Subscribe to Updates
Get the latest creative news from FooBar about art, design and business.
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
- ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
Author: admin
ತುಮಕೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo—Jo—Kit ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ…
ಛತ್ರಪತಿ ಸಂಭಾಜಿನಗರ: ಕಬ್ಬು ತುಂಬಿದ್ದ ಟ್ರಕ್ ಪಲ್ಟಿಯಾಗಿ ಆರು ಕಾರ್ಮಿಕರು ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಟ್ರಕ್ ಕನ್ನಡ್ ನಿಂದ ಪಿಶೋರ್ ಗೆ ಹೋಗುತ್ತಿದ್ದಾಗ ಪಿಶೋರ್ ಘಾಟ್ ನಲ್ಲಿ ಈ ಅಪಘಾತ ಸಂಭವಿಸಿದೆ. ಪಿಶೋರ್ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ. ಟ್ರಕ್ ನಲ್ಲಿ ಸುಮಾರು 17 ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಬ್ಬಿನ ರಾಶಿಯ ಅಡಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವುದು ಕಂಡುಬಂದಿದ್ದು, ಚಿಕಿತ್ಸೆಯ ಸಮಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ , ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ. ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ…
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು. ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಅಹವಾಲು ನೀಡಿದ್ದರು. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಕುಡಿಯುವ ನೀರಿನ ಸಮಸ್ಯೆಗೆ ತುರ್ತಾಗಿ ಪರಿಹಾರ ಒದಗಿಸಬೇಕೆಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಾಂತರಾಜು ಅವರಿಗೆ ಸೂಚನೆ ನೀಡಿದರು. ನಂತರ ಜಾನುವಾರುಗಳ ಮೇವಿನ ಬಗ್ಗೆ ಆಲಿಸಿದ ಅವರು ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರಲ್ಲದೆ ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿಬರಲು ಬಸ್…
ತುಮಕೂರು: ಮಹಿಳಾ ಪ್ರಯಾಣಿಕರೊಬ್ಬರು ತುಮಕೂರಿನಲ್ಲಿ ಆಟೋದಲ್ಲಿ ಬಿಟ್ಟು ಹೋಗಿದ್ದ ಸುಮಾರು ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಇದ್ದ ಬ್ಯಾಗನ್ನು ಆಟೋ ಚಾಲಕ ಪೊಲೀಸ್ ಠಾಣೆಗೆ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಾಯಿತ್ರಿ ಎಂಬುವರು ತುಮಕೂರು ನಗರದಲ್ಲಿ ನಡೆದ ಕಾಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ತುಮಕೂರಿನ ಕುಂದೂರು ಕ್ರಾಸ್ ಬಳಿ ಆಟೋದಲ್ಲಿ ಬಂದು ತುಮಕೂರು ನಗರ ಬಸ್ ನಿಲ್ದಾಣಕ್ಕೆ ಬಂದು ಇಳಿದಿದ್ದರು. ಆಟೋದಲ್ಲಿ ಬ್ಯಾಗ್ ಇರಿಸಿದ್ದರು. ಆದ್ರೆ ಇಳಿದ ತಕ್ಷಣ ಆಟೋ ಮುಂದೆ ಹೋಯಿತು. ನಂತರ ನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಪೊಲೀಸರು ಸಿಸಿ ಟಿವಿ ಕ್ಯಾಮೆರಾ ದಲ್ಲಿ ಆಟೋದ ಚಲನವಲನ ನೋಡಿ ಗುರುತಿಸಿದರು. ಅಲ್ಲದೆ ಅಷ್ಟೊತ್ತಿಗೆ ಆಗಲೇ ಆಟೋ ಚಾಲಕನೇ ಪೊಲೀಸ್ ಠಾಣೆಗೆ ಬಂದು ಬ್ಯಾಗನ್ನು ತಂದು ಕೊಟ್ಟಿದ್ದಾರೆ. ಆಟೋ ಚಾಲಕ ರವಿಕುಮಾರ್, ಬ್ಯಾಗನ್ನು ವಾಪಸ್ ಮಹಿಳೆಗೆ ಕೊಡಲು ತುಮಕೂರು ನಗರದಲ್ಲಿ ಹುಡುಕಾಡಿದ್ದಾರೆ. ಆದ್ರೆ ಅವರು ಸಿಗಲಿಲ್ಲ, ಬ್ಯಾಗ್ ನಲ್ಲಿ ಸುಮಾರು 4 ಲಕ್ಷ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರನ್ಯಾ ರಾವ್ ಕೆಲವು ಕಾಂಗ್ರೆಸ್ ಸಚಿವರಿಗೆ ಕರೆ ಮಾಡಿ ಬಚಾವ್ ಆಗಲು ಪ್ರಯತ್ನಿಸಿರುವುದಾಗಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ರನ್ಯಾ ರಾವ್ ಕೇಸ್ ಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರು ಆಕೆಯನ್ನು ರಕ್ಷಿಸಲು ಪ್ರಭಾವ ಬೀರುತ್ತಿದ್ದಾರೆ. ಸಾರ್ವಜನಿಕವಾಗಿಯೂ ಮಾತನಾಡುತ್ತಿದ್ದಾರೆ. ಆದರೆ ಪ್ರಕರಣ ಸಿಬಿಐ ತೆಗೆದುಕೊಂಡ ಕಾರಣ, ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವುದು ಮುನ್ನೆಲೆಗೆ ಬರುತ್ತದೆ ಎಂದರು. ರನ್ಯಾ ರಾವ್ ಒಡೆತನದ ಕಂಪನಿಗೆ ಸರ್ಕಾರ ಜಮೀನು ಮಂಜೂರು ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಕ್ರಿಮಿನಲ್ ಕೇಸ್ ಆಗಿದೆ. ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿ ತಪ್ಪಿದ್ದರೆ ಹೇಳಲಿ. ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳಾಗಿಲ್ಲ. ಜಮೀನು ಮಂಜೂರಾತಿ ಪ್ರಕ್ರಿಯೆ ಬೇಗ ಆಗಿದೆ ಎಂಬುದು ಇವರ ಆರೋಪ. ನಿಮ್ಮದೇ ಸರ್ಕಾರ ಇದೆ. ಜಾಗ ಮಂಜೂರಾತಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದನ್ನು ತನಿಖೆ ಮಾಡಿಸಿ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿಯಾಗಿದ್ದಾನೆ. ಪಾಂಚಜನ್ಯ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ ರಾಜ್ , ವಾರಣಾಸಿ ಸೇರಿದಂತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಈತ ಫೇಸ್ ಬುಕ್ ನಲ್ಲಿ ಜಾಹೀರಾತು ನೀಡಿ, ಜನರನ್ನು ಸೆಳೆದಿದ್ದ. ಇದನ್ನು ನಂಬಿದ ಜನರು ಆತನನ್ನು ಸಂಪರ್ಕಿಸಿದಾಗ 7 ದಿನಗಳ ಪ್ಯಾಕೇಜ್ ಗೆ ತಲಾ 49 ಸಾವಿರ ರೂಪಾಯಿಗಳನ್ನು ಪಡೆದುಕೊಂಡಿದ್ದು, 100ಕ್ಕೂ ಹೆಚ್ಚು ಜನರಿಂದ ಲಕ್ಷಾಂತರ ರೂಪಾಯಿ ಹಣಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಕೆಲವರಿಗೆ ಟಿಕೆಟ್ ಬುಕ್ ಮಾಡಿ, ನಂತರ ರದ್ದು ಮಾಡಿದ್ದಾನೆ. ರದ್ದು ಮಾಡಿದ ಬಳಿಕ ವಾಪಸ್ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ. ಇನ್ನು ಕೆಲವರಿಗೆ, ಪ್ರಯಾಗ್ ರಾಜ್ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ. ವಾಪಸ್ ಆದ…
ಬೆಂಗಳೂರು: ಮಾರ್ಚ್ 11 ಮತ್ತು 12 ರಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳು ಮತ್ತು ಕರಾವಳಿ ಪ್ರದೇಶದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದ್ದು, ಬಿಸಿಲಿನಿಂದ ತಾತ್ಕಾಲಿಕವಾಗಿ ವಿಶ್ರಾಂತಿ ದೊರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಈ ಪ್ರದೇಶದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ದೃಢಪಡಿಸಿದ್ದಾರೆ. ಇದರ ಪರಿಣಾಮವಾಗಿ, ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುವ ಸಾಧ್ಯತೆ ಇದ್ದರೂ, ಉತ್ತರ ಕರ್ನಾಟಕದಲ್ಲಿ ದೀರ್ಘಾವಧಿಯ ಬರಗಾಲ ಮುಂದುವರಿಯಲಿದೆ. ಕಲಬುರಗಿ, ಧಾರವಾಡ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಕೊಪ್ಪಳ ಸೇರಿದಂತೆ ಪ್ರದೇಶಗಳಲ್ಲಿ ಹೆಚ್ಚಿನ ತಾಪಮಾನ ಮುಂದುವರಿಯಲಿದ್ದು, ತಕ್ಷಣ ಮಳೆಯಾಗುವ ಯಾವುದೇ ಲಕ್ಷಣಗಳಿಲ್ಲ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ…
ಬೆಂಗಳೂರು: ಪುಣ್ಯಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಇತ್ಯಾದಿ ಮಾರಾಟ ಮಾಡದಂತೆ ಹಾಗೂ ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜಿಸದಂತೆ ನಿರ್ಬಂಧಿಸಲು ಸೂಕ್ತ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ನದಿ, ಸರೋವರ, ದೇವಾಲಯದ ಕೆರೆ ಮತ್ತು ಇತರ ಜಲಮೂಲಗಳಲ್ಲಿ ಜನರು ಎಸೆಯುವ ಸೋಪುಗಳು, ಶಾಂಪೂಗಳಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು, ಜಲಮೂಲಗಳಿಂದ 500 ಮೀಟರ್ ಒಳಗೆ ಈ ವಸ್ತುಗಳ ಮಾರಾಟವನ್ನು ನಿಷೇಧಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಭಕ್ತರು ಶಾಂಪೂ ಮತ್ತು ಸೋಪು ಬಳಸಿ ಸ್ನಾನ ಮಾಡಿ ಉಳಿದ ಸೋಪು ತುಂಡುಗಳು ಮತ್ತು ಶಾಂಪೂ ಪ್ಯಾಕೆಟ್ ಗಳನ್ನು ಸ್ನಾನದ ಸ್ಥಳಗಳಲ್ಲಿ ಬಿಡುತ್ತಾರೆ. ಇವೆಲ್ಲವೂ ಜಲಮೂಲಗಳಲ್ಲಿ ನೊರೆಯೊಂದಿಗೆ ಮಿಶ್ರಣಗೊಂಡು ನೀರನ್ನು ಕಲುಷಿತಗೊಳಿಸುತ್ತಿವೆ ಎಂದು ಖಂಡ್ರೆ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಕೊಪ್ಪಳ: ಜಿಲ್ಲೆಯ ಸಾಣಾಪುರ ಗ್ರಾಮದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣದ ನಂತರ ಹಂಪಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಕುಸಿತ ಕಂಡಿದೆ. ಕೊಪ್ಪಳ ಘಟನೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಒಬ್ಬರು ಸಂತ್ರಸ್ತೆ ಇಸ್ರೆಲ್ ನವರಾಗಿರುವ ಹಿನ್ನೆಲೆ ಹಲವಾರು ರಾಯಭಾರ ಕಚೇರಿಗಳು ತಮ್ಮ ದೇಶಗಳ ಪ್ರವಾಸಿಗರ ಸ್ಥಿತಿಯನ್ನು ತಿಳಿದುಕೊಳ್ಳಲು ಮುಖ್ಯಮಂತ್ರಿ ಕಚೇರಿ ಮತ್ತು ಕೊಪ್ಪಳ ಆಡಳಿತದೊಂದಿಗೆ ಸಂಪರ್ಕದಲ್ಲಿವೆ ಎಂದು ವರದಿಗಳಿಂದ ತಿಳಿದು ಬಂದಿದೆ. ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಇಸ್ರೇಲ್ನಿಂದ ಸುಮಾರು ಶೇ. 60 ರಷ್ಟು ವಿದೇಶಿ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಕಳೆದ ಎರಡು ದಿನಗಳಲ್ಲಿ, ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ 25 ಕ್ಕೂ ಹೆಚ್ಚು ಹೋಂಸ್ಟೇಗಳಿಂದ ತಮ್ಮ ಏಜೆನ್ಸಿಗಳ ಮೂಲಕ ಬುಕಿಂಗ್ ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇತರ ರಾಜ್ಯಗಳ ಪ್ರವಾಸಿಗರು ಸಹ ಹಂಪಿಗೆ ತಮ್ಮ ಭೇಟಿಯನ್ನು ರದ್ದುಗೊಳಿಸುತ್ತಿದ್ದಾರೆ ಇಲ್ಲವೇ ಮುಂದೂಡುತ್ತಿದ್ದಾರೆ. ಇಡೀ ರಾಷ್ಟ್ರವು ಸಣಾಪುರ ಅತ್ಯಾಚಾರ ಘಟನೆಯನ್ನು…