Subscribe to Updates
Get the latest creative news from FooBar about art, design and business.
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
Author: admin
ಬೇಲೂರು: ಸತತ ಮೂರು ದಿನಗಳ ಕಾರ್ಯಚರಣೆಯ ನಂತರ ಸಂಜೆ ಬಾಳಗುಲಿ ಸುಪದ ಹುಲ್ಲೆಮಕ್ಕಿ ಗ್ರಾಮದ ತೋಟದಲ್ಲಿ ವಿಕ್ರಾಂತ್ ಹೆಸರಿನ ಪುಂಡಾನೆಯನ್ನು ಯಶಸ್ವಿಯಾಗಿ ಹಿಡಿಯಲಾಗಿದೆ. ತಾಲೂಕಿನ ಅರೇಹಳ್ಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬೀಡು ಬಿಟ್ಟು ಬೆಳೆ ನಾಶದೊಂದಿಗೆ ಪ್ರಾಣ ಹಾನಿಗೆ ಮುಂದಾಗುತ್ತಿದ್ದ ಮೂರು ಪುಂಡಾನೆಗಳನ್ನು ಹಿಡಿಯಲು ಕಳೆದ ಭಾನುವಾರದಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿ ಮೊದಲ ದಿನವೇ ಯಶಸ್ವಿ ಕಾರ್ಯಚರಣೆ ನಡೆಸಿ ಒಂದು ಕಾಡಾನೆಯನ್ನು ಸೆರೆ ಹಿಡಿದು ಅಭಯಾರಣ್ಯಕ್ಕೆ ಬಿಟ್ಟು ಬಂದ ನಂತರ ಎರಡನೇ ಪುಂಡಾನೆ ವಿಕ್ರಾಂತ್ ಆನೆ ಹಿಡಿಯಲು ಸಕಲಸಿದ್ದತೆಗಳೊಂದಿಗೆ ಅಧಿಕಾರಿಗಳ ತಂಡ 7 ಸಾಕಾನೆಗಳ ತಂಡದೊಂದಿಗೆ ಮುಂದಾದರು. ಸತತವಾಗಿ ಎರಡೂ ದಿನಗಳೂ 6 ಗಂಟೆಗಳ ಕಾಲ ಕಾರ್ಯಚರಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಕ್ರಾಂತ್ ಆನೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ. ನ್ನೆ ಬೆಳಗ್ಗೆಯೇ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಥರ್ಮಲ್ ಡೋನ್ ಬಳಸಿ ಕಾಡೊಳಗಿದ್ದ ವಿಕ್ರಾಂತ್ ಆನೆಯ ಸುಳಿವು ಪಡೆದು ಸಾಕಾನೆಗಳೊಂದಿಗೆ ಕಾರ್ಯಾಚರಣೆಗಿಳಿದಿದ್ದರು. ಇನ್ನೇನು ವಿಕ್ರಾಂತ್ ಆನೆ ಒಂಟಿಯಾಯಿತು ಎನ್ನುವಷ್ಟರಲ್ಲಿ ವಿಕ್ರಾಂತ್…
ಬೆಂಗಳೂರು: ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ಸಾಧ್ಯವಿಲ್ಲ; ಎಸ್ ಐಟಿಯಿಂದ ಇದು ಖಂಡಿತ ಅಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಪಕ್ಷಾತೀತವಾಗಿ ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ ಎಂದು ವಿವರಿಸಿದರು. 48–49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು. ಹನಿಟ್ರ್ಯಾಪ್ ವಿಚಾರದಲ್ಲಿ ಇಷ್ಟೊಂದು ಶಕ್ತಿ ಇರುವವರು ಯಾರೆಂದು ರಾಜಣ್ಣ ಅವರೇ ತಿಳಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಸಚಿವರು, ಶಾಸಕರ ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಪಕ್ಷ ನಾಯಕರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದರು. ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ಕೆಲವು ಮಂದಿ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವ ಜಿಪರಮೇಶ್ವರ ಉತ್ತರಿಸಿದ್ದಾರೆ. ಅಲ್ಲದೆ ತನಿಖೆಗೆ ಆದೇಶಿಸುವುದಾಗಿಯೂ ಭರವಸೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ ರಾಜ್ಯ ಸರ್ಕಾರ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ನಕ್ಸಲಿಸಂ ನಿಗ್ರಹಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳು ಮತ್ತು ಮಾಡಿದ ವೆಚ್ಚಗಳ ಕುರಿತು ಗುರುವಾರ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ಉತ್ತರಿಸಿದರು. ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಇದರಲ್ಲಿ, 2018 ರಿಂದ ಫೆಬ್ರವರಿ 2025 ರವರೆಗೆ ವೇತನಕ್ಕಾಗಿ 150 ಕೋಟಿ ರೂ. ಮತ್ತು 2008 ರಿಂದ ಮಾರ್ಚ್ 4, 2025 ರವರೆಗೆ ವೇತನೇತರ ವೆಚ್ಚಗಳಿಗಾಗಿ 51.31 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ. ಈ ನಿರ್ಧಾರ ರಾಜ್ಯ ಸರ್ಕಾರದಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್ ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ…
ಕನಕಪುರ: ಅಂಗನವಾಡಿ ಸಹಾಯಕಿಯೊಬ್ಬಳು ಎರಡೂವರೆ ವರ್ಷದ ಮಗುವಿನ ಮೇಲೆ ಕ್ರೌರ್ಯ ಮೆರೆದಿರುವ ಘಟನೆ ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಜ್ಯೋತಿ ಮತ್ತು ರಮೇಶ್ ನಾಯ್ಕ್ ಅವರ ಮಗ ದೀಕ್ಷಿತ್ (2.5) ಸಂತ್ರಸ್ತ ಬಾಲಕನಾಗಿದ್ದಾನೆ. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಗುವಿನ ಮೇಲೆ ಅಂಗನವಾಡಿ ಕಾರ್ಯಕರ್ತೆ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಡೈಪರ್ ಗೆ ಖಾರದಪುಡಿ ಹಾಕಿದ್ದಾಳೆ. ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ತಾಯಿ ಚೈತ್ರಬಾಯಿ ಅಂಗನವಾಡಿಗೆ ತೆರಳಿದ್ದು, ಈ ವೇಳೆ ಮಗು ಅಳುತ್ತಿರುವುದು ಕಂಡು ಗಮನಿಸಿದಾಗ ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ ದೂರಿನಲ್ಲಿ ತಿಳಿಸಲಾಗಿದೆ. ಅಂಗನವಾಡಿ ಸಹಾಯಕಿ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಸಿಡಿಪಿಒ ವಿ.ನಾರಾಯಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು : ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಲಿಂಗಾಪುರ ಬಳಿ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಹಿಂದೂಪುರ ಸಂಘಟನೆಗಳ ಸದಸ್ಯರು ದಾಳಿ ನಡೆಸಿದ್ದರು. ವಾಹನವನ್ನು ತಡೆದು ಪರಿಶೀಲಿಸಿದಾಗ ರಕ್ಷಣೆ ಗೋವುಗಳು ಇರುವುದನ್ನು ಕಂಡು ತಕ್ಷಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು ಅವ್ಯವಹಾರದ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ರಂಗಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಹೊಸಳ್ಳಿ ಗ್ರಾಮದ ಜನಕ್ಕೆ ಕುಡಿಯುವ ನೀರು ಒದಗಿಸುವ ಮೋಟರ್ ಎತ್ತಿದ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತಿ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ತರಾಟೆಗೆತ್ತಿಕೊಂಡರು. ರಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಪಿಡಿಒ ಹೇಳ್ತಾರೆ, ಆದ್ರೆ ಕೆರಗೋಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಕೆರಗೋಡಿ ಗ್ರಾಮಸ್ಥ ಸಂತೋಷ್ ಹೇಳಿಕೆ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತರದಂತೆ ಪಿಡಿಒ ಹಾಗೂ ಅಧ್ಯಕ್ಷ ಮೋಟಾರ್ ಎತ್ತಿಸಿದ್ದಾರೆ ಎಂದು ರಂಗಪುರ ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಬೀಳುವ ಹಾಗೂ ಅಧ್ಯಕ್ಷ ವಿಶ್ವನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ …
ಕೊರಟಗೆರೆ: ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ್ ಉಪಾಧ್ಯಕ್ಷರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಹಿರಿಯ ವಕೀಲ ನಾಗೇಂದ್ರಪ್ಪ ಘೋಷಣೆ ಮಾಡಿದರು. ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಿ.ಡಿ.ದೇವರಾಜು, ಟಿ.ಕೃಷ್ಣಮೂರ್ತಿ, ಎಂ.ಎಲ್.ಸಂತೋಷ್ ಸ್ಪರ್ಧೆ ಮಾಡಿದ್ದು, ದೇವರಾಜು 18 ಮತ ಪಡೆದರೆ ಎಂ.ಎಲ್ ಸಂತೋಷ್ ಅವರು 19 ಮತ ಪಡೆದು ಜಯಶೀಲರಾಗಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷಲಕ್ಷ್ಮೀ ಅವರು 15 ಮತ ಮತ್ತು ಕೃಷ್ಣಪ್ಪ ಅವರು 22 ಮತ ಪಡೆದು ಕೃಷ್ಣಪ್ಪ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಉಪಾಧ್ಯಕ್ಷ, ಪ್ರಧಾನಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷ ಎಂ.ಎಲ್.ಸಂತೋಷ್ ಮಾತನಾಡಿ, ವಕೀಲರ ನಾನಾ ಕುಂದು ಕೊರತೆಗಳು ಇದ್ದು, ಎಲ್ಲರ ಸಹಕಾರ ಪಡೆದು ಎರಡು ವರ್ಷಗಳ ಕಾಲ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಮ್ಮ ವಕೀಲರ ಸಮಸ್ಯೆಗಳನ್ನ ಬಗೆಹರಿಸಲು ಎಲ್ಲರ ಪರವಾಗಿ ಕೆಲಸ ಮಾಡುತ್ತೇನೆ. ನನಗೆ ಮತ ಹಾಕಿದ ಎಲ್ಲಾ…
ಹಾಸನ: 12 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಶ್ವಾನವೊಂದು ತನ್ನ ಮಾಲಿಕನ ಮಕ್ಕಳ ಪ್ರಾಣ ಉಳಿಸಿ, ತನ್ನ ಪ್ರಾಣ ಬಿಟ್ಟ ಘಟನೆ ಹಾಸನ ತಾಲೂಕು ಕಟ್ಟಾಯ ಗ್ರಾಮದಲ್ಲಿ ನಡೆದಿದೆ. ಶಮಂತ್ ಎನ್ನುವವರ ತೋಟದಲ್ಲಿ ಪಿಟ್ ಬುಲ್ ಹಾಗೂ ಡಾಬರ್‌ಮನ್ ತಳಿಯ ನಾಯಿಗಳನ್ನು ಸಾಕಿದ್ದರು. ಪಿಟ್ ಬುಲ್ ಶ್ವಾನಕ್ಕೆ ಶಮಂತ್ ಅವರು ಭೀಮಾ ಎಂದು ಹೆಸರಿಟ್ಟಿದ್ದರು. ತೋಟದಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಬಂದಿದೆ. ಈ ವೇಳೆ ಹೊರಗಡೆ ಮಕ್ಕಳು ಆಟವಾಡುತ್ತಿದ್ದು, ಕಾಳಿಂಗ ಸರ್ಪ ತೆಂಗಿನ ಗರಿಗಳ ಕೆಳಗೆ ಹೋಗಿದೆ. ಇದನ್ನು ಕಂಡ ನಾಯಿಗಳು ತೆಂಗಿನ ಗರಿಗಳ ಅಡಿಯಲ್ಲಿದ್ದ ಸರ್ಪವನ್ನು ಎಳೆದ ತಂದು ಸೆಣಸಾಡಲು ಶುರು ಮಾಡಿವೆ. ಈ ನಡುವೆ ನಾಯಿಗಳ ಶಬ್ಧ ಕೇಳಿಸಿಕೊಂಡ ಶಮಂತ್ ಅವರು, ಹೊರಗೆ ಬಂದು ಕಾದಾಟವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಭೀಮಾ ತನ್ನ ಕಾದಾಟವನ್ನು ಮುಂದುವರೆಸಿದ್ದಾನೆ. ಹಾವಿನೊಂದಿಗೆ ಸುಮಾರು ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಭೀಮಾ…