Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಹಾಸನ: ರಾಜ್ಯ ಕಾಂಗ್ರೆಸ್ ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ, ಕಾಂಗ್ರೆಸ್ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ದಿನೇ ದಿನೇ ಬಿಜೆಪಿಗೆ ಹತ್ತಿರವಾಗುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇಶಾ ಫೌಂಡೇಶನ್ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಪಾಲ್ಗೊಂಡಿದ್ದರು ಎಂದಷ್ಟೇ ಹೇಳಿದರು. ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬರುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 11.22 ಲಕ್ಷ ರೂ. ಮೌಲ್ಯದ 50 ಕೆಜಿ ಗಾಂಜಾ, 3 ದ್ವಿಚಕ್ರವಾಹನ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಠಾಣೆಯ ಇನ್‌ಸ್ಪೆಕ್ಟರ್ ಮಾರುತಿ ಅವರನ್ನೊಳಗೊಂಡ ತಂಡದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 7 ಲಕ್ಷ ಮೌಲ್ಯದ 14 ಕೆ.ಜಿ. ಗಾಂಜಾ ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಠಾಣೆಯ ಇನ್ ಸ್ಪೆಕ್ಟರ್ ಪ್ರವೀಣ್ ಬಾಬು ಹಾಗೂ ಸಿಬ್ಬಂದಿ, ಆರೋಪಿಯೊಬ್ಬನನ್ನು ಬಂಧಿಸಿ 2 ಲಕ್ಷ ಮೌಲ್ಯದ 5 ಕೆ.ಜಿ. ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಕಲಾಸಿಪಾಳ್ಯ ಠಾಣೆಯ ಇನ್‌ಸ್ಪೆಕ್ಟರ್ ಕಿರಣ್‌ಕುಮಾರ್ ನೇತೃತ್ವದ ಪೊಲೀಸರ ತಂಡ ಇಬ್ಬರನ್ನು ಬಂಧಿಸಿ 1.62 ಲಕ್ಷ ರೂ. ಮೌಲ್ಯದ 9 ಗ್ರಾಂ ಎಂಡಿಎಂಎ, 1 ಕೆಜಿ ಗಾಂಜಾ, 1 ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಟನ್ ಪೇಟೆ ಠಾಣೆ ಇನ್‌ಸ್ಪೆಕ್ಟರ್ ಎರಿಸ್ವಾಮಿ ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ…
ಬೆಂಗಳೂರು: ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗವು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಈ ಬಾರಿಯ ಬಜೆಟ್‌ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಸಲ್ಲಿಸಿತು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು. ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೋರಿದರು. ಒಟ್ಟಾರೆ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ ನಲ್ಲಿ 100 ಕೋಟಿ ರೂ. ಅನುದಾನಕ್ಕೆ ಒತ್ತಾಯಿಸಿದರು.ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿದಂತೆ ನಿಯೋಗದಲ್ಲಿ…
ಬೆಂಗಳೂರು: ಮುಂದಿನ 10–15 ವರ್ಷಗಳಲ್ಲಿ ತರಗತಿಗಳಿಗೆ ಶಿಕ್ಷಕರ ಅಗತ್ಯವೇ ಇಲ್ಲದಂತೆ ಕೃತಕ ಬುದ್ಧಿಮತ್ತೆಯ ಬೋಧನೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ನೆಹರೂ ತಾರಾಲಯ ನೂತನವಾಗಿ ನಿರ್ಮಿಸಿರುವ ಪ್ರೊಫೆಸರ್ ಯು.ಆರ್.ರಾವ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ತಾವು ಸೌದಿ ಅರೇಬಿಯಾಕ್ಕೆ ತೆರಳಿದ್ದು ಅಲ್ಲಿ ಉಪನ್ಯಾಸಕರೊಬ್ಬರ ಜೊತೆ ಮಾತನಾಡುವಾಗ ಮುಂದಿನ 15 ವರ್ಷಗಳಲ್ಲಿ ಮಾನವ ಶಿಕ್ಷಕರ ಅಗತ್ಯವೇ ಇರುವುದಿಲ್ಲ. ಎಲ್ಲವೂ ತಂತ್ರಜ್ಞಾನ ಆಧರಿತ ಎಐ ಅನುಸಾರ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಲು ಮಾಹಿತಿ ನೀಡುವಂತೆ ನಾನು ಅಧಿಕಾರಿಗಳನ್ನು ಕೇಳಿದ್ದೆ. ನನ್ನ ಮಕ್ಕಳು ನಿಮಗೆ ಆಪ್ತ ಸಹಾಯಕರು, ಅಧಿಕಾರಿಗಳಲ್ಲ, ಏಕೆ ಬೇಕು. ಚಾರ್ಟ್ ಜಿಬಿಟಿ ಬಳಸಿ ಎಂದು ಸಲಹೆ ನೀಡಿದರು. ಅದರಲ್ಲಿ ಮಾಹಿತಿ ಕೇಳುತ್ತಿದ್ದಂತೆ ನಿಮಿಷದ ಒಳಗೆ ಎಲ್ಲವೂ ದೊರೆತುಹೋಯಿತು. ಇಂದಿನ ತಂತ್ರಜ್ಞಾನ ಇಷ್ಟರ ಮಟ್ಟಿಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ನಮ್ಮ ಕಾಲದಲ್ಲಿ ಪೋನ್ ಇರಲಿಲ್ಲ. ಲೆಕ್ಕ ಮಾಡಲು ಕ್ಯಾಲ್ಕುಲೇಟರ್ ಪಡೆಯಲು ಸ್ಪರ್ಧೆ ಮಾಡಬೇಕಿತ್ತು. ಈಗ ಕಂಪ್ಯೂಟರ್,…
ಬೆಂಗಳೂರು: ತೆಲಂಗಾಣ ಮತ್ತು ತಮಿಳುನಾಡಿನ ಬಗ್ಗೆ ರಾಜ್ಯ ಸರ್ಕಾರದ ಒಲವು ತೋರಿದ್ದು ಮತ್ತೊಮ್ಮೆ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಮಿತ್ರ ಪಕ್ಷ ಡಿಎಂಕೆ ಮೆಚ್ಚಿಸಲು ಕದ್ದುಮುಚ್ಚಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ಗೆ ರಾತ್ರೋರಾತ್ರಿ ತೆಲಂಗಾಣ ರಾಜ್ಯದ ಮೇಲೆ ಪ್ರೇಮಾಂಕುರವಾಗಿದೆ ಎಂದಿರುವ ಅವರು, ವಿಜಯಪುರದ ಆಲಮಟ್ಟಿ ಜಲಾಶಯದಿಂದ ಫೆ. 20 ಮತ್ತು 21 ರಂದು ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ಅಡಿ ನೀರನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ನಿಖಿಲ್ ಆರೋಪಿಸಿದ್ದಾರೆ. ರಾಜ್ಯದ ರೈತರಿಗೆ ನೀರು ಬಿಡುವಲ್ಲಿ ಒಂದು ಸೆಕೆಂಡ್ ಕೂಡಾ ಹೆಚ್ಚಾಗದಂತೆ ಸಮಯ ಪಾಲನೆ ಮಾಡುವ ಅಧಿಕಾರಿಗಳು ಇದರ ಬಗ್ಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ ಅವರು, ರಾಜ್ಯದ ಜನತೆಗೆ ಮುಂದೆ ಕುಡಿಯುವ ನೀರು ಮತ್ತು ಬೇಸಿಗೆ ಬೆಳೆಗೆ ನೀರಿನ ಕೊರತೆಯಾದರೆ ಯಾರನ್ನು ದೂಷಿಸುವಿರಿ? ಪ್ರಶ್ನಿಸಿದರಲ್ಲದೇ,…
ಬೀದರ್: ಮೈಕ್ರೊ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿ ನೆಪದಲ್ಲಿ ಕಿರುಕುಳ ನೀಡಿದರೆ ಠಾಣೆಗೆ ದೂರ ನೀಡಿ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಮೈಕ್ರೊ ಫೈನಾನ್ಸ ಕಂಪನಿಗಳು ಸಾಲ ನೀಡಿ, ವಸೂಲಿ ನೆಪದಲ್ಲಿ ಸರ್ಕಾರದ ಮಾರ್ಗಸೂಚಿಗಳ ವಿರುದ್ದವಾಗಿ ಪದೇ ಪದೇ ಕಿರುಕುಳ ನೀಡಿದರೆ, ತಕ್ಷಣವೇ ಪೊಲೀಸ್ ಸಹಾಯವಾಣಿ ನಮ್ಮ 112 ಗೆ ಕರೆ ಮಾಡಿ ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಅವರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ , ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪುಣೆ: ಪುಣೆಯ ಸ್ವಾರ್ಗೇಟ್ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಬಂಧಿತ ಆರೋಪಿಯಾಗಿದ್ದಾನೆ. ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಆರೋಪಿ ಅತ್ಯಾಚಾರ ನಡೆಸಿ ಪರಾರಿಯಾಗಿದ್ದನು. ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಅಕ್ಕ ಎಂದು ಕರೆದು ಮಾತನಾಡಿದ ಆರೋಪಿ, ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್ ಬಳಿ ಕರೆದೊಯ್ದಿದ್ದ. ಮಹಿಳೆ ಬಸ್ಸಿನೊಳಗೆ ಲೈಟ್ ಆನ್ ಇರದ ಕಾರಣ ಬಸ್ ಹತ್ತಲು ಹಿಂಜರಿದಿದ್ದಳು. ಈ ವೇಳೆ, ಇದೇ ಸರಿಯಾದ ಬಸ್ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆರೋಪಿಯು ಹಲವಾರು ತಿಂಗಳುಗಳಿಂದ ಪೊಲೀಸರ ಸೋಗಿನಲ್ಲಿ ಓಡಾಡಿಕೊಂಡಿದ್ದ ಎಂದು ಹೇಳಲಾಗಿದೆ. ಆತನ ವಿರುದ್ಧ ಪುಣೆ ಮತ್ತು…
ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಗೂ ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅಲ್ಲದೆ ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್, ಮಾ.14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17 ರಂದು ಹೊಸಕೋಟೆ – ಚೆನ್ನೈ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಕರ್ನಾಟಕ ಬಂದ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ಕೊಡಬೇಕು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಲಾಖೆಯ ಎಲ್ಲ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್ ಗೆ ವಿಧಿಸಲಾಗಿದ್ದ ಷರತ್ತು ಸಡಿಲಗೊಳಿಸಲಾಗಿದ್ದು, ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ಆದೇಶ ಹೊರಡಿಸಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ಆದರೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದೆ. ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂಬ ಹಲವು ಅಂಶಗಳನ್ನು ನಟ ದರ್ಶನ್ ನ್ಯಾಯಾಲಯದ ಮುಂದಿಟ್ಟಿದ್ದರು. ಇದೀಗ ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣಕ್ಕೆ ಅವಕಾಶ ಕೋರಿ ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬಳ್ಳಾರಿ: ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದು ಕಾಂಗ್ರೆಸ್ ನ ಜಾಯಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯ ಸುಮಾರು ರೂ. 25,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದ ಮೊದಲ ವರ್ಷ 34 ಸಾವಿರ ಕೋಟಿ ದಲಿತರಿಗೆ ಮೀಸಲಿಟ್ಟಿದ್ದಾಗಿ ಮುಖ್ಯಮಂತ್ರಿಗಳು ಭಾಷಣ ಮಾಡಿದ್ದರು. ಇದು ಸುಳ್ಳು; ಹೇಳಿದ್ದು ಮಾತ್ರ. ಅದರಲ್ಲಿ 11,144 ಕೋಟಿ ಮೊತ್ತವನ್ನು ಗ್ಯಾರಂಟಿಗೆ ಕೊಟ್ಟಿದ್ದಾರೆ. ಎರಡನೇ ವರ್ಷದಲ್ಲಿ ಇಲ್ಲಿಂದ 14,366 ಕೋಟಿಯನ್ನು ಗ್ಯಾರಂಟಿಗಳಿಗೆ ಕೊಟ್ಟರು ಎಂದು ದೂರಿದರು. ದಲಿತರ ಹಣವನ್ನು ಈ ಸರಕಾರ ದುರುಪಯೋಗ ಮಾಡುತ್ತಿದೆ ಎಂಬ ವಿಚಾರವನ್ನು ತಿಳಿಸಲು ಮಾನ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 14 ತಂಡಗಳನ್ನು ರಚಿಸಿದ್ದಾರೆ. 28 ಸಂಸದೀಯ ಕ್ಷೇತ್ರಗಳಿದ್ದು, ಒಂದೊಂದು ತಂಡವು 2 ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದೆ ಎಂದು ವಿವರ…