Subscribe to Updates
Get the latest creative news from FooBar about art, design and business.
- ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
- ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
- ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Author: admin
ತುಮಕೂರು: ಕನ್ನಡ ಮಧ್ಯಮದಲ್ಲಿ ಓದಿದವರಿಗೆ ಉದ್ಯೋಗ ದೊರಕುವುದಿಲ್ಲ ಎಂಬ ಭ್ರಮೆಯಲ್ಲಿ ನಾವಿಂದು ಇದ್ದೇವೆ. ಸಾವಿರಾರು ವರ್ಷಗಳಿಂದಲೂ ಕನ್ನಡ ಭಾಷಿಕರು ಉದ್ಯೋಗ ಮಾಡುತ್ತಲೇ ಬರುತ್ತಿದ್ದಾರೆ. ಕನ್ನಡ ಭಾಷೆ ಬರುವವನಿಗೆ ಅದು ಒಂದಲ್ಲಾ ಒಂದು ರೀತಿ ಶಕ್ತಿಯನ್ನು ತುಂಬುತ್ತಲೇ ಇದೆ. ನಮ್ಮ ಜನ ಯಾಕೆ ಈ ರೀತಿ ಚಿಂತಿಸುತ್ತಾರೋ. ಇಂತಹ ಮನೋಭಾವನೆಯನ್ನು ಕನ್ನಡಿಗರೆಲ್ಲ ಬಿಟ್ಟುಬಿಡಬೇಕು. 20ನೇ ಶತಮಾನದಲ್ಲಿ ಬದುಕಿ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಿದ ವಿದ್ವಾಂಸರೆಲ್ಲ ಕನ್ನಡ ಮಾಧ್ಯಮದಲ್ಲಿಯೇ ಓದಿ ಬಂದವರು ಎಂಬುದನ್ನು ನಾವೆಲ್ಲಾ ನೆನಪಿನಲ್ಲಿಟ್ಟುಕೊಳ್ಳಬೇಕು. ಇಂತಹ ಕೀಳರಿಮೆಯ ಮನೊಭಾವವನ್ನು ಕನ್ನಡಿಗರು ಬಿಡಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟರು. ಅವರು ತುಮಕೂರು ಬಳಿಯ ಕೋರಾ ಗ್ರಾಮದಲ್ಲಿ ಏರ್ಪಡಿಸಿದ್ದ ತುಮಕೂರು ತಾಲ್ಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಲೇಖಕರು ಮುಕ್ತವಾಗಿ ಬರೆಯಲೂ, ಮಾತನಾಡಲೂ ಆಗದ ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಇಂದು ತರುಣ ಬರಹಗಾರರಿಗೆ ನೈತಿಕ ಸ್ಥೈರ್ಯವನ್ನು ತುಂಬುವಂತಹ ಸಾಹಿತಿಗಳ ಕೊರತೆ ಕಂಡುಬರುತ್ತಿದೆ. ಆದ್ದರಿಂದಲೇ ತರುಣ…
ತುಮಕೂರು: ಇಂದು ಉದ್ದೇಶಿತ ತುಮಕೂರು ತಾಲ್ಲೂಕು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ., ಇದರ ಉದ್ಘಾಟನೆಯನ್ನು ನಗರದ ಬೀರೇಶ್ವರ ಕನ್ವೇನ್ಷನ್ ಹಾಲ್ ನಲ್ಲಿ ನೆರವೇರಿಸಲಾಯಿತು. ಇದಕ್ಕೂ ಮುಂಚಿತವಾಗಿ ಸದಾಶಿವನಗರದಲ್ಲಿ ಅಧಿಕೃತ ತಾಲ್ಲೂಕು ಕಛೇರಿಯ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಅಧ್ಯಕ್ಷತೆಯನ್ನು ಎವಿಎಸ್ ಎಸ್ ನ ರಾಜ್ಯಾಧ್ಯಕ್ಷರಾದ ತುಂಬುಲ ರಾಮಣ್ಣನವರು ವಹಿಸಿ ಮಾತನಾಡುತ್ತಾ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಸಮುದಾಯದವರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಮುಂದೆ ಬರಲು ಸಾಧ್ಯ, ಆದ ಕಾರಣ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ವರ್ಗ ಸಮುದಾಯದವರು ಸ್ವ–ಸಹಾಯ ಸಂಘಗಳ ಮೂಲಕ ಆರ್ಥಿಕ ಪ್ರಗತಿಯನ್ನು ಕಾಣಬೇಕು ಎಂದರು. ದೇಶದಲ್ಲಿ ಅಂದಾಜು 45 ಕೋಟಿಯಷ್ಟು ಜನರು ದಲಿತ ಸಮುದಾಯಗಳಿಗೆ ಸೇರಿದವರಾಗಿದ್ದು ಅವರುಗಳೆಲ್ಲರೂ ರಾಷ್ಟ್ರೀಕೃತ ಹಾಗೂ ಕಾರ್ಪೋರೇಟ್ ಬ್ಯಾಂಕ್ ಗಳಲ್ಲಿ ವ್ಯವಹಾರವನ್ನು ಮಾಡದೇ ದಲಿತ ಸಮುದಾಯದ ವತಿಯಿಂದ ಸ್ಥಾಪಿಸಲಾಗಿರುವ ಸಹಕಾರ ಸಂಘಗಳಲ್ಲಿ ವ್ಯವಹಾರವನ್ನು ಮಾಡಿದ್ದಲ್ಲಿ ನಮ್ಮ ಸಮುದಾಯಗಳ ಏಳ್ಗೆ ಸಾಧ್ಯವಾಗುತ್ತದೆ, ಜೊತೆಗೆ ಸಹಕಾರ ಸಂಘಗಳು ನಡೆಯುವುದೇ ನಮ್ಮಗಳ ಪಾಲುದಾರಿಕೆಗಳಿಂದ…
ತುಮಕೂರು: ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ–ನೌಕರರು ಶ್ರಮಿಸಬೇಕೆಂದು ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಕರೆ ನೀಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಅನುಮೋದನಾ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿ–ನೌಕರರು ಹಿಂದುಳಿಯಬಾರದು. ಪಂಚಾಯತಿ ವ್ಯಾಪ್ತಿಯ ಜನರು ಉದ್ಯೋಗವಿಲ್ಲದೆ ಹಸಿವಿನಿಂದ ಬಳಲಬಾರದೆಂಬ ದೃಷ್ಟಿಯಿಂದ ಮಾಜಿ ಪ್ರಧಾನಿ ದಿ.ಮನ್ಮೋಹನ್ ಸಿಂಗ್ ಅವರು ಜಾರಿಗೆ ತಂದಿರುವ “ಮಹಾತ್ಮಗಾಂಧಿ ಉದ್ಯೋಗ ಖಾತ್ರಿ(ನರೇಗಾ)” ಯೋಜನೆಯಿಂದ ಎಷ್ಟೋ ಬಡಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಪಾರಾಗಿವೆ. ನರೇಗಾದಂತಹ ವಿಶೇಷ ಯೋಜನೆ ಜಾರಿಗೆ ಸಂಬಂಧಿಸಿದಂತೆ ಪ್ರಾರಂಭದಲ್ಲಿ…
ತುಮಕೂರು: ತೋಟಗಾರಿಕೆ ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿನ 10 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2025ರ ಮೇ 2 ರಿಂದ 2026ರ ಫೆಬ್ರವರಿ 28ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಅರ್ಹ ರೈತ ಮಕ್ಕಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಪ.ಜಾತಿ/ಪಂಗಡದ ಅಭ್ಯರ್ಥಿಗಳು 18 ರಿಂದ 33 ವರ್ಷ ಹಾಗೂ ಇತರರು 18 ರಿಂದ 30 ವರ್ಷ ವಯೋಮಾನದೊಳಗಿನವರಾಗಿರಬೇಕು. ಅರ್ಜಿಯೊಂದಿಗೆ ಸಾಮಾನ್ಯ ಅಭ್ಯರ್ಥಿಗಳು 30 ರೂ. ಹಾಗೂ ಪ.ಜಾತಿ/ಪಂಗಡದ ಅಭ್ಯರ್ಥಿಗಳು 15 ರೂ.ಗಳ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್/ಡಿಮ್ಯಾಂಡ್ ಡ್ರಾಫ್ಟನ್ನು ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ.) ತುಮಕೂರು ಅವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು. ಅರ್ಜಿಯನ್ನು ಇಲಾಖಾ ವೆಬ್ಸೈಟ್ https://horticulturedir.karnataka.gov.in ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯವಲಯ), ತುಮಕೂರು ಇವರಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 1ರೊಳಗಾಗಿ ಸಲ್ಲಿಸಬೇಕು. ತರಬೇತಿಗೆ ಆಯ್ಕೆ ಮಾಡಲು ಏಪ್ರಿಲ್…
ತಿಪಟೂರು: ಖ್ಯಾತ ವೈದ್ಯ ಡಾ.ಶ್ರೀಧರ್ ತಿಪಟೂರಿನ ಜನತೆಗೆ ವೈದ್ಯಕೀಯ ಸೇವೆ ಜೊತೆಗೆ ಅನೇಕ ಸಾಮಾಜಿಕ ಸೇವಾ ಕಾರ್ಯ ಗಳನ್ನು ಮಾಡುತ್ತಿದ್ದಾರೆ. ಅವರು ಮಾಡುತ್ತಿರುವ ಕಾರ್ಯಕ್ರಮಗಳು ಪ್ರತಿದಿನ ಬಡ ಜನರಿಗೆ ಅನ್ನಪೂರ್ಣ ಕಾರ್ಯಕ್ರಮದ ಮೂಲಕ ಅನ್ನದಾಸೋಹ ಹಾಗೂ ಯುವಜನತೆಗೆ ಉಚಿತ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪಿಸಿ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆಂದು ತಿಪಟೂರಿನ ಕಲಾಕೃತಿಯ ಅಧ್ಯಕ್ಷ ಶಿವಪ್ರಸಾದ್ ತಿಳಿಸಿದರು ವೈದ್ಯಕೀಯ ಸೇವೆ ಮತ್ತು ಇತರೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವವರಿಗೆ ನಮೃತ ಆಯಿಲ್ ಮಿಲ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶ್ರೀಧರ್, ಕಷ್ಟದಿಂದ ಮೇಲೆ ಬಂದವರಿಗೆ ಕಷ್ಟದ ಅರಿವು ಇರುತ್ತದೆ. ಶಿವಪ್ರಸಾದ್ ಅವರು ಸ್ಥಳೀಯವಾಗಿ ಸಾವಿರಾರು ಜನಕ್ಕೆ ಉದ್ಯೋಗ ನೀಡುವುದರ ಜೊತೆಗೆ ಹಲವಾರು ಸಮಾಜ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ ಎಂದರು. ಈ ಕಾರ್ಯಕ್ರಮದಲ್ಲಿ ಡಾ. ವಿವೇಕ್, ಉದಯ ರವಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ರಾಜಣ್ಣ, ವೊಡಾಫೋನ್ ಚಂದ್ರು, ಹಲವಾರು ಸಾರ್ವಜನಿಕರು ಮತ್ತು ಕಲಾಕೃತಿ ತಂಡದವರುಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ…
ಬೆಂಗಳೂರು: ರಾಹುಲ್ ಗಾಂಧಿ ಯಾರೆಂದು ನನಗೆ ತಿಳಿದಿಲ್ಲ ಎಂದು ಒಮ್ಮೆ ಸದ್ಗುರು ಹೇಳಿದ್ದರು. ಅವರೊಂದಿಗೆ ಡಿಕೆ.ಶಿವಕುಮಾರ್ ಹೇಗೆ ವೇದಿಕೆ ಹಂಚಿಕೊಂಡರು. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಸದ್ಗುರು ಜಗದೀಶ್ ವಾಸುದೇವ್ ಅವರ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ ಆಕ್ಷೇಪ ಎತ್ತಿದರು. ನಮ್ಮ ಹಿರಿಯ ನಾಯಕ ರಾಹುಲ್ ಗಾಂಧಿಯವರನ್ನು ಸದ್ಗುರುಗಳು ಅವಮಾನಿಸಿದ್ದಾರೆಂದು ಡಿಕೆ.ಶಿವಕುಮಾರ್ ಅವರಿಗೆ ತಿಳಿದಿಲ್ಲವೇ? ರಾಜಕಾರಣದಲ್ಲಿ ಯಾರ್ಯಾರು, ಏನೇನು ಮಾತನಾಡುತ್ತಾರೆ ಎಂಬುದು ನನಗಿಂತಲೂ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಡೀಮ್ಡ್ ಅರಣ್ಯ ಕುರಿತಂತೆ ನ್ಯಾಯಾಲಯಕ್ಕೆ 2022ರಲ್ಲಿ ಸಲ್ಲಿಸಲಾಗಿರುವ ಪ್ರಮಾಣಪತ್ರದಲ್ಲಿರುವ ಎಲ್ಲ ಪರಿಭಾವಿತ ಅರಣ್ಯದ ಜಂಟಿ ಸರ್ವೆ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು ಅವರು ತುಮಕೂರಿನಲ್ಲಿ ಹಾಸನ ವೃತ್ತದ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಬಾಕಿ ಇರುವ ಜಂಟಿ ಸರ್ವೆ ಪ್ರಕರಣಗಳನ್ನು ಕಂದಾಯ ಇಲಾಖೆಯ ಸಮನ್ವಯದೊಂದಿಗೆ ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಹಾಗೂ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇರುವ ಅರಣ್ಯ ಅಪರಾಧ, ಒತ್ತುವರಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಮತ್ತು ಈ ಸಂಬಂಧ ಸರ್ಕಾರಿ ವಕೀಲರಿಗೆ ಸೂಕ್ತ ದಾಖಲೆಗಳನ್ನು ಒದಗಿಸಬೇಕೆಂದರು. ರಾಜ್ಯ ಸರ್ಕಾರ 2015ರಲ್ಲಿ ಕೈಗೊಂಡಿರುವ ತೀರ್ಮಾನಕ್ಕೆ ಬದ್ಧರಾಗಿ ಪಟ್ಟಾ ಜಮೀನು ಮತ್ತು ಜೀವನೋಪಾಯಕ್ಕಾಗಿ ಮಾಡಿಕೊಂಡಿರುವ ಅರಣ್ಯ ಒತ್ತುವರಿ ಎರಡೂ ಸೇರಿ 3 ಎಕರೆಗಿಂತ ಕಡಿಮೆ ಇರುವ ಸಣ್ಣ ಒತ್ತುವರಿದಾರರಿಗೆ ತೊಂದರೆ ನೀಡದೆ, 3 ಎಕರೆಗಿಂತ…
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು. ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದು…
ಬೆಂಗಳೂರು: ಶಾಲಾ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮವನ್ನು ಸಡಿಲ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅನೇಕರು ಈ ಸಂಬಂಧ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ ನಲ್ಲಿ ಯಾವುದೇ ಆದೇಶಗಳು ಬಂದರೂ ಕೂಡ ನಾವು ಪಾಲನೆ ಮಾಡುತ್ತೇವೆ ಎಂದು ಅವರು ಹೇಳಿದರು. ನಾವು ನಿಯಮದ ಪ್ರಕಾರ ನಡೆದುಕೊಳ್ಳಬೇಕು. 1 ತಿಂಗಳು, 2 ತಿಂಗಳ ಕಡಿಮೆ ಇರುವವರಿಗೆ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಇದೆಲ್ಲವೂ ಚರ್ಚೆ ಆಗೋ ವಿಚಾರ ಎಂದು ಹೇಳಿದರು. ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು:ರಾಜ್ಯ ಸರ್ಕಾರ ಮುಚ್ಚಿಸಲು ಉದ್ದೇಶಿಸಿರುವ 9 ವಿವಿಗಳು ಲಾಭದಾಯವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶಿಕ್ಷಣವೆಂದರೆ ವ್ಯಾಪಾರವಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದಿದ್ದಾರೆ. ಮಂಡ್ಯದಲ್ಲಿ ಪ್ರತಿಭಟನೆಯನ್ನುದ್ದೇಶಿದಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ, ಶಿಕ್ಷಣವೆಂದರೆ ವ್ಯಾಪಾರವಲ್ಲ ಎಂದಿದ್ದಾರೆ. ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ ಎಂದಿರುವ ಕಾಂಗ್ರೆಸ್ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4