Author: admin

ಬೆಂಗಳೂರು: ಯಶವಂತಪುರ-ಬೀದರ್ ಎಕ್ಸ್ ಪ್ರೆಸ್ ರೈಲಿನಿಂದ ಅಪರಿಚಿತ ಪ್ರಯಾಣಿಕನನ್ನು ಕೆಳಗೆ ತಳ್ಳಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ. ತೋಟಗಾರ ಎಸ್.ದೇವಪ್ಪ (45) ಮತ್ತು ಪೇಂಟರ್ ಆಗಿರುವ ಎಚ್.ಪೀರಪ್ಪ (31 ) ಬಂಧಿತ ಆರೋಪಿಗಳಾಗಿದ್ದಾರೆ. ರೈಲಿನಿಂದ ಕೆಳಗೆ ತಳ್ಳಿದ ಪರಿಣಾಮ 30 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7:15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ. ಜನರಲ್ ಕೋಚ್ ನಲ್ಲಿ ಶೌಚಾಲಯದ ಪಕ್ಕದ ಹಾದಿಯಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದರು. ಆದರೆ ಅಲ್ಲಿ ಕುಳಿತಿದ್ದ 30 ವರ್ಷದ ವ್ಯಕ್ತಿ ಜಾಗಕೊಡಲು ನಿರಾಕರಿಸಿದಾಗ ಕೋಪದಿಂದ ರೈಲಿನಿಂದ ಕೆಳಗೆ ತಳ್ಳಿದ್ದಾರೆ. ಇದನ್ನು ಕಂಡು ಪ್ರತ್ಯಕ್ಷದರ್ಶಿಯೊಬ್ಬರು ಕೂಡಲೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಂಗಳವಾರ ರಾತ್ರಿ ರೈಲ್ವೇ ಪೊಲೀಸರು ಸ್ಥಳಕ್ಕೆ ಧಾವಿಸಿದರು, ಆದರೆ ನಿಖರವಾದ ಸ್ಥಳ ತಿಳಿದಿಲ್ಲದ ಕಾರಣ ಮತ್ತು ಕತ್ತಲೆಯಾದ ಕಾರಣ ಮೃತದೇಹವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಬುಧವಾರ ಬೆಳಗ್ಗೆ ಶವ…

Read More

ಬೆಂಗಳೂರು: ಕಳ್ಳನೆಂದು ತಪ್ಪಾಗಿ ಭಾವಿಸಿ ಪಂಕ್ಚರ್ ಅಂಗಡಿ ಮಾಲೀಕನನ್ನು ಹತ್ಯೆ ಮಾಡಿರುವ ಘಟನೆ ಎಚ್ಎಸ್ಆರ್ ಲೇಔಟ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೊಮ್ಮನಹಳ್ಳಿಯ ಮದೀನನಗರದ ಪಂಕ್ಚರ್ ಅಂಗಡಿ ಮಾಲೀಕ ಸೈಯದ್ ನೂರುಲ್ಲಾ ಹತ್ಯೆಗೀಡಾದವರಾಗಿದ್ದಾರೆ. ಎನ್.ಪ್ರಕಾಶ್ (32) ಮತ್ತು ಎಂ.ಕುಮಾರ್ ಗೌಡ (35) ಬಂಧಿತ ಕೊಲೆ ಆರೋಪಿಗಳಾಗಿದ್ದಾರೆ. ಪಂಕ್ಚರ್ ಅಂಗಡಿ ಮಾಲೀಕ ಸೈಯದ್ ಮತ್ತು ಸಹಾಯಕ ಮಣಿಕಂಠ ರಾತ್ರಿ 11:30ರ ಸುಮಾರಿಗೆ ಹೊಸೂರು ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಂ ಬಳಿ ಟೀ ಕುಡಿಯಲು ಹೋಗಿದ್ದರು. ಅಲ್ಲಿ ಟೀ ಸಿಗದೇ ಇದ್ದಾಗ ಅದೇ ಪ್ರದೇಶದಲ್ಲಿದ್ದ ಇನ್ನೊಂದು ಅಂಗಡಿಗೆ ಹೋಗಿದ್ದಾರೆ. ಹೋಗುವಾಗ ದಾರಿಯಲ್ಲಿ, ಖಾಲಿ ಸೈಟ್ನಲ್ಲಿ ಸೈಯದ್ ಕೆಲವು ಟೈರ್ ಗಳನ್ನು ನೋಡಿದ್ದಾನೆ. ಅವುಗಳನ್ನು ತನ್ನ ಅಂಗಡಿಗೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಾನೆ. ಇದೇ ವೇಳೆ ಸ್ಥಳದ ಸಮೀಪವೇ ಕುಳಿತಿದ್ದ ಆರೋಪಿಗಳು ಸೈಯದ್ ಹಾಗೂ ಮಣಿಕಂಠ ಕಳ್ಳರೆಂದು ಶಂಕಿಸಿ ವಿಚಾರಣೆ ಆರಂಭಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಗಳು ಬೆನ್ನಟ್ಟಿದ್ದರು. ಇಬ್ಬರು ಕಬ್ಬಿಣದ ರಾಡ್ನಿಂದ…

Read More

ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೇರಳ ಮೂಲದ ವೇಣುಗೋಪಾಲ್(56) ಎಂದು ಗುರುತಿಸಲಾಗಿದೆ. ಇಲ್ಲಿನ ಕೇಕ್ ವಲ್ಡ್ ಬೇಕರಿಯಲ್ಲಿ ಘಟನೆ ನಡೆದಿದೆ. ವೇಣುಗೋಪಾಲ್ ಕಳೆದ 5 ವರ್ಷದಿಂದ ಈ ಕೇಕ್ವಲ್ಡ್ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ನಿನ್ನೆ ಬೇಕರಿಯಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತಕ್ಕೀಡಾಗಿ ಕುಸಿದು ಸಾವನ್ನಪ್ಪಿದ್ದಾರೆ. ಕುಸಿದು ಬಿದ್ದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರಿಶೀಲನೆ ನಡೆಸಿ, ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ ಅವರು, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕ ಅಧ್ಯಕ್ಷರ ಭವನವಾದ ಶ್ವೇತ ಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ರಕ್ಷಣೆ, ವ್ಯಾಪಾರ ಮತ್ತು ವಲಸೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು. ಇದರ ಬೆನ್ನಲ್ಲೇ ಅಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಕಾಂಗ್ರೆಸ್ ಸಂಸದ ಶಶಿತರೂರ್ ಮೆಚ್ಚುಗೆ ವ್ಯಕ್ತಪಡಿಸಿ, ಮೊದಲ ಬಾರಿಗೆ ಪ್ರಧಾನಿ ಮೋದಿ ನಡೆಯನ್ನು ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಶಶಿ ತರೂರ್, ಇಲ್ಲಿಯವರೆಗೆ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಅವರ ಪ್ರೆಸ್ ಮೀಟ್ ಅನ್ನು ನೋಡಿದ್ದು, ತುಂಬಾ ಉತ್ತಮವಾಗಿದೆ. ನಮಗೆಲ್ಲರಿಗೂ ಇದ್ದ ಕೆಲವು ದೊಡ್ಡ ಆತಂಕಗಳನ್ನು ಪರಿಹರಿಸಲಾಗಿದೆ. ಎಲ್ಲ ವಿಷಯಗಳ ಚರ್ಚೆಯನ್ನು ಸೆಪ್ಟೆಂಬರ್–ಅಕ್ಟೋಬರ್ ವೇಳೆಗೆ ಮುಕ್ತಾಯಗೊಳಿಸಲು ಗಂಭೀರ ಮಾತುಕತೆ ನಡೆಸಿದ್ದಾರೆ. ಇನ್ನೂ ರಕ್ಷಣಾ ರಂಗದಲ್ಲಿ ನಮಗೆ F–35 ಸ್ಟೆಲ್ತ್ ವಿಮಾನವನ್ನು ಮಾರಾಟ ಮಾಡುವ ಬದ್ಧತೆ ಕೂಡ ಪ್ರಮುಖವಾಗಿದ್ದು, ಅದು ಅತ್ಯಾಧುನಿಕ ಯುದ್ಧ ವಿಮಾನವಾಗಿದ್ದು, ಭಾರತಕ್ಕೆ ಶಕ್ತಿ ತುಂಬಲಿದೆ. ವಲಸಿಗರ ವಿಚಾರ ಬಿಟ್ಟು ಉಳಿದದ್ದೆಲ್ಲಾ ನಮ್ಮ ನಿರೀಕ್ಷೆಯಂತೆ ಆಗಿದೆ…

Read More

ಬೀದರ: ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳಕ್ಕೆ ತೆರಳಲು ಸಂಸದ ಸಾಗರ್ ಖಂಡ್ರೆ ಮನವಿ ಮೇರೆಗೆ ಭಕ್ತರಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಯಿತು. ಬೀದರ ಸಂಸದರಾದ ಖಶ್ವರ ಖಂಡ್ರೆ ಬೀದರನಿಂದ ಪ್ರಯಾಗರಾಜ್ಗೆ ತೆರಳುವ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರಲ್ಲದೇ ಯಾತ್ರಾರ್ಥಿಗಳ ಸುಖಕರ ಪ್ರಯಾಣಕ್ಕೆ ಶುಭ ಹಾರೈಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್: ಬೆಂಗಳೂರಿನ ಲಾಲ್ ಬಾಗ್ ಪ್ರದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 250 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ಭೀಮ್ ಸೇನಾ ಸಂಘಟನೆ ಒತ್ತಾಯ ಮಾಡಿದೆ. ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆಯ ಮುಖಂಡರು, ಕರ್ನಾಟಕದ ನೆರೆ ಹೊರೆ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ಬೆಂಗಳೂರಿನ ಲಾಲ್ಬಾಗ್ ನಲ್ಲಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು. ನಮ್ಮ ನೆರೆ ರಾಜ್ಯಗಳಲ್ಲಿ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಿಸಿದ್ದಾರೆ. ಇಲ್ಲಿ ಜನಪರವಿರುವ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ. ಈ ಜನಪರ ಸರಕಾರ ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಿ, ಅದರ ಕೆಳಗಡೆ ಒಂದು ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ಈ ವರ್ಷದ ಬಜೆಟ್ ನಲ್ಲಿ ಈ ಬೃಹತ್ ಪ್ರತಿಮೆಯ ಬಗ್ಗೆ ಪ್ರಸ್ತಾವನೆ ಮಾಡಿ ಬರುವ ಏಪ್ರಿಲ್…

Read More

ಬೀದರ್: ನಾರಂಜಾ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು, ಸಕ್ಕರೆ ಕಾರ್ಖಾನೆಯಲ್ಲಿ ಈವರೆಗೆ ಕಬ್ಬು ನುರಿಸಿರುವ , ಸಕ್ಕರೆ ದಾಸ್ತಾನಿನ ಬಗ್ಗೆ ಪರಿಶೀಲನೆ ನಡೆಸಿದರು. ಕಬ್ಬಿನ ಇತರೆ ಉತ್ಪನ್ನಗಳ ಮೂಲಕ ಆದಾಯ ವೃದ್ಧಿ ಮಾಡಿಕೊಳ್ಳಲು ಸಕ್ಕರೆ ಕಾರ್ಖಾನೆಯವರಿಗೆ ಸಲಹೆ ನೀಡಿದರು. ಕಬ್ಬಿನ ಬಾಕಿ ಉಳಿದಿರುವ ಹಣ ಪಾವತಿಸಲು  ಜಿಲ್ಲಾಧಿಕಾರಿ  ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ, ಆಹಾರ ಇಲಾಖೆ ಉಪನಿರ್ದೇಶಕ ಹಾಗೂ ಬೀದರ ತಹಶೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಅಮೆರಿಕಾದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಕೃತ್ಯ ಖಂಡಿಸಿ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾರತೀಯರನ್ನ ಗಡಿಪಾರು ಮಾಡುವ ಮೂಲಕ ಅಮೆರಿಕಾ ಸರ್ಕಾರ ಅನಾಗರೀಕವಾಗಿ ನಡೆದುಕೊಂಡಿದೆ ಎಂದು   ಜಿಲ್ಲಾ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯಿಂದ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಭಾರತೀಯರ ಪರವಾಗಿ ನಿಲ್ಲದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಲಾಯಿತು. ಭಾರತೀಯರ ಕರೆತರಲು ಒಂದೇ ಒಂದು ವಿಮಾನ ವ್ಯವಸ್ಥೆ ಮಾಡಿಲ್ಲ, ಭಾರತೀಯರನ್ನು ಖೈದಿಗಳಂತೆ ನಡೆಸಿಕೊಂಡಿದ್ದಾರೆ ಎಂದು ದೂರಿದರು.  ಪ್ರತಿಭಟನೆ ವೇಳೆ ಮೋದಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ತುಮಕೂರಲ್ಲಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಹಾಗೂ ಹಾಲಿ ಶಾಸಕ ಸುರೇಶ್ ಗೌಡ ನಡುವಿನ ಬಹಿರಂಗ ಹೇಳಿಕೆ ತಾರಕಕ್ಕೇರಿದ್ದು, ಡಿ.ಸಿ.ಗೌರಿಶಂಕರ್ ಶಾಸಕ ಸುರೇಶ್ ಗೌಡ ಅವರ ವಿರುದ್ಧ ಮಾಡಿದ ಆರೋಪ ವಾಗ್ದಾಳಿಗಳಿಗೆ ಸುರೇಶ್ ಗೌಡ ತಿರುಗೇಟು ನೀಡಿದ ಬೆನ್ನಲ್ಲೇ ಮತ್ತೆ  ಸುದ್ದಿಗೋಷ್ಠಿ ಕರೆದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಸುರೇಶ್ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲು ಫೆ.14 ಭಾರತದ ಕರಾಳ ದಿನವನ್ನು ಸ್ಮರಿಸಿ ಪುಲ್ವಾಮದಲ್ಲಿ  40 ಕ್ಕೆ ಹೆಚ್ಚು ಯೋಧರ ಅಗಲಿಕೆಯನ್ನು ನೆನಪಿಸಿಕೊಂಡು, ಎಲ್ಲರ ಪರವಾಗಿ ಆ ಕುಟುಂಬಗಳಿಗೆ ಧೈರ್ಯ ತುಂಬುವ ಸಾಂತ್ವನ ಹೇಳ್ತೀನಿ ಎಂದರು. ಬಳಿಕ ಶಾಸಕ ಸುರೇಶ್ ಗೌಡ ವಿರುದ್ಧ ವಾಗ್ದಾಳಿ ಆರಂಭಿಸಿದ ಅವರು,  ಆಪ್ತ ಸ್ನೇಹಿತ ಶಾಸಕ ಸುರೇಶ್ ಗೌಡ ಹೇಳಿಕೆಗಳಿಗೆ ತಿಳುವಳಿಕೆ ತಿಳಿಸ್ತೀನಿ.  ರಾಜಣ್ಣನವರ ವಿರುದ್ಧ ಮಾತನಾಡಿದ್ದಾರೆ.  ರಾಜಣ್ಣ ವಿರುದ್ದ ಮಾತನಾಡೋಕೆ ಧೈರ್ಯ ಇಲ್ವಾ ಅನ್ನೋ ವಿಚಾರ ಇಟ್ಟುಕೊಂಡು ಮಾತನಾಡಿದ್ದಾರೆ. ನಾನು ರಾಜಣ್ಣ ಬಗ್ಗೆ ಟೀಕೆ ಮಾಡೋಕೆ ಧೈರ್ಯ ಇಲ್ಲ.  ರಾಜಣ್ಣ…

Read More