Subscribe to Updates
Get the latest creative news from FooBar about art, design and business.
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
Author: admin
ತುಮಕೂರು: ನಿನ್ನೆ ಮತ್ತು ಇಂದು AIDSO ವಿದ್ಯಾರ್ಥಿ ಸಂಘಟನೆಯ ವತಿಯಿಂದ “ಶಹೀದ್ ಏ ಅಜಮ್ ಭಗತ್ ಸಿಂಗ್” ರವರ 94ನೇ ಹುತಾತ್ಮ ದಿನದ ಅಂಗವಾಗಿ ನಗರದೆಲ್ಲೆಡೆ ಕಾರ್ಯಕ್ರಮಗಳು ಮಾಡಲಾಯಿತು. ಭಗತ್ ಸಿಂಗ್, ಸುಖದೇವ್, ರಾಜ್ ಗುರು ನಗುನಗುತ್ತಾ ಗಲ್ಗಂಬಕ್ಕೆ ಏರಿ ಇಂದಿಗೆ 94 ವರ್ಷಗಳು. ಇಂದಿಗೂ ಈ ಮಹಾನ್ ವ್ಯಕ್ತಿಗಳೇ ನಮಗೆ ಆದರ್ಶ. ಭಗತ್ ಸಿಂಗ್ ಹೆಸರೇ ಇಂದಿಗೂ ಎಲ್ಲರಲ್ಲೂ ಹೊಸ ಚೈತನ್ಯ ತುಂಬುತ್ತದೆ. ಆದರೆ, ಭಗತ್ ಸಿಂಗ್ ಕನಸು ಕಂಡ ಯಾವ ಮಗುವು ಹಸಿವಿನಿಂದ ನರಳದ, ಎಲ್ಲರಿಗೂ ಸಮಾನ ಶಿಕ್ಷಣ ಸಿಗುವ, ಉಚಿತ ಆರೋಗ್ಯ ಸಿಗವ ಸಮಾಜವಾದಿ ಭಾರತ ಇಂದಿಗೂ ಕನಸಾಗಿಯೇ ಉಳಿದಿದೆ. ಈ ಕನಸನ್ನು ನನಸಾಗಿಸುವ ಜವಾಬ್ದಾರಿಯನ್ನು ತೆಗೆದುಕೊಂಡು, ಅವರ ವಿಚಾರಗಳನ್ನು ಸಾರುತ್ತ AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಭಗತ್ ಸಿಂಗ್, ಸುಖದೇವ್, ರಾಜಗುರು ರವರ 94ನೇ ಹುತಾತ್ಮ ದಿನದ ಕಾರ್ಯಕ್ರಮಗಳನ್ನು ನಗರದೆಲ್ಲೆಡೆ ಹಮ್ಮಿಕೊಳ್ಳಲಾಯಿತು. ಹಾಗೆಯೇ, ಇಂದಿನ ರಾಜ್ಯ ಸರ್ಕಾರ, ಹಿಂದಿನ ಸರ್ಕಾರದಂತೆ ಸಂಯೋಜನೆ ಹೆಸರಿನಲ್ಲಿ ಸಾವಿರಾರು ಸರ್ಕಾರಿ…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಯೋಚಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ. ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ., ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು…
ತುಮಕೂರು: ಗುಬ್ಬಿ ತಾಲ್ಲೂಕಿನ ಕಳೆದ ರಾತ್ರಿ ಬಿರುಗಾಳಿ ಸಮೇತ ಮಳೆಯಾಗಿದ್ದು, ಪರಿಣಾಮವಾಗಿ ಅಡಿಕೆ, ತೆಂಗಿನ ಮರಗಳು ಧರೆಗುರುಳಿವೆ. ಗುಬ್ಬಿ ತಾಲ್ಲೂಕಿನ ಚಂದ್ರಶೇಖರಪುರದ ಬಳಿ ಘಟನೆ ನಡೆದಿದೆ. ಬಿರುಗಾಳಿ ಮಳೆಯ ಪರಿಣಾಮ ವಿದ್ಯುತ್ ಕಂಬಗಳು ಬಿದ್ದಿದ್ದು, ಮನೆ ಸೀಟುಗಳು ಗಾಳಿಗೆ ಹಾರಿ ಹೋಗಿವೆ. ದ್ವಿಚಕ್ರವಾಹನ ಹಾಗೂ ಕಾರುಗಳ ಮೇಲೆ ಮರದ ಕೊಂಬೆಗಳು ಬಿದ್ದು ವಾಹನಗಳು ಜಖಂ ಆಗಿರುವ ಘಟನೆ ನಡೆದಿದೆ. ಬಿಸಿಲಿನ ತಾಪದಿಂದ ಒಂದೆಡೆ ಜನರು ತಂಪಾಗಿದ್ದರೆ, ಇನ್ನೊಂದೆಡೆ ಮಳೆಯಿಂದಾಗಿ ಹಾನಿಯಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಶಾಸಕ ಮುನಿರತ್ನಗೆ ಬುದ್ದಿಭ್ರಮಣೆಯಾಗಿ ಡಿ.ಕೆ. ಹೆಸರು ಹೇಳ್ತಿದ್ದಾರೆ. ಸಿಎಂ ಆಗಲಿಕ್ಕೆ ಇಂತಹ ಕೆಲಸ ಮಾಡಲು ಆಗುತ್ತಾ. ಹಾಗೆ ಮಾಡಿದ್ರೆ ಅವರ ವರ್ಚಸ್ಸು ಕಡಿಮೆಯಾಗಲ್ವಾ ಎಂದು ಎಂದು ಕೆಎಸ್ ಆರ್ಟಿಸಿ ನಿಗಮದ ಅಧ್ಯಕ್ಷ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ತಲೆ ಕೆಟ್ಟು ಡಿ.ಕೆ.ಶಿವಕುಮಾರ್ ಹೆಸರು ಹೇಳ್ತಾರೆ. ಅವರ ಮೇಲೆ ಕಂಪ್ಲೆಂಟ್ ಆಗಿದೆ. ಎಷ್ಟು ಹೆಣ್ಣು ಮಕ್ಕಳು ದೂರು ಕೊಟ್ಟಿದ್ದಾರೆ, ಎಷ್ಟು ದಿನ ಜೈಲಿಗೆ ಹೋಗಿಬಂದರು ಇದೆಲ್ಲಾ ಗೊತ್ತಿದೆ ಎಂದರು.ಸುಮ್ಮನೆ ಡಿ.ಕೆ.ಶಿವಕುಮಾರ್ ವ್ಯಕ್ತಿತ್ವ ಹರಣ ಮಾಡಲು ಹೀಗೆ ಆರೋಪ ಮಾಡ್ತಾರೆ ಎಂದರು.ಹನಿ ಹುಡುಕಿಕೊಂಡು ಹೋದವರು ಟ್ರ್ಯಾಪ್ ಆಗ್ತಾರೆ, ಸುಮ್ಮನೆ ಇದ್ರೆ ಯಾರು ಬಂದು ಟ್ರ್ಯಾಪ್ ಮಾಡ್ತಾರೆ. ಒಟ್ಟಾರೆ ಹನಿ ಹುಡುಕಿಕೊಂಡು ಹೋದರೆ ಟ್ರ್ಯಾಪ್ ಆಗೋದು ತಿಳಿಸಿದ್ದಾರೆ. ಅವರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದರೆ ಅವರಿಗೆ ಗೊತ್ತಿರುತ್ತೆ. ಅವರು ಹೋಗಿ ದೂರು ಕೊಡಬೇಕು, ತನಿಖೆ ಆಗುತ್ತೆ. 40–50 ಜನರು ಹನಿಟ್ರ್ಯಾಪ್ ಆಗಿದೆ ಎಂದರೆ ಅವರಿಗೆ ಗೊತ್ತಿರುತ್ತೆ. ಅವರು…
ತುಮಕೂರು: ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಟ್ಟ ಕಾಂಗ್ರೆಸ್ ಸರ್ಕಾರವಿದ್ದು ಅದ್ರ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಇಂದು ಮುಖ್ಯವಾಗಿ ಮೂರು ಪ್ರಮುಖ ಅಂಶಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಲಾಗಿದೆ ಅದರಲ್ಲಿ ಅಲ್ಪಸಂಖ್ಯಾತರಿಗೆ ಕರ್ನಾಟಕ ರಾಜ್ಯದಲ್ಲಿ ಗುತ್ತಿಗೆ ನೀಡುವ ವಿಚಾರದಲ್ಲಿ ನಾಲ್ಕು ಪರ್ಸೆಂಟ್ ಮೀಸಲಾತಿ ಕಲ್ಪಿಸುವುದನ್ನು ವಿರೋಧಿಸಲಾಗಿದೆ. ಅಲ್ಲದೆ ಬುಡಕಟ್ಟು ಹಾಗೂ ದಲಿತ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಸರ್ಕಾರ ವರ್ಗಾವಣೆ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಮಡಕಶಿರಾ: ಪಟ್ಟಣದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ 286ನೇ ಜಯಂತಿಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಆರಂಭವಾದ ಭಾವಚಿತ್ರದ ಮೆರವಣಿಗೆ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಅಂತ್ಯಗೊಂಡಿತು. ಮೆರವಣಿಗೆಯ ಸಮಯದಲ್ಲಿ ಯುವಕರು ಸಂತ ಸೇವಾಲಾಲ್ ಮಹಾರಾಜ್ ಅವರ ಬಾವುಟಗಳನ್ನು ಹಿಡಿದು ಸಂಭ್ರಮಿಸಿದರು. ಮಹಿಳೆಯರು ಲಂಬಾಣಿ ಸಮುದಾಯದ ಪರಂಪರೆಯ ವೇಷಭೂಷಣಗಳಲ್ಲಿ ಭಾಗವಹಿಸಿ ಲಂಬಾಣಿ ನೃತ್ಯ ಪ್ರದರ್ಶಿಸಿದರು. ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾಲಾಲ್ ಮಹಾರಾಜರ ಭೋಗ್ ಹಾಗೂ ಭಾವಚಿತ್ರಕ್ಕೆ ಪುಷ್ವಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಡಕಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಎಸ್.ರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, “ಲಂಬಾಣಿ ತಾಂಡಗಳಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಮನೆ ನೀರು ಮುಂತಾದವುಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ. ಮಡಕಶಿರಾ ಪಟ್ಟಣದಲ್ಲಿ ಸಂತ ಸೇವಾಲಾಲ್ ಮಹಾರಾಜ್ ವೃತ್ತವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು. ಪ್ರತಿ ತಾಂಡಗಳಿಗೆ ಸ್ಮಶಾನ ಜಾಗ ಮಂಜೂರು ಮಾಡಿಸಲಾಗುವುದು ಜೊತೆಗೆ ಮಡಕಶಿರಾ ಕ್ಷೇತ್ರದ…
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ರಂಗಾಪುರ ಗ್ರಾಮ ಪಂಚಾಯಿತಿ ಮುಂದೆ ಕೆಲವರು ಪ್ರಚಾರ ಪಡೆಯಲೆಂದು ಕುಡಿಯುವ ನೀರಿನ ಮೋಟಾರ್ ಪಂಪ್ ಸೆಟ್ ಕಳ್ಳತನವಾಗಿದೆ ಎಂದು ಆರೋಪಿಸಿ ಪ್ರತಿಭಟಿಸಿದ್ದು, ಸತ್ಯಕ್ಕೆ ದೂರವಾದ ಸಂಗತಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೊಸಳ್ಳಿ ವಿಶ್ವನಾಥ್ ತಿಳಿಸಿದರು. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಇತ್ತೀಚೆಗೆ ನಮ್ಮ ರಂಗಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಸಹಕರಿಸಿದೆ ಎಂದು, ಸೋತ ಅಭ್ಯರ್ಥಿಗಳು ಮತ್ತು ಅಭಿವೃದ್ಧಿ ಸಹಿಸದೆ ಪ್ರಚಾರ ಪಡೆಯಲು ಕೆಲ ನಮ್ಮ ಪಂಚಾಯಿತಿಯ ಸದಸ್ಯರು ಇಲ್ಲಸಲ್ಲದ ಆರೋಪ ಮಾಡಿ ನನ್ನ ಮತ್ತು ಪಿಡಿಓ ಮೇಲೆ ಕುಡಿಯುವ ನೀರಿನ ಪಂಪ್ ಸೆಟ್ ಕಳ್ಳತನವಾಗಿದೆ ಎಂಬ ಆರೋಪಿಸಿ, ಪ್ರತಿಭಟನೆಗೆ ಮುಂದಾಗಿರುವುದು ಇವರ ಮನಸ್ಥಿತಿ ಯಾವ ಮಟ್ಟಿಗೆ ಇದೆ ಎಂಬುದು ನೀವೇ ಅರ್ಥೈಸಿಕೊಳ್ಳಿ. ಅಭಿವೃದ್ಧಿಗೆ ಅಡ್ಡಗಾಲು ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಹೊಸಹಳ್ಳಿ ಗ್ರಾಮದಲ್ಲಿರುವ ಸುಮಾರು ಎರಡು ವರ್ಷದಿಂದ ನಿಷ್ಕ್ರಿಯವಾಗಿದ್ದ ಕುಡಿಯುವ ನೀರಿನ…
ಬೆಂಗಳೂರು: ಆನೇಕಲ್ ತಾಲೂಕಿನ ಪ್ರತಿಷ್ಠಿತ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿಬಿದ್ದ ದುರಂತದಲ್ಲಿ ಗಾಯಗೊಂಡಿದ್ದ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಮೃತಳನ್ನು ಜ್ಯೋತಿ (16) ಎಂದು ಗುರುತಿಸಲಾಗಿದೆ. ದುರ್ಘಟನೆ ನಡೆದ ದಿನ ಲೋಹಿತ್ ಎಂಬ ಯುವಕ ಸಾವನ್ನಪ್ಪಿದ್ದ ಇದೀಗ ಘಟನೆಯಲ್ಲಿ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕ ರಾಕೇಶ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಇದೀಗ ಮೃತಪಟ್ಟಿರುವ ಜ್ಯೋತಿ ತನ್ನ ತಾಯಿ ಗಂಗಮ್ಮನೊಂದಿಗೆ ಜಾತ್ರೆಯಲ್ಲಿ ಗೊಂಬೆ ಮಾರಾಟ ಮಾಡಲು ಬಂದಿದ್ದಳು ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವ ಸರ್ಕಾರದ ನಿಲುವುದನ್ನು ಬೆಂಬಲಿಸಬೇಕೆ ಅಥವಾ ವಿರೋಧಿಸ ಬೇಕೆ ಎನ್ನುವ ಬಗ್ಗೆ ಜೆಡಿಎಸ್ ಗೊಂದಲದಲ್ಲಿದೆ. ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಹಿನ್ನೆಲೆ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಬೆಂಬಲಿಸಬೇಕೇ? ಬೇಡವೇ ಎನ್ನುವ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಇಂದು ನವದೆಹಲಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಮೀಸಲಾತಿ ಮಸೂದೆಯಲ್ಲಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎನ್ನುವ ಅಭಿಪ್ರಾಯವಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ..ಬಿ ಸುರೇಶ್ ಬಾಬು ಅವರು ಮಾತನಾಡಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ 2 ಬಿ ಅಡಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಸಿಗುವಂತೆ ಮಾಡಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ. ಆದರೆ, ಚುನಾವಣೆ ವೇಳೆ ಆ ಸಮುದಾಯ ಪಕ್ಷಕ್ಕೆ ಬೆಂಬಲ ನೀಡಿಲ್ಲ. ಸೋಮವಾರ ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಬಗ್ಗೆ ಚರ್ಚೆ ನಡೆಸಲಿದ್ದು, ನಂತರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಸಹಾರನ್ ಪುರ: ಬಿಜೆಪಿ ನಾಯಕನೊಬ್ಬ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಸಹಾರನ್ ಪುರದಲ್ಲಿ ನಡೆದಿದೆ. ಗುಂಡಿನ ದಾಳಿಯ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತೋರ್ವ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಪತ್ನಿ ಮೇಲೆ ಅನುಮಾನ ಹೊಂದಿದ್ದ ಯೋಗೇಶ್ ನಿತ್ಯ ಅವರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಲಾದ ಪಿಸ್ತೂಲ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4