Subscribe to Updates
Get the latest creative news from FooBar about art, design and business.
- ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
Author: admin
ಚೇಳೂರು: ಚೇಳೂರಿನ ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ನವೆಂಬರ್ 10 ರಂದು ನಡೆಯಲಿದೆ. ಅಂದು ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ, ರುದ್ರಾಭಿಷೇಕ ನಡೆದು ಸಂಜೆ ಲಕ್ಷದೀಪೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಗವಿಮಠದ ಚಂದ್ರಶೇಖರಸ್ವಾಮೀಜಿ, ಬೆಳ್ಳಾವಿಯ ಕಾರದಮಠದ ಕಾರದವೀರಬಸವ ಸ್ವಾಮೀಜಿ ತೆವೆಡೆಹಳ್ಳಿ ಗದ್ದಿಗೆಮಠದ ಗೋಸಲಚನ್ನಬಸವೇಶ್ವರ ಸ್ವಾಮೀಜಿ, ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಈಶ್ವರಪ್ಪ ಕೇಂದ್ರ ಸಚಿವ ವಿ. ಸೋಮಣ್ಣ,ಶಾಸಕ ಎಸ್.ಆರ್. ಶ್ರೀನಿವಾಸ್, ಹಾಲು ಒಕ್ಕೂಟದ ನಿರ್ದೇಶಕಿ ಭಾರತಿಶ್ರೀನಿವಾಸ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ, ಮುಖಂಡರಾದ ಪಟೇಲ್ ಟೇಶ್, ದಿಲೀಪ್ ಕುಮಾರ್, ನಾಗರಾಜು ಹಾಗೂ ಇತರರು ಭಾಗವಹಿ ಸುವರು ದೀಪೋತ್ಸವಕ್ಕೆ ಬಂದಂತಹ ಭಕ್ತಾದಿಗಳಿಗೆ ಸೇವಾ ಸಮಿತಿಯೊಂದಿಗೆ ನಂಜುಂಡಪ್ಪ, ಸುನಂದಮ್ಮ ಇವರಿಂದ ದಾಸೋಹವನ್ನು ಏರ್ಪಡಿಸಲಾಗಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತದ ವಿದ್ಯಾರ್ಥಿ ವೇತನ ಪಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳ ಆಧಾ ಆಧಾರಿತ ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ ಎಂದು ತುಮಕೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ಬಯೋಮೆಟ್ರಿಕ್ ಇ–ದೃಢೀಕರಣಕ್ಕೆ ಒಳಪಡದೇ ಇದ್ದಲ್ಲಿ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತ ಪಡೆಯುವಲ್ಲಿ ವಂಚಿತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ತಾಲ್ಲೂಕಿನ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ನವೆಂಬರ್ 15ರೊಳಗಾಗಿ ಸಹಾಯಕ ನಿರ್ದೇಶಕ(ಗ್ರೇಡ್–1)ರ ಕಚೇರಿ, ತುಮಕೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಇ–ದೃಢೀಕರಣವನ್ನು ಮಾಡಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 10.50 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಹೆಲಿಪ್ಯಾಡ್ ಗೆ ಆಗಮಿಸುವರು. ನಂತರ ತುಮಕೂರು ತಾಲ್ಲೂಕು ಹೆತ್ತೂರು ಹೋಬಳಿ ಬಿದರೆಕಟ್ಟೆ ಮಾಕನಹಳ್ಳಿ ಗ್ರಾಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.15 ಗಂಟೆಗೆ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಎಸ್.ಎಲ್.ಎನ್. ಕನ್ವೆನ್ಸನ್ ಹಾಲ್ ಕಲ್ಯಾಣ ಮಂಟಪದ ಉದ್ಘಾಟನೆ ಹಾಗೂ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು. ತದನಂತರ ಮಧ್ಯಾಹ್ನ 2.15 ಗಂಟೆಗೆ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್‌ನಿಂದ ರಸ್ತೆ ಮೂಲಕ ಹೊರಟು 2.30 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ತುಮಕೂರು ಜಿಲ್ಲಾ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ತುಮಕೂರು ತಾಲ್ಲೂಕು ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 30 ಎಂ.ಎಲ್.ಡಿ. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ ಉದ್ಘಾಟನೆ(ವರ್ಚುಯಲ್), ತುಮಕೂರು ನಗರದ 2ನೇ ಹಂತದ…
ತುಮಕೂರು: ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು. ಶಾಲಾ ಶಿಕ್ಷಣ ಇಲಾಖೆ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಯಿತು. ಜಿ.ಪಂ.ನಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, `ಜಿಲ್ಲೆಯ ಇಬ್ಬರು ಉಪನಿರ್ದೇಶಕರ ಕೆಲಸದ ಬಗ್ಗೆ ಸಮಾಧಾನವಿಲ್ಲ. ನಿಮ್ಮ ಕಾರ್ಯವೈಖರಿ ಪರಾಮರ್ಶೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು’ ಎಂದು ಹೇಳಿದರು. ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗುರಿ ನಿಗದಿಪಡಿಸುವಂತೆ ಸೂಚಿಸಿದರು. ಕಳೆದ ಸಭೆಯಲ್ಲಿ ಫಲಿತಾಂಶ ಹೆಚ್ಚಳ, ಚಿಕ್ಕನಾಯನಹಳ್ಳಿ ತಾಲ್ಲೂಕಿನ ಮಾದರಿ ಅಳವಡಿಕೆ ಬಗ್ಗೆ ನಿರ್ದೇಶಿಸಲಾಗಿತ್ತು. ಆದರೆ ಅನುಪಾಲನಾ ವರದಿಯಲ್ಲಿ ಈ ಬಗ್ಗೆ ಯಾವುದೇ ವಿಚಾರ ಪ್ರಸ್ತಾಪಿಸಿಲ್ಲ. ಫಲಿತಾಂಶ ಹೆಚ್ಚಳಕ್ಕೆ ಯಾವ ಕ್ರಮಗಳನ್ನೂ ತೆಗೆದುಕೊಂಡಂತೆ ಕಾಣುತ್ತಿಲ್ಲ ಎಂದು ಪ್ರಶ್ನಿಸಿದರು. ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ. ಅವರ ಮೇಲೆ ಅಧಿಕಾರಿಗಳಿಗೆ ನಿಯಂತ್ರಣ ಇಲ್ಲವಾಗಿದೆ ಎಂದು ಕುಟುಕಿದರು. ಶಾಸಕ ಬಿ.ಸುರೇಶ್‌ಗೌಡ, ಸಿ.ಬಿ.ಸುರೇಶ್ ಬಾಬು…
ತುಮಕೂರು: ಜಮೀನಿನ ಖಾತೆ ಬದಲಾವಣೆಗೆ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಎಂಬುವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ.ಯೋಗೀಶ್ ತಮ್ಮ ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನು ಅವರ ತಂದೆ ಹೆಸರಿಗೆ ಖಾತೆ ಬದಲಾವಣೆ ಮಾಡಿಸಲು ಮಂಜುನಾಥ ಬಳಿ ಹೋಗಿದ್ದರು. ಇದಕ್ಕಾಗಿ ಮಂಜುನಾಥ 10 ಸಾವಿರ ಲಂಚ ಕೇಳಿದ್ದರು. ಯೋಗೀಶ್ ಹಣ ನೀಡಿದ್ದರು. ಮತ್ತೆ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡಲು ಇಷ್ಟವಿಲ್ಲದ ಯೋಗೀಶ್ ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಹತ್ತಿರ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಜುನಾಥ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಕೆ.ಎಂ.ಸಂತೋಷ್ ನೇತೃತ್ವದಲ್ಲಿ ಇನ್ಸ್ ಸ್ಪೆಕ್ಟರ್ ಗಳಾದ ಬಿ.ಮೊಹಮ್ಮದ್ ಸಲೀಂ, ಕೆ.ಸುರೇಶ, ಶಿವರುದ್ರಪ್ಪ ಮೇಟಿ, ಟಿ.ರಾಜು…
ಬೀದರ್: ದೇವರ ದರ್ಶನ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಕಾರು ಮತ್ತು ಡಿಟಿಡಿಸಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಕಾಶಿನಾಥ, ಪ್ರತಾಪ ಎಂಬುವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನಾಥಪುರ ಗ್ರಾಮದವರು. ಕಾರಿನಲ್ಲಿದ್ದ ಐವರಲ್ಲಿ ನವೀನ(25), ರಾಚಪ್ಪ(45) ಹಾಗೂ ನಾಗರಾಜ (40) ಎಂದು ಕುಟುಂಬದ ಮೂಲದಿಂದ ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು, ವಾಹನ ಎರಡೂ ನುಜ್ಜುಗುಜ್ಜಾಗಿವೆ. ತೆಲಂಗಾಣದಿಂದ ಕಲಬುರಗಿಯ ಜಿಲ್ಲೆಯ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಮುಗಿಸಿಕೊಂಡು ಹಿಂದುರುಗುವ ವೇಳೆ ಹುಮನಾಬಾದ್ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…
ತುಮಕೂರು: ಮರಿದಾಸಹಳ್ಳಿ ಪಂಚಾಯಿತಿ , ತಿಪ್ಪಯನದುರ್ಗ ಎಂಬ ಗ್ರಾಮದಲ್ಲಿ ಮಣ್ಣು ಹಗರಣ ಆರೋಪ ಕೇಳಿ ಬಂದಿದ್ದು, ಟಿಪ್ಪರ್ ಹಾಗೂ ಜೆಸಿಬಿ ಸಹಿತ ರಾಜಾರೋಷವಾಗಿ ಅಕ್ರಮವಾಗಿ ಮಣ್ಣು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಣ್ಣು ಯಾಕೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಗ್ರಾಮಸ್ಥರು ಪ್ರಶ್ನಿಸಿದ ವೇಳೆ ಶಾಸಕ ಹೆಚ್. ವಿ ವೆಂಕಟೇಶ್ ಅವರ ಹೆಸರು ಹೇಳಿ ದಬ್ಬಾಳಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಗ್ರಾಮದ ಪಿಡಿಓ ಅಧಿಕಾರಿಗಳಿಗೆ ಕರೆ ಮಾಡಿದರೆ ಅವರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಗ್ರಾಮದಲ್ಲಿ ಪ್ರತಿಬಾರಿಯೂ ಇದೇ ರೀತಿಯ ಘಟನೆಗಳು ನಡೆಯುತ್ತಿದೆ. ಅಕ್ರಮವಾಗಿ ಮಣ್ಣು ಸಾಗಿಸಿದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಶಾಸಕ ಹೆಚ್.ವಿ. ವೆಂಕಟೇಶ್ ಅವರು ಹಾಗೂ ತಹಶೀಲ್ದಾರ್ ಅವರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಮೇಟಿಯವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ. ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೇಟಿಯವರು ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು. ಜನರೊಂದಿಗಿನ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶಗಳು ಮತ್ತು ಅಶ್ಲೀಲ ವಿಡಿಯೋಗಳನ್ನು ಕಳುಹಿಸುವ ಮೂಲಕ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ನವೀನ್ ಕೆ. ಎಂದು ಗುರುತಿಸಲಾಗಿದ್ದು, ವೈಟ್ ಫೀಲ್ಡ್‌ನಲ್ಲಿರುವ ಕಂಪನಿಯೊಂದರಲ್ಲಿ ಡೆಲಿವರಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರಿಗೆ ನವೀನ್ ಝೆಡ್ ಎಂಬ ಫೇಸ್ ಬುಕ್ ಬಳಕೆದಾರ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಆಕೆ ಆತನ ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿಕೊಳ್ಳದಿದ್ದರೂ, ಆರೋಪಿ ಮೆಸೆಂಜರ್ ಮೂಲಕ ಕಳೆದ ಮೂರು ತಿಂಗಳಿನಿಂದ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ನಟಿ ಅವನನ್ನು ಬ್ಲಾಕ್ ಮಾಡಿದ ನಂತರ, ಆ ವ್ಯಕ್ತಿ ಹಲವಾರು ಹೊಸ ನಕಲಿ ಖಾತೆಗಳನ್ನು ಸೃಷ್ಟಿಸಿ ತನ್ನ ಖಾಸಗಿ ಭಾಗಗಳನ್ನು ಒಳಗೊಂಡಂತೆ ಹಲವಾರು ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ್ದಾನೆ. ಪದೇ ಪದೆ ಎಚ್ಚರಿಕೆ ನೀಡಿದ್ದರೂ ಕಿರುಕುಳ ಮುಂದುವರೆದಿದೆ ಎಂದು ಅವರು ಆರೋಪಿಸಿದ್ದಾರೆ. ನವೆಂಬರ್ 1 ರಂದು ಆರೋಪಿ ಮತ್ತೆ ಆಕೆಗೆ ಸಂದೇಶ ಕಳುಹಿಸಿದಾಗ, ಮಹಿಳೆ ಇಲ್ಲಿನ ರೆಸ್ಟೋರೆಂಟ್…
ಬೆಂಗಳೂರು: ಭಾರತದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪರಿಶಿಷ್ಟ ಪಂಗಡಗಳನ್ನು ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಚೇರಿ ‘ಜಗನ್ನಾಥ ಭವನ’ದಲ್ಲಿ ನಡೆದ ಬಿಜೆಪಿಯ ಎಸ್ ಟಿ ಮೋರ್ಚಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, 2014 ರಿಂದ ಸಮುದಾಯವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಬುಡಕಟ್ಟು ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಯೋಜನೆಗಳ ಬಗ್ಗಮ ಮಾಹಿತಿ ನೀಡಿದರು. ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು ‘ಜನಜಾತಿಯ ಗೌರವ್ ದಿವಸ್’ ಎಂದು ಘೋಷಿಸುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸಿದರು. ಇದು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ಜನಾಂಗದವರ ಪಾತ್ರವನ್ನು ಮತ್ತು ಸ್ಥಳೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ ಅವರ ಪ್ರಯತ್ನಗಳನ್ನು ಅಂಗೀಕರಿಸುತ್ತದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…