Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ನ್ಯೂಯಾರ್ಕ್, ವಾಷಿಂಗ್ಟನ್: ಅಮೆರಿಕ—ಉಕ್ರೇನ್ ನಡುವಿನ ಖನಿಜ ಒಪ್ಪಂದದ ಮಾತುಕತೆ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ನಡುವೆ ಜಟಾಪಟಿ ನಡೆದಿದೆ. ಉಭಯ ನಾಯಕರ ನಡುವೆ ತೀವ್ರ ವಾಗ್ದಾಳಿ ನಡೆದ ಬಳಿಕ ಖನಿಜ ಒಪ್ಪಂದಕ್ಕೆ ಸಹಿ ಹಾಕದೆಯೇ ಝೆಲೆನ್ ಸ್ಕಿ ಅವರು ಸಭೆಯಿಂದ ಹೊರ ನಡೆದಿದ್ದು, ಬಳಿಕ ಈ ಬಗ್ಗೆ ಝೆಲೆನ್ ಸ್ಕಿ ಟ್ವೀಟ್ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ನಡುವೆ ನಡೆದ ಸಭೆ ಅಭೂತಪೂರ್ವವಾಗಿತ್ತು. ಉಕ್ರೇನ್ ಗೆ ಬೆಂಬಲ ನೀಡಿದ್ದಕ್ಕೆ ಅಮೆರಿಕ ಜನತೆಗೆ ಧನ್ಯವಾದ. ಉಕ್ರೆನ್ ಗೆ ಶಾಶ್ವತ ಶಾಂತಿ ಬೇಕಾಗಿದೆ ಎಂದಿದ್ದಾರೆ. ಸಭೆಯಲ್ಲಿ ರಷ್ಯಾ, ಉಕ್ರೇನ್ ಯುದ್ಧದಲ್ಲಿ ಝಲೆನ್ ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ. 3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ ಎಂದು ಲೆನ್ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ. ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ…
ಮುಂಬೈ: ಮಹಾರಾಷ್ಟ್ರ ಸರ್ಕಾರವು ಆಪ್ನೆ ಸರ್ಕಾರ (ನಮ್ಮ ಸರ್ಕಾರ) ಪೋರ್ಟಲ್ ನಿಂದ 500ಕ್ಕೂ ಹೆಚ್ಚು ಸೇವೆಗಳನ್ನು ವಾಟ್ಸಾಪ್ ಮೂಲಕ ಒದಗಿಸುವ ಭರವಸೆ ನೀಡಿದೆ. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ಮುಂಬೈ ಟೆಕ್ ವೀಕ್ 2025ನ್ನು ಉದ್ಘಾಟಿಸಿದ್ದಾರೆ. ಈ ವೇಳೆ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ವಾಟ್ಸಾಪ್ ಮಾಲಿಕತ್ವದ ಮೆಟಾ ನಡುವಿನ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದೇ ವೇಳೆ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ನಡುವೆ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿ ಭೂಮಿ ಹಂಚಿಕೆ ಮಾಡುವ ಒಪ್ಪಂದಕ್ಕೂ ಫಡಣವೀಸ್ ಸಹಿ ಹಾಕಿದ್ದಾರೆ. ಕೃತಕ ಬುದ್ಧಿಮತ್ತೆ ಎಐ ತಂತ್ರಜ್ಞಾನಕ್ಕೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ತಂಡದ ಸಹಯೋಗದೊಂದಿಗೆ “Knowledge AI Hub’ ಅನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಆಗ್ರಾ: ವಾರಣಾಸಿ–ಜೈಪುರ ಬಸ್ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟು, 19 ಮಂದಿಗೆ ಗಾಯಗಳಾಗಿವೆ. ಆಗ್ರಾದ ಫತೇಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಬಸ್ ಹಿಂದಿನಿಂದ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಾಜಸ್ಥಾನ ಮೂಲದ ಗೋವಿಂದ್ (68), ರಮೇಶ್ (45) ಮತ್ತು ಆಗ್ರಾ ನಿವಾಸಿ ದೀಪಕ್ ವರ್ಮಾ (40) ಮೃತಪಟ್ಟವರಾಗಿದ್ದಾರೆ. ಮೃತರಲ್ಲಿ ಒಬ್ಬರನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಫತೇಹಾಬಾದ್ ಎಸಿಪಿ ಅಮರ್ದೀಪ್ ಲಾಲ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರವನ್ನು ಹತೋಟಿಗೆ ತರಲು ತಾಲೂಕಿನ ವರದಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿಯಂತ್ರಣ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ, ಜನರು ಆತಂಕಕ್ಕೊಳಗಾಗದೇ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಈಗಾಗಲೇ ವರದಹಳ್ಳಿಯಲ್ಲಿ ಸಾವನ್ನಪ್ಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡು ಸುತ್ತಲೂ 10 ಕಿಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂದಿ ಹಾಕಲಾಗಿದೆ ಎಂದು ತಿಳಿಸಿದರು. ಕೋಳಿಗಳನ್ನು ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಇದುವರೆಗೆ ಗ್ರಾಮದ ಜನರಲ್ಲಿ ಯಾವುದೇ ಕೆಮ್ಮು,ಶೀತ ನೆಗಡಿ, ಜ್ವರದಂತಹ ಪ್ರಕರಣಗಳು ಕಂಡುಬಂದಿಲ್ಲ. ಆದರೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ…
ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬೈಬಲ್ ಒಂದು ರೀತಿ ಸಂವಿಧಾನವಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಟೀಕಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇಪದೇ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ರಾಹುಲ್ ಗಾಂಧಿ ಓಡಾಡುತ್ತಾರೆ, ಆದರೆ ಅವರು ಬೈಬಲ್ ಹಿಡಿದುಕೊಂಡು ಓಡಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ ಎಂದು ಹೇಳಿದರು. ರಾಜ್ಯದಲ್ಲಿ ಎಸ್ ಸಿ ಎಸ್ ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಪಂಚ ಶಕ್ತಿ ಯೋಜನೆಗಳಿಗೆ ವಿನಿಯೋಗ ಮಾಡಲಾಗುತ್ತಿದೆ. ಆದರೆ ಅಲ್ಪಸಂಖ್ಯಾತರ ಇಲಾಖೆಗೆ ಮೀಸಲಿಟ್ಟಿರುವ ಹಣವನ್ನು ಬಳಸಲು ಮುಂದಾಗುತ್ತಿಲ್ಲ. ಈ ಮೂಲಕ ದಲಿತ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಬಳಸಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಆದರೆ ರಾಹುಲ್ ಗಾಂಧಿ ಸಂವಿಧಾನವನ್ನು ಬೈಬಲ್ ರೀತಿ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ, ಅದರ ಬದಲು ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದು, ಈ ಮೂಲಕ ವಿರೋಧಿ ಬಣ ಯತ್ನಾಳ್ ಮತ್ತು ತಂಡಕ್ಕೆ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ “ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು” ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಮಾನ್ಯ ಬಿ.ಎಸ್. ಯಡಿಯೂರಪ್ಪನವರು, ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ,ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು, ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಮಾನ್ಯ ಪ್ರಧಾನಿ ನರೇಂದ್ರ ಮೋದಿ…
ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ ಬಳಿಕ ಸಿನಿಮಾ ಆಫರ್ ಗಳು ಬರುತ್ತದೆ ಎನ್ನುವ ನಂಬಿಕೆ ಇದೆ. ಆದರೆ ಆ ಮಾತು ಇತ್ತೀಚೆಗೆ ಸುಳ್ಳಾಗುತ್ತಿದೆ ಎಂದು ಮಾಜಿ ಬಿಗ್ ಬಾಸ್ ಸ್ಪರ್ಧಿ ಧರ್ಮ ಕೀರ್ತಿರಾಜ್ ಹೇಳಿದ್ದಾರೆ. ಕೆಲವರಿಗೆ ಒಂದೆರಡು ಆಫರ್ ಬಂದಿರಬಹುದು, ಆದರೆ ಸಾಬೀತು ಮಾಡಿಕೊಳ್ಳದೇ ಇದ್ದರೆ ಮತ್ತೆ ಆಫರ್ ಬರುವುದು ಅನುಮಾನ ಎಂದು ಅವರು ಹೇಳಿದ್ದಾರೆ. ರಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಧರ್ಮ ಕೀರ್ತಿರಾಜ್ ಈ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕೂಡ ನೇರ ನುಡಿಗೆ ಧರ್ಮ ಕೀರ್ತಿರಾಜ್ ಹೆಸರು ಮಾಡಿದ್ದರು. ಏನೇ ಇದ್ದರೂ ನೇರವಾಗಿ ಮಾತನಾಡುವ ಧರ್ಮ ಕೀರ್ತಿರಾಜ್ ಗೆ ಇದು ಬಿಗ್ ಬಾಸ್ ಮನೆಯಲ್ಲಿ ಹಿನ್ನಡೆಗೆ ಕಾರಣವಾಗಿತ್ತು. ಅವರು ಬಿಗ್ ಬಾಸ್ ನಿಂದ ಹೊರ ಬಂದ ಬಳಿಕವೂ ತಮ್ಮ ನೇರ ನಡೆ, ನುಡಿಗಳಿಂದಲೇ ಮುಂದೆ ಸಾಗ್ತಾ ಇದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ಮನೆಯ ಮುಂದಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ತೊರೆಮಾವಿನಹಳ್ಳಿಯಲ್ಲಿ ನಡೆದಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೊರೆಮಾವಿನಹಳ್ಳಿ ಶಂಕರಲಿಂಗಯ್ಯ ಎಂಬುವರ ಮನೆಯಂಗಳಕ್ಕೆ ಬಂದ ಚಿರತೆ ಮನೆಯ ಮುಂದೆ ಮಲಗಿದ್ದ ನಾಯಿಯನ್ನು ಹೊತ್ತೊಯ್ದಿದೆ. ತಡರಾತ್ರಿ ಮನೆಯ ಅವರಣಕ್ಕೆ ನುಗ್ಗಿ ಸಾಕು ನಾಯಿಯನ್ನ ಚಿರತೆ ಎಳೆದೊಯ್ದಿದೆ. ಕೆಳ ದಿನಗಳಿಂದ ತೊರೆಮಾವಿನಹಳ್ಳಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ. ಸದ್ಯ ಚಿರತೆ ಓಡಾಟ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರ ಬರಲು ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರು ಮನವಿ. ಮಾಡಿಕೊಂಡಿದ್ದಾರೆ. ಈ ಘಟನೆ ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಇಂದಿನಿಂದ 2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭಗೊಂಡಿದೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ನಡೆಸಿಕೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸಬರು 6,61,474 ಪುನರಾವರ್ತಿತ 34,071 ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,050 ಪದವಿ ಪೂರ್ವ ಕಾಲೇಜುಗಳ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2,91,959 ವಿಜ್ಞಾನ, 2,29,308 ವಾಣಿಜ್ಯ, 1,92,595 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ನೋಂದಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಯುವ ಕಾಂಗ್ರೆಸ್ ನಾಯಕಿಯೊಬ್ಬರಿಗೆ ವ್ಯಕ್ತಿಯೊಬ್ಬ ಅಶ್ಲೀಲ ಸನ್ನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ 43 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ನಿವಾಸಿ ಹರ್ಷ ಎಚ್.ಬಿ. ಬಂಧಿತ ಆರೋಪಿಯಾಗಿದ್ದಾನೆ. ಮೈಸೂರು-ಬೆಂಗಳೂರು ರಸ್ತೆಯ ಗೋಪಾಲನ್ ಮಾಲ್ ಬಳಿ ಈ ಘಟನೆ ಬುಧವಾರ ನಡೆದಿತ್ತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮತ್ತು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ಪ್ಯಾನೆಲಿಸ್ಟ್ ಅಕ್ಷತಾ ರವಿಕುಮಾರ್ ಅವರು ತಮಗೆ ಅಶ್ಲೀಲ ಸಿಂಬಲ್ ತೋರಿಸಿದ ವ್ಯಕ್ತಿಯ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದರು. ಈ ವಿಡಿಯೋ ಆಧರಿಸಿ ದೂರು ದಾಖಲಿಸಿಕೊಂಡಿದ್ದ ಚಾಮರಾಜಪೇಟೆ ಪೊಲೀಸರು, ಇಂದು ಆರೋಪಿಯನ್ನು ಬಂಧಿಸಿದ್ದಾರೆ. ಹಾರ್ನ್ ಮಾಡಿದ ವಿಚಾರಕ್ಕೆ ನಡುವೆ ಮಾತಿನ ಚಕಮಕಿ ನಡೆಸಿತು. ಅವರು ಕೃತ್ಯದ ವಿಡಿಯೋವನ್ನು ಸಹ ರೆಕಾರ್ಡ್ ಮಾಡಿದ್ದಾರೆ. ಘಟನೆಯ ಸಮಯದಲ್ಲಿ ಆ ವ್ಯಕ್ತಿ ತನ್ನ ಕುಟುಂಬದೊಂದಿಗೆ ಇದ್ದರು. ಈ ಘಟನೆಯು ತಪ್ಪು ತಿಳುವಳಿಕೆಯಿಂದ ಉಂಟಾಗಿದೆ ಮತ್ತು ಸೂಕ್ತ…