Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಕೋಲ್ಕತ್ತಾ: ಮಹಾಕುಂಭ ಮೇಳದಲ್ಲಿನ ಅವ್ಯವಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಮಾರ್ಪಟ್ಟಿದೆ. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ‘ಮೇಳ’ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಸಾಬೀತುಪಡಿಸಲು ಬಿಜೆಪಿಗೆ ಇದೇ ವೇಳೆ ಅವರು ಸವಾಲೆಸೆದರು. ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ಧರ್ಮವನ್ನು ಬಳಸುತ್ತಿದೆ.…
ಬೆಂಗಳೂರು: ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆಚ್ಚಿನ ತಪಾಸಣೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇಂದು ವೈದ್ಯರು ತಪಾಸಣೆ ನಡೆಸಿದ ನಂತರ ಅಗತ್ಯಬಿದ್ದರೆ ಆಸ್ಪತ್ರೆಗೆ ದಾಖಲಾಗಬಹುದು ಎಂದು ಹೇಳಲಾಗಿದೆ. ಕೆಲಸದ ಒತ್ತಡ, ನಿರಂತರ ಪ್ರವಾಸಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಕುಮಾರಸ್ವಾಮಿಯವರು ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಐತಿಹಾಸಿಕ ಪ್ರಯಾಗ್ರಾಜ್ ನ ಕುಂಭ ಮೇಳದಲ್ಲಿ ಭಗವಹಿಸಿದ್ದ ನಾಗಸಾಧು ಧನಂಜಯ ಗುರೂಜಿ ಇಂದು ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣದ ಸಮೀಪ ಇರುವ ಹೆಗ್ಗೆರೆ ಗ್ರಾಮದಲ್ಲಿರುವ ಶಿವಲಿಂಗ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ನಾಗಸಾಧು ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಗ್ರಾಮಸ್ಥರೆಲ್ಲರೂ ಅವರಿಗೆ ಭವ್ಯವಾದ ಪೂರ್ಣ ಕುಂಭ ಸ್ವಾಗತವನ್ನು ನೀಡಿದರು. ಹುಳಿಯಾರು ಸಮೀಪದ ಹೆಗ್ಗೆರೆಯ ಚೋಳರ ಕಾಲದಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾರುದ್ರ ಶಿವಾಲಯದ ಬಗ್ಗೆ ಕುಂಭಮೇಳದಲ್ಲಿ ಅವರು ಪ್ರಸ್ತಾಪ ಮಾಡಿದ್ದರು. ನಾಗ ಸಾಧು ಧನಂಜಯ್ ಗುರುಜಿ ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿದಂತೆ ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಕಂಚೀಪುರ, ಯಳನಾಡು, ದಸೂಡಿ, ಹುಳಿಯಾರು, ಶ್ರೀರಾಂಪುರ ಮುಂತಾದ ಭಾಗದಿಂದ ಭಕ್ತ ಸಮೂಹ ಆಗಮಿಸಿ ನಾಗಸಾಧುವಿನ ದರ್ಶನ ಪಡೆದರು. ನಂತರ ಧನಂಜಯ್ ಗುರೂಜಿ ಅವರು ಶಿವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತಿಪಟೂರು: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ಹಾಲ್ಕುರಿಕೆ ಗ್ರಾಮದ ಶ್ರೀವೀರಭದ್ರೇಶ್ವರ ಹಾಗೂ ಪಾರ್ಥೇಶ್ವರಸ್ವಾಮಿ ದೇವಸ್ಥಾನದ ನವೀಕರಣಕ್ಕೆ 2 ಲಕ್ಷ ರೂ. ಮೊತ್ತದ DDಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲೂಕಿನ ಯೋಜನಾಧಿಕಾರಿಯಾದ ಉದಯ್ ಯವರು ದೇವಸ್ಥಾನ ಆಡಳಿತ ಸಮಿತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಸಮಿತಿಯ ಪ್ರಮುಖರಾದ ನಂಜುಂಡಯ್ಯ ಪರಮೇಶ್ವರಯ್ಯ ಹಾಗೂ ಸಾರ್ಥವಳ್ಳಿ ವಲಯದ ಮೇಲ್ವಿಚಾರಕರದ ಪ್ರದೀಪ್ ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು ಸ್ವ– ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ: ಲೋಕಸಭಾ ಮತಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರು, ರಾಜೀವ್ ಗಾಂಧಿ ವಸತಿ ನಿಗಮ (ನಿ), ಬೆಂಗಳೂರು ಅಡಿಯಲ್ಲಿ ‘ಆವಾಸ್ ಪ್ಲಸ್ 2024’ ವಸತಿ ಆಪ್ ಮೂಲಕ ವಸತಿ/ನಿವೇಶನ ರಹಿತರ ಸಮೀಕ್ಷೆ ಪ್ರಾರಂಭಗೊಂಡಿದ್ದು, ಬೀದರ್ ಜಿಲ್ಲಾ ಭಾಲ್ಕಿ ತಾಲ್ಲೂಕಿನ ಲಂಜವಾಡ್ ಗ್ರಾಮದಲ್ಲಿ ಅಧಿಕೃತವಾಗಿ ಚಾಲನೆ ನೀಡಿ ಪಿ.ಎಂ.ಎ.ವೈ (ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರ ನೀಡಿ ಶುಭ ಹಾರೈಸಿದರು. ಸಮೀಕ್ಷೆಗೆ ಮುನ್ನ, ಪಿ.ಎಂ.ಎ.ವೈ.(ಗ್ರಾಮೀಣ) ಅಡಿಯಲ್ಲಿ ಆಯ್ಕೆಯಾದ ಸೋಮಪುರ ಗ್ರಾಮದ ಫಲಾನುಭವಿಗಳ ಜಿ.ಪಿ.ಎಸ್. ಕಾರ್ಯವನ್ನು ನೆರವೇರಿಸಿದರು. ಆವಾಸ್ ಪ್ಲಸ್ 2024 ಸಮೀಕ್ಷೆ ಸಂಪೂರ್ಣ ಪ್ರಾಮಾಣಿಕವಾಗಿ ನಡೆಯಬೇಕು. ಫಲಾನುಭವಿಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ದೊರಕಬೇಕು. ಅಲ್ಲದೆ, ಸಮೀಕ್ಷೆಯ ಪಾರದರ್ಶಕತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಮಾರಂಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರರು, ವಿವಿಧ ಅಧಿಕಾರಿಗಳು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳನ್ನು ಹೊಂದಿರುವವರು ಬಿ–ಖಾತಾಗೆ ದಾಖಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ಕೊಟ್ಟಿದೆ. ಬಿ–ಖಾತಾ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರು ಮೂರು ತಿಂಗಳೊಳಗೆ ಬಿ–ಖಾತಾಗೆ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿ-ಖಾತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಬಡಾವಣೆಗಳ ಕಟ್ಟಡ ಮಾಲೀಕರು/ನಿವೇಶನದಾರರಿಗೆ ಬಿ–ಖಾತಾ ನೀಡಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 18ರಿಂದ ಮೂರು ತಿಂಗಳೊಳಗೆ ನಗರ ಸ್ಥಳೀಯ ಸಂಸ್ಥೆಯ ಅನಧಿಕೃತ ಬಡಾವಣೆಯಲ್ಲಿನ ನಿವೇಶನದಾರರಿಗೆ ಬಿ–ಖಾತಾ ನೀಡುವ ಕಾರ್ಯವನ್ನು ಆಂದೋಲನ ರೀತಿಯಲ್ಲಿ ಆರಂಭಿಸಿದ್ದೇವೆ ಎಂದು ಹೇಳಿದರು. ಜಿಲ್ಲೆಯ…
ತುಮಕೂರು: ರಾಜ್ಯದ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆಯುವ “ರನ್ನ ವೈಭವ–2025”ರ ಅಂಗವಾಗಿ ಫೆಬ್ರವರಿ 19 ರಿಂದ 22ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ “ರನ್ನ ರಥಯಾತ್ರೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ 19ರಂದು ಮಧ್ಯಾಹ್ನ 1:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರನ್ನ ರಥಯಾತ್ರೆಯು ಆಗಮಿಸಲಿದೆ. ಈ ರಥಯಾತ್ರೆಯನ್ನು ಜಿಲ್ಲಾಡಳಿತದಿಂದ ಗೌರವಯುತವಾಗಿ ಸ್ವೀಕರಿಸಿ ಬೀಳ್ಕೊಡಲಾಗುವುದು. ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಸರ್ಕಾರಿ ನೌಕರರ ಸಂಘ, ಕನ್ನಡ ಪರ ಸಂಘ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು/ಪದಾಧಿಕಾರಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಫೆಬ್ರವರಿ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ” ಕಾರ್ಯಕ್ರಮವನ್ನು ಆಚರಿಸಲಾಗುವುದು. ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ, ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಎಚ್. ಡಿ. ಕೋಟೆ: ಜೀತಮುಕ್ತರಿಗೆ ಬಜೆಟ್ ನಲ್ಲಿ 500 ಕೋಟಿ ಮೀಸಲಿಡುವಂತೆ ಹಾಗೂ ಎಸ್ ಒಪಿ ಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಿತು. ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕ ಒಕ್ಕೂಟ ಮತ್ತು ಜೀವಿಕ ಸಂಘಟನೆ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಹೊರಟು ಆಡಳಿತ ಸೌಧದ ಮುಂಭಾಗ ಜಮಾವಣೆಗೊಂಡು ಮುಖ್ಯಮಂತ್ರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಮತ್ತು ತಹಶೀಲ್ದಾರ್ ಶ್ರೀನಿವಾಸ್ ರವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಪ್ರತಿಭಟನೆ ಕುರಿತು ಜೀವಿಕ ರಾಜ್ಯ ಸಂಚಾಲಕ ಸಂಚಾಲಕ ಉಮೇಶ್ ಬಿ. ನೂರಲಕುಪ್ಪೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ 2000 ಇಸವಿಯಿಂದ 2024ರ ತನಕ ರಾಜ್ಯಾದ್ಯಂತ ಸುಮಾರು 7000 ಸಾವಿರ ಮಂದಿ ಜೀತವಿಮುಕ್ತಿ ಆಗಿದ್ದಾರೆ, ಆದರೆ ಜೀತ ಪದ್ಧತಿ ರದ್ಧತಿ ಕಾನೂನಿನ ಪ್ರಕಾರ ಹಾಗೂ ಕರ್ನಾಟಕ ಸರ್ಕಾರದ 2006 ಜೀತಮುಕ್ತರ ಕ್ರಿಯಾ ಯೋಜನೆ ಪ್ರಕಾರ ಸಿಗಬೇಕಾದ ಸಮಗ್ರ ಪುನರ್ವಸತಿ ಅಂದರೆ ಪರಿಹಾರ, ಮಾಸಾಶನ, ಕಾರ್ಪಸ್ ನಿಧಿ, ನಿವೇಶನ, ವಸತಿ, ಲೈನ್ ಡಿಪಾರ್ಟ್ಮೆಂಟ್ ನಿಂದ…
ತುಮಕೂರು: ವಾಹನ ಸವಾರರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಅವಾಂತರಗಳಿಗೆ ಆಹ್ವಾನ ನೀಡಿದಂತೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿರುವುದು, ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡುವುದು ಒಂದು ಫ್ಯಾಷನ್ ಆಗಿದೆ. ಇದರಿಂದ ರಸ್ತೆ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ 2024ರ ಜನವರಿಯಿಂದ ಡಿಸೆಂಬರ್ವರೆಗೆ 1,836 ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗಿರುವುದು ಆತಂಕದ ವಿಷಯ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸುವುದರಿಂದ ಸಂಭವಿಸಬಹುದಾದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ: ವಾಹನ ಚಾಲಕರು ಅಂಕು–ಡೊಂಕು ರಸ್ತೆ, ತಿರುವಿನಲ್ಲಿ ಓವರ್ ಟೇಕ್ ಮಾಡಬಾರದು. ಮುಂದಿರುವ ವಾಹನಕ್ಕೆ ಅತಿ ಹತ್ತಿರವಾಗಿ ವಾಹನ ಚಲಾಯಿಸಬಾರದು. ವಾಹನ ಚಾಲನೆಯಲ್ಲಿ ಅನಾವಶ್ಯಕ ಪೈಪೋಟಿ ಬೇಡ. ನಿದ್ದೆಯ ಸಮಯವಾದ್ದರಿಂದ ಬೆಳಗಿನ ಜಾವ 2 ರಿಂದ 5 ಗಂಟೆಯ ನಡುವೆ ವಾಹನ ಚಲಾಯಿಸದಿದ್ದರೆ ಉತ್ತಮ. ಎದುರಿನ ವಾಹನ ಚಾಲಕನ ಕಣ್ಣು ಕುಕ್ಕುವಂತೆ ತಮ್ಮ ವಾಹನದ…