Author: admin

ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ–ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಗಳ ನಿಯೋಜಿಸುವಂತೆ ಅರಣ್ಯ, ಸಚಿವ ಈಶ್ವರ ಬಿ. ಖಂಡ್ರೆ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ. ಈ ಕುರಿತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸಚಿವರು ಲಿಖಿತ ಸೂಚನೆ ನೀಡಿದ್ದಾರೆ. ಸರಗೂರು ತಾಲ್ಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಬೆಳಗ್ಗೆ ದಂಡ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ಸಚಿವರು ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ.…

Read More

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದೆ. 8 ತಿಂಗಳ ಹಿಂದೆ ಡಂಡ ನಾಯ್ಕ ಮೇಲೆ ಆನೆ ದಾಳಿ ನಡೆಸಿತ್ತು. ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಹುಲಿ ದಾಳಿಗೆ ದಂಡನಾಯ್ಕ ಬಲಿಯಾಗಿದ್ದಾರೆ. ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಸಾದ್ಯವಾಗದ ಪರಿಸ್ಥಿತಿ ಉಂಟಾಗಿದೆ. ಹುಲಿ ದಾಳಿಯಿಂದ ಈಗಾಗಲೇ ಹಲವು ರೈತರು ಪ್ರಾಣ ಕಳೆದುಕೊಂಡಿರುವ ನಡುವೆ ದನ ಕಾಯುತ್ತಿದ್ದ ರೈತನ ಬಳಿಯೇ ಹುಲಿ ಬಂದ ಘಟನೆ ಇತ್ತೀಚೆಗೆ ನಂಜನಗೂಡು ತಾಲೂಕಿನ ನೇರಳೆ ಗ್ರಾಮದಲ್ಲಿ ನಡೆದಿತ್ತು. ಮನುಷ್ಯರು ಮಾತ್ರವಲ್ಲದೆ ಜಾನುವಾರುಗಳ ಮೇಲೂ ವ್ಯಾಘ್ರ ದಾಳಿ ನಡೆಸುತ್ತಿದ್ದು ಮೇಯಲು ಹೋದ ಪ್ರಾಣಿಗಳ ಜೊತೆಗೆ, ಕೊಟ್ಟಿಗೆಗೂ ನುಗ್ಗಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.…

Read More

ಪಾವಗಡ:  ತಾಲೂಕಿನ ಪೋತಗಾನಹಳ್ಳಿ ಗ್ರಾಮಪಂಚಾಯಿತಿಯ ಪಿಡಿಓ ಮತ್ತು ಕಂಪ್ಯೂಟರ್ ಸಿಬ್ಬಂದಿ ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ಹೀಗಾಗಿ ಇಲ್ಲಿನ ವಾಟರ್ ಮ್ಯಾನ್ ಕಂಪ್ಯೂಟರ್ ನಲ್ಲಿ ಕೆಲಸ ಮಾಡುತ್ತಾ, ಹಾಜರಾತಿ ಹಾಕಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಪಾವಗಡ ತಾಲೂಕಿನ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಸಾರ್ವಜನಿಕರು ತಮ್ಮ ಕೆಲಸಗಳನ್ನ ಮಾಡಿಸಿಕೊಳ್ಳಬೇಕಾದರೆ ತಿಂಗಳುಗಳ ಕಾಲ  ಸುತ್ತಾಡಿ ಪರದಾಡುವಂತಾಗಿದೆ. ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಯಲ್ಲಿ ಹಾಜರಾಗದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನುವ ಆರೋಪಗಳ ನಡುವೆಯೇ ಈ ವಿಡಿಯೋ ವೈರಲ್ ಆಗಿದೆ. ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದ ಹಿನ್ನೆಲೆ  ವಾಟರ್ ಮ್ಯಾನ್ ಗಳು ಹಾಜರಾತಿ ಹಾಕುವ ಕೆಲಸ ಮಾಡುವಂತಾಗಿದೆ. ಕಂಪ್ಯೂಟರ್ ಆಪರೇಟರ್ ಆಗಿ ಹನುಮೇಶ್ ಎಂಬವರು ಕೆಲಸ ಮಾಡ್ತಾ ಇದ್ದಾರೆ. ಆದ್ರೆ ಅವರು ಕೂಡ ಸರಿಯಾದ ಸಮಯಕ್ಕೆ ಹಾಜರಾಗದೇ ವಾಟರ್ ಮ್ಯಾನ್ ಗಳು ಕೆಲಸ ಮಾಡಿ ಇವರನ್ನು ಸಾಕುವಂತಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ಪೋತಗಾನಹಳ್ಳಿ ಪಿಡಿಓ ಮತ್ತು ಕಂಪ್ಯೂಟರ್ ಆಪರೇಟರ್ ಇಬ್ಬರು ಸೇರಿಕೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ…

Read More

ತುಮಕೂರು: ಇಂದು ತುಮಕೂರಿನ ಸುಧಾ ಟೀ ಹೌಸ್‌ ನಲ್ಲಿ ಜಿಲ್ಲೆಯ ಪ್ರಗತಿಪರ, ದಲಿತ, ಮಹಿಳಾ ಮತ್ತು ಜೀವಪರ ಸಂಘ ಸಂಸ್ಥೆಗಳು ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕದ ಸಂಯುಕ್ತಾಶ್ರಯದಲ್ಲಿ  ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಮಾಡುತ್ತಿರುವ ನಿಲುವು ಖಂಡಿಸಿ ಕೆ.ದೊರೈರಾಜ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣ ಮಾಡುವ PPP ಮಾದರಿಯನ್ನು ಕೈಬಿಡಲು ಆಗ್ರಹಿಸಿ ಹೋರಾಟ ಸಮಿತಿ ರಚಿಸಿ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿಕ್ಕೆ ಆಗ್ರಹಿಸುವುದು ಸೇರದಂತೆ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಲ್ಲಾ ಪ್ರಗತಿಪರ ಸಂಘಟನೆಗಳಿಂದ ಮನವಿ ನೀಡಲು ಸಭೆಯಲ್ಲಿ ತೀರ್ಮಾನಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸ್ಲಂಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಿಷ್ಠಗೊಳಿಸಲು ಆಗ್ರಹಿಸಲಾಯಿತು. ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕದ ಸಂಚಾಲಕರಾದ ಪ್ರಸನ್ನ ಸಾಲಿಗ್ರಾಮ ಮಾತನಾಡಿ, ವಿಶ್ವಸಂಸ್ಥೆ ಐಎಮ್‌ ಎಫ್ ಹಿತಾಸಕ್ತಿ ಮೇಲೆ ಖಾಸಗೀಕರಣವೆನ್ನುವುದು ಪರಿಚಯವಾಗಿದೆ, ಸರ್ಕಾರಿ ವ್ಯವಸ್ಥೆಯನ್ನು ಖಾಸಗೀಯವರಿಗೆ ನೀಡಿ ಸರ್ಕಾರಿ ಸೇವಾ ನಿರತ ವ್ಯವಸ್ಥೆಯನ್ನು ಖಾಸಗಿ ಬಂಡವಾಳ ಶಾಹಿಗಳಿಗೆ  ನೀಡಲಾಗುತ್ತಿದೆ,…

Read More

ನವದೆಹಲಿ:  ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹರಿಯಾಣದಲ್ಲಿ ನಡೆದಿರುವ ಮತಗಳ್ಳತನ ವಿಚಾರವಾಗಿ ಕರ್ನಾಟಕ ರಾಜ್ಯದಲ್ಲಿ ಪ್ರತಿಭಟನೆ ಖಂಡಿತವಾಗಿ ಪ್ರತಿಭಟನೆ ಮಾಡುತ್ತೇವೆ. ಈಗಾಗಲೇ ಲಕ್ಷಾಂತರ ಸಹಿಸಂಗ್ರಹ ಮಾಡಿದ್ದೇವೆ. ಅದನ್ನು ನ.9 ರಂದು ದೆಹಲಿಗೆ ತೆಗೆದುಕೊಂಡು ಬರುತ್ತೇವೆ. ಬ್ಲಾಕ್ ಅಧ್ಯಕ್ಷರ ಜೊತೆ ಚರ್ಚೆ ಮಾಡಲಿದ್ದೇನೆ. ಈ ಅಭಿಯಾನದಲ್ಲಿ ಯಾರು ಕೆಲಸ ಮಾಡಿಲ್ಲವೋ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಸಹಿಸಂಗ್ರಹ ಅಭಿಯಾನದಲ್ಲಿ ಸರಿಯಾಗಿ ಜವಾಬ್ದಾರಿ ನಿಭಾಯಿಸದವರನ್ನು ಅವರ ಹುದ್ದೆಯಿಂದ ಕಿತ್ತೊಗೆಯಿರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆಗೂ ಚರ್ಚೆ ಮಾಡುವೆ, ಶಾಸಕರಿಗೂ ತಿಳಿಸುವೆ. ಮತಗಳ್ಳತನ ರಾಷ್ಟ್ರ ಮಟ್ಟದ ಗಂಭೀರ ವಿಚಾರವಾಗಿದ್ದು, ನಮ್ಮ ರಾಜ್ಯದಲ್ಲಿ ಈಗಾಗಲೇ 70–80 ಲಕ್ಷ ಸಹಿ ಸಂಗ್ರಹ ಮಾಡಲಾಗಿದೆ. ಕೆಲವು ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್ ನವರು ಇದನ್ನು…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯಣದುರ್ಗ ಹೋಬಳಿಯ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆ ಹೊನ್ನೂರು ಖಾಸಾ ಶಾಖಾ ಮಠಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಭೇಟಿ ನೀಡಿ, 228 ನೇ ಬೆಳದಿಂಗಳ ಕೂಟ ಹಾಗೂ  ಕಾರ್ತಿಕ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಶ್ರೀ ಸಿದ್ದೇಶ್ವರ ಸ್ವಾಮಿಗೆ ಡಾ.ಜಿ ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು.  ಕಾಂಗ್ರೆಸ್ ಪಕ್ಷದ ಮುಖಂಡರಾದ ಅರಕೆರೆ ಶಂಕರ್ ಮತ್ತು ಗೊಂದಿಹಳ್ಳಿ ರಂಗರಾಜು ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಪರಮೇಶ್ವರ್ ಅವರಿಗೆ ಶೀಘ್ರವೇ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರಕಲೆಂದು ಕ್ಷೇತ್ರಾಧಿಪತಿ ಶ್ರೀ ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥನೆ ಮಾಡಿದರು. ಕಾರ್ಯಕರ್ತರು ಇದೇ ಸಂದರ್ಭದಲ್ಲಿ ಪರಮೇಶ್ವರ್ ರಾಜ್ಯ ಮುಖ್ಯಮಂತ್ರಿಯಾಗಲಿ ಎಂದು ಜೈಕಾರ ಹಾಕಿದರು.  ನಂತರ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಗೃಹ ಸಚಿವರು ಸಮಾಲೋಚನೆ ನಡೆಸಿದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ ಟೆಂಡರ್ ತಹಶೀಲ್ದಾರ್ ಅಧ್ಯಕ್ಷತೆ ನಡೆದ ಪ್ರಕ್ರಿಯೆ ಗುರುವಾರದಂದು ನಡೆಯಿತು. ನಂತರ ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಲಾಡು ಪ್ರಸಾದ ಟೆಂಡರ್ ಪ್ರಕ್ರಿಯೆಯಲ್ಲಿ 6 ಟೆಂಡರದಾರು ಭಾಗವಹಿಸುವರು.  ಸರ್ಕಾರ ಸುತ್ತೋಲೆ ಪ್ರಕಾರ ಲಾಡು ಪ್ರಸಾದ ಮಾರಾಟ ಮಾಡಬೇಕು. ಭಕ್ತಾದಿಗಳಿಗೆ ಲಾಡು ವಿತರಣೆ ಮಾಡುವ ಸಮಯದಲ್ಲಿ ನಿಗದಿಪಡಿಸಿದ ಹಣವನ್ನು ತೆಗೆದುಕೊಳ್ಳಬೇಕು. ಅದರ ಮೇಲಟ್ಟ ಹಣವನ್ನು ತೆಗೆದುಕೊಂಡರೆ, ನಮ್ಮ ಗಮನಕ್ಕೆ ಬಂದರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಅವರ ಟೆಂಡರನ್ನು ವಜಾಗೊಳಸಲಾಗುತ್ತದೆ ಎಂದು ತಿಳಿಸಿದರು. 6 ಟೆಂಡರ್ ದಾರಲ್ಲಿ ಒಬ್ಬರಿಗೆ ಟೆಂಡರ್ ಆಗುತ್ತದೆ ಅದರಲ್ಲಿ ಲಾಡುಗೆ ಯಾವ ಯಾವ ಸಾಮಗ್ರಿಗಳು ಬಳಸಿಕೊಂಡು ಕ್ವಾಲಿಟಿಯಲ್ಲಿ ಮಾರಾಟ ಮಾಡಬೇಕು ಅದರಲ್ಲಿ ಲೋಪದೋಷಗಳನ್ನು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಲಾಡು ಪ್ರಸಾದ ಟೆಂಡರ್ ಪ್ರಕ್ರಿಯೆಯಲ್ಲಿ ಚನ್ನಗುಂಡಿ ಗ್ರಾಮದ ನಾಗರಾಜು ಎಂಬುವರಿಗೆ 1 ಲಕ್ಷ 72…

Read More

ಸರಗೂರು:  ಇತ್ತೀಚೆಗಿನ ದಿನಗಳಲ್ಲಿ ಸಂಘಟನೆಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳಿಂದ ಸಮುದಾಯದ ಜನತೆ ಸಾಕಷ್ಟು ಅವಘಡಗಳಿಗೆ ತುತ್ತಾಗುತ್ತಿರುವುದು ವಿಷಾದಕರ. ಇದಕ್ಕೆ ಸಂಘಟನೆ ಒಗ್ಗಟ್ಟಾಗಬೇಕು ಎಂದು ಜೈ ಭೀಮ್ ದಮನಿತರ ಸೇವೆ ಸಮಿತಿ ರಾಜ್ಯಾಧ್ಯಕ್ಷ ಮೇಡಿಹಾಳ ಡಾ.ಮುನಿಆಂಜಿನಪ್ಪ ತಿಳಿಸಿದರು. ಪಟ್ಟಣದ ಖಾಸಗಿ ಹೋಟೆಲಿನಲ್ಲಿ ಗುರುವಾರದಂದು ಏರ್ಪಡಿಸಿದ್ದ ‘ಜೈ ಭೀಮ್ ದಮನಿತರ ಸೇವಾ ಸಮಿತಿ’ಯ ರಾಜ್ಯಾಧ್ಯಕ್ಷ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳು ಆಯ್ಕೆ ಮಾಡಿ ಮಾತನಾಡಿದರು. ಜಿಲ್ಲಾ ಮತ್ತು ತಾಲೂಕು ಸಮಿತಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ,  ಮೈಸೂರಿನ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಆಯ್ಕೆ ಮಾಡಲು ಪ್ರತಿ ತಾಲ್ಲೂಕುಗಳಿಗೆ ಭೇಟಿ ನೀಡಿ ಸಮಿತಿ ಪ್ರಾರಂಭ ಮಾಡಿ, ನಮ್ಮ ದಮನಿತರ ಮತ್ತು ಬಡವರಿಗೆ ಅನ್ಯಾಯವಾದಂತಹ ಸಂದರ್ಭದಲ್ಲಿ ನಮ್ಮ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಿಂತು ನೊಂದವರಿಗೆ ನ್ಯಾಯ ಒದಗಿಸಿಕೊಡಬೇಕು. ನ್ಯಾಯಯುತವಾದ ಹೋರಾಟಗಳನ್ನು ಮಾಡಿ ಸಮಾಜದ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಪದಾಧಿಕಾರಿಗಳ ಆಯ್ಕೆ: ಜಿಲ್ಲಾ ಶಾಖೆಯ ಪದಾಧಿಕಾರಿಗಳಾಗಿ ಎನ್ ಬಸವರಾಜು (ಜಿಲ್ಲಾಧ್ಯಕ್ಷ), ರಂಗಸ್ವಾಮಿ (ಜಿಲ್ಲಾ…

Read More

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದೊಡ್ಡನಹಟ್ಟಿ ಹಾಗೂ ತುಮಕೂರು ನಗರ ವ್ಯಾಪ್ತಿಯ ಮಂಜುನಾಥ ನಗರ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಈ  ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 11ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿದ್ರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ನವೆಂಬರ್ 20ರಂದು ಸಂಜೆ 6 ಗಂಟೆಗೆ ಲಕ್ಷದೀಪೋತ್ಸವ ವಿಶೇಷ ಸೇವೆ ಹಾಗೂ ರಾತ್ರಿ 10 ಗಂಟೆಗೆ ಬೆಳ್ಳಿ ಪಲ್ಲಕ್ಕಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ಕ್ಷೇತ್ರದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಕ್ಷ ದೀಪೋತ್ಸವದ ಒಂದು ದೀಪಕ್ಕೆ 40 ರೂ. ಸೇವಾ ದರ ನಿಗದಿಪಡಿಸಲಾಗಿದೆ. ಭಕ್ತಾದಿಗಳು ಪುದುವಟ್ ಸೇವಾ ಠೇವಣಿಯಲ್ಲಿ 500 ರೂ.ಗಳನ್ನು ತೊಡಗಿಸಿದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಅಮಾವಾಸ್ಯೆಯ ಲಕ್ಷದೀಪೋತ್ಸವದಂದು ಒಂದು ದೀಪವನ್ನು ಹಚ್ಚಿಸುವ ಸೇವಾ ಅವಕಾಶವಿದೆ. ಲಕ್ಷದೀಪೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ಸ್ವಾಮಿಯ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಅವರು ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More