Author: admin

ತುಮಕೂರು: ಅಮೃತಾ ಐಎನ್ಸಿ ಆಶ್ರಯದಲ್ಲಿ ನಗರದ ಗಾಜಿನ ಮನೆಯಲ್ಲಿ ಜೂನ್ 13 ಮತ್ತು 14ರಂದು ನಡೆಯಲಿರುವ ಆಟೋ ಎಕ್ಸ್ ಪೋ ಎಲೆಕ್ಟ್ರಾನಿಕ್ ಕಾರ್ ಮತ್ತು ಬೈಕ್ ಪ್ರದರ್ಶನ ಕಾರ್ಯಕ್ರಮದಲ್ಲಿ ವಾಹನ ಪ್ರಿಯರಿಗೆ ಹಾಗೂ ಹೊಸ ಕಾರು–ಬೈಕ್ ಖರೀದಿಸಲು ಬಯಸುವ ಗ್ರಾಹಕರಿಗೆ ಸುವರ್ಣಾವಕಾಶ ಒದಗಿಸುವ ಉದ್ದೇಶದಿಂದ ಮೂರನೇ ಆವೃತ್ತಿಯ ಆಟೋ ಎಕ್ಸ್ ಪೋ 2026 ಆಯೋಜಿಸಲಾಗಿದೆ ಎಂದು ಟಾಟಾ ಮೋಟಾರ್ಸ್ ಶ್ರೀ ಆಟೋ ಮಾಲೀಕ ಶ್ರೀನಿವಾಸ್ ಹಾಗೂ ಅಮೃತಾ ಐಎನ್ಸಿ ಸಂಸ್ಥೆಯ ಅಮೃತಾ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟೋ ಎಕ್ಸ್ ಪೋದಲ್ಲಿ ಭಾರತೀಯ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಎಲೆಕ್ಟ್ರಿಕ್ ಕಾರುಗಳು, ಬೈಕ್‌ ಗಳು ವಾಹನಗಳು ಸೇರಿದಂತೆ ವಿವಿಧ ಮಾದರಿಯ ವಾಹನಗಳು ಒಂದೇ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿವೆ. ವಾಹನಗಳ ಮಾರಾಟ, ಟೆಸ್ಟ್ ಡ್ರೈವ್, ಆನ್‌ಸ್ಪಾಟ್ ಬುಕಿಂಗ್ ಹಾಗೂ ಹಣಕಾಸು ಯೋಜನೆಗಳ ಮಾಹಿತಿ ಕೂಡ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಹೇಳಿದರು. ಬೆಂಗಳೂರಿನ ಪ್ರಮುಖ ವಾಹನ ಸಂಸ್ಥೆಗಳು ಭಾಗವಹಿಸುತ್ತಿದ್ದು, ಸುಮಾರು 14ರಿಂದ 15…

Read More

ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರಿಂದ 2026ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡುವ ಸಲುವಾಗಿ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು ಜುಲೈ 31ರೊಳಗಾಗಿ ವೆಬ್‌ಸೈಟ್ http://www.depwd.gov.in ಅಥವಾ http://www.awards.gov.in ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಗೆ ಸಲ್ಲಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ರುಡ್‌ ಸೆಟ್ ಸಂಸ್ಥೆ ವತಿಯಿಂದ ಜುಲೈ 6 ರಿಂದ ಕೋಳಿ ಸಾಕಾಣಿಕೆ ಕುರಿತು 12 ದಿನಗಳ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 30 ಕಡೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9241482541, 9481506564, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಕಿರುತೆರೆಯ ಅತ್ಯಂತ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್ 13ರ ಆಡಿಷನ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಕಲರ್ಸ್ ಕನ್ನಡ ವಾಹಿನಿ ಸುವರ್ಣಾವಕಾಶ ನೀಡಿದೆ. ಈಗಾಗಲೇ ಸಾವಿರಾರು ಆಕಾಂಕ್ಷಿಗಳು ತಮ್ಮ ಅದೃಷ್ಟ ಪರೀಕ್ಷಿಸಲು ಆಡಿಷನ್ ವಿಡಿಯೋಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ನೀವು ಮಾಡುವ ಒಂದು ಸಣ್ಣ ತಪ್ಪು ನಿಮ್ಮ ಬಿಗ್ ಬಾಸ್ ಕನಸನ್ನು ಭಂಗಗೊಳಿಸಬಹುದು! ನಿಮ್ಮ ಆಡಿಷನ್ ವಿಡಿಯೋ ತಿರಸ್ಕೃತ (Reject) ಆಗಬಾರದು ಎಂದರೆ ವಿಡಿಯೋ ಮಾಡುವಾಗ ಈ ಕೆಳಗಿನ ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಕಲರ್ಸ್ ಕನ್ನಡ ವಾಹಿನಿ ತಿಳಿಸಿದೆ. 3 ನಿಮಿಷಗಳ ನಿಖರ ವಿಡಿಯೋ ಇರಲಿ: ವಾಹಿನಿ ನೀಡಿರುವ ಅಧಿಕೃತ ನಿಯಮದ ಪ್ರಕಾರ, ನಿಮ್ಮ ಆಡಿಷನ್ ವಿಡಿಯೋ ಕಡ್ಡಾಯವಾಗಿ 3 ನಿಮಿಷಗಳ ಕಾಲಾವಧಿಯದ್ದೇ ಆಗಿರಬೇಕು. ಅದಕ್ಕಿಂತ ತೀರಾ ಕಡಿಮೆ ಅಥವಾ ಅತಿ ಉದ್ದದ ವಿಡಿಯೋಗಳನ್ನು ಮಾಡಿದರೆ ಅವುಗಳನ್ನು ಪರಿಗಣಿಸುವುದಿಲ್ಲ. ಆದ್ದರಿಂದ ನಿಗದಿತ ಸಮಯದೊಳಗೇ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಾಗರಮಿಕೆ ಹೋಬಳಿಯ ಕೆ.ಸೇವಾಲ್ ಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ ನಾಲ್ಕನೇ ವರ್ಷದ ಅದ್ದೂರಿ ವಾರ್ಷಿಕೋತ್ಸವವು ಜೂನ್ 25 ರಂದು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ಅಂದು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 6:00 ಗಂಟೆಗೆ: ಜಗನ್ಮಾತೆಗೆ ವಿಶೇಷ ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಲಿದೆ. ಸಂಜೆ 5:00 ಗಂಟೆಯಿಂದ: ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ತದನಂತರ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಣೆ ಏರ್ಪಡಿಸಲಾಗಿದೆ. ಈ ಶುಭ ಸಂದರ್ಭದಲ್ಲಿ ಕವಿತಾ ಡಾ.ಡಿ.ಪರಮೇಶ್ ನಾಯ್ಡು ಅವರ ಕುಟುಂಬಸ್ಥರು, ಕೆ.ಸೇವಾಲ್ ಪುರ ಗ್ರಾಮಸ್ಥರು ಹಾಗೂ ದೇವಾಲಯದ ಭಕ್ತ ಮಂಡಳಿಯವರು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಭಕ್ತಿಪೂರ್ವಕ ಸ್ವಾಗತ ಕೋರಿದ್ದಾರೆ. ಎಲ್ಲ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಆಯೋಜಕರು ವಿನಂತಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5/4 ಎನ್‌ ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ  ಎನ್‌ ಸಿಸಿ ಕೆಡೆಟ್‌ ಗಳಾದ ಮನೋಜ್ (ಅಂತಿಮ ವರ್ಷದ ಬಿಬಿಎ), ಅಜಯ್ (ದ್ವಿತೀಯ ವರ್ಷದ ಬಿಸಿಎ), ಅಭಿಷೇಕ್ -– (ಬಿ.ಕಾಂ.) ಈ ಮೂವರು ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ಈ ಮಹತ್ವದ ಸಾಧನೆಯನ್ನು ಸಂಭ್ರಮಿಸಲು ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲ ಡಾ.ಶಶಿಕುಮಾರ್. ಎಚ್.ಸಿ., ರಾಷ್ಟ್ರಸೇವೆ ಅತ್ಯುನ್ನತ ಕರ್ತವ್ಯವಾಗಿದೆ. ಈ ಯುವ ಅಗ್ನಿವೀರರು ತಮ್ಮ ಮುಂದಿನ ಪಯಣದಲ್ಲಿ ಧೈರ್ಯ, ಶಿಸ್ತು ಮತ್ತು ಸಮರ್ಪಣೆಯ ಮೌಲ್ಯಗಳನ್ನು ಸದಾ ಉಳಿಸಿಕೊಳ್ಳಲಿ. ರಾಷ್ಟ್ರಸೇವೆಯತ್ತ ಕೆಡೆಟ್‌ ಗಳು ತೋರಿದ ಸಮರ್ಪಣೆ, ಪರಿಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಅಲ್ಲದೆ, ಭಾರತೀಯ ಸೇನೆಯಲ್ಲಿ ಅವರ ಮುಂದಿನ ವೃತ್ತಿಜೀವನ ಯಶಸ್ವಿ ಹಾಗೂ ಉಜ್ವಲವಾಗಿರಲೆಂದು ಶುಭ ಹಾರೈಸಿದರು. ಸಹಾಯಕ ಎನ್‌ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಡಾ.ವಿರೂಪಾಕ್ಷ ಜೆ.ಡಿ. ಮಾತನಾಡಿ, ಈ ಕಾರ್ಯಕ್ರಮವು ಎಲ್ಲಾ ವಿದ್ಯಾರ್ಥಿಗಳು ಹಾಗೂ ಎನ್‌…

Read More

ತುಮಕೂರು: ಕಷ್ಟಪಟ್ಟು ದುಡಿದರೆ ಕನಸು ನನಸಾಗುತ್ತೆ ಅನ್ನೋದಕ್ಕೆ  ವೈ.ಎನ್. ಹೊಸಕೋಟೆ ಶ್ರೀನಿವಾಸ್.ಬಿ.  ಅವರು ಜೀವಂತ ಉದಾಹರಣೆ. ತಿಪಟೂರಿನ ಕಲ್ಪತರು ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ತೋರಿಸುತ್ತಿರುವ ಅವರು, ಈಗ ಅಂತರರಾಷ್ಟ್ರೀಯ ಟ್ರ್ಯಾಕ್‌ ನಲ್ಲಿ ಭಾರತದ ಬಾವುಟ ಹಾರಿಸಿದ್ದಾರೆ. ಜೂನ್ 5 ರಿಂದ 7 ರವರೆಗೆ ಮಲೇಷಿಯಾದ ಕೌಲಾಲಂಪುರ್‌ ನ ಯು.ಪಿ.ಎಂ. ಕ್ರೀಡಾಂಗಣದಲ್ಲಿ ನಡೆದ 38ನೇ ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್‌ ಶಿಪ್ ನಲ್ಲಿ ಶ್ರೀನಿವಾಸ್ ಅವರು ಸೌತ್ ಇಂಡಿಯಾ ಅಥ್ಲೆಟಿಕ್ಸ್ ಅಸೋಸಿಯೇಷನ್‌ ನಿಂದ ಆಯ್ಕೆಯಾಗಿ ಸ್ಪರ್ಧಿಸಿದರು. ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಸೇರಿ 28 ದೇಶಗಳ ಟಾಪ್ ಅಥ್ಲೀಟ್‌ ಗಳು ಪಾಲ್ಗೊಂಡಿದ್ದ ಈ ಪ್ರತಿಷ್ಠಿತ ಕೂಟದಲ್ಲಿ ಅವರು 100 ಮೀಟರ್, 200 ಮೀಟರ್, 400 ಮೀಟರ್ ಓಟ ಹಾಗೂ ತ್ರಿವಿಧ ಜಿಗಿತ — ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಲ್ಲದರಲ್ಲೂ ಕಂಚಿನ ಪದಕ ಗೆಲ್ಲುವ ಮೂಲಕ ಅಸಾಧ್ಯ ಸಾಧನೆ ಮಾಡಿದ್ದಾರೆ. ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು…

Read More

ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಯನ್ನು ಗ್ರಾಮಸ್ಥರಿಂದ ಹಸ್ತಾಂತರ ಪಡೆದು ಪುನಶ್ಚೇತನಗೊಳಿಸಿ, ಬಳಿಕ ಗ್ರಾಮಸ್ಥರಿಗೆ ಮರಳಿ ಹಸ್ತಾಂತರಿಸಲಾಯಿತು. ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಸ್ಥಳೀಯ ರೈತರ ಸಹಕಾರದೊಂದಿಗೆ 10 ಎಕರೆಗೂ ಅಧಿಕ ವಿಸ್ತೀರ್ಣದ ಕೆರೆಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸಲಾಗಿದ್ದು, ಯೋಜನೆಯ ವತಿಯಿಂದ ಇದುವರೆಗೆ ಪುನರುಜ್ಜೀವನಗೊಳಿಸಲಾದ 963ನೇ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿಧರ ಹಾಲಪ್ಪ ಅವರು ಕೆರೆಗೆ ಪೂಜೆ ಸಲ್ಲಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಈ ಕೆರೆ ಸ್ಥಳೀಯ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ನೀರಿನ ಮೂಲವಾಗಿ ಉಪಯೋಗವಾಗಲಿದ್ದು, ಗ್ರಾಮೀಣ ಪ್ರದೇಶದ ಜಲ ಸಂರಕ್ಷಣೆಗೆ ಇಂತಹ ಯೋಜನೆಗಳು ಅತ್ಯಂತ ಅಗತ್ಯ” ಎಂದು ಹೇಳಿದರು. ಈ ಸಂದರ್ಭದಲ್ಲಿ…

Read More

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಮೂಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೊಡಿ ಎಂದು ನಾವು ಬಿಜೆಪಿ ನಾಯಕರಲ್ಲಿ ಕೇಳಿರಲಿಲ್ಲ. ಜನರಿಗಾಗಿ ಧ್ವನಿ ಎತ್ತಲು ದೇವೇಗೌಡರು ಮತ್ತೊಮ್ಮೆ ರಾಜ್ಯಸಭೆಗೆ ಹೋಗಬೇಕು ಎಂಬುದು ಕೇವಲ ಜನರ ಆಶಯವಾಗಿತ್ತು. ನಾವು ಅಧಿಕೃತವಾಗಿ ಸೀಟು ಕೇಳದೇ ಇರುವುದರಿಂದ ನಮಗೆ ಯಾವುದೇ ಅಸಮಾಧಾನವಿಲ್ಲ” ಎಂದಿದ್ದಾರೆ. “ನಾವು ಸೀಟು ಕೇಳಿ, ಅವರು ಕೊಡದೇ ಇದ್ದಿದ್ದರೆ ಬೇಸರ ಮಾಡಿಕೊಳ್ಳಲು ಕಾರಣ ಇರುತ್ತಿತ್ತು. ಆದರೆ ಇಲ್ಲಿ ಆ ಪ್ರಶ್ನೆಯೇ ಬಾರದು. ಹೀಗಾಗಿ ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ” ಅಂತಾ ತಿಳಿಸಿದ್ದಾರೆ. “ನಮ್ಮ ಮೈತ್ರಿ ಕೇವಲ ಇಂದಿಗೆ ಸೀಮಿತವಾಗಿಲ್ಲ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿಯೇ ಮುನ್ನಡೆಯಲಿವೆ” ಎಂದು ಸುರೇಶ್ ಬಾಬು…

Read More

ಕಾನ್ಪುರ: ಕುಟುಂಬ ಸಂಬಂಧಗಳ ಮಿತಿಯನ್ನು ಮೀರಿ, ಅಳಿಯನೊಬ್ಬ ತನ್ನ ಸ್ವಂತ ಅತ್ತೆಯನ್ನೇ ನ್ಯಾಯಾಲಯದಲ್ಲಿ ಮದುವೆಯಾಗಿರುವ ವಿಚಿತ್ರ ಮತ್ತು ಶಾಕಿಂಗ್ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಇವರಿಬ್ಬರ ವಿವಾಹದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ವರದಿಗಳ ಪ್ರಕಾರ, ಅಳಿಯ ಮತ್ತು ಅತ್ತೆಯ ನಡುವೆ ಕಳೆದ ನಾಲ್ಕು ವರ್ಷಗಳಿಂದ ಆತ್ಮೀಯತೆ ಇತ್ತು ಎನ್ನಲಾಗಿದೆ. ಈ ಇಬ್ಬರ ನಡುವಿನ ಪ್ರೇಮ ಸಂಬಂಧವನ್ನು ಕುಟುಂಬಸ್ಥರಿಂದ ಸಂಪೂರ್ಣವಾಗಿ ಗುಪ್ತವಾಗಿಡಲಾಗಿತ್ತು. ಆದರೆ, ಇತ್ತೀಚೆಗೆ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ಮನೆಯಿಂದ ಹೊರಬಂದು, ನೇರವಾಗಿ ನ್ಯಾಯಾಲಯದಲ್ಲಿ (ಕೋರ್ಟ್ ಮ್ಯಾರೇಜ್) ಮದುವೆಯಾಗಿದ್ದಾರೆ. ನ್ಯಾಯಾಲಯದಲ್ಲಿ ವಿವಾಹ ನೋಂದಣಿ ಮಾಡಿಕೊಂಡ ನಂತರ, ಕೈಯಲ್ಲಿ ಮದುವೆ ಪ್ರಮಾಣಪತ್ರ ಹಿಡಿದು, ಕೊರಳಿಗೆ ಹೂಮಾಲೆ ಧರಿಸಿರುವ ಈ ಜೋಡಿಯ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಇಬ್ಬರೂ ಸಮಾಜಕ್ಕೆ ಮನವಿ ಮಾಡಿದ್ದು, “ನಮ್ಮ ಸಂಬಂಧವನ್ನು ಸಮಾಜವು ಒಪ್ಪಿಕೊಳ್ಳಬೇಕು ಮತ್ತು ನಮಗೆ ಆಶೀರ್ವದಿಸಬೇಕು” ಎಂದು ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.…

Read More