Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಗಾಗಿ ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯನ್ನು ಫೆಬ್ರವರಿ 21 ರಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9380162042ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ…
ತುಮಕೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಬಾಕಿಯಿರುವ ಇ–ಆಫೀಸ್, ಸಕಾಲ, 1–5 ದರಖಾಸ್ತು, ಪೋಡಿ, ಕಡತ ವಿಲೇವಾರಿ, ಬಗರ್ ಹುಕುಂ, ಭೂಮಿ ತಂತ್ರಾಂಶಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ವಿಷಯಗಳ ಬಗ್ಗೆ ಇತ್ತೀಚೆಗೆ ಸಭೆ ನಡೆಸಿ ಕಂದಾಯ ಪ್ರಗತಿ ಪರಿಶೀಲಿಸಿ ಈ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಎಲ್ಲಾ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಕಂದಾಯ ಸಿಬ್ಬಂದಿ ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆಯಲಿರುವ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಮೈಸೂರು ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಿರುವ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿಕಸಿತ ಬಜೆಟ್ @2047 ಛಾಯಾಚಿತ್ರ ಪ್ರದರ್ಶನವು ಜನರಿಗೆ ಬಹಳ ಉಪಯುಕ್ತ ಮಾಹಿತಿ ನೀಡುತ್ತಿದೆ ಎಂದು ನಗರ ಕ್ಷೇತ್ರದ ಶಾಸಕ ಜ್ಯೋತಿ ಗಣೇಶ್ ತಿಳಿಸಿದರು. ಸೋಮವಾರ ಸಂಜೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ 2025ರ ನೂತನ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಪ್ರದರ್ಶನದಲ್ಲಿ ವಿಕಸಿತ ಭಾರತ ಬಜೆಟ್ 2025–26, ಪಿಎಂ ಇಂಟರ್ನ್ಶಿಪ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪಿಎಂ ಸೂರ್ಯ ಘರ್, ವಿಕಸಿತ ಭಾರತಕ್ಕೆ ಪ್ರಧಾನ ಮಂತ್ರಿಯವರ ದೂರದೃಷ್ಠಿ 2047 ಹಾಗೂ ಇತರೆ ಯೋಜನೆಗಳ ಛಾಯಾಚಿತ್ರ ಪ್ರದರ್ಶನದ ಜೊತೆಗೆ ಯೋಜನೆಗಳ ಫಲಾನುಭವಿಗಳು ಹಂಚಿಕೊAಡಿರುವ ಅನಿಸಿಕೆ ಮತ್ತು ಇತರೆ…
ಗುಬ್ಬಿ: ಪ್ರೀತಿಸಿ ಮದುವೆ ಆಗಿದ್ದ ದಂಪತಿಗಳ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನನೊಂದ ಪತಿ ಸೆಲ್ಫಿ ವಿಡಿಯೋ ಮೂಲಕ ನನ್ನ ಸಾವಿಗೆ ಓಡಿ ಹೋದ ಪತ್ನಿ ಹಾಗೂ ಸ್ನೇಹಿತ ಕಾರಣ ಎಂದು ಹೇಳಿ ನ್ಯಾಯ ಕೊಡಿಸಿ ಎಂದು ಸ್ನೇಹಿತರಲ್ಲಿ ಮನವಿ ಮಾಡಿದ ವಿಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿ ನೇಣಿಗೆ ಶರಣಾದ ದಾರುಣ ಘಟನೆ ಮಂಗಳವಾರ ಪಟ್ಟಣದ ಗಟ್ಟಿ ಲೇಔಟ್ ಬಡಾವಣೆಯಲ್ಲಿ ನಡೆದಿದೆ. ನಾಗೇಶ್ (35) ನೇಣಿಗೆ ಶರಣಾದ ಪತಿ. ಕಳೆದ 12 ವರ್ಷದ ಹಿಂದೆ ರಂಜಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ. ನಾಗೇಶ್ ಈಚೆಗೆ ಸ್ವಂತ ಮನೆ ಮಾರಾಟ ಮಾಡಿ ಗಟ್ಟಿ ಲೇಔಟ್ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈಚೆಗೆ ಈ ದಂಪತಿಗಳ ಮಧ್ಯೆ ಬಿರುಗಾಳಿಯಂತೆ ಬಂದ ಸ್ನೇಹಿತ ಭರತ್ ಎಂಬಾತ ರಂಜಿತಾಳನ್ನು ಮೋಹಕ್ಕೆ ಸಿಲುಕಿಸಿಕೊಂಡು ಓಡಿ ಹೋದ ಘಟನೆ ನಡೆದಿದೆ. ಇದರಿಂದ ತೀವ್ರವಾಗಿ ಮನನೊಂದ ನಾಗೇಶ್ ಜಿಗುಪ್ಸೆಯಲ್ಲಿ ಎರಡು ಮಕ್ಕಳನ್ನು ಬಿಟ್ಟು…
ತುಮಕೂರು: ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕುಡಿಯುವ ನೀರು ಮತ್ತು ಮೇವಿನ ಸ್ಥಿತಿ–ಗತಿ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ 6 ತಿಂಗಳಲ್ಲಿ ಕುಡಿಯುವ ನೀರಿಗೆ ಬವಣೆಯುಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ ಅಗತ್ಯವಿರುವ ಕಡೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು. ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಿಲ್ಲೆಯಲ್ಲಿರುವ ಎಲ್ಲ ಕೊಳವೆಬಾವಿ, ಆರ್.ಓ. ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು. ಕೆಟ್ಟು ನಿಂತಿರುವ ಕೊಳವೆ ಬಾವಿ, ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸೂಚನೆ ನೀಡಿದರಲ್ಲದೆ ಬೇಸಿಗೆಯಲ್ಲಿ ಜಾನುವಾರುಗಳ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.…
ತುಮಕೂರು: ಮದ್ಯ ಮತ್ತು ಮಾದಕ ವಸ್ತುಗಳು ಸಮಾಜ ಹಾಗೂ ಯುವ ಜನಾಂಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಈ ಕಾಲದಲ್ಲಿ ನಗರದ ಶ್ರೀ ಸಿದ್ಧಗಂಗಾಮಠದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಮೂಡಿಸಲು ನಿರ್ಮಿಸಲಾದ ಜನ ಜಾಗೃತಿ ವಸ್ತುಪ್ರದರ್ಶನ ಮಳಿಗೆಯು ವೀಕ್ಷಣೆಗೆ ಬರುವ ಪ್ರತಿಯೊಬ್ಬರಿಗೂ ಜಾಗೃತಿಯ ಕೇಂದ್ರವಾಗಿದೆ. “ಮಾನವೀಯ ಮೌಲ್ಯಗಳನ್ನು ನಾವು ಉಳಿಸಿ ಬೆಳೆಸಬೇಕು. ನಮ್ಮ ಮಕ್ಕಳಲ್ಲಿ ಇವನ್ನು ಬೆಳೆಸೋಣ. ಮದ್ಯ ಮತ್ತು ಮಾದಕ ವಸ್ತು ಸೇವನೆಯಿಂದ ದೂರವಿರೋಣ. ಇವುಗಳ ವಿರುದ್ಧ ಜಾಗೃತಿ ಮೂಡಿಸೋಣ” ಎಂಬ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ ಸೇರಿದಂತೆ ಪೂಜ್ಯ ಶ್ರೀಗಳಾದ ಶಿವಕುಮಾರಸ್ವಾಮೀಜಿ ಮತ್ತು ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ರಾಷ್ಟçಪಿತ ಮಹಾತ್ಮ ಗಾಂಧಿ, ಕವಿಗಳಾದ ಕಾಳಿದಾಸ, ಸರ್ವಜ್ಞ, ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಯೋಗ ಗುರು ರಾಮದೇವ್ ಅವರ ಜನ ಜಾಗೃತಿ ಸಂದೇಶಗಳನ್ನೊಳಗೊAಡ…
ಹೆಚ್.ಡಿ.ಕೋಟೆ : ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನೂ ಮಾಡುವ ಮೂಲಕ ಹೆಚ್ .ಡಿ .ಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ವೇದಿಕೆಯ ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಬೋವಿ ಸಮಾಜದ ಅಧ್ಯಕ್ಷ ಐಡಿಯಾ ವೆಂಕಟೇಶ್ ಮಾತನಾಡಿ, ಈ ಕಾರ್ಯಕ್ರಮವನ್ನು ಮಾಡಲು ಸತತವಾಗಿ ಊರೂರು ತಿರುಗಿ ಸಮುದಾಯದ ಜನರನ್ನು ಒಗ್ಗೂಡಿಸಿ, ನಾವು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಈ ಕಾರ್ಯಕ್ರಮಕ್ಕೆ ಶಾಸಕರು ಹಾಗೂ ಅಧಿಕಾರಿ ಮಿತ್ರರು ಸಹಕಾರ ನೀಡಿದ್ದಾರೆ ಹಾಗೂ ನಮ್ಮ ಸಮುದಾಯದ ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಮಾಡಬೇಕು ಅವರಿಗೆ ಸ್ಫೂರ್ತಿ ನೀಡಲು ಹತ್ತನೇಯ ತರಗತಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ಮಕ್ಕಳಿಗೆ ಅಭಿನಂದನೆ ಕಾರ್ಯಮವನ್ನು ಆಯೋಜನೆ ಮಾಡಲಾಗಿದೆ. ಯಾವುದೇ ಸಂದರ್ಭ ಬಂದರು ನಾವೆಲ್ಲ ಒಗ್ಗಟ್ಟಾಗಿ ಮುಂದೆ ಸಾಗೋಣ…
ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ : 10 ಕೋಟಿಯ ಪಟ್ಟಣ ಪಂಚಾಯತಿ ಪ್ರಾಜೇಕ್ಟ್ ಬಗ್ಗೆ ನನ್ನ ಗಮನಕ್ಕೆ ಏಕೆ ತಂದಿಲ್ಲ. ಟೌನ್ ನಲ್ಲಿ ಏನೇ ಸಮಸ್ಯೆ ಇದ್ರು ನನ್ನ ಗಮನಕ್ಕೆ ಎಂದಾದ್ರು ತಂದಿದೀರಾ. ಪಪಂಯನ್ನ ಪುರಸಭೆಯನ್ನಾಗಿ ಮಾಡಿರುವ ಪ್ರಸ್ತಾವನೆ ಯಾವ ಹಂತದಲ್ಲಿದೆ ನಿಮಗೆ ಗೊತ್ತಾ. ಅಭಿವೃದ್ದಿಯ ವಿಚಾರದಲ್ಲಿ ನಿರ್ಲಕ್ಷ ಮಾಡಿದ್ರೇ ನಿನ್ನನ್ನ ಅಮಾನತು ಮಾಡಿ ಮನೆಗೆ ಕಳಿಸ್ತೀನಿ ಎಂದು ಪಪಂ ಮುಖ್ಯಾಧಿಕಾರಿ ಕೆ.ಎಸ್.ಉಮೇಶ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದರು. ಕೊರಟಗೆರೆ ಪಟ್ಟಣದ ಪಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಪಂಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕೊರಟಗೆರೆ ಕ್ಷೇತ್ರದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಲಂಬೋರ್ಡ್ನಿಂದ ನಿವೇಶನ ರಹಿತರಿಗೆ ನೀಡುವ ಕಾಮೇನಹಳ್ಳಿಯ ವಸತಿ ಯೋಜನೆಯ ಕಥೆ ಏನಾಗಿದೆ. ಪೌರಕಾರ್ಮಿಕರಿಗೆ ನಿರ್ಮಾಣ ಮಾಡಿರ… ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಹಿಂದಿನ ಕಾಲದಲ್ಲಿ ಪರಿಸರದಲ್ಲಿ ಪ್ರಾಣಿ ಪಕ್ಷಿ ಕೀಟಗಳು ಹೇರಳವಾಗಿದ್ದವು. ತಂತ್ರಜ್ಞಾನ ಬಳಕೆ ಹೆಚ್ಚಿದಂತೆ ಕಾಡು, ವನ್ಯಜೀವಿ ಸಂತತಿ ನಶಿಸುತ್ತಿದೆ. ಎಷ್ಟೋ ಪ್ರಭೇದಗಳು ಈಗಾಗಲೇ ಸಂಪೂರ್ಣ ನಾಶಹೊಂದಿವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪರಿಸರ ವಿಜ್ಞಾನ ವಿಭಾಗ ಸೋಮವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರ ಸಂರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಮುಂದಿನ ಪೀಳಿಗೆಗೆ ನೀರು, ಗಾಳಿ, ಬೆಳಕು, ಮಣ್ಣು ಮುಂತಾದ ಮೂಲಭೂತ ಘಟಕಗಳನ್ನು ಉಳಿಸಬೇಕು. ಇಲ್ಲವಾದರೆ ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ ಎಂದರು. ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಕರ್ನಾಟಕ ಹಾಗೂ ಇತರೆ ರಾಜ್ಯಗಳಲ್ಲಿ ನೈಸರ್ಗಿಕ ಮತ್ತು ಮಾನವ ನಿರ್ಮಿತ ಜೌಗು ಪ್ರದೇಶಗಳನ್ನು ಉಳಿಸುವ ಬಗ್ಗೆ ಪಠ್ಯದಲ್ಲಿ ಇದ್ದರೂ ಕೂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಪರಿಸರದ ಮಾಹಿತಿಯೇ ಸರಿಯಾಗಿ ಇರುವುದಿಲ್ಲ ಎಂಬುದು ಬೇಸರದ ಸಂಗತಿ. ನಮ್ಮ ಸುತ್ತಮುತ್ತಲಿನ ಅಮಾನಿಕೆರೆ,…
ತುಮಕೂರು: ಜಿಲ್ಲೆ ಕೊರಟಗೆರೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಶೇ.100 ರಷ್ಟು ತಲುಪಿಸುವಂತೆ ಅಧಿಕಾರಿಗಳು ಸತತ ಶ್ರಮವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದೇ ರೀತಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿನ ಅರ್ಹ ರೈತರಿಗೆ ವಸತಿ ಯೋಜನೆಯಡಿ ನಿವೇಶನಗಳನ್ನು ವಿಂಗಡಿಸಿ ವಿತರಿಸುವ ಕೆಲಸ ಹೆಚ್ಚು ಹೆಚ್ಚು ಆಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುವ ಮೂಲಕ ಬಡವರಿಗೆ ಮನೆ ನೀಡಲು ಶ್ರಮಿಸಬೇಕಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರಟಗೆರೆ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಉತ್ತಮ ಕೆಲಸಗಳು ಆಗುತ್ತಿವೆ. ಇದು ಸಂತೋಷದ ವಿಷಯ ಎಂದು ಸಚಿವರು, ಅರ್ಹ ಬಡ ಜನತೆಗೆ ಸರ್ಕಾರದ ಸವಲತ್ತುಗಳನ್ನು ನೀಡುವಲ್ಲಿ ಅನಗತ್ಯ…