮಾಡಿ ಆರೋಪಿಯ ವಿರುದ್ಧ ಕಾನೂನು ಕ್ರಮಕೈಗೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ವಾಸೀಮ ಪಟೇಲ್ ಅವರ ನೇತೃತ್ವದಲ್ಲಿ ಪೊಲೀಸರು ವ್ಯಕ್ತಿಯ ಮೇಲೆ ದಾಳಿ ನಡೆಸಿ, ಸಾರಾಯಿ ಪ್ಯಾಕೇಟ್ ಜಪ್ತಿ ಮಾಡಿಕೊಂಡಿದ್ದಾರೆ. ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿಯಲ್ಲಿ ಶ್ರಮಿಸಿದ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಮತ್ತು ಹೊಕ್ರಣಾ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೀದರ್:  ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡನೇ ಬಾರಿಗೆ ತಾಲೂಕು ಅಧ್ಯಕ್ಷರಾಗಿ ಸಾಹಿತಿ ಟಿ.ಎಮ್ ಮಚ್ಚೆ ಆಯ್ಕೆಯಾಗಿದ್ದಾರೆ. ಅವರಿಗೆ ಮಂಗಳವಾರ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಫಾರ್ಮಸಿಸ್ಟ್ ಅಧಿಕಾರಿಗಳಾದ  ವೈಜಿನಾಥ ಚನ್ನಶೆಟ್ಟಿ, ಉಮಾಕಾಂತ್, ಪಾಂಡು,  ಸೂರ್ಯಕಾಂತ್ ಸೋನಿ ಇತರರು ಇದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ವಿಧಾನಸಭೆ ಕಾರ್ಯಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷಗಳ ಶಾಸಕರು ಮಾತನಾಡುವ ವಿಚಾರ ಪ್ರಸ್ತಾಪವಾಗುತ್ತಿಲ್ಲ ಎಂದು ಬಿಜೆಪಿ ಶಾಸಕರು ಮಾಡಿದ್ದು, ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಸದನವನ್ನು 10 ನಿಮಿಷ ಮುಂದೂಡಿದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು. ವಿರೋಧಪಕ್ಷದ ನಾಯಕ ಆರ್.ಅಶೋಕ್ರವರು ಕೆಪಿಎಸ್ಸಿ ನೇಮಕಾತಿ ವಿಚಾರ ಕುರಿತು ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡುತ್ತಿದ್ದ ಸಂದರ್ಭದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಲು ಎದ್ದುನಿಂತರು. ಆ ಸಂದರ್ಭದಲ್ಲಿ ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಸದನದಲ್ಲಿನ ಕಾರ್ಯಕಲಾಪಗಳು ನೇರ ಪ್ರಸಾರವಾಗುತ್ತಿವೆ. ಆದರೆ ನಮ ನಾಯಕರು ಮಾತನಾಡುವ ವಿಚಾರ ಸದನದ ಸಭಾಂಗಣದಲ್ಲಿ ಅಳವಡಿಸಿರುವ ಟಿವಿಗಳಲ್ಲಿ ಬರುತ್ತಿಲ್ಲ. ನೀವು ಪ್ರಸಾರ ಮಾಡದಂತೆ ಸೂಚನೆ ಕೊಟ್ಟಿದ್ದೀರ. ಈ ವಿಚಾರವನ್ನು ನಾವು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲೂ ಪ್ರಸ್ತಾಪ ಮಾಡಿದ್ದೆವು ಎಂದು ಹೇಳಿದರು. ಅಲ್ಲದೆ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸದನದ ಕಾರ್ಯಕಲಾಪಗಳ ನೇರ ಪ್ರಸಾರ ಮಾಡುತ್ತಿತ್ತು. ಈಗ ಅದನ್ನು…

Read More

ಬೆಂಗಳೂರು: ಕರಾವಳಿ ಪ್ರವಾಸೋದ್ಯಮ ಹೆಚ್ಚು ಜನಪ್ರಿಯವಾಗಿದೆ. ವಾರ್ಷಿಕ 8 ಕೋಟಿ ಪ್ರವಾಸಿಗರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಘಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಕರಾವಳಿ ಭಾಗವೂ ಒಳಗೊಂಡಂತೆ ಒಟ್ಟಾರೆ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024–29 ನ್ನು ಜಾರಿಗೆ ತರಲಾಗಿದೆ ಎಂದರು. ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ತರುವ ಪ್ರಸ್ತಾವನೆ ಇಲ್ಲ. ಪ್ರವಾಸೋದ್ಯಮ ನೀತಿಯಲ್ಲೇ ಕರಾವಳಿ ಭಾಗದಲ್ಲಿನ ಎಲ್ಲಾ ವರ್ಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು. ಕರಾವಳಿ ಹಾಗೂ ಕಡಲತೀರ ಪ್ರದೇಶಕ್ಕೆ ವಿಶೇಷ ಮಹತ್ವ ನೀಡಲಾಗಿದೆ , ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಮಾಡುತ್ತೇವೆ. ಭೂ ಬ್ಯಾಂಕ್ ಮಾಡುತ್ತೇವೆ. ಕಂಬಳಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. 320 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಬೆಂಗಳೂರು: ಕನ್ನಡ ಚಲಚಿತ್ರರಂಗದ ವಿಚಾರ ಚರ್ಚೆಯಾಗಲಿ ಎಂಬ ಕಾರಣಕ್ಕಾಗಿಯೇ ತಾವು ನಟ್ಟು, ಬೋಲ್ಟು ವಿಷಯ ಪ್ರಸ್ತಾಪ ಮಾಡಿರುವುದಾಗಿ ಡಿ.ಕೆ.ಶಿವಕುಮಾರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲನಚಿತ್ರರಂಗದವರಿಗೆ ತಾವು ಎಚ್ಚರಿಕೆ ನೀಡಿದ್ದಕ್ಕೆ ಸಂಬಂಧಪಟ್ಟಂತೆ ಟೀಕೆಗಳಾಗುತ್ತಿವೆ. ಟೀಕೆಗಳು, ಚರ್ಚೆಗಳು ನಡೆಯಬೇಕು, ನನ್ನ ಹೇಳಿಕೆಗೆ ಟೀಕೆ ಪ್ರತಿಕ್ರಿಯೆಗಳು ಬರುತ್ತವೆ ಎಂಬುದು ನನಗೆ ಗೊತ್ತಿತ್ತು. ಅದಕ್ಕೆ ನನಗೆ ಯಾವ ಬೇಜಾರು ಇಲ್ಲ ಎಂದು ಹೇಳಿದ್ದಾರೆ. ನಾನು ಚಿತ್ರರಂಗದವರಿಗೆ ಎಷ್ಟು ಸಹಾಯ ಮಾಡಿದ್ದೇನೆ ಎಂಬುದು ಗೊತ್ತಿದೆ. ಸಹಾಯ ಪಡೆದುಕೊಂಡವರಿಗೂ ಅದರ ಅರಿವಿದೆ. ನೆಲ, ಜಲ, ಭಾಷೆಯ ವಿಷಯ ಬಂದಾಗ ಚಿತ್ರರಂಗ ದನಿಗೂಡಿಸಬೇಕು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಮಗಾಗಿ ಮಾಡಿಕೊಳ್ಳಲಿಲ್ಲ. ಚಿತ್ರರಂಗದ ಬೆಳವಣಿಗೆಗಾಗಿ ಮಾಡಲಾಯಿತು. ಅವರ ಕಾರ್ಯಕ್ರಮವನ್ನು ಅವರೇ ಪ್ರಚಾರ ಮಾಡಿಕೊಳ್ಳದೆ ದಿನ ಬೆಳಿಗ್ಗೆ, ಸಂಜೆ ನಾವು ಪ್ರಚಾರ ಮಾಡಬೇಕೇ? ಎಂದು ಪ್ರಶ್ನಿಸಿದರು. ಆಹ್ವಾನ ಪತ್ರಿಕೆ ತಲುಪಿಲ್ಲ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರರಂಗದ ಕಾರ್ಯಕ್ರಮ ಎಲ್ಲರೂ ಒಟ್ಟಾಗಿ ಮಾಡಬೇಕು. ಚರ್ಚೆಗಳಾಗಲಿ, ಯಾರದು ತಪ್ಪು, ಸರಿ ಎಂದು…

Read More

ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ಬಸ್ ಸಂಚಾರ ಸುಗಮವಾಗಿದ್ದು ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಈ ಹಂತದಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳ ಕರೆ ನೀಡಿರುವ  ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯೆ ನೀಡಿದರು. ಕರ್ನಾಟಕದ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಹಲ್ಲೆಯಾದ ಘಟನೆ ನಡೆದ 8 ದಿನ ಆಗಿದೆ. ಆರಂಭದಲ್ಲಿ ಒಂದೆರೆಡು ದಿನ ಪ್ರತಿಭಟನೆಗಳಾಗಿದ್ದವು. ಯಾವುದೇ ಹಾನಿಯಾಗಿಲ್ಲ ಎಂದು ಅವರು ಹೇಳಿದರು. ಮಹಾರಾಷ್ಟ್ರದಲ್ಲೂ ನಮ್ಮ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಮಸಿ ಬಳಿದಿದ್ದರು. ಅದಕ್ಕೂ ಪ್ರತಿಭಟನೆಗಳು ನಡೆದಿವೆ ಎಂದು ಹೇಳಿದರು. ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟಗಳಿಗೆ ನಮ್ಮ ಬೆಂಬಲವಿದೆ. ಆದರೆ ಈ ಸಂದರ್ಭದಲ್ಲಿ ಬಂದ್ ಅಗತ್ಯವಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪಾವಗಡ: . ಪಾವಗಡ ತಾಲೂಕಿನ ಕೆ.ಟಿ. ಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಐದು ವರ್ಷದ ಅವಧಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಒಟ್ಟು ನಾಲ್ಕು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಡಿ .ಬಿ .ಲೋಕೇಶ್ ಪಾಳೆಗಾರ್ ಹೊರತುಪಡಿಸಿ ಉಳಿದ ಮೂರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇದೇ ಸಹಕಾರ ಸಂಘದ ಚುನಾವಣೆಯಲ್ಲಿ ಮಹಿಳಾ ಮೀಸಲು ಕ್ಷೇತ್ರದಿಂದ ಎಂ.ನಾಗವೇಣಿ,  ವರಲಕ್ಷ್ಮಿ ಡಿ  ಹಾಗೂ ಹಿಂದುಳಿದ ವರ್ಗ ಎ.ಮುದ್ದಯ್ಯ ಮತ್ತು ಹಿಂದುಳಿದ ವರ್ಗ ಬಿ.ಕೆ.ಆರ್. ರಂಗಸ್ವಾಮಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಆರ್.ಎಚ್. ನಾಗರಾಜ್  ಇವರುಗಳು  ಆಯ್ಕೆಯಾಗಿರುತ್ತಾರೆ. ಒಟ್ಟು 12 ಸ್ಥಾನಗಳಿದ್ದು,  ಆರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿಕೆ 6 ಸ್ಥಾನಗಳಿಗೆ ಫೆಬ್ರವರಿ 9 ನೇ ತಾರೀಕು ಚುನಾವಣೆ ನಡೆಯಲಿದೆ. ವರದಿ : ನಂದೀಶ್ ನಾಯ್ಕ  ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಬೀದರ್:  ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಗಣಿತ, ಶಿಕ್ಷಣಶಾಸ್ತ್ರ  ಹಾಗೂ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗಳು ಸೋಮವಾರ ಸುಸೂತ್ರವಾಗಿ ನಡೆದವು. ಒಟ್ಟು 16,545 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,751 ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಒಟ್ಟು 794 ವಿದ್ಯಾರ್ಥಿಗಳು ಗೈರು ಹಾಜರಾದರು. ಗಣಿತ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 13,222 ವಿದ್ಯಾರ್ಥಿಗಳ ಪೈಕಿ 12,792 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 430 ವಿದ್ಯಾರ್ಥಿಗಳು ಗೈರಾಗಿದ್ದರು. ಶಿಕ್ಷಣಶಾಸ್ತ್ರ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 649 ವಿದ್ಯಾರ್ಥಿಗಳ ಪೈಕಿ 551 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 98 ವಿದ್ಯಾರ್ಥಿಗಳು ಗೈರಾಗಿದ್ದರು. ವ್ಯವಹಾರ ಅಧ್ಯಯನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,674 ವಿದ್ಯಾರ್ಥಿಗಳ ಪೈಕಿ 2,408 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.266 ವಿದ್ಯಾರ್ಥಿಗಳು ಗೈರಾಗಿದ್ದರು. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು ಯಾವುದೇ ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು :  ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಮೈಸೂರು ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿಕಸಿತ ಬಜೆಟ್ @2047 ಛಾಯಾಚಿತ್ರ ಪ್ರದರ್ಶನಕ್ಕೆ ಪ್ರಥಮ ಬಹುಮಾನ ವಿಭಾಗದಲ್ಲಿ ಬಹುಮಾನ ದೊರೆತಿದೆ. ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆದ ಪ್ರದರ್ಶನದಲ್ಲಿ ವಿಕಸಿತ ಭಾರತ ಬಜೆಟ್ 2025–26, ಪಿಎಂ ಇಂಟರ್ನ್ಶಿಪ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ವೆವ್ಸ್ 2025, ಪಿಎo ಸೂರ್ಯ ಘರ್, ವಿಕಸಿತ ಭಾರತಕ್ಕೆ ಪ್ರಧಾನ ಮಂತ್ರಿಯವರ ದೂರದೃಷ್ಠಿ 2047 ಹಾಗೂ ಇತರೆ ಯೋಜನೆಗಳ ಛಾಯಾಚಿತ್ರ ಪ್ರದರ್ಶನದ ಜೊತೆಗೆ ಯೋಜನೆಗಳ ಫಲಾನುಭವಿಗಳು ಹಂಚಿಕೊಂಡಿರುವ ಅನಿಸಿಕೆಗಳು ಮತ್ತು ಇತರೆ ಮಾಹಿತಿಯನ್ನು ವಿಡಿಯೋ ಮೂಲಕ ಬಿತ್ತರಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಿದ್ದಗಂಗಾ…

Read More

ಔರಾದ: ಸರ್ಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯ ಔರಾದ (ಬಾ)ನಲ್ಲಿ 2023–24ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಇನ್ನೂ ಸಿಕ್ಕಿಲ್ಲ, ಹೀಗಾಗಿ  NSUI AURAD ವತಿಯಿಂದ ಔರಾದ (ಬಾ)ರವರ ಮುಖಾಂತರ ಉನ್ನತ ಶಿಕ್ಷಣ ಸಚಿವ ಡಾ.ಎಮ್.ಸಿ.ಸುಧಾಕರ ಅವರಿಗೆ ಮನವಿ ಸಲ್ಲಿಸಲಾಯಿತು. NSUI AURAD ತಾಲೂಕು ಅಧ್ಯಕ್ಷರಾದ ಚಂದು ಡಿ.ಕೆ. ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕಲ್ಬುರ್ಗಿ ವಿಶ್ವವಿದ್ಯಾಲಯ ಅಡಿಯಲ್ಲಿ ನಡೆಯುತ್ತಿರುವ ಪ್ರಥಮ ದರ್ಜೆ ಮಹಾ ವಿದ್ಯಾಲಯ ಔರಾವ (ಬಾ)ನಲ್ಲಿ 2023–24ನೇ ಸಾಲಿನಲ್ಲಿ ಉತ್ತಿರ್ಣರಾಗಿ 1 ಬಿ.ಎ. ಮತ್ತು ಬಿ.ಎಸ್.ಸಿ. ವಿದ್ಯಾರ್ಥಿಗಳ ಅಂತಿಮ ವರ್ಷದ ಅಂಕಪಟ್ಟಿ ಸುಮಾರು ಎರಡು ವರ್ಷಗಳಾದರೂ ಈವರೆಗೆ ಸಿಕ್ಕಿಲ್ಲ, ಕಾಲೇಜಿನ ಪ್ರಾಂಶುಪಾಲರಿಗೆ ಸುಮಾರು ಬಾರಿ ಕೇಳಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು. ಅಂಕಪಟ್ಟಿ ಸಿಗದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಕತ್ತಲೆ ಆಗಿದೆ. ಆದರಿಂದ ತಾವುಗಳು ಎಂಟು ದಿವಸದ ಒಳಗೆ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ವಿಶ್ವ ವಿದ್ಯಾಲಯದ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ…

Read More