Subscribe to Updates
Get the latest creative news from FooBar about art, design and business.
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
Author: admin
ತುಮಕೂರು: ಪಾಲಿಕೆ ವತಿಯಿಂದ ನಗರದ ಶಿರಾಗೇಟ್(ಕನಕವೃತ್ತ) ವೃತ್ತದಿಂದ ದಿಬ್ಬೂರು ವೃತ್ತದವರೆಗೆ ಸಂಪರ್ಕ ಕೂಡುವ ಐಡಿಎಸ್ ಎಂಟಿ 80 ಅಡಿ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಸಹಕರಸಬೇಕೆಂದು ಪಾಲಿಕೆ ಆಯುಕ್ತ ಬಿ.ಅಶ್ವಿಜ ಮನವಿ ಮಾಡಿದ್ದಾರೆ. ಕಳೆದ ವರ್ಷ ನಗರದ ಎಸ್.ಮಾಲ್ ಬಳಿ ಸೇತುವೆ ನಿರ್ಮಾಣ ಸಂದರ್ಭದಲ್ಲಿ ಭಾರಿ ವಾಹನಗಳ ದಟ್ಟಣೆಯಿಂದ ಶಿರಾಗೇಟ್(ಕನಕವೃತ್ತ) ವೃತ್ತದಿಂದ ದಿಬ್ಬೂರು ವೃತ್ತದವರೆಗೆ ಸಂಪರ್ಕ ಕೂಡುವ ಐಡಿಎಸ್ಎಂಟಿ 80 ಅಡಿ ರಸ್ತೆಯು ತುಂಬಾ ಹಾಳಾಗಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ–2ರ ಕ್ರಿಯಾ ಯೋಜನೆಯಡಿ ಅಭಿವೃದ್ಧಿಪಡಿಸಲು 14 ಕೋಟಿ ರೂ.ಗಳ ಅನುದಾನ ಮಂಜೂರಾಗಿದ್ದು, ಮಣ್ಣಿನ ಗುಣಮಟ್ಟವನ್ನು ಪರೀಕ್ಷಿಸಲು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ಮೂರನೇ ವ್ಯಕ್ತಿ ಪರೀಕ್ಷೆಗಾಗಿ ನೀಡಲಾಗಿದೆ. ಸಂಚಾರ ಸುವ್ಯವಸ್ಥೆಗಾಗಿ ಶಿರಾಗೇಟ್(ಕನಕವೃತ್ತ) ವೃತ್ತದಿಂದ ದಿಬ್ಬೂರು ವೃತ್ತದವರೆಗೆ ಸಂಪರ್ಕ ಕೂಡುವ ಈ ರಸ್ತೆಯಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡುವ ಹಾಗೂ ಭಾರಿ ವಾಹನಗಳ ಸಂಚಾರವನ್ನು…
ತುಮಕೂರು: ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ಭೂಗೋಳಶಾಸ್ತ್ರ ವಿಷಯದಲ್ಲಿ 63 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ಭೂಗೋಳಶಾಸ್ತ್ರ ವಿಷಯಕ್ಕೆ ಒಟ್ಟು 799 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 736 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಅಸೌಕರ್ಯಗಳ ವಿರುದ್ಧ ತಾಲ್ಲೂಕು ಬಿ.ಜೆ.ಪಿ. ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ವೈದ್ಯರ ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು. ವೈದ್ಯರು ರಾಜೀನಾಮೆ ನೀಡಿ ರಾಜಕೀಯ ಮಾಡಲಿ: ದೊಡ್ಡಹಳ್ಳಿ ಅಶೋಕ್ ಎಚ್ಚರಿಕೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ಮಾತನಾಡಿ, “ತಾಲ್ಲೂಕು ವೈದ್ಯರಾದ ಕಿರಣ್ ಕುಮಾರ್ ಅವರು ವೈದ್ಯ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯ ಮಾಡಲಿ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ, ಅವರ ಹೆಸರು ‘ರೆಡ್ ಬುಕ್’ ನಲ್ಲಿ ನಮೂದಿಸಲಾಗುವುದು. ಮುಂದಿನ ದಿನಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು. ಆಸ್ಪತ್ರೆಗೆ ವೈದ್ಯರ ನೇಮಕಾತಿ ಇಲ್ಲ, ಅಂಬುಲೆನ್ಸ್ ಗೆ ಡೀಸೆಲ್ ಇಲ್ಲ: ಆಕ್ರೋಶ ಈ ವೇಳೆ, ಮುಖಂಡ ಬಿ.ಜೆ.ಪಿ. ರವಿ ಮಾತನಾಡಿ, “ನಮ್ಮ ಆಡಳಿತದಲ್ಲಿ 13 ಕೋಟಿ…
ತುಮಕೂರು: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ವಿದ್ಯೋದಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಮಾರ್ಚ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ “ವಿಶ್ವ ಗ್ರಾಹಕರ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಜಿ.ಟಿ. ವಿಜಯಲಕ್ಷ್ಮೀ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನಿವೇದಿತಾ ರವೀಶ್, ಹೆಚ್.ಎಸ್. ರಾಜು, ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಶಮಾ ಸೈಯಿದಿ ಪಾಲ್ಗೊಳ್ಳಲಿದ್ದಾರೆ. ಗ್ರಾಹಕರ ಜಾಗೃತಿ ಹಕ್ಕು ಮತ್ತು ಶಿಕ್ಷಣ ಪರಿಷತ್ತಿನ ಕಾರ್ಯದರ್ಶಿ ಹಾಗೂ ವಕೀಲ ಟಿ.ಎಸ್. ನಿರಂಜನ್ ಗ್ರಾಹಕರ ದಿನಾಚರಣೆ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ…
ತುಮಕೂರು: ಬೆಸ್ಕಾಂ ನಗರ ಉಪ ವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 18 ರಿಂದ 26ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ನಡೆಯಲಿದೆ. ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಿ.ಎಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಔರಾದ್: ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಸರಕಾರಿ ಪ್ರೌಢ ಶಾಲೆಯ 1,500 ವಿದ್ಯಾರ್ಥಿಗಳಿಗೆ ಎಬಿವಿಪಿ ಹಿರಿಯ ಕಾರ್ಯಕರ್ತ ಅಶೋಕ ಶೆಂಬೆಳ್ಳಿ ಅವರು ಪ್ಯಾಡ್ ಮತ್ತು ಪೆನ್ನುಗಳು ವಿತರಣೆ ಮಾಡಿದರು. ಸೋಮವಾರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ವಿದ್ಯಾಲಯ, ಯನಗುಂದಾ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪ್ಯಾಡ್ ಮತ್ತು ಪೆನ್ನುಗಳು ವಿತರಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಂತರ ಮಾತನಾಡಿದ ಅಶೋಕ ಶೆಂಬೆಳ್ಳಿ, ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂಬ ಆತಂಕದಿಂದ ಹೊರಬರಬೇಕು. ಪರೀಕ್ಷೆಗೆ ಸಿದ್ಧತೆ ನಡೆಸುವಾಗ ಕಷ್ಟಪಟ್ಟು ಅಲ್ಲದೇ, ಇಷ್ಟಪಟ್ಟ ಅಭ್ಯಾಸ ಮಾಡಬೇಕು. ಯಾರು ಮೊಬೈಲ್ ಗೀಳಿಗೆ ಒಳಗಾಗಬೇಡಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ಉತ್ತಮ ಅಭ್ಯಾಸದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸುವ ಮೂಲಕ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು. ಬಿಸಿಯೂಟ ಇಲಾಖೆಯ ಸಹಾಯಕ ನಿರ್ದೇಶಕ ಧೂಳಪ್ಪ ಮಳೆನೂರೆ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂಬುವುದು ಜೀವನ ಪ್ರಮುಖ…
ಕೊರಟಗೆರೆ: ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ 50ನೇ ವರ್ಷದ ಜನ್ಮದಿನದ ಪ್ರಯುಕ್ತ 13 ಸರ್ಕಾರಿ ಶಾಲಾ ಮಕ್ಕಳಿಗೆ ಅಭಿಮಾನಿಗಳು ಕಲಿಕಾ ಸಾಮಗ್ರಿಗಳು ಹಾಗೂ ಸಿಹಿ ವಿತರಣೆ ಮಾಡಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟರೆಡ್ಡಿ ಹಾಗೂ ಗ್ರಾಮದ ಅಪ್ಪು ಅಪ್ಪಟ ಅಭಿಮಾನಿಗಳಿಂದ ಕರ್ನಾಟಕ ರತ್ನ ಅಭಿಮಾನಿಗಳ ಆರಾಧ್ಯ ದೈವ ಬೆಟ್ಟದ ಹೂವು ಡಾ.ಪುನೀತ್ ರಾಜಕುಮಾರ್ ಜನುಮದಿನದ ಪ್ರತಿ ವರ್ಷವು ಇಂತಹ ಒಂದಲ್ಲ ಒಂದು ರೀತಿಯ ವಿಶೇಷ ಕಾರ್ಯಕ್ರಮಗಳನ್ನ ಆಯೋಜನೆ ಮಾಡುತ್ತಿದ್ದಾರೆ. ಅಪ್ಪು ಅಪ್ಪಟ ಅಭಿಮಾನಿ ಬೈಚಾಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟರೆಡ್ಡಿ ಮಾತನಾಡಿ, ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮಾರ್ಗದಲ್ಲಿ ನಡೆಯುವುದೇ ನಮ್ಮೆಲ್ಲರ ಪುಣ್ಯ. ಅವರು ನಮ್ಮ ಮನಸ್ಸಿನಲ್ಲಿ ಎಂದೆಂದಿಗೂ ಅಜರಾಮರ. ಅವರ ನೆನಪಿಗಾಗಿ ಪ್ರತಿ ವರ್ಷ ಒಂದಲ್ಲ ಒಂದು ರೀತಿಯ ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ಉಪಯೋಗವಾಗುವ ಕಲಿಕಾ ಸಾಮಗ್ರಿಗಳನ್ನು…
ತುಮಕೂರು: ಕೇವಲ ಒಬ್ಬ ವಿದ್ಯಾರ್ಥಿನಿಗೆ ಸರಕಾರಿ ಪ್ರಾಥಮಿಕ ಶಾಲೆಯೊಂದು ನಡೆಯುತ್ತಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದ್ದೇವಳ್ಳಿ ಗ್ರಾಮದಲ್ಲಿದೆ. ಗ್ರಾಮದಲ್ಲಿರುವ ಈ ಸರಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಶೈಕ್ಷಣಿಕ ಸೌಲಭ್ಯವಿದೆ. ಸರಕಾರಿ ಪ್ರಾಥಮಿಕ ಬಿಸಿಯೂಟ, ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲಾ ರೀತಿ ಸೌಲಭ್ಯಗಳಿವೆ. ಇಲ್ಲಿ ಒಂದನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿನಿ ಮಾತ್ರ 2024–25ನೇ ಸಾಲಿಗೆ ದಾಖಲಾಗಿದ್ದಾಳೆ. ಅಲ್ಲದೆ 5ನೇ ತರಗತಿಯವರೆಗೆ ಯಾವುದೇ ವಿದ್ಯಾರ್ಥಿಗಳು ದಾಖಲಾತಿ ಆಗಿಲ್ಲ. ಒಬ್ಬ ವಿದ್ಯಾಥಿಗೆ ಶಾಲೆ ನಡೆಯುತ್ತಿದೆ. ಕೊರೊನಾ ಸಮಯದಲ್ಲಿ ಶಾಲೆಯಲ್ಲಿ 10 ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ನಂತರದ ದಿನಗಳಲ್ಲಿ ದಾಖಲಾತಿ ಹೆಚ್ಚಿಸಬೇಕೇಂಬ ಅಭಿಲಾಶೆ ಶಿಕ್ಷಕಿ ಪದ್ಮ ಅವರದ್ದಾಗಿತ್ತು. ಆದ್ರೆ ಕೊರೊನಾ ಸಂದರ್ಭದಲ್ಲಿ ಖಾಸಗಿ ಶಾಲೆಯಿಂದ ಬಂದಿದ್ದ ಮಕ್ಕಳು ಕೊರೊನ ಇಳಿಮುಖವಾದ ನಂತರ ವಾಪಸ್ ಖಾಸಗಿ ಶಾಲೆಗೆ ದಾಖಲಾಗಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಯಾವ್ದೆ ದಾಖಲಾತಿ ಇಲ್ಲದ್ದಾಗಿದೆ. ಕಳೆದ ಎರಡು ವಷದಿಂದ ಮೂವರು ವಿದ್ಯಾರ್ಥಿಗಳು ಇಲ್ಲಿ ದಾಖಲಾತಿ ಆಗಿದ್ದರು.. ಆದ್ರೆ ಈ ವರ್ಷ ಕೇವಲ ಒಬ್ಬ ವಿದ್ಯಾರ್ಥಿನಿ…
ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಚಿಮೇಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹಂದಿಕೇರಾ ಗ್ರಾಮದ ಜನರಿಗೆ ಕೂಡಿಯುವ ನೀರಿನ ವ್ಯವಸ್ಥೆ ಒದಗಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಗ್ರಾಮದ ಹಂದಿಕೇರಾ ಅಮೂಲ ಬಿರಾದಾರ ಮನವಿ ಮಾಡಿಕೊಂಡರು. ಚಿಮೇಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹಂದಿಕೇರಾ ಗ್ರಾಮದ ಜನರಿಗೆ ಕೂಡಿಯುವ ನೀರಿನ ಸಮಸ್ಯೆ ಆಗಿದೆ. ಸದ್ಯ ಸದರಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಬಹಳ ಇದೆ. ಇಲ್ಲಿನ ಹನುಮಾನ್ ಮಂದಿರದ ಹತ್ತಿರ ಒಂದು ಬೋರ್ ವೇಲ್ ಇದೆ. ಆದರೆ ಇದರಲ್ಲಿ ನೀರು ಬರುತ್ತಿಲ್ಲ. ಈ ಬೋರ್ ವೆಲ್ ನ್ನು ದುರಸ್ತಿ ಮಾಡಿ ಅಥವಾ ಬೇರೆಯೇ ಬೋರ್ ವೆಲ್ ಕೊರೆಸಿ, ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅವರು ಮನವಿಯಲ್ಲಿ ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4…
ಬೀದರ್: ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೀದರ್ ಜಿಲ್ಲಾ ಔರಾದ ತಾಲೂಕಿನ ಸಂತಪೂರ –ಮಸ್ಕಲ್ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಸ್ಕಲ್ ಗ್ರಾಮದ ನವನಾಥ ರಾಮಣ್ಣ (32) ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಸಂತಪೂರ ಗ್ರಾಮದ ರಾಹುಲ್ ಎಂಬ ಯುವಕನನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ ಸ್ನೇಹಿತನೊಂದಿಗೆ ವಾಕಿಂಗ್ ಹೋಗುತ್ತಿದ್ದ ರಾಹುಲ್ ಗೆ ಎದುರಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4