Subscribe to Updates
Get the latest creative news from FooBar about art, design and business.
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
- ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
Author: admin
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ಕಳೆದ 5 ವರ್ಷ ಗಳಲ್ಲಿ 5200 ಕೋಟಿ ರೂ. ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಮಾತ್ರವಲ್ಲದೆ, ಭಾರತ ಮತ್ತು ಪ್ರಪಂಚದಾದ್ಯಂತದ ಸಾರ್ವಜನಿಕ ಸಾರಿಗೆ ಸೇವೆಗಳು ಲಾಭಕ್ಕಿಂತ ಹೆಚ್ಚಿನ ನಷ್ಟವನ್ನೇ ಎದುರಿಸುತ್ತಿವೆ ಎಂದು ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳಾದ ಕೆಎಸ್ ಆರ್ ಟಿಸಿ, ಕೆಕೆಆರ್ ಟಿಸಿ, ಎನ್ ಡಬ್ಲ್ಯೂಕೆಆರ್ ಟಿಸಿ ಮತ್ತು ಬಿಎಂಟಿಸಿಗಳಿಗೆ 5,200 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಮುಂದಿನ ಒಂದು ವರ್ಷದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 2.30 ಲಕ್ಷ ಮನೆಗಳ ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬಿಜೆಪಿ ಎಂಎಲ್ ಸಿಗಳಾದ ಕೆ.ಎಸ್. ನವೀನ್ ಮತ್ತು ಎಸ್.ವಿ. ಸಂಕನೂರ್ ಅವರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಅವರು, ಅವರು, ಬಸವ ವಸತಿ, ಡಾ.ಬಿ.ಆರ್. ಅಂಬೇಡ್ಕರ್ ನಿವಾಸ, ದೇವರಾಜ ಅರಸು ವಸತಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ 9.5 ಲಕ್ಷ ಮನೆಗಳನ್ನು ನಿರ್ಮಿಸಬೇಕಾಗಿದೆ ಎಂದು ಹೇಳಿದರು. ಕಾಮಗಾರಿ ಪೂರ್ಣಕ್ಕೆ 13,500 ಕೋಟಿ ರೂ.ಗಳಿಗೂ ಹೆಚ್ಚು ಅನುದಾನದ ಅಗತ್ಯವಿದೆ, ಹಂತ ಹಂತವಾಗಿ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು. ಮುಂದಿನ ಒಂದು ವರ್ಷದಲ್ಲಿ 2.30 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಕೊರಟಗೆರೆ : ಸ್ವಾತಂತ್ರ್ಯದ ನಂತರ ನಿರಂತರವಾಗಿ ಸುಮಾರು 35 ವರ್ಷ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಈ ಕ್ಷೇತ್ರದಲ್ಲಿ ಅನಿರೀಕ್ಷಿತ ಕಳೆದ ಚುನಾವಣೆಯಲ್ಲಿ ಸೋಲಾಗಿದೆ. ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಹಾಗೂ ವೀರಣ್ಣನವರ ಕಾಲದಿಂದಲೂ ಇದು ಜೆಡಿಎಸ್ ಭದ್ರಕೋಟೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು. ಪಟ್ಟಣದ ಸುವರ್ಣ ಮುಖಿ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಆಯೋಜಿಸಲಾದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈಗಲೂ ಕಾಲ ಮಿಂಚಿಲ್ಲ ಮುಂದಿನ ದಿನಗಳಲ್ಲಿ ನಾವು ಜೊತೆ ಜೊತೆಯಾಗಿ ಕೆಲಸ ಮಾಡಿದರೆ ಜೆಡಿಎಸ್ ಗೆಲುವು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕರ್ತರು ಮತ್ತು ಮುಖಂಡರೇ ಜೆಡಿಎಸ್ ಪಕ್ಷದ ಬಹುದೊಡ್ಡ ಶಕ್ತಿ. ಆಯ್ಕೆಯಾದ ಪದಾಧಿಕಾರಿಗಳು ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಮತ್ತು ಕೇಂದ್ರ ಸಚಿವ ಕುಮಾರಣ್ಣನವರ ಆಶಯದಂತೆ ಹಿಂದಿನಂತೆ ಮುಂದೆಯೂ ಪಕ್ಷದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.…
ಬೀದರ್: ಜಿಲ್ಲೆಯಲ್ಲಿ ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು, ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬೀದರ್, ಹುಮನಾಬಾದ್, ಬಸವಕಲ್ಯಾಣ, ಔರಾದ್(ಬಿ),ಕಮಲನಗರ್, ಹುಲಸೂರ್ ಹಾಗೂ ಚಿಟಗುಪ್ಪಾ ತಾಲ್ಲೂಕುಗಳಲ್ಲಿ ಮಾ.13 ರ ಸಾಯಂಕಾಲ 6 ಗಂಟೆಯಿಂದ ಮಾ.14 ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಭಾಲ್ಕಿ ತಾಲ್ಲೂಕುಗಳಲ್ಲಿ ಮಾ.13 ರ ಸಾಯಂಕಾಲ 6 ಗಂಟೆಯಿಂದ ಮಾ.14 ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಮಾ.13 ರ ಸಾಯಂಕಾಲ 6 ಗಂಟೆಯಿಂದ ಮಾ.15 ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದೆ ಅವರು ಆದೇಶಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ…
ತುಮಕೂರು: ತುಮಕೂರಿನಲ್ಲಿ ಮೊದಲ ಮಳೆಗೆ ಅವಾಂತರ ಸೃಷ್ಟಿಯಾದ ಘಟನೆ ನಡೆದಿದೆ. ತುಮಕೂರಿನ ಔಟರ್ ರಿಂಗ್ ರೋಡ್ ನಲ್ಲಿ ಮಳೆ ನೀರಿನಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು. ನಗರದ ಹಲವೆಡೆ ಅಂಡರ್ ಪಾಸ್ ಗಳು, ರಸ್ತೆಗಳು ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವಂತಾಯಿತು. ಮಳೆಯ ನೀರು ರಸ್ತೆಯಲ್ಲಿ ನಿಂತ ಪರಿಣಾಮ ಬ್ರಿಡ್ಜ್ ಕೆಳಗೆ ಸಂಚರಿಸಲು ವಾಹನ ಸವಾರರು ಪರದಾಡಿದರು. ಪ್ರತಿ ಬಾರಿ ಮಳೆ ಬಂದಾಗಲೂ ಈ ಸಮಸ್ಯೆ ಎದುರಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ರಿಡ್ಜ್ ಕೆಳಗೆ ಸಂಚರಿಸುವ ಸಂದರ್ಭದಲ್ಲಿ ಮಳೆನೀರಿನಲ್ಲಿ ಸಿಲುಕಿ ಕೆಟ್ಟು ನಿಂತ ಘಟನೆಯೂ ನಡೆಯಿತು. ನೀರಿನಲ್ಲಿ ವಾಹನಗಳನ್ನು ಚಲಾಯಿಸಲು ವಾಹನ ಸವಾರರ ಪರದಾಡಿದರು. ಪಾಲಿಕೆಯ ಹಾಗೂ ರೈಲ್ವೆ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಹಿಡಿಶಾಪ ಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ರಚಿಸಲಾದ ಕಾಂಗ್ರೆಸ್ ಸದಸ್ಯರ ಸಮಿತಿಗಳನ್ನು ರದ್ದುಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗ್ಯಾರಂಟಿ ಸಮಿತಿಗಳ ಅಧ್ಯಕ್ಷ ಹುದ್ದೆ ರದ್ದು ಮಾಡಿ, ಶಾಸಕರಿಗೆ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಎರಡು ದಿನಗಳಿಂದ ವಿರೋಧ ಪಕ್ಷಗಳ ನಡೆಸುತ್ತಿದ್ದ ಧರಣಿ ಹಾಗೂ ಹೋರಾಟಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಯಾವುದೇ ಪಕ್ಷದ ಸರ್ಕಾರ ಇದ್ದಾಗ ಆ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳನ್ನು ಕೊಡುವುದು ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ. ಮಹಾರಾಷ್ಟ್ರದಲ್ಲಿ ಸಚಿವರಿಗೆ ಆರ್ ಎಸ್ ಎಸ್ ಕಾರ್ಯಕರ್ತರನ್ನು ಆಪ್ತ ಸಹಾಯಕರನ್ನಾಗಿ ಮಾಡಿಲ್ಲವೇ? ಕೆಕೆಆರ್ ಡಿಬಿಗೆ ಸಲಹೆ ಕೊಡಲು ಬಸವರಾಜಪಾಟೀಲ ಸೇಡಂ ನೇತೃತ್ವದಲ್ಲಿ ಸಂಸ್ಥೆಯೊಂದನ್ನು ಮಾಡಿ ಅದಕ್ಕೆ ಸರ್ಕಾರದಿಂದ ಹಣ ಕೊಟ್ಟಿರಲಿಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಸದಸ್ಯರು, ‘ನೀವು ಕೂಡ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿಕೊಂಡಿಲ್ಲವೇ? ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಸಮಿತಿ ರೀತಿಯ ವ್ಯವಸ್ಥೆ ಮಾಡಿ ಅಲ್ಲಿ ಪಕ್ಷದ ಕಾರ್ಯಕರ್ತರಿಗೆ ಸಂಬಳ ಕೊಟ್ಟು ಸಾಕುತ್ತಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಸಿಎಂ…
ಬೆಂಗಳೂರು: ನೀರು ಹಿಡಿಯಲು ಹೋದ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ನಡೆದಿದೆ. ಸೆಲ್ವಿ (24) ಮೃತಪಟ್ಟ ಮಹಿಳೆಯಾಗಿದ್ದಾರೆ. ಬೆಳಗಿನ ಜಾವ ನೀರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆ ಬಳಿಕ ಮಾರುಕಟ್ಟೆ ರಸ್ತೆಯಲ್ಲಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಶಾಸಕ ಜಮೀರ್ ಅವರು ಸ್ಥಳಕ್ಕಾಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಸ್ಥಳೀಯರ ಪ್ರತಿಭಟನೆ ಪರಿಣಾಮ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ತಿರುಪತಿಯ ಲಡ್ಡು ವಿವಾದ ಬಳಿಕ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಇದೀಗ ತಿರುಪತಿ ತಿರುಮಲ ದೇಗುಲದಿಂದ ಇನ್ನೂ ಹೆಚ್ಚಿನ ತುಪ್ಪಕ್ಕೆ ಬೇಡಿಕೆ ಬಂದಿದೆ. ಈಗಾಗಲೇ ಕಳೆದ 1 ವರ್ಷದಲ್ಲಿ 3200 ಮೆಟ್ರಿಕ್ ಟನ್ತುಪ್ಪ ಟಿಟಿಡಿಗೆ ಪೂರೈಕೆ ಮಾಡಲಾಗಿದ್ದು, ಈಗ ಮತ್ತೆ 2000 ಮೆಟ್ರಿಕ್ ಟನ್ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಡಲಾಗಿದೆ. ಲಡ್ಡು ವಿವಾದ ಬಳಿಕ ಬೇರೆ ಸಂಸ್ಛೆಗಳಿಂದ ತುಪ್ಪ ಖರೀದಿ ಮಾಡಲು ಟಿಟಿಡಿ ಹಿಂದೇಟು ಹಾಕುತ್ತಿದೆ. ಟಿಟಿಡಿಗೆ ವಾರ್ಷಿಕ 3,200 ಟನ್ ಆಗಿರುತ್ತದೆ. ಇಷ್ಟೂ ಪ್ರಮಾಣದ ತುಪ್ಪವನ್ನು ಟಿಟಿಡಿ ಕೆಎಂಎಫ್ ನಿಂದಲೇ ಪೂರೈಸಿಕೊಳ್ಳಲು ನಿರ್ಧರಿಸಿದೆ. ನಂದಿನಿ ತುಪ್ಪವನ್ನು ಮಾತ್ರ ಖರೀದಿಸಲು ಟಿಟಿಡಿ ನಿರ್ಧರಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣಕ್ಕೆ 24/7 ಸುಧಾರಿತ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ(ಬೈರತಿ) ಹಾಗೂ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ನೇತೃತ್ವದಲ್ಲಿ ಬುಧವಾರ ಸಭೆ ಜರುಗಿತು. ಈ ಸಂದರ್ಭದಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ: ಆರ್. ಸೆಲ್ವಮಣಿ, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲೆಯಲ್ಲಿ ಮಾ.12ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ಮನಃಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಮೂಲಗಣಿತ ವಿಷಯದಲ್ಲಿ ಒಟ್ಟು 138 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ಮನಃಶಾಸ್ತ್ರ ವಿಷಯಕ್ಕೆ ಒಟ್ಟು 67, ರಸಾಯನಶಾಸ್ತ್ರ ವಿಷಯಕ್ಕೆ 10342 ಹಾಗೂ ಮೂಲಗಣಿತ ವಿಷಯಕ್ಕೆ ಒಟ್ಟು 203 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ರಸಾಯನ ಶಾಸ್ತ್ರದಲ್ಲಿ 137 ಹಾಗೂ ಮೂಲಗಣಿತ ವಿಷಯದಲ್ಲಿ 1 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4