Subscribe to Updates
Get the latest creative news from FooBar about art, design and business.
- ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
Author: admin
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ನವೆಂಬರ್ 20ರಂದು ಸಂಜೆ 6 ಗಂಟೆಗೆ ಲಕ್ಷದೀಪೋತ್ಸವ ವಿಶೇಷ ಸೇವೆ ಹಾಗೂ ರಾತ್ರಿ 10 ಗಂಟೆಗೆ ಬೆಳ್ಳಿ ಪಲ್ಲಕ್ಕಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ಕ್ಷೇತ್ರದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಕ್ಷ ದೀಪೋತ್ಸವದ ಒಂದು ದೀಪಕ್ಕೆ 40 ರೂ. ಸೇವಾ ದರ ನಿಗದಿಪಡಿಸಲಾಗಿದೆ. ಭಕ್ತಾದಿಗಳು ಪುದುವಟ್ ಸೇವಾ ಠೇವಣಿಯಲ್ಲಿ 500 ರೂ.ಗಳನ್ನು ತೊಡಗಿಸಿದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಅಮಾವಾಸ್ಯೆಯ ಲಕ್ಷದೀಪೋತ್ಸವದಂದು ಒಂದು ದೀಪವನ್ನು ಹಚ್ಚಿಸುವ ಸೇವಾ ಅವಕಾಶವಿದೆ. ಲಕ್ಷದೀಪೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ಸ್ವಾಮಿಯ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಅವರು ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ತಾಲ್ಲೂಕಿನ ವಿವಿಧ ಕಡೆ ನವೆಂಬರ್ 7ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ರಾಜ್ಯಪಾಲರಿಂದ ಜ್ಞಾನಸಿರಿ ಕ್ಯಾಂಪಸ್ ಲೋಕಾರ್ಪಣೆ: ತಾಲ್ಲೂಕಿನ ಬಿದರಕಟ್ಟೆಯ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಆವರಣದಲ್ಲಿ ನವೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಜ್ಞಾನಸಿರಿ ಕ್ಯಾಂಪಸ್ ಅನ್ನು ಲೋಕಾರ್ಪಣೆಗೊಳಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಂಪಸ್ ನಲ್ಲಿರುವ ವಿವಿಧ ಕಟ್ಟಡಗಳ ಉದ್ಘಾಟನೆ ನೆರವೇರಿಸುವರು. ಮುಖ್ಯಮಂತ್ರಿಗಳಿಂದ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ–ಶಂಕುಸ್ಥಾಪನೆ: ನಂತರ ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತೀವ್ರ ನಿಗಾ ಘಟಕ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ಕಟ್ಟಡಗಳ ಲೋಕಾರ್ಪಣೆ ಹಾಗೂ 300 ಹಾಸಿಗೆಗಳ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವರು. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆಯ ಪ್ರಾರಂಭೋತ್ಸವ: ಬಳಿಕ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಅಂದು…
ತುಮಕೂರು: ಜಿಲ್ಲಾಡಳಿತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಡಿಸೆಂಬರ್ 2ರವರೆಗೆ 8ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನವನ್ನು ಜಿಲ್ಲೆಯಾದ್ಯಂತ ಕೈಗೊಳ್ಳಲಾಗುವುದು. ಇಲಾಖೆಯ ಪಶುವೈದ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ರೈತರ ಮನೆಗಳಿಗೆ ನೇರವಾಗಿ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದಾರೆ. ಪಶುಪಾಲಕರು ತಮ್ಮ ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಿಸಿಕೊಳ್ಳವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಜಾನುವಾರುಗಳ ಆರೋಗ್ಯ ಕಾಪಾಡುವಲ್ಲಿ ಹಾಗೂ ರೋಗ ನಿಯಂತ್ರಿಸುವಲ್ಲಿ ಸಹಕರಿಸಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಮತ್ತು ನವೋದಯ, ಸೈನಿಕ್, ಆದರ್ಶ, ಮೊರಾರ್ಜಿ, ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ ಇನ್ನಿತರ ಸರ್ಕಾರಿ, ಖಾಸಗಿ ವಸತಿ ಶಾಲೆಗಳಲ್ಲಿ ಮುಂದಿನ ವರ್ಷಗಳಲ್ಲಿ ಪ್ರವೇಶ ಬಯಸಿರುವ 1ರಿಂದ 5ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ಬಿಂದು ಸಂಸ್ಥೆ ಮಾಕ್ ಪರೀಕ್ಷೆ ಆಯೋಜಿಸಿದೆ. ಮುಖ್ಯ ಪರೀಕ್ಷೆಯ ರೂಪುರೇಷೆಗಳನ್ನು ತಿಳಿಸಿಕೊಡಲು ನವೋದಯ ಪರೀಕ್ಷೆ ಮಾದರಿಯಲ್ಲಿ ಅಣಕು ಪರೀಕ್ಷೆ ನಡೆಯಲಿದೆ. ಪ್ರವೇಶಾಕಾಂಕ್ಷಿಗಳ ಪರೀಕ್ಷಾ ತಯಾರಿ, ಕಲಿಕಾ ಸಾಮರ್ಥ್ಯಗಳ ಸ್ವಯಂ ಮೌಲ್ಯಮಾಪನ, ಪರೀಕ್ಷೆಯ ಸಂಪೂರ್ಣ ಮಾಹಿತಿಗೆ ಮಾಕ್ ಪರೀಕ್ಷೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ನವೋದಯ ವಿದ್ಯಾಲಯ ಸಮಿತಿ ರೂಪಿತ ಅಂಕಗಣಿತ, ಬುದ್ಧಿ ಸಾಮರ್ಥ್ಯ ಪರೀಕ್ಷೆ, ಭಾಷೆ ಕುರಿತು 100 ಅಂಕಗಳಿಗೆ ನವೆಂಬರ್ 16ರಂದು ಭಾನುವಾರ ಬೆಳಿಗ್ಗೆ 9.30ರಿಂದ 11.30ರವರೆಗೆ ವಿಜ್ಞಾನ ಬಿಂದು ಕಚೇರಿಯಲ್ಲಿ ಮಾಕ್ ಪರೀಕ್ಷೆ ನಡೆಯಲಿದೆ. ನವೆಂಬರ್ 12ರ ಒಳಗೆ ವಿದ್ಯಾರ್ಥಿಯ ಹೆಸರು, ತರಗತಿ, ಶಾಲೆ, ಕಲಿಕಾ ಮಾಧ್ಯಮ ವಿವರಗಳೊಂದಿಗೆ 8660587150 ವಾಟ್ಸಾಪ್…
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಹರೀಶ್ ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಔರಾದ ತಾಲ್ಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತ್ ಪಿಡಿಒ ಅನಿತಾ ರಾಠೋಡ್ ಸಿಕ್ಕಿ ಬಿದ್ದ ಅಧಿಕಾರಿ. ಧೂಪತಮಹಾಗಾಂವ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಜೀರ್ಗಾ(ಬಿ) ಗ್ರಾಮದ ರಾಜಕುಮಾರ್ ಪಾಟೀಲ್ ಎಂಬುವವರ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ಪಿಡಿಒ ಅನಿತಾ ಅವರು 12 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಾಜಕುಮಾರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪಿಡಿಒ ಅನಿತಾ ರಾಠೋಡ್ ಹಾಗೂ ಅವರ ಪತಿ ದಯಾನಂದ ರಾಠೋಡ್ ಬುಧವಾರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಹಣಮಂತರಾವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕುಣಿಗಲ್: ಬೈಕ್ ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ ಸಿದ್ದಾಪುರ ಗೇಟ್ ಬಳಿ ಸಂಭವಿಸಿದೆ. ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಳೆವೂರು ಗ್ರಾಮದ ಶಿವಶಂಕರ್ (63), ಪತ್ನಿ ಸುನಂದಾ (52) ಮೃತಪಟ್ಟವರು. ದಂಪತಿ ಬೈಕ್ ನಲ್ಲಿ ಎಡೆಯೂರಿಗೆ ಬಂದು ಹಿಂತಿರುಗುವಾಗ ಹಾಸನ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಮತ್ತು ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರು, ಮುಖಂಡರು ಅಭಿನಂದನೆ ಸಲ್ಲಿಸಿದರು. ನಂತರ ಮಾತನಾಡಿದ ಗ್ರಾಮದ ಮುಖಂಡ ವೆಂಕಟರಾಮು, ತಾಲೂಕಿನ ದೊಡ್ಡ ಗ್ರಾಮಗಳ ಪೈಕಿ ಒಂದಾದ ಜಯಲಕ್ಷೀಪುರಗೆ ಸಾರಿಗೆ ಬಸ್ ವ್ಯವಸ್ಥೆಯೇ ಇರಲಿಲ್ಲ. ಇದರಿಂದ ಗ್ರಾಮದಿಂದ ವಿವಿಧ ಪಟ್ಟಣಕ್ಕೆ ಹೋಗುವಂತಹ ಸಾರ್ವಜನಿಕರು, ವಿದ್ಯಾಭ್ಯಾಸಕ್ಕೆ ಹೋಗುವಂತಹ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗಿತ್ತು. ನಮ್ಮ ಗ್ರಾಮದಿಂದ ಮೂಗತನಮೂಲೆ ವರಗೂ ಮೂರರಿಂದ ನಾಲ್ಕು ಕಿ.ಮೀ. ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಹಲವು ವರ್ಷಗಳಿಂದ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ನಮ್ಮ ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ನಮ್ಮ ಮನವಿ ಸ್ಪಂದಿಸಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು. ನಮ್ಮ ಗ್ರಾಮಗಳು ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲದೆ ತುಂಬಾ ಸಮಸ್ಯೆ ಉಂಟಾಗಿತ್ತು. ನಾವುಗಳು ಸಾರಿಗೆ ಅಧಿಕಾರಿಗಳಿಗೆ…
ಶಿರಾ: ಸಮಾಜ ಕಲ್ಯಾಣ ಇಲಾಖಾವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಕೋರಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆಧಾರ್ ಆಧಾರಿತ Biometric e-authentica- tion ಪ್ರಕ್ರಿಯೆಗೆ ಒಳಪಡಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ವಿ.ಕೆ.ಬಡಿಗೇರ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟಿಕ್ಸ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಗಳ ಸಂಬಂಧ ಯಾವುದೇ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಂಚಿತರಾಗಬಾರದೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. 2025–26 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಶೇ.60 ರಷ್ಟು ಮೊತ್ತದ ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳ ಆಧಾ ಆಧಾರಿತ ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯವಾಗಿದ್ದು, ಸದರಿ ಪ್ರಗತಿಯು ಕುಂಠಿತವಾಗಿದ್ದು, ಒಂದು ವೇಳೆ ಅರ್ಹ ವಿದ್ಯಾರ್ಥಿಯು ಬಯೋಮೆಟ್ರಿಕ್ ಇ–ದೃಢೀಕರಣಕ್ಕೆ ಒಳಪಡದೇ ಇದ್ದಲ್ಲಿ ಕೇಂದ್ರದ ಪಾಲಿನ ಶೇ.60 ರಷ್ಟು ಮೊತ್ತದಿಂದ…
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವದಡಿ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನವೆಂಬರ್ 5 ಮತ್ತು 6ರಂದು ಆಯೋಜಿಸಲಾಗಿದ್ದ ಸ್ಪರ್ಧಾ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ಸ್ಪರ್ಧಾ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC