Author: admin

ಮುಂಬೈ: ರಿಯಾಲಿಟಿ ಶೋವೊಂದರಲ್ಲಿ ಹಾಸ್ಯ ನಟನೊಬ್ಬ ತನ್ನ ಪತ್ನಿಯನ್ನೇ ಪೈಲ್ವಾನ್ ಜೊತೆ ಕುಸ್ತಿ ಮಾಡಲು ಅಖಾಡಕ್ಕೆ ಇಳಿಸಿದ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹೌದು, ಪ್ರಸಿದ್ಧ ‘ಲಾಫರ್ ಶೆಫ್ಸ್ ಅನ್‌ಲಿಮಿಟೆಡ್ ಎಂಟರ್‌ಟೈನ್‌ಮೆಂಟ್’ (Laughter Chefs) ರಿಯಾಲಿಟಿ ಶೋನಲ್ಲಿ ಈ ಸ್ವಾರಸ್ಯಕರ ಘಟನೆ ನಡೆದಿದೆ. ಇತ್ತೀಚೆಗೆ ಪ್ರಸಾರವಾದ ‘ಲಾಫರ್ ಶೆಫ್ಸ್ ಅಖಾಡ’ ವಿಶೇಷ ಎಪಿಸೋಡ್‌ಗೆ ದೇಶದ ಖ್ಯಾತ ಪೈಲ್ವಾನರು ಆಗಮಿಸಿದ್ದರು. ಶೋನಲ್ಲಿ ಸ್ಪರ್ಧಿಗಳು ಅಡುಗೆ ಮಾಡುವುದರ ಜೊತೆಗೆ ಮಸ್ತಿ-ತಮಾಷೆಯನ್ನೂ ಮಾಡುತ್ತಾರೆ. ಈ ವೇಳೆ ಬಂದಿದ್ದ ಪೈಲ್ವಾನರು ಸ್ಪರ್ಧಿಗಳಿಗೆ ಕಲ್ಲಿನಲ್ಲಿ ಚಟ್ನಿ ಅರೆದು ಕೊಟ್ಟು ಅಡುಗೆಗೆ ಸಹಾಯ ಕೂಡ ಮಾಡಿದ್ದಾರೆ. ಕಾರ್ಯಕ್ರಮದ ಮಧ್ಯೆ ಪೈಲ್ವಾನರ ಜೊತೆ ಕುಸ್ತಿ ಆಡುವ ಸವಾಲು ಎದುರಾದಾಗ, ಪ್ರಖ್ಯಾತ ಹಾಸ್ಯ ನಟ ಕೃಷ್ಣ ಅಭಿಷೇಕ್ (Krushna Abhishek) ತನ್ನ ಪತ್ನಿ ಕಾಶ್ಮೇರಾ ಶಾ (Kashmera Shah) ಅವರನ್ನು ಕುಸ್ತಿ ಮಾಡಲು ಮುಂದೆ ನೂಕಿದ್ದಾರೆ. ಗಂಡನ ಮಾತಿನಂತೆ ಅಖಾಡಕ್ಕಿಳಿದ ಕಾಶ್ಮೇರಾ, ನೇರವಾಗಿ ಪೈಲ್ವಾನನ…

Read More

ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗುವುದು ತಮ್ಮ ಬಹುಕಾಲದ ಕನಸಾಗಿದ್ದರೂ, ರಾಜಕೀಯ ಸನ್ನಿವೇಶಗಳಿಂದಾಗಿ ಅದು ಹೇಗೆ ಕೈಗೂಡಲಿಲ್ಲ ಎಂಬುದನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ. “2013ರ ಚುನಾವಣೆಯಲ್ಲಿ ನಾನು ಸೋತಿದ್ದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ” ಎಂದು ಪರಮೇಶ್ವರ್ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ. “2018ರಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವತ್ತು ನನ್ನನ್ನೂ ಮುಖ್ಯಮಂತ್ರಿ ಮಾಡಬಹುದಿತ್ತು, ಆದರೆ ಆ ಅವಕಾಶ ಸಿಗಲಿಲ್ಲ” ಎಂದು ಅವರು ಹೇಳಿದ್ದಾರೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳಲ್ಲೂ ತಮಗೆ ಸಿಎಂ ಹುದ್ದೆಯ ನಿರೀಕ್ಷೆ ಇತ್ತು, ಆದರೆ ವಿವಿಧ ರಾಜಕೀಯ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ಪಕ್ಷದ ಹೈಕಮಾಂಡ್ ಜತೆಗಿನ…

Read More

ತುಮಕೂರು: ಸರ್ಕಾರದ ಅಧಿಕೃತ ಜಾಹೀರಾತುಗಳಲ್ಲಿ ತಮ್ಮ ಭಾವಚಿತ್ರವನ್ನು ಕೈಬಿಟ್ಟಿರುವ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ಈ ಲೋಪವಾಗಿದ್ದರೆ ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈಗ ಸರ್ಕಾರದ ಕೆಲಸ ಮಾಡುವುದು ನಮಗೆ ಮುಖ್ಯವೇ ಹೊರತು, ಫೋಟೋ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ,” ಎಂದು ಹೇಳಿದರು. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮದಿನದ ಅಂಗವಾಗಿ ಹಿಂದುಳಿದ ವರ್ಗಗಳ ಇಲಾಖೆ ಬಿಡುಗಡೆ ಮಾಡಿದ್ದ ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಪ್ರಮುಖವಾಗಿ ಪ್ರಕಟವಾಗಿತ್ತು. ಆದರೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನೂ ಹೊಂದಿರುವ ಡಿಸಿಎಂ ಪರಮೇಶ್ವರ್ ಅವರ ಫೋಟೋ ಇರಲಿಲ್ಲ. ಈ…

Read More

ಪಾವಗಡ : ಕರ್ನಾಟಕ ರಾಜ್ಯ ದಲಿತ ಹಿಂದುಳಿದ ವರ್ಗಗಳ ಮಠಾಧೀಶರು ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಡಾ.ವಾಲ್ಮೀಕಿ ಪ್ರಸನ್ನ ನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಹಿಂದುಳಿದ ಮಠಾಧೀಶರ ಒಕ್ಕೂಟದ 20ಕ್ಕೂ ಹೆಚ್ಚು ಪೂಜ್ಯ ಗುರುಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಬೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಕೃಷ್ಣ ಯಾದವನಂದ ಸ್ವಾಮೀಜಿ, ಡಾ. ಶಾಂತವೀರ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಮಹರ್ಷಿ ವಾಲ್ಮೀಕಿ ಮೂರ್ತಿಗೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾಧ್ಯಕ್ಷ ಲೋಕೇಶ್ ಪಾಳೇಗಾರ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಗಿರಾಜು, ಮಾಜಿ ತಾ.ಪಂ ಸದಸ್ಯ ಅಂಜನ್ ನಾಯಕ, ಮಾಜಿ…

Read More

ಹುಮನಾಬಾದ್‌: ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮದಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ, ತಾಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ನಿಗದಿತ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿಗಾಗಿ ದೀರ್ಘ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ. ಕೂಡಲೇ ಚಿತ್ತಕೋಟಾ ಗ್ರಾಮಕ್ಕೆ ನಿಯಮಿತ ಸಮಯಕ್ಕೆ ಹೆಚ್ಚುವರಿ ಬಸ್‌ ಓಡಿಸಿ ಸಾರ್ವಜನಿಕರಿಗೆ ಹಾಗೂ ಶಾಲಾ–ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕದಸಂಸ ತಾಲೂಕಾಧ್ಯಕ್ಷ ರಾಹುಲ ಉದ್ದಾ, ಸಿದ್ದಾರ್ಥ ಕಾಂಬಳೆ, ಗೀತಾಬಾಯಿ, ರಮಾಬಾಯಿ, ವಿದ್ಯಾಸಾಗರ ಸಾದನೂರ, ರೇವಪ್ಪಾ ಡಾಂಗೆ, ಮಲ್ಲಮ್ಮ, ಸುವರ್ಣ ಮತ್ತಿತರರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರ ಪರವಾಗಿ ಕೆಲಸ ಮಾಡಿಕೊಡುವುದು ನಮ್ಮ ಕರ್ತವ್ಯ ಕೂಡ ಎಂದು ಎಂದು ಉಪ ಮುಖ್ಯಮಂತ್ರಿ, ಡಾ.ಜಿ.ಪರಮೇಶ್ವರ ತಿಳಿಸಿದರು. ಜಿಲ್ಲಾಡಳಿತ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶದ ವತಿಯಿಂದ ಭಾನುವಾರ ಟೌನ್‌ಹಾಲ್ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ತುಮಕೂರು ಜಿಲ್ಲೆ ವಿವಿಧೆಡೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಬಂದಿದೆ. ಈ ಸರ್ಕಾರದ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿದೆ ಎಂದರು. ಕರ್ನಾಟಕ ಇಡೀ ದೇಶದಲ್ಲೇ 25 ವರ್ಷಗಳಿಗೂ ಮುಂದಿರುವುದನ್ನು ತಾವು ಕಾಣಬಹುದು. ಬೇರೆ…

Read More

ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ ಅನುಭವದಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಿನಂತೆ ಪಕ್ಷಕ್ಕೆ ದುಡಿದಿದ್ದಾರೆ. ಇಂತಹ ಹಿರಿಯ ಜೀವಕ್ಕೆ ಸಚಿವ ಸ್ಥಾನ ನೀಡುವಂತೆ ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಂಜನ್ ಕುಮಾರ್ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಯುವ ಕಾಂಗ್ರೆಸ್ ಘಟಕದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಯಚಂದ್ರ ಅವರಿಗೆ ಈವರೆಗೆ ಕಾಂಗ್ರೆಸ್ ಪಕ್ಷದ ಸರ್ಕಾರಗಳಲ್ಲಿ ಕಾನೂನು ಮತ್ತು ಸಂಸದೀಯ, ಸಣ್ಣ ನೀರಾವರಿ, ಕೃಷಿ, ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಅನುಭವ ಇದೆ ಎಂದರು. ಸಿದ್ದರಾಮಯ್ಯ ಅವರ ಈ ಹಿಂದಿನ 5 ವರ್ಷಗಳ ಸರ್ಕಾರದ ಅವಧಿಯಲ್ಲಿ 29 ಕ್ಕೂ ಹೆಚ್ಚು ಸಮಿತಿಗಳ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿ ಇಡೀ ರಾಜ್ಯದಲ್ಲಿ ಓರ್ವ ಉತ್ತಮ ಶಾಸಕ ಎಂದು ಸರ್ಕಾರದಿಂದಲೇ ಪ್ರಶಸ್ತಿಯನ್ನೂ ಪಡೆದು ಅಭಿನಂದಿಸಲಾಗಿದೆ. ಇಂತಹ ಅನುಭವಿ ಶಾಸಕರಿಗೆ 20 ಮಂದಿಗೆ ಸಚಿವ…

Read More

ಮಧುಗಿರಿ : ಮುಂಗಾರು ಆರಂಭಗೊಂಡ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಿಂದ ನೀಡಲಾಗುವ ಬಿತ್ತನೆ ಬೀಜವನ್ನು ವಿತರಿಸುತ್ತಿದ್ದು, ರೈತರು ಸದುಪಯೋಗ ಮಾಡಿಕೊಳ್ಳಿ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ತಾಲೂಕಿನ ಮಿಡಿಗೇಶಿ ಹೋಬಳಿಯ ಹೊಸಕರೆ ಗ್ರಾಮದಲ್ಲಿ 2026–27 ನೇ ಸಾಲಿನ ಮುಂಗಾರು ಹಂಗಾಮಿನ ರಾಷ್ಟ್ರೀಯ ಖಾದ್ಯತೈಲ ಅಭಿಯಾನ ಎಣ್ಣೆಕಾಳು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸದ್ಯ ಮಳೆ ಆರಂಭವಾಗಿದೆ. ವಾತಾವರಣವನ್ನು ಸೂಕ್ಷ್ಮವಾಗಿ ಗಮನಿಸಿ ಬೀಜ ಬಿತ್ತನೆ ಮಾಡಿ ಎಂದರು. ಕೃಷಿ ಭೂಮಿಯನ್ನು ಎಂದಿಗೂ ಮಾರಾಟ ಮಾಡಬೇಡಿ. ಮಣ್ಣು ಸಬಲೀಕರಣ ಮಾಡಿ ರೈತರು ಬೇಸಾಯ ಕೈಗೊಳ್ಳಬೇಕು. ಹಾಗಾಗ ಕೃಷಿ ಅಧಿಕಾರಿಗಳ ಸಲಹೆ ಪಡೆದು ಮುಂದುವರೆಯಲು ಸೂಚಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜೆಡಿ ಲಕ್ಷ್ಮಣ್ ಕಲ್ಲಣವ‌ರ್, ಉಪ ಕೃಷಿ ನಿರ್ದೇಶಕ ಚಂದ್ರಕುಮಾರ್, ಸಾಹಾಯಕ ಕೃಷಿ ನಿರ್ದೇಶಕ ಚನ್ನಕೇಶವಮೂರ್ತಿ, ಕೃಷಿ ವಿಜ್ಞಾನಿ ಈರೇಹಳ್ಳಿ ಜಗದೀಶ್, ಪ್ರಶಾಂತ್, ಕೃಷಿಕ ಸಮಾಜದ ಅಧ್ಯಕ್ಷ ಗುಟ್ಟೆ ರಮೇಶ್, ಕಾಂಗ್ರೆಸ್ ಮುಖಂಡರು, ರೈತರು ಜೊತೆಗಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೊರಟಗೆರೆ: ತಾಲ್ಲೂಕಿನ ಕಸಬ ಹೋಬಳಿಯ ಬೋಡ ಬಂಡೇನಹಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ತಾಯಿ ದೇವಸ್ಥಾನಕ್ಕೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮದ ಆರಾಧ್ಯ ದೈವವಾಗಿರುವ ಶ್ರೀ ಚೌಡೇಶ್ವರಿ ದೇವಸ್ಥಾನವು ಶಿಥಿಲಾವಸ್ಥೆಗೆ ತಲುಪಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರು ದೇವಸ್ಥಾನದ ಪುನರ್‌ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಪ್ರಸ್ತುತ ದೇವಸ್ಥಾನದ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಆರ್ಥಿಕ ಕೊರತೆಯಿಂದ ಕಾಮಗಾರಿ ಮುಂದುವರಿಸಲು ದಾನಿಗಳ ಸಹಕಾರ ಅಗತ್ಯವಾಗಿದೆ ಎಂದು ಗ್ರಾಮಸ್ಥರು ಹಾಗೂ ಮುಖಂಡರು ಅನಿಲ್ ಕುಮಾರ್ ಅವರ ಗಮನಕ್ಕೆ ತಂದರು. ದೇವಸ್ಥಾನದ ಕಾಮಗಾರಿ ಹಾಗೂ ಪ್ರಗತಿಯನ್ನು ವೀಕ್ಷಿಸಿದ ಅನಿಲ್ ಕುಮಾರ್ ಅವರು, ಗ್ರಾಮದ ಜನರ ಭಕ್ತಿ ಹಾಗೂ ಶ್ರಮವನ್ನು ಶ್ಲಾಘಿಸಿದರು. ನಂತರ ಮಾತನಾಡಿದ ಅವರು, “ಇತಿಹಾಸ ಪ್ರಸಿದ್ಧ ಈ ದೇವಸ್ಥಾನವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಪುನರ್‌ ನಿರ್ಮಾಣ ಕಾರ್ಯಕ್ಕೆ ನನ್ನಿಂದ…

Read More

ತುಮಕೂರು: ಸಮರ್ಥ್ ಫೌಂಡೇಷನ್ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ವತಿಯಿಂದ ಕೌಶಲ್ಯ ತರಬೇತಿ ಕಾರ್ಯಕ್ರಮದಡಿಯಲ್ಲಿ 18-40 ವರ್ಷ ವಯಸ್ಸಿನ ಲಿಂಗಾಯಿತ ಹಾಗೂ ಒಕ್ಕಲಿಗ ವರ್ಗದ ಯುವಕ ಮತ್ತು ಯುವತಿಯರಿಂದ ಉಚಿತ ಕಂಪ್ಯೂಟರ್ ಹಾಗೂ ಟೈಲರಿಂಗ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕನಿಷ್ಠ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಫೋಟೊ ದಾಖಲಾತಿಗಳೊಂದಿಗೆ ನಗರದ ವಿವೇಕಾನಂದ ರಸ್ತೆ ಜೈನ್ ಮಂದಿರದ ಹಿಂಭಾಗ, ಸದ್ಗುರು ಭವನ, ಸಮರ್ಥ್ ಫೌಂಡೇಷನ್ ಅಥವಾ ದೂ. ಸಂ. 8050583608, 9902717910, 7795617408, 9986824210 ಸಂಪರ್ಕಿಸಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More