Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ, ರೈಲ್ವೆ, ಹೇಮಾವತಿ, ಕೆಐಎಡಿಬಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2679 ಎಕರೆ ಭೂಸ್ವಾಧೀನವಾಗಿದ್ದು, ಯೋಜನೆಗೆ ಅವಶ್ಯವಿರುವ ಉಳಿದ 438 ಎಕರೆ ಭೂಮಿಯನ್ನು 4 ತಿಂಗಳೊಳಗಾಗಿ ಸ್ವಾಧೀನಪಡಿಸಿಕೊಂಡು ಎತ್ತಿನ ಹೊಳೆ ಯೋಜನೆಗೆ ಹಸ್ತಾಂತರಿಸಬೇಕೆಂದು ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಜಿ.ಎನ್. ಅವರಿಗೆ ಸೂಚನೆ ನೀಡಿದರು. ಲಭ್ಯವಿರುವ ಅನುದಾನವನ್ನು ಭೂಮಾಲೀಕರಿಗೆ ಪಾವತಿಸಿ ಎತ್ತಿನ ಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಅವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಎತ್ತಿನ ಹೊಳೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಸಚಿವರಿಗೆ ಮಾಹಿತಿ ನೀಡುತ್ತಾ, ಯೋಜನೆಯಡಿ ಜಿಲ್ಲೆಯಲ್ಲಿ 150 ಕಿ.ಮೀ. ಗುರುತ್ವಾ ಕಾಲುವೆಯನ್ನು ಹೊಂದಿದ್ದು, ಇದರಲ್ಲಿ 115 ಕಿ.ಮೀ.ವರೆಗಿನ ಕಾಮಗಾರಿ ಮುಕ್ತಾಯ…
ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಕಾಮುಕರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ಶುಕ್ರವಾರ ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೊರಮಂಗಲ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳನ್ನು ಅಜಿತ್, ವಿಶ್ವಾಸ್, ಶಿವು ಎಂದು ಗುರುತಿಸಲಾಗಿದೆ, ಇವರು ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ಸಂತ್ರಸ್ತ ಮಹಿಳೆ ಜ್ಯೋತಿ ನಿವಾಸ್ ಕಾಲೇಜು ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ 20 ವರ್ಷದ ನಾಲ್ವರು ಮಹಿಳೆ ಜೊತೆಗೆ ಮಾತನಾಡಲು ಆರಂಭಿಸಿದ್ದು, ಬಳಿಕ ಸ್ನೇಹ ಬೆಳೆಸಿಕೊಂಡು ಹೊಟೇಲ್ ಗೆ ಊಟಕ್ಕೆ ಆಹ್ವಾನಿಸಿದ್ದಾರೆ. ಬಳಿಕ ಹೊಟೇಲ್ ನ ಟೆರೆಸ್ ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅತ್ಯಾಚಾರದ ನಂತರ ಬೆಳಿಗ್ಗೆ 6 ಗಂಟೆಗೆ ಮಹಿಳೆಯ ಮೊಬೈಲ್, ಪರ್ಸ್ ಕಿತ್ತುಕೊಂಡು ಮಹಿಳೆಯನ್ನು ಸ್ಥಳದಿಂದ ಓಡಿಸಿದ್ದಾರೆ…
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟವೊಂದರಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಬೇಟೆಗಾರರು ಕಾಡು ಹಂದಿ ಹಿಡಿಯಲು ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದಿದೆ. ಶುಕ್ರವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಉರುಳಿಗೆ ಬಿದ್ದಿರುವ ಚಿರತೆಯನ್ನು ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಸಾವನ್ನಪ್ಪಿತ್ತು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಳಗಾವಿ: ಮೈಕ್ರೋ ಫೈನಾನ್ಸ್ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಎಂದು ಗುರುತಿಸಲಾಗಿದೆ. ಮನೆಯಲ್ಲಿಯೇ ಗುರುವಾರ ರಾತ್ರಿ ವಿಷ ಕುಡಿದಿದ್ದ ಗೋವಿಂದ ಅವರು ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳ ಖರೀದಿಗೆ ಫೈನಾನ್ಸ್ ನಿಂದ ರೂ. 60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ದಿ ಸಂಘದಿಂದ ರೂ. 1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್ : ಬೀದರ್ ಜಿಲ್ಲೆಯಿಂದ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುತ್ತಿದ್ದವರು ಭೀಕರ ಅಪಘಾತಕ್ಕೆ ಬಲಿಯಾದ ಹಿನ್ನೆಲೆ ಮೃತಪಟ್ಟವರ ಮನೆಗೆ ಸಂಸದ ಸಾಗರ್ ಖಂಡ್ರೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಜಿಲ್ಲೆಯ ಯಾತ್ರಿಕರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಆಘಾತ ತಂದಿದೆ. ಆ ಕುಟುಂಬಸ್ಥರ ದುಃಖದಲ್ಲಿ ನಾವು ಸಹಭಾಗಿಯಾಗಿದ್ದೇವೆ ಎಂದು ಅವರು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಈಗಾಗಲೇ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ನಾನು ಸಹ ಸರ್ಕಾರದಿಂದ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಈ ದಾರುಣ ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮದವರಿಗೆ ನೀಡಿದ ಹೇಳಿಕೆಯ ಪ್ರಮುಖ ಅಂಶಗಳು. ತುಮಕೂರು–ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ನಿಧಾನಗತಿಯಲ್ಲಿ ಸಾಗಿದೆ. ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲ, ಕೇಂದ್ರ ಸರ್ಕಾರದಲ್ಲಿ ಅನುಮೋದನೆಯಾಗಿ ಹಣ ಬಿಡುಗಡೆಯಾಗಬೇಕು. ಆ ಕೆಲಸಗಳು ಪ್ರಾರಂಭವಾಗುತ್ತವೆ. ಭೂಸ್ವಾಧೀನಕ್ಕೆ ಎಲ್ಲೆಲ್ಲಿ ಸಮಸ್ಯೆಗಳಿವೆ, ಯಾವ ಕಾರಣದಿಂದ ನಿಂತಿವೆ ಎಂಬುದನ್ನು ಸಭೆಯಲ್ಲಿ ಪರಿಶೀಲಿಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಹೆ ನಮ್ಮ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಹೇಮಾವತಿ ಯೋಜನೆಯ ಭೂಸ್ವಾಧೀನ ಆಗಿಲ್ಲ. ಕುಣಿಗಲ್ ಸೇರಿದಂತೆ ಜಿಲ್ಲೆಯ ನಾಲ್ಕು ಏತ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಯಾಗುತ್ತಿದೆ. ಅದನ್ನು ಕೂಡ ಪರಿಶೀಲಿಸಿದ್ದೇನೆ. ಭದ್ರಾ…
ತುಮಕೂರು: ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಸುಮಾರು 200 ಮಂದಿ ವಿದೇಶಿಗರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕತರೊಂದಿಗೆ ಮಾತನಾಡಿ, ಅನೇಕ ದಿನಗಳಿಂದ ಕೋಟ್ಯಾಂತರ ರೂ. ಮೌಲ್ಯದ ಕೆ.ಜಿ. ಗಟ್ಟಲೆ ಈಗಾಗಲೇ ಡ್ರಗ್ಸ್ ಅನ್ನು ವಶಕ್ಕೆ ಪಡೆದು ಸುಟ್ಟು ಹಾಕಿದ್ದೇವೆ. ಬಹಳ ಕಡೆ ಶಿಕ್ಷೆ ಪ್ರಕಟವಾಗಿದೆ ಎಂದರು. ಬೆಂಗಳೂರು ಇರಬಹುದು ಅಥವಾ ರಾಜ್ಯದ ಯಾವ್ದೆ ಭಾಗದಲ್ಲಿಯಾದ್ರೂ ವೀಲಿಂಗ್ ಮಾಡುವ ಬಗ್ಗೆ ಪೊಲೀಸ್ ಇಲಾಖೆ ಕಠಿಣವಾಗಿ ಕ್ರಮ ತೆಗೆದುಕೊಳ್ಳಲಿದ್ದೇವೆ. ರಾಜ್ಯದಲ್ಲಿ ಡ್ರಗ್ಸ್ ಬಳಕೆ ಮತ್ತು ಮಾರಾಟವನ್ನು ನಿಲ್ಲಿಸಲಾಗಿದೆ ಎಂದು ಡಿಕ್ಲೇರ್ ಮಾಡಿದ್ದೇವೆ ಎಂದರು. ಅಲ್ಲದೆ ಸಂಬಂಧಪಟ್ಟ ಎಂಬೆಸ್ಸಿಗಳಿಗೆ ಕೂಡ ಮಾಹಿತಿ ನೀಡಲಾಗಿದೆ. ಅನೇಕ ಮಂದಿ ವಿದೇಶಿಗರು ಸ್ಟೂಡೆಂಟ್ ವೀಸಾ ಪಡೆದು ಇಲ್ಲಿಗೆ ಬರುತ್ತಿದ್ದಾರೆ. ಅಲ್ಲದೆ ವೀಸಾ ಅವಧಿ ಮುಗಿದರೂ ಇಲ್ಲಿಯೇ ಇರುತ್ತಾರೆ. ಅವರನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳಿಗೆ ಸಿಮೀತವಾಗಿದ್ದ ಭಾರತೀಯ ರಂಗಭೂಮಿಯಲ್ಲಿ ಸಾಮಾಜಿಕ ನಾಟಕಗಳ ಪ್ರಯೋಗ ಆರಂಭವಾದ ನಂತರ ಹಲವಾರು ಬದಲಾವಣೆಗಳನ್ನು ಕಾಣಬಹುದಾಗಿದೆ. ಸಾಮಾಜಿಕ ನಾಟಕಗಳು ಮನರಂಜನೆಯ ಜೊತೆಗೆ, ನಮ್ಮ ಸುತ್ತಮುತ್ತಲಿನ ಸಾಮಾಜಿಕ, ಆರ್ಥಿಕ, ರಾಜಕೀಯ ಆಗು ಹೋಗುಗಳನ್ನು ಪ್ರೇಕ್ಷಕರ ಮುಂದಿಡುವ ಮೂಲಕ ಹೊಸ ಆಲೋಚನೆಗಳನ್ನು ಹುಟ್ಟು ಹಾಕಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡಿ(ರಿ),ತುಮಕೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ “ಸುಯೋಧನ”ನಾಟಕ ಪ್ರಯೋಗಕ್ಕೆ ಚಂಡೆ ನುಡಿಸುವ ಮೂಲಕ ಚಾಲನೆ ನೀಡಿ ಮಾತನಾಡುತಿದ್ದ ಅವರು,ನಾಟಕಗಳ ಪ್ರದರ್ಶನಕ್ಕೆ ಆಸಕ್ತರಿಗೆ ಆಹ್ವಾನದ ಅಗತ್ಯವಿಲ್ಲ. ಇಲ್ಲಿ ಸೇರಿರುವ ಎಲ್ಲಾ ರಂಗಾಸಕ್ತರು ಕಲಾವಿದರನ್ನು ಪ್ರೋತ್ಸಾಹಿಸಿ, ಅವರು ಮತ್ತಷ್ಟು ಪ್ರಯೋಗಗಳನ್ನು ಮಾಡುವಂತೆ ಪ್ರೇರೇಪಿಸಲಿ ಎಂದು ಶುಭ ಹಾರೈಸಿದರು. ಸಾಹಿತಿ ಡಾ.ಬಿ.ಸಿ.ಶೈಲಾ ನಾಗರಾಜು ಮಾತನಾಡಿ, ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ ಸುಮಾರು 15ಕ್ಕೂ ಹೆಚ್ಚು ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಹಲವಾರು ಹೊಸ…
ಬೆಂಗಳೂರು/ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಬೈಲಾವನ್ನು ರದ್ದುಪಡಿಸಿ ಅಧ್ಯಕ್ಷರು ಮತ್ತಿತರ ಸದಸ್ಯರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿ ಹೊಸದಾಗಿ ಪ್ರತಿಷ್ಠಾನವನ್ನು ಪುನರ್ ಸ್ಥಾಪಿಸಲು ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಒತ್ತಾಯಿಸಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ಸರ್ಕಾರ ಮುಖ್ಯ ಕಾರ್ಯದರ್ಶಿ ಗಳು, ಕಾರ್ಯದರ್ಶಿ ಕುವೆಂಪು ಪ್ರತಿಷ್ಠಾನ ಮತ್ತು ಜಿಲ್ಲಾಧಿಕಾರಿ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಇ—ಮೇಲ್ ಮೂಲಕ ಮನವಿ ಸಲ್ಲಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿ ರಾಷ್ಟ್ರಕವಿ ಕುವೆಂಪು ಹೆಸರು ಹೇಳಿದ ತಕ್ಷಣ ಸಾಹಿತ್ಯ ಕ್ಷೇತ್ರ ಮಾತ್ರವಲ್ಲ ಕನ್ನಡಿಗರ ಮೈ ನವಿರೇಳಿಸುವ ಮತ್ತು ಕನ್ನಡ ಅಭಿಮಾನಿಗಳ ದೇಹದಲ್ಲಿ ವಿದ್ಯುತ್ ಸಂಚಾರವನ್ನುಂಟು ಮಾಡುವ ಅದ್ಭುತ ಶಕ್ತಿಯನ್ನು ಹೊಂದಿರುವ ನೆಚ್ಚಿನ ಕುವೆಂಪುರವರ ಹೆಸರಿನಲ್ಲಿ ಸ್ಥಾಪನೆಗೊಂಡ ಕುವೆಂಪು ಪ್ರತಿಷ್ಠಾನವು ಸಾಕಷ್ಟು ಒಳ್ಳೆಯ ಕೆಲಸಗಳನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯ. ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರತಿಷ್ಠಾನವು ಸರ್ವ ಜನಾಂಗ ಪ್ರತಿನಿಧಿಸುವ ಪ್ರತಿಷ್ಠಾನವಾಗದೆ ಒಂದು…
ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್/ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಒದಗಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…