Subscribe to Updates
Get the latest creative news from FooBar about art, design and business.
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
- ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
Author: admin
ಚಿಕ್ಕಮಗಳೂರು: ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಪ್ರತಿಷ್ಠೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಸಿ ಬಳಿಯಲು ಪಿತೂರಿ ನಡೆಸಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ರೇಣುಕಾಚಾರ್ಯ ಆರೋಪಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ನಡೆದ ವೀರಶೈವ-ಲಿಂಗಾಯತ ಮಹಾ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಜಯೇಂದ್ರ ಅವರ ರಾಜಕೀಯ ಏಳಿಗೆಯನ್ನು ಯತ್ನಾಳ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ, ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಅವರ ಕೊಡುಗೆಗಳು ಅಪಾರವಾಗಿವೆ ಎಂದು ಹೇಳಿದರು. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರಿಗೆ ಇಡೀ ಲಿಂಗಾಯತ ಸಮುದಾಯದ ಬೆಂಬಲವಿರುವುದರಿಂದ ಯತ್ನಾಳ್ ಯಶಸ್ವಿಯಾಗುವುದಿಲ್ಲ, ಯತ್ನಾಳ್ ಬೇರೆಯವರ ತಾಳಕ್ಕೆ ತಕ್ಕಂತೆ ಕುಣಿಯಿುತ್ತಿದ್ದಾರೆ, ಸಮುದಾಯದ ಸ್ವಾಮೀಜಿಗಳನ್ನು “ಪೇಯ್ಡ್ ಸ್ವಾಮೀಜಿಗಳು” ಎಂದು ಕರೆದಿದ್ದಕ್ಕೆ ನಾಚಿಕೆಯಾಗಬೇಕು ಅವರಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ ಅವರ ಮೆಸರ್ಸ್ ಕ್ಸಿರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹಿಂದಿನ ಸರ್ಕಾರದ ಅವಧಿಯಲ್ಲಿ 12 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ ಎನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಮಹೇಶ್, ಕನ್ನಡ ನಟಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದ ಮೆಸರ್ಸ್ ಕ್ಸಿರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಜನವರಿ 2, 2023 ರಂದು 12 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಸಿರಾ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಈ ಭೂಮಿಯನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ 137 ನೇ ರಾಜ್ಯ ಮಟ್ಟದ ಏಕ ವಿಂಡೋ ಕ್ಲಿಯರೆನ್ಸ್ ಸಮಿತಿ (ಎಸ್ ಎಲ್ ಎಸ್‌ಡಬ್ಲ್ಯೂಸಿಸಿ) ಸಭೆಯಲ್ಲಿ ಹಂಚಿಕೆಗೆ ಅನುಮೋದಿಸಲಾಗಿದೆ ಎಂದು ಮಹೇಶ್ ಹೇಳಿದರು. ಪತ್ರಿಕಾ ಪ್ರಕಟಣೆಯ ಪ್ರಕಾರ, ಕಂಪನಿಯು 138 ಕೋಟಿ ರು. ಹೂಡಿಕೆಯೊಂದಿಗೆ ಉಕ್ಕಿನ ಟಿಎಂಟಿ ಬಾರ್‌ಗಳು, ರಾಡ್‌ಗಳು ಮತ್ತು…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಗ್ರೀನ್ ಪೀಸ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಭಾನುವಾರ ಮೆಟ್ರೋ ರೈಲಿನ ಒಳಗಡೆ ಗ್ರೀನ್ ಪೀಸ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಫಲಕ ಪ್ರದರ್ಶಿಸಿ, ಬೆಲೆ ಏರಿಕೆ ಅಸಮಾನತೆಯ ಬೆಲೆಏರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಎಂ. ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಬಂದ ಬಳಿಕ ‘ ಮೆಟ್ರೋ ಪರಿಷ್ಕೃತ ದರವನ್ನು ಹಿಂಪಡೆಯಿರಿ ಎಂಬ ಆಗ್ರಹದ ಫಲಕ ಪ್ರದರ್ಶಿಸಿದರು. ದರ ಏರಿಕೆಯಾದ ನಂತರ ಗ್ರೀನ್ ಪೀಸ್ ಇಂಡಿಯಾ ಸಮೀಕ್ಷೆ ನಡೆಸಿತ್ತು. ದರ ಏರಿಕೆಯೂ ಒಂದು ಹೊತ್ತಿನ ಊಟಕ್ಕೆ ವ್ಯಯಿಸುವ ಖರ್ಚಿಗೆ ಸಮಾನವಾಗಿದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ. 72.9 ರಷ್ಟು ಜನರು ಅಭಿಪ್ರಾಯ ತಿಳಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ್ ಪೊಲೀಸ್ ಠಾಣೆಯ ವತಿಯಿಂದ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ-– ಪರಿಶಿಷ್ಟ ಪಂಗಡದ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಲಾಗುವುದು. ಪ್ರತಿ ಭಾನುವಾರ ‘ದಲಿತ ದಿನಾಚರಣೆ’ ನಡೆಸುವ ಮೂಲಕ ದಲಿತರ ಅಹವಾಲುಗಳನ್ನು ಆಲಿಸಲಾಗುವುದು’ ಎಂದು ಪೊಲೀಸ್ ಆಯುಕ್ತ ಎ.ಎಸ್.ಐ. ಅಬ್ದುಲ್ ಶುಕೂರ್ ತಿಳಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳಾದ ಶೇರಣಾಪ್ಪಾ ಜಮಾದಾರ್, ವೆಂಕಟ್ ಪೊಲೀಸ್ ಇದ್ದರು. ಇದೇ ಸಂದರ್ಭದಲ್ಲಿ ಔರಾದ ತಾಲೂಕಿನ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಅಧ್ಯಕ್ಷರಾದ ನಾಗನಾಥ್ ಬಂಗಾರೇ, ವಾಧನ, ಗೌತಮ್ ಮೇತ್ರೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಚಿಕ್ಕನಾಯಕನಹಳ್ಳಿ: ತಾಲೂಕಿನ ಕಂದಿಕೆರೆ ಹೋಬಳಿಯ ಕಾತ್ರಿಕೆಹಾಲ್ ಗ್ರಾಮದಲ್ಲಿ, ನಿಸ್ವಾರ್ಥ ಸೇವೆಯ ಸಂಕೇತವಾದ ಶಾಂತಯ್ಯ ಎಂಬ ಕೃಷಿಕ ತಮ್ಮ ಜೀವನವನ್ನೇ ಗೋಸೇವೆಗೆ ಮುಡಿಪಾಗಿಟ್ಟಿದ್ದಾರೆ. ಯಾವುದೇ ಫಲಕ್ಷೇಪದ ನಿರೀಕ್ಷೆಯಿಲ್ಲದೆ, ನಾಟಿ ಹಸುಗಳನ್ನು ಸಾಕಿ, ಅವರ ಹಾಲನ್ನು ಹಳ್ಳಿ ಮಕ್ಕಳಿಗೆ ಉಚಿತವಾಗಿ ಪೂರೈಸುತ್ತಿದ್ದಾರೆ. ಈ ಸೇವಾ ಮನೋಭಾವಿಯು 25ಕ್ಕೂ ಹೆಚ್ಚು ಹಳ್ಳಿಕಾರ್ ತಳಿಯ ನಾಟಿ ಹಸುಗಳನ್ನು ಸಾಕಿದ್ದಾರೆ. ಹಸುವಿನ ಹಾಲು ಪೌಷ್ಟಿಕತೆಯ ಹೊತ್ತಿಗೆಯಾಗಿದ್ದು, ಇದರಿಂದ ಹಳ್ಳಿ ಮಕ್ಕಳ ಆರೋಗ್ಯ ಸುಧಾರಿಸುತ್ತಿದೆ. ಅಲ್ಲದೇ, ಅವರು ಹಸುಗಳಿಂದ ಬರುವ ಸಗಣಿ–ಗಂಜಲವನ್ನೂ ಉಚಿತವಾಗಿ ವಿತರಿಸುತ್ತಿದ್ದು, ರೈತರ ಕೃಷಿ ಚಟುವಟಿಕೆಗೂ ಸಹಾಯ ಮಾಡುತ್ತಿದ್ದಾರೆ. ಈ ಶ್ರದ್ಧಾಸಕ್ತ ಕೃಷಿಕ ಸರಳ ಜೀವನ ನಡೆಸುತ್ತಾ, ಗೋಸೇವೆಯನ್ನು ತಮ್ಮ ಧರ್ಮವೆಂದು ಕೊಂಡಿದ್ದಾರೆ. ಸರ್ಕಾರದಿಂದ ಯಾವುದೇ ಪ್ರೋತ್ಸಾಹ ಅಥವಾ ಆರ್ಥಿಕ ಸಹಾಯ ಇಲ್ಲದೆ, ತಮ್ಮ ಶ್ರಮದ ಮೂಲಕ ಈ ಪುಣ್ಯ ಕಾರ್ಯ ಮಾಡುತ್ತಿದ್ದಾರೆ. ಇಷ್ಟು ಅಪರೂಪದ ತ್ಯಾಗಮಯ ಜೀವನ ನಡೆಸುತ್ತಿರುವ ಇಂತಹ ವ್ಯಕ್ತಿಗಳನ್ನು ಸರ್ಕಾರ ಗುರುತಿಸಬೇಕಾದ ಅಗತ್ಯವಿದೆ. ಇವರು ಮಾಡುತ್ತಿರುವ ಸೇವೆಗೆ ಸೂಕ್ತವಾದ ಪ್ರೋತ್ಸಾಹ ದೊರೆಕಿದರೆ, ಇನ್ನಷ್ಟು…
ಬೀದರ್: ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ವೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದೊಂದಿಗೆ ಬೀದರ್ ನಗರದಲ್ಲಿ ಭಾನುವಾರ ಮ್ಯಾರಥಾನ್ ನಡೆಯಿತು. ಫಿಟ್ನೆಸ್ ಫಾರ್ ಆಲ್, ಡ್ರಗ್ಸ್ ಮುಕ್ತ ಕರ್ನಾಟಕ ಕಡ್ಡಾಯ ತಲೆಕಾಪು ಧರಿಸಿ ಮತ್ತು ಸೈಬರ್ ಅಪರಾಧ ಮುಕ್ತ ಬೀದರ್ ಧ್ಯೇಯವಾಕ್ಯದೊಂದಿಗೆ ನಡೆದ ಪೊಲೀಸ್ ರನ್ ಗೆ ಭರ್ಜರಿ ಸ್ಪಂದನೆ ದೊರೆಯಿತು. ನಗರದ ಸಿದ್ದಾರೂಢ ಮಠದ ಆವರಣದಿಂದ ಬೆಳಿಗ್ಗೆ ಆರಂಭಗೊಂಡ ಓಟ ಬಿವಿಬಿ ಕಾಲೇಜು, ಮೈಲೂರ್ ಕ್ರಾಸ್, ಹಾರೂರಗೇರಿ ಕಮಾನ್, ಬೋಮಗೊಂಡೇಶ್ವರ, ಮೃತ್ತ ಭಗತ್ ಸಿಂಗ್ ವೃತ್ತ ಶಿವಾಜಿ ವೃತ್ತ ಮಡಿವಾಳ ವೃತ್ತದ ಮಾರ್ಗವಾಗಿ ಶಿವನಗರ ವಾಕಿಂಗ್ ಪಾಥ್ ಬಳಿ ಮುಕ್ತಾಯಗೊಂಡಿತು. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಎಸ್ ಬಿಐ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಎಸ್ ಬಿಐ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರು,…
ಶಿರಾ : ಶಿರಾ ನಗರದಲ್ಲಿ ಸುಸಜ್ಜಿತವಾದ ಕಾರ್ಮಿಕರ ಭವನ ನಿರ್ಮಾಣಕ್ಕೆ ಅನುದಾನವನ್ನು ನೀಡುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಅವರು ಹೇಳಿದರು. ಅವರು ನಗರದ ಕೋಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಹಾಗೂ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಒಕ್ಕೂಟದ ಆಶ್ರಯದಲ್ಲಿ ನಡೆದ ಕಾರ್ಮಿಕರ ಕಿಟ್ ವಿತರಿಸಿ ಮಾತನಾಡಿದರು. ಕಟ್ಟಡ ಕಾರ್ಮಿಕರಿಗೆ ಶಿರಾ ನಗರದಲ್ಲಿ ಮೂರು ಎಕರೆ ಜಾಗದಲ್ಲಿ ನಿವೇಶನ ಕೊಡಲಾಗುವುದು ಕಟ್ಟಡ ಕಾರ್ಮಿಕರು ಸೌಲಭ್ಯ ಪಡೆಯಲು ಮಂಡಳಿಯ ಸದಸ್ಯರಾಗಿ ಸದಸ್ಯತ್ವವನ್ನು ಪಡೆದು ಪ್ರತಿವರ್ಷ ನವೀಕರಣ ಮಾಡಿಕೊಂಡು ಇರುವ ಸೌಲಭ್ಯಗಳನ್ನು ಪಡೆಯಬೇಕಿದೆ ಎಂದರು. ನಗರಸಭೆ ಅಧ್ಯಕ್ಷ ಜೀಶನ್ ಮಹಮೂದ್ ,ಸದಸ್ಯ ಅಜಯ್,ಕೆ.ಪಿ.ಸಿ.ಸಿ ಸದಸ್ಯ ಲೋಕೇಶ್ ಮಾತನಾಡಿದರು. ನಗರಸಭೆ ಉಪಾಧ್ಯಕ್ಷ ಲಕ್ಷ್ಮಿಕಾಂತ್ , ಆಯುಕ್ತ ರುದ್ರೇಶ್, ಕಾರ್ಮಿಕ ನಿರೀಕ್ಷಕ ಸೈಯದ್ ಘವೂಪ್, ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ನಾಗರಾಜ್, ಬೇಬಿರಾಣಿ, ನಗರ ಆಶ್ರಯ ಸಮಿತಿ ಸದಸ್ಯೆ ಜಯಲಕ್ಷ್ಮಿ ಮತ್ತಿತರರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ಟೀಮ್ ಇಂಡಿಯಾ ಗೆಲುವಿಗಾಗಿ ತುಮಕೂರಿನಲ್ಲಿ ವಿನೂತನವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳ ದೇವಾಲಯಗಳಲ್ಲಿ ಭಾವೈಕ್ಯತೆಯ ಪ್ರಾರ್ಥನೆ ನಡೆಸಲಾಯಿತು. ಸರ್ವಧರ್ಮ ಸಮಾನತೆಯಿಂದ ಭಾರತದ ಗೆಲುವಿಗೆ ಪ್ರಾರ್ಥನೆ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಸೇನೆ ವತಿಯಿಂದ ವಿನೂತನ ಪ್ರಾರ್ಥನೆ ತುಮಕೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದದಲ್ಲಿ ನಡೆಯಿತು. ತೆಂಗಿನಕಾಯಿ ಹೊಡೆದು ಗೆಲುವಿಗೆ ಪೂಜೆ ಸಲ್ಲಿಸಲಾಯಿತು. ಟೌನ್ ಹಾಲ್ ಬಳಿಯ ಜೋಡಿ ಮಜಾರ್ ದರ್ಗಾದಲ್ಲಿ ಧುವಾ ನಡೆಯಿತು. ಚರ್ಚ್ ಸರ್ಕಲ್ ಬಳಿಯ ಸಿ.ಎಸ್.ಐ ವೆಸ್ಲಿ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಚಾಂಪಿಯನ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ದರ್ಗಾದಲ್ಲಿ ಧುವಾ ಬಳಿಕ ಸಿಹಿ ಹಂಚಲಾಯಿತು. ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಹೀಡುಗಾಯಿ ಹೊಡೆದ ಕಾರ್ಯಕರ್ತರು, ಭಾರತ ಗೆದ್ದೇ ಗೆಲ್ಲಲಿ ಎಂದು ಘೋಷಣೆ ಕೂಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ನವದೆಹಲಿ: ರೈಲು ಹಳಿ ಮೇಲೆ ಮಲಗಿದ್ದ ಕುಡುಕನಿಗೆ ರೈಲು ಡಿಕ್ಕಿ ಹೊಡೆದರೂ ಆತ ಪ್ರಾಣಾಪಾಯದಿಂದ ಪಾರಾದ ಘಟನೆ ಪೆರುವಿನಲ್ಲಿ ನಡೆದಿದೆ. ಶನಿವಾರ ಸರಕು ರೈಲು ಡಿಕ್ಕಿ ಹೊಡೆದರೂ ಕುಡುಕ ಹೇಗೋ ಬದುಕಿ ಉಳಿದಿದ್ದಾನೆ. ಕುಡಿದ ಮತ್ತಿನಲ್ಲಿ ಹಳಿ ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ರೈಲು ಹಾದು ಹೋದರೂ ಆತ ಪವಾಡ ಸದೃಶ್ಯದಂತೆ ಬದುಕುಳಿದ್ದಾನೆ ಎಂದು ಲಿಮಾ ಪ್ರಾಂತ್ಯದ ಅಟೆ ಪಟ್ಟಣದ ಭದ್ರತಾ ಅಧಿಕಾರಿ ಜನರಲ್ ಜೀವಿಯರ್ ಅವಲೋಸ್ ತಿಳಿಸಿದ್ದಾರೆ. ರೈಲು ಹಳಿಗಳ ಮಧ್ಯೆ ಕುಡುಕ ನಿದ್ರೆಗೆ ಜಾರಿದ್ದ. ರೈಲು ಸಮೀಪಕ್ಕೆ ಬಂದರೂ ಆತನಿಗೆ ಎಚ್ಚರವಾಗಿಲ್ಲ. ಈ ವೇಳೆ ಕುಡುಕನಿಗೆ ರೈಲು ಡಿಕ್ಕಿ ಹೊಡೆದಿದೆ. ಆದರೂ ಆತ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ. 28 ವರ್ಷದ ಜುವಾನ್ ಕಾರ್ಲೋಸ್ ಟೆಲೊ ಎಂಬಾತ ಅಪಾಯದಿಂದ ಪಾರಾದ ವ್ಯಕ್ತಿಯಾಗಿದ್ದಾನೆ. ಘಟನೆಯಲ್ಲಿ ಆತನ ಎಡಗೈ ಮತ್ತು ಎಡಕಣ್ಣಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಇಸ್ರೇಲಿ ಪ್ರವಾಸಿ ಮಹಿಳೆ ಹಾಗೂ ಹೋಮ್ ಸ್ಟೇ ಮಾಲಕಿಯ ಮೇಲೆ ನಡೆದ ಅತ್ಯಾಚಾರ ಘಟನೆಗೆ ಇಲ್ಲಿ ನಿಯೋಜಿಸಿದ್ದ ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿರುವುದೇ ಕಾರಣ ಎಂದು ಎಂದು ಶಾಸಕ ಗಾಲಿ ಜನಾರ್ಧನರೆಡ್ಡಿ ಹೇಳಿದ್ದು, ಈ ಪ್ರದೇಶದಲ್ಲಿ ಮತ್ತೆ ಪೊಲೀಸ್ ಭದ್ರತೆ ಒದಗಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರವಾಸಿಗರೊಬ್ಬರು ಹಾಗೂ ಹೋಮ್ ಸ್ಟೇ ಮಾಲಕಿಯ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದೆ. ಘಟನೆ ಕುರಿತು ವರದಿ ಪಡೆದು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಅದರಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದರು. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಸರ್ಕಾರದಲ್ಲಿ ನಾನು ಅಖಂಡ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಅವರ ಸಹಕಾರದೊಂದಿಗೆ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಡಿವೈಎಸ್ಪಿ ಮಟ್ಟದ ಅಧಿಕಾರಿಯನ್ನು…