Subscribe to Updates
Get the latest creative news from FooBar about art, design and business.
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
Author: admin
ನವದೆಹಲಿ: ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾಡಿರುವ ಗಂಭೀರ ಆರೋಪಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ಆರ್. ಅಶೋಕ್ ಅವರು ಬೆಂಗಳೂರು ಕಸದ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ, ವಕ್ತಾರರಾಗಿ ಮಾತನಾಡುತ್ತಿದ್ದಾರೆ” ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಈ ಮಾಫಿಯಾವನ್ನು ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೂ ಚರ್ಚೆ ಮಾಡಿದ್ದೆ. ಆದರೆ ಈಗ ಅಶೋಕ್ ಅವರೇ ಈ ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೇ ಅವರು ಈ ರೀತಿಯ ಅಸೂಯೆ ರಾಜಕೀಯ ಮಾಡುತ್ತಿದ್ದಾರೆ,” ಎಂದು ಕಿಡಿಕಾರಿದರು. “ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಅವರೂ ಇದೇ ರೀತಿ ಮಾತನಾಡಿದ್ದರು. ಬೆಂಗಳೂರಿನಲ್ಲಿ ದೊಡ್ಡ ಕಸದ ಲಾಭಿ ಇದೆ. ಅವರ ಕಾಲದಲ್ಲಿ ಯಾಕೆ ಕಸದ ಟೆಂಡರ್ ಮಾಡಲು…
ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಸೂಚನೆ ನೀಡಿದರು. ಪಟ್ಟಣದ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಬೇಟಿ ನೀಡಿ ವಿದ್ಯಾರ್ಥಿಗಳಿಂದ ಸಮಸ್ಯೆಗಳನ್ನು ಆಲಿಸಿದ ಅವರು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಿ ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗಳನ್ನು ಬಿಟ್ಟು ಉತ್ತಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂಬ ಕನಸನ್ನು ಹೊತ್ತು ಬಂದಿರುವ ಈ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಹಾಗೇ ವಿದ್ಯಾರ್ಥಿಗಳು ಇದು ನಮ್ಮ ಮನೆ ಎಂಬ ಭಾವನೆಯಿಂದ ಹಾಸ್ಪೇಲ್‌ನಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಶಿಕ್ಷಣವೇ ಜೀವನದ ಯಶಸ್ಸಿನ ಅಡಿಪಾಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರಿ ಹೊಂದಿ ಶ್ರದ್ಧೆ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ನಂತರ ಪಟ್ಟಣದ ಸರ್ಕಾರಿ…
ಕೊಟ್ಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವವನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂನ್ 8 ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಟ್ಟೂರು ತಾಲೂಕು ಘಟಕದ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ದಸಂಸ ಅಧ್ಯಕ್ಷರಾದ ಬಿ. ಶಿವರಾಜ್ ಅವರು ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ವಂದನೆಗಳನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು. ತದನಂತರ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಮತ್ತು ಕಾರ್ಯಕರ್ತರು ಪ್ರೊಫೆಸರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ವಂದನೆಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ತಗ್ಗಿನಕೇರಿ ಕೊಟ್ರೇಶ್ ಮತ್ತು ವಕೀಲರಾದ ಟಿ. ಹನುಮಂತಪ್ಪ ಅವರು ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು, ಪ್ರೊಫೆಸರ್ ಬಿ. ಕೃಷ್ಣಪ್ಪನವರ ಸಮಾಜಮುಖಿ ಜೀವನ ಹಾಗೂ ಅವರು ದಲಿತ ಸಮುದಾಯದ ಏಳಿಗೆಗಾಗಿ ನಡೆಸಿದ ಧೀಮಂತ ಹೋರಾಟಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಈ…
ತುಮಕೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (Hostels) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ (PUC), ಸಮಾನಾಂತರ ಡಿಪ್ಲೋಮಾ ಹಾಗೂ ಐ.ಟಿ.ಐ (ITI) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಹಾಸ್ಟೆಲ್ ಪ್ರವೇಶಾವಕಾಶ ಇರಲಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಈ ಕೆಳಗಿನ ಮಿತಿಯೊಳಗಿರಬೇಕು: ಪ್ರವರ್ಗ-1, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST): ವಾರ್ಷಿಕ ಆದಾಯ ₹2.50 ಲಕ್ಷ ಮೀರಿರಬಾರದು. ಪ್ರವರ್ಗ- 2ಎ, 2ಬಿ, 3ಎ, 3ಬಿ: ವಾರ್ಷಿಕ ಆದಾಯ ₹1.00 ಲಕ್ಷ ಮಿತಿಯೊಳಗಿರಬೇಕು. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಜೂನ್ 15ರ ಒಳಗಾಗಿ ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಬೇಕಾದ ಅಧಿಕೃತ ಜಾಲತಾಣ: https://shp.karnataka.gov.in/bcwd ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ: https://bcwd.karnataka.gov.in/ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು…
ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಎರಡನೇ ಆರೋಪಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ. ತಮ್ಮ ನಡುವಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದರೆಂಬ ಕಾರಣಕ್ಕೆ ಆರೋಪಿಗಳು ವೃದ್ಧೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯಕ್ಕೆ ಆರೋಪಿಗಳ ಮೇಲಿನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ. ನ್ಯಾಯಾಧೀಶರಾದ ಶಿಲ್ಪಾ ಕೆ.ಎಸ್. ಅವರು ಪ್ರಕರಣದ ಸಂಪೂರ್ಣ ಮೌಲ್ಯಮಾಪನ ನಡೆಸಿ ಮೊದಲನೇ ಆರೋಪಿ (ಬಾಲಚಂದ್ರ – 47 ವರ್ಷ): ಕೊಲೆ ಆರೋಪ ಸಂಪೂರ್ಣ ಸಾಬೀತಾದ ಹಿನ್ನೆಲೆಯಲ್ಲಿ ಈತನಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಎರಡನೇ ಆರೋಪಿ (ಲತಾ – 40 ವರ್ಷ): ಈಕೆಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ…
ತುಮಕೂರು: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಉದ್ದೇಶದಿಂದ ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಸದಸ್ಯರೊಂದಿಗೆ ಪ್ರತಿವಾರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಚಿವರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಒಮ್ಮೆ ಸಮಿತಿ ಸಭೆ ನಡೆಸಲಾಗುವುದು. ನಾಳೆಯಿಂದ ಸಮಿತಿ ಸದಸ್ಯರು ತಮಗೆ ಹಂಚಿಕೆ ಮಾಡಲಾದ ವಿಧಾನಸಭಾ ಕ್ಷೇತ್ರವಾರು ಸಭೆಗಳನ್ನು ನಡೆಸಿ, ಪೂರ್ಣಗೊಂಡಿರುವ ಕಾಮಗಾರಿಗಳ ವಿವರವಾದ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಸೂಚಿಸಿದರು. ಇಲಾಖಾವಾರು ಕಾಮಗಾರಿಗಳ ಪಟ್ಟಿಯನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಅಲ್ಲದೆ, ಒಂದು ತಿಂಗಳು, ಮೂರು ತಿಂಗಳು, ಆರು ತಿಂಗಳು ಹಾಗೂ ವರ್ಷಾಂತ್ಯದೊಳಗೆ ಪೂರ್ಣಗೊಳ್ಳಬಹುದಾದ ಕಾಮಗಾರಿಗಳ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸುವಂತೆ ಸೂಚಿಸಿದರು. ಸಭೆಯಲ್ಲಿ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದ್ದು, ಯಾವ ಯಾವ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಹಾಗೂ ಎಷ್ಟು…
ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಿದರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ, ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು. ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಸಾಧಕರಿಗೆ ನೀಡಬೇಕಿರುವ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಅರ್ಹ ಕ್ರೀಡಾಪಟುಗಳನ್ನು ಪಾರದರ್ಶಕವಾಗಿ ಗುರುತಿಸಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಅವರ ಸಾಧನೆಯನ್ನು ಗೌರವಿಸುವ ಕೆಲಸವಾಗಬೇಕು.…
ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ಸಾರ್ವಜನಿಕ ಆಸ್ಪತ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾದ ಆಸ್ಪತ್ರೆಯಾಗಿದ್ದು, ಅತ್ಯಾಧುನಿಕ ಸೌಲಭ್ಯಗಳ ಆಸ್ಪತ್ರೆ ನಿರ್ಮಿಸುವಂತೆ ಸಾರ್ವಜನಿಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಇದೇ ಜಾಗದಲ್ಲಿ ಜಿಲ್ಲಾ ಆಸ್ಪತ್ರೆಯನ್ನು 131 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಲಿದ್ದು, ಮುಂದಿನ 18 ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು. 18 ತಿಂಗಳಿಗೆ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದ ಅವರು, ಪಾರಂಪರಿಕ ಆಸ್ಪತ್ರೆ ಕಟ್ಟಡದ ಕಲ್ಲುಗಳನ್ನು ಹಾಗೂ ಇತರ ಸಾಮಗ್ರಿಗಳನ್ನು ಅತ್ಯಂತ ಜತನದಿಂದ ಬಳಸಿಕೊಳ್ಳುವಂತೆ ಈ ಹಿಂದೆ ಸಮಗ್ರವಾಗಿ ಯೋಚಿಸಿ ತೀರ್ಮಾನಿಸಲಾಗಿದೆ. ಹಿಂದಿನ ಕಲ್ಲುಗಳನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಸೂರಜ್ ಗೆ ಸಂತಾಪ: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…
ತುಮಕೂರು: ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ವತಿಯಿಂದ ಐಬಿಪಿಎಸ್ ಸಂಸ್ಥೆ ನಡೆಸುವ ಪ್ರೊಬೆಷನರ್ ಆಫೀಸರ್ ಹುದ್ದೆಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತಮ ಫಲಿತಾಂಶ ನೀಡಲು ನುರಿತ ವಿಷಯ ತಜ್ಞರಿಂದ ಜೂ.3ನೇ ವಾರದಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ತರಗತಿಗಳನ್ನು ಆರಂಭಿಸಲಾಗುವುದು. ಸಂಸ್ಥೆಯು ಸುಸಜ್ಜಿತ ಗ್ರಂಥಾಲಯ, ವೈ–ಫೈ ಇಂಟರ್ನೆಟ್ ಹಾಗೂ ಪುರುಷ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ಹಾಸ್ಟೆಲ್ ಸೌಲಭ್ಯಗಳನ್ನು ಒಳಗೊಂಡಿದೆ. ಅರ್ಹ ಅಭ್ಯರ್ಥಿಗಳು ಜೂ.15ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳಿಗೆ: ಕೇಂದ್ರ ಕಚೇರಿ, ಕೃಷಿಕ್ ಸರ್ವೋದಯ ಫೌಂಡೇಷನ್ (ರಿ), ನಂ:15, 2ನೇ ಮಹಡಿ, ಹೆಚ್.ಎ.ಎಲ್ ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು-08, ದೂರವಾಣಿ 9449146200 / 7625000990 / ನ್ನು ಸಂಪರ್ಕಿಸುವಂತೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ವಿಶೇಷ ಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026ನೇ ಸಾಲಿನ ವಿಶ್ವ ಹಿರಿಯನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಹಿರಿಯನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ. ಹಿರಿಯರು ಗುರುತಿನ ಚೀಟಿ ಹೊಂದುವುದು ಕೇವಲ ಗುರುತಿನ ದಾಖಲೆ ಮಾತ್ರವಲ್ಲದೇ, ಜೀವನ ಮಟ್ಟವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಗುರುತಿನ ಚೀಟಿ ಪಡೆಯುವುದರಿಂದ ವಿಮಾನ ಪ್ರಯಾಣ, ರೈಲ್ವೆ ಪ್ರಯಾಣ, ಬಸ್ ಪಾಸ್ ಹಾಗೂ ಬಸ್ ಪ್ರಯಾಣದ ದರದಲ್ಲಿ ರಿಯಾಯಿತಿ (ಬಿ.ಎಂ.ಟಿ.ಸಿ ಮತ್ತು ಕೆಎಸ್ ಆರ್ ಟಿಸಿ), ಆದಾಯ ತೆರಿಗೆಯಲ್ಲಿ ವಿನಾಯಿತಿ ಮತ್ತು ಹಿರಿಯನಾಗರಿಕರ ಪೋಷಣಾ ಭತ್ಯೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಹಿರಿಯನಾಗರಿಕರ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯನಾಗರಿಕರು ಆಧಾರ್ ಕಾರ್ಡ್‌ನಲ್ಲಿ ಕೆ.ವೈ.ಸಿ ಹೊಂದಿರುವ ಮೊಬೈಲ್‌ನೊಂದಿಗೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಫೋಟೋ, ರಕ್ತದ ಗುಂಪಿನ ದಾಖಲೆಯನ್ನು ತಮ್ಮ ಸಮೀಪದ ಗ್ರಾಮ ಒನ್, ಸಿ.ಎಸ್.ಸಿ ಕೇಂದ್ರ, ಕರ್ನಾಟಕ ಒನ್‌ಗೆ ಭೇಟಿ ನೀಡಿ, ಹಿರಿಯನಾಗರಿಕರ ಗುರುತಿನ…