Subscribe to Updates
Get the latest creative news from FooBar about art, design and business.
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
- ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
Author: admin
ಮೈಸೂರು: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅನುಗನಹಳ್ಳಿಯಲ್ಲಿ ನಡೆದಿದೆ. ಸೂರ್ಯ ಎಂಬಾತ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವಿವಾಹಿತನಾಗಿದ್ದರೂ ಸೂರ್ಯ ಮತ್ತೊಬ್ಬಳ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಶ್ವೇತಾ ಎಂಬಾಕೆಯೊಂದಿಗೆ ಪರಿಚಯ ಮಾಡಿಕೊಂಡಿದ್ದ ಸೂರ್ಯ ಆಕೆಯ ಜೊತೆ ಸುತ್ತಾಡುವುದು ಖಾಸಗಿ ಫೋಟೋಗಳನ್ನ ಹಂಚಿಕೊಳ್ಳುವುದು ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಸಹ ಇಬ್ಬರು ತೋಟದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ಸೂರ್ಯನ ಹತ್ಯೆಯಾಗಿದೆ. ಈ ಕೊಲೆಯನ್ನು ಶ್ವೇತಾಳೆ ಮಾಡಿದ್ದಾಳೆ ಎಂದು ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಶ್ವೇತಾ ಆಸ್ತಿಗಾಗಿ ಸೂರ್ಯನನ್ನು ಪೀಡಿಸುತ್ತಿದ್ದಳು ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಘಟನೆ ಸಂಬಂಧ ಜಯಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ : ಕೊರಟಗೆರೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ದಾಖಲಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ಕೆ. ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ ಕೊರಟಗೆರೆ ತಾಲ್ಲೂಕಿನಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಈ ಕಂಟ್ರೋಲ್ ರೂಂಗಳ ದೂರವಾಣಿಗಳಿಗೆ ಜನರು ಕರೆ ಮಾಡುವಂತೆ ಕೋರಿದ್ದಾರೆ. ಕೊರಟಗೆರೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಭಾಗದ ಕುಡಿಯುವ ನೀರಿನ ಸಮಸ್ಯೆಗಳಿಗೆ ಕೊರಟಗೆರೆ ತಾಲ್ಲೂಕು ಪಂಚಾಯತಿ 08138–200527, ಪಟ್ಟಣ ಪ್ರದೇಶದ ನೀರಿನ ಸಮಸ್ಯೆಗಳಿಗೆ ಕೊರಟಗೆರೆ ಪಟ್ಟಣ ಪಂಚಾಯತಿ 08138– 295546, ಇದರೊಂದಿಗೆ ಕೊರಟಗೆರೆ ತಾಲ್ಲೂಕು ಕಛೇರಿ 08138– 232153 ಗೂ ಸಹ ಕರೆ ಮಾಡಿ ದೂರು ದಾಖಲಿಸಬಹುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಎರಡನೇ ಸ್ಪರ್ಧೆಯಲ್ಲಿ ತನ್ನ ಅಹಂ ಮತ್ತು ಅತಿಯಾದ ಆತ್ಮವಿಶ್ವಾಸದಿಂದ ಮತ್ತೊಮ್ಮೆ ಸೋತಿದ್ದ ಮೊಲವು ಇನ್ನು ತನ್ನ ಪಾಡಿಗೆ ತಾನು ಇದ್ದುಬಿಡೋಣ ಎಂದು ಕಾಲ ಕಳೆಯುತ್ತಿರಬೇಕಾದರೆ, ಒಮ್ಮೆ ಮೊಲದ ಮುಖಂಡ ಸ್ಪರ್ಧೆಯ ಮೊಲದ ಬಳಿ ಬಂದು ನೀನು ನೀನಾಗಿಯೇ ಆಮೆಯ ಬಳಿ ಹೋಗಿ ಆವೇಶದ ಮಾತುಗಳನ್ನು ಆಡಿ, ಮತ್ತೊಮ್ಮೆ ಸ್ಪರ್ಧೆಗೆ ಆಹ್ವಾನಿಸಿ ಸೋತಿದ್ದು ನಮ್ಮ ಮೊಲದ ಕುಲಕ್ಕೇ ಅವಮಾನ ಆದಂತೆ, ಆದ ಕಾರಣ ನೀನು ಮತ್ತೊಮ್ಮೆ ಸ್ಪರ್ಧೆಗೆ ಆಹ್ವಾನಿಸಿ ಒಮ್ಮೆಲೇ ಓಡಿ ಆಮೆಯನ್ನು ಸೋಲಿಸಲೇಬೇಕು, ಈ ಬಾರಿ ಕಳೆದ ಬಾರಿಯಂತೆ ಹೊಗಳಿಕೆಯ ಬಾಯಿಗೆ ಕಿವಿಯಾಗಬೇಡ ತಿಳಿಯಿತೇ, ಅದಕ್ಕೆ ಮೊಲವು ಬೇಡ ಮುಖಂಡರೇ , ಮತ್ತೆ ಆಮೆ ಬುದ್ಧಿವಂತಿಕೆಯಿಂದ ಯೋಚಿಸಿ ಏನಾದರೂ ಉಪಾಯ ಮಾಡಿ ನಾವೇ ಸೋಲುವಂತೆ ಮಾಡಿದರೆ, ಎಂದಾಗ ಮುಖಂಡ ಮೊಲವು ಹಾಗಾದರೆ ಹತ್ತಿರ ಬಾ ಎಂದು ಸ್ಪರ್ಧೆಯ ಮೊಲವನ್ನು ಹತ್ತಿರ ಕರೆದು ಕಿವಿಯಲ್ಲಿ ಏನೋ ಹೇಳಿತು. ಇದರಿಂದ ಸಂತಸಗೊಂಡ ಸ್ಪರ್ಧೆಯ ಮೊಲವು ಇದೇ ನಾವು ಗೆಲ್ಲಲು ಸರಿಯಾದ ಮಾರ್ಗ ಎಂದು ಹೇಳುತ್ತಾ…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಚೀಲಗಾನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ಸ್ಥಾಪನೆಗೆ 15 ವರ್ಷದಿಂದ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಕೊರಟಗೆರೆ ಆಡಳಿತ ಮತ್ತು ಗಣಿ ಇಲಾಖೆ ವಿರುದ್ದ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಕೊರಟಗೆರೆ ಪಟ್ಟಣದ ಮಿನಿ ವಿಧಾನಸೌಧಕ್ಕೆ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಹಾಗೂ ಚೀಲಗಾನಹಳ್ಳಿ ರೈತರಿಂದ ಟ್ರಾಕ್ಟರ್ ಸಮೇತ ಮುತ್ತಿಗೆ ಹಾಕಿ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ನಿರ್ಮಾಣಕ್ಕೆ ಸರಕಾರಿ ಅಧಿಕಾರಿಗಳೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಮಾತನಾಡಿ, ತುಮಕೂರು ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಗಣಿಗಾರಿಕೆಯಿಂದ ಪರಿಸರ ಹಾಳಾಗಿದೆ. ಈಗ ಮತ್ತೆ ಕೊರಟಗೆರೆಯಲ್ಲಿ ಗಣಿಗಾರಿಕೆ ಪ್ರಾರಂಭಕ್ಕೆ ಅಧಿಕಾರಿಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿರೋದು ನಮ್ಮ ದುರ್ದೈವ ಎಂದು ಕಿಡಿಕಾರಿದರು. ಕೊರಟಗೆರೆ ರೈತಸಂಘದ ಅಧ್ಯಕ್ಷ ಸಿದ್ದರಾಜು…
ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಎಲೆ ಅಡಿಕೆ ಎಂಜಲು ಉಗಿದ ಮಹಿಳೆಯನ್ನು ಪ್ರಶ್ನಿಸಿದ್ದಕ್ಕೆ ಕಂಡಕ್ಟರ್‌ಗೆ ದೊಣ್ಣೆಯಿಂದ ಹಿಗ್ಗಾಮುಗ್ಗ ಥಳಿಸಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ಗುರುವಾರ ಸಂಜೆ ನಡೆದಿದೆ. ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿಗೆ ತೆರಳಬೇಕಾದ ಆರು ಮಂದಿ ಪ್ರಯಾಣಿಕರು ತಪ್ಪಾಗಿ ಬಸ್‌ಗೆ ಹತ್ತಿದ್ದರು. ಅವರಲ್ಲಿ ಇಬ್ಬರು ಮಹಿಳೆಯರು ಕೂಡ ಇದ್ದರು. ಕಂಡಕ್ಟರ್ ಅನಿಲ್ ಕುಮಾರ್ ಅವರು, ಈ ಬಸ್ ಬೆಂಗಳೂರಿಗೆ ಹೋಗುವುದಿಲ್ಲ, ಬೇರೊಂದು ಬಸ್ ಹತ್ತುವಂತೆ ಸೂಚಿಸಿದ್ದಾರೆ ಈ ವೇಳೆ ಬಸ್ ಇಳಿಯುವಾಗ ಒಬ್ಬ ಮಹಿಳೆ ಬಸ್ ನ ಒಳಗೆ ಎಲೆ ಅಡಿಕೆಯ ಎಂಜಲು ಉಗಿದರು. ಇದನ್ನು ಗಮನಿಸಿದ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿ, ಸ್ವಚ್ಛಗೊಳಿಸಲು ಕೇಳಿದಾಗ, ಮಾತಿಗೆ ಮಾತು ಬೆಳೆದು ಮಹಿಳೆ ಮತ್ತು ಅವರ ಜೊತೆಗಿದ್ದವರು ಅವಾಚ್ಯ ಶಬ್ದಗಳಿಂದ ಕೂಗಾಡಲು ಆರಂಭಿಸಿದರು. ಈ ವೇಳೆ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಮಾತಿನ…
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣ ಹೊರವಲಯದ ಕೆ. ರಾಂಪುರ ಗ್ರಾಮದ ಬಳಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ರೈತರ ಜಮೀನು ಹಾಗೂ ಸಮೀಪದ ಗೊಮಾಳ ಹಾಗೂ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಪಾವಗಡ ಪಟ್ಟಣದ ತುಮಕೂರು ರಾಯದುರ್ಗ ರೈಲ್ವೆ ನಿಲ್ದಾಣದ ಮುಂಭಾಗದ ರೈತರ ಜಮೀನುಗಳು ಮತ್ತು ಬೆಟ್ಟಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವಿಗೆ ಬೆಂಕಿ ತಗುಲಿದೆ. ಇದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗದೆ ಒಂದು ರೀತಿ ನಿರ್ಲಕ್ಷ್ಯ ತೋರಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬಿಜಾಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಗುರುವಾರ 17 ನಕ್ಸಲಿಯರು ಶರಣಾಗಿದ್ದು, ಶರಣಾದ ನಕ್ಸಲಿಯರ ಪೈಕಿ 9 ಮಂದಿ ನಕ್ಸಲಿಯರ ತಲೆಗೆ ರೂ. 24 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಒಂದು ದಂಪತಿ ಸೇರಿದಂತೆ ಎಲ್ಲಾ 17 ಮಂದಿ ಬಿಜಾಪುರದಲ್ಲಿ ಹಿರಿಯ ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಅಧಿಕಾರಿಗಳ ಮುಂದೆ ಶರಣಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಳ್ಳು, ಅಮಾನವೀಯ ನಕ್ಸಲ್ ಸಿದ್ಧಾಂತದಿಂದ ನಿರಾಶೆ, ಹಿರಿಯ ನಕ್ಸಲೀಯರಿಂದ ಅಮಾಯಕ ಆದಿವಾಸಿಗಳ ಶೋಷಣೆ ಮತ್ತು ಭದ್ರತಾ ಪಡೆಗಳ ಪ್ರಭಾವ ಹೆಚ್ಚಳ ಶರಣಾಗತಿಗೆ ಕಾರಣವೆಂದು ನಕ್ಸಲೀಯರು ಹೇಳಿರುವುದಾಗಿ ಬಿಜಾಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40ರಷ್ಟು ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್ಎನ್ ನಾಗಮೋಹನ್ ದಾಸ್ ಆಯೋಗ ತನಿಖೆ ನಡೆಸಿದ್ದು, 20 ಸಾವಿರ ಪುಟಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಸಲ್ಲಿಸಿದೆ. ಇದೇ ಸಂದರ್ಭದಲ್ಲಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವನ್ನು ಕಾಂಗ್ರೆಸ್ ಪ್ರೇರಿತ ಆಯೋಗ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಗುರುವಾರ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ಸಂಪೂರ್ಣ ರಾಜಕೀಯ ವರದಿಯನ್ನು ಸಲ್ಲಿಸಲಾಗಿದೆ. ವಿಚಾರಣೆಯ ಮಾನದಂಡಗಳೇನು? ಯಾವ ದಾಖಲೆಗಳನ್ನು ಪರಿಶೀಲಿಸಲಾಗಿದೆ? ಇವೇ ನಿರ್ಣಾಯಕ ಅಂಶಗಳಾ?ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಯಾವಾಗಲೂ ಅವರನ್ನು ನೇಮಿಸುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ನಾಗಮೋಹನ್ ದಾಸ್ ಖಾಯಂ ಆಗಿದ್ದು, ಎಲ್ಲಾ ವಿಚಾರಣೆಗಳನ್ನು ಅವರಿಗೆ ವಹಿಸಲಾಗಿದೆ ಎಂದು ಅಶೋಕ್ ಟೀಕಿಸಿದರು. ನಾಗಮೋಹನ್ ದಾಸ್ ಕಾಂಗ್ರೆಸ್ ಪರವಾಗಿ ವರದಿ ಸಲ್ಲಿಸುವ ಅಭ್ಯಾಸವಿದೆ. ಇದು ರಾಜಕೀಯವಲ್ಲದೆ ಬೇರೇನೂ ಅಲ್ಲ ಎಂದು ಟೀಕಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ನವದೆಹಲಿ: ಹಿಂದಿ ಹೇರಿಕೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಡನೆ ತಮಿಳುನಾಡು ಸರ್ಕಾರ ಸಂಘರ್ಷ ನಡೆಸುತ್ತಿದೆ. ತಮಿಳುನಾಡು ಸರ್ಕಾರದ 2025—26ನೇ ಸಾಲಿನ ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ(₹) ಬಳಸದ ತಮಿಳುನಾಡು ಸರ್ಕಾರ ರೂ. ಎಂದು ತಮಿಳು ಅಕ್ಷರದಲ್ಲೇ ಮುದ್ರಿಸುವ ಮೂಲಕ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಾದೇಶಿಕ ಹೆಮ್ಮೆಯ ನೆಪದಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ತಮಿಳುನಾಡು ಸರ್ಕಾರ ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎಲ್ಲ ಚುನಾಯಿತ ಪ್ರತಿನಿಧಿಗಳು ರಾಷ್ಟ್ರ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಲು ಸಂವಿಧಾನದ ಅಡಿಯಲ್ಲಿ ಪ್ರಮಾಣ ಮಾಡುತ್ತಾರೆ. ರಾಜ್ಯ ಬಜೆಟ್ನಿಂದ ‘₹’ನಂತಹ ರಾಷ್ಟ್ರೀಯ ಚಿಹ್ನೆಯನ್ನು ತೆಗೆದು ಹಾಕುವುದು ಈ ಪ್ರತಿಜ್ಞೆಗೆ ವಿರುದ್ಧವಾಗಿದೆ. ರಾಷ್ಟ್ರೀಯ ಏಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನಿರ್ಮಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಎಚ್.ಡಿ.ಕೋಟೆ: ಅಂಗನವಾಡಿ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ಗುರುವಾರ ತಾಲ್ಲೂಕಿನ ಎಲೆಹುಂಡಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಸುಶೀಲಾ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಸ್ಟುಡಿಯೋ ಬಸವರಾಜು ಹಲ್ಲೆ ಮಾಡಿದ ವ್ಯಕ್ತಿ ಎನ್ನಲಾಗಿದೆ. ವ್ಯಕ್ತಿಯಿಂದ ಹಲ್ಲೆಗೊಳಗಾದ ಮಹಿಳೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಘಟನೆ: ಗುರುವಾರ ಅಂಗನವಾಡಿ ಶಿಕ್ಷಕಿ ಸುಶೀಲಾ ಕರ್ತವ್ಯದಲ್ಲಿದ್ದಾಗ ಸ್ಟುಡಿಯೋ ಬಸವರಾಜು ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ಅಂಗನವಾಡಿ ಕೇಂದ್ರದ ಒಳಗೆ ಬಂದು, ನೀನು ನನಗೆ ಯಾಕೆ ಸಹಕಾರ ನೀಡುತ್ತಿಲ್ಲ. ಇಲ್ಲದಿದ್ದರೆ ನಿನ್ನನ್ನು ಕೆಲಸದಿಂದ ತೆಗೆದು ಹಾಕಿಸುತ್ತೇನೆ ಎಂದು ಬೆದರಿಕೆಯೊಡ್ಡಿ ನನ್ನ ಕೈಹಿಡಿದು ಎಳೆದಾಡಿ, ಹಿಂದಿನಿಂದ ನನ್ನನ್ನು ತಬ್ಬಿಕೊಂಡರು ನಾನು ಪ್ರತಿರೋಧ ಒಡ್ಡಿದಾಗ ನನ್ನ ತಲೆ ಕೂದಲು ಹಿಡಿದು ಎಳೆದಾಡಿ ನನ್ನ ಕೆನ್ನೆಗೆ ಬಲವಾಗಿ ಹೊಡೆದು ಪ್ರಜ್ಞೆ ತಪ್ಪುವಂತೆ ಮಾಡಿ ಕೆಳಕ್ಕೆ ಬೀಳಿಸದರು, ಅಷ್ಟರಲ್ಲಿ ರಸ್ತೆಯಲ್ಲಿ ಯಾವುದೋ ಕಾರು ಬಂದ ಶಬ್ದ ಕೇಳಿ ನನ್ನನ್ನು ಬಿಟ್ಟು ಬಸವರಾಜು ಹೊರಗೆ ಬಂದರು, ಕೆಳಗೆ…