Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ತುಮಕೂರು: ತುಮಕೂರು ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ 2024ರ ಮೇ 1ರಂದು ಅಂತಿಮ ದಿನಾಂಕವನ್ನು ನಿಗದಿಗೊಳಿಸಿ ಅರ್ಜಿ ಆಹ್ವಾನಿಸಲಾಗಿತ್ತು. ನಿಗದಿತ ದಿನಾಂಕದೊಳಗೆ ಅರ್ಜಿಗಳು ಸ್ವೀಕೃತವಾಗದ ಕಾರಣ ಮತ್ತೊಮ್ಮೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಲಿತಪರ/ ಹಿಂದುಳಿದ ಪರ ಸಂಘಟನೆಗಳಲ್ಲಿ ಜನಾಂಗದ ಪರವಾಗಿ ನಿಷ್ಪಕ್ಷಪಾತವಾಗಿ ಶ್ರಮಿಸಿರುವ ಜಿಲ್ಲೆಯ ಆಸಕ್ತ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಇತರೆ ವರ್ಗದ ಎನ್.ಜಿ.ಒ. ಸಂಸ್ಥೆಗಳ ಪ್ರತಿನಿಧಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ, ಬಿ.ಹೆಚ್. ರಸ್ತೆ, ತುಮಕೂರು ತಾಲ್ಲೂಕು ಇವರಿಗೆ ಮಾರ್ಚ್ 20ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ಹಾಗೂ ಮತ್ತಿತರೆ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು ಅಥವಾ ದೂ.ವಾ.ಸಂ. 0816–20063051ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಈ ಹಿಂದೆ ಅಥವಾ ಪ್ರಸ್ತುತ ಜಿಲ್ಲಾ/ ಉಪ…
ಕೊರಟಗೆರೆ: ಜನಸ್ನೇಹಿ ವೈದ್ಯರ ವರ್ಗಾವಣೆ ವಿರೋಧಿಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ನಡೆಯಿತು. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಕಮರ್ ತಪ್ಸಮ್ ವರ್ಗಾವಣೆ ಹಿನ್ನೆಲೆ ದಿಡೀರ್ ಪ್ರತಿಭಟನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿಭಟನೆ ನಡೆಯಿತು. ತುಮಕೂರು ಡಿಎಚ್ ಓ ಡಾ.ನಾಗೇಂದ್ರಪ್ಪ ಮತ್ತು ಕೊರಟಗೆರೆ ಟಿಹೆಚ್ ಓ ವಿಜಯಕುಮಾರ್ ವಿರುದ್ದ ಆಕ್ರೋಪ್ರತಿಭಟನಾಕಾರರು ಆಕ್ರೋಶ ಭುಗಿಲೆದ್ದಿದೆ. ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಜನಸ್ನೇಹಿ ವೈದ್ಯೆಯ ವರ್ಗಾವಣೆ ಖಂಡಿಸಿ ಅಕ್ಕಿರಾಂಪುರ ಸೇರಿದಂತೆ ಅಕ್ಕಪಕ್ಕದ ಸ್ಥಳೀಯರು ಆಸ್ಪತ್ರೆಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು. ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಡಾ.ಕಮರ್ ತಪ್ಸಮ್ ಹಿರಿಯರು, ಮಹಿಳೆಯರು ಮತ್ತು ಮಕ್ಕಳ ಜೊತೆ ಸೌಜನ್ಯದಿಂದ ವರ್ತಿಸಿ ಪ್ರತಿನಿತ್ಯ ಸಂಜೆ 6 ಗಂಟೆವರೆಗೂ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಜನಸ್ನೇಹಿ…
ಹುಳಿಯಾರು : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ಪ್ರತಿ ಚೀಲಕ್ಕೂ ಸರ್ಕಾರ ನಿಗದಿಪಡಿಸಿದ ತೂಕದಷ್ಟು ಮಾತ್ರವೇ ರಾಗಿ ತೂಕ ಮಾಡಬೇಕೆಂದು ಹಾಗೂ ಖರೀದಿ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳಿಗೂ ಅವಕಾಶ ಕೊಡದಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು. ಹುಳಿಯಾರು ರಾಗಿಖರೀದಿ ಕೇಂದ್ರಕ್ಕೆ ಆಗಮಿಸಿದ ಸುಮಾರು 25ಕ್ಕೂ ಹೆಚ್ಚಿನ ರೈತ ಸಂಘದ ಪದಾಧಿಕಾರಿಗಳು ಖರೀದಿ ಕೇಂದ್ರದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಧ್ವನಿ ಎತ್ತಿದರು. ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆಗೆದು ರಾಗಿ ಖರೀದಿಸುತ್ತಿರುವುದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಿಂದ ಖರೀದಿಸಲು ಮುಂದಾಗುತ್ತಿರುವುದು ಸರಿಯಷ್ಟೇ. ಪ್ರತಿ ಗೋಣಿಚೀಲದಲ್ಲಿ 50 ಕೆ.ಜಿ. ರಾಗಿ ಹಾಗೂ ಚೀಲದ ತೂಕ 650 ಗ್ರಾಂ ಸೇರಿ ಅಷ್ಟು ರಾಗಿಯನ್ನು ಮಾತ್ರವೇ ಹೆಚ್ಚುವರಿ ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದರೂ ಸಹ ಇಲ್ಲಿನ ಸಿಬ್ಬಂದಿ 52 ಕೆ.ಜಿ. ರಾಗಿ ತರಬೇಕು ಎಂದು ರೈತರಿಗೆ…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ ಆದೇಶದಂತೆ ಅಕ್ಕಿರಾಂಪುರ ಗ್ರಾಮದಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ ಪ್ರಾರಂಭವಾಗಿದೆ ಎಂದು ಕೊರಟಗೆರೆ ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಗುರುವಾರ ಏರ್ಪಡಿಸಲಾಗಿದ್ದ ರಾಗಿ ಖರೀದಿ ಕೇಂದ್ರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು. ಗ್ರಾಮೀಣ ರೈತರ ಮನವಿಯಿಂದ ಪ.ಪಂ. ಕಚೇರಿಯಲ್ಲಿ ಕಳೆದ 15 ದಿನದ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಕೊರಟಗೆರೆಯಲ್ಲಿ ರಾಗಿ ಕೇಂದ್ರ ತೆರೆಯುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಸೂಚನೆಯಂತೆ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. ಕೊರಟಗೆರೆ ಆಹಾರ ನಿಗಮದ ವ್ಯವಸ್ಥಾಪಕ ಟಿ.ಹೆಚ್.ರುದ್ರಪ್ಪ ಮಾತನಾಡಿ, ಅಕ್ಕಿರಾಂಪುರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಗುರುವಾರ, ಶುಕ್ರವಾರ ಮತ್ತು ಶನಿವಾರ ರೈತರಿಂದ ರಾಗಿ ಖರೀದಿ ಮಾಡಲಾಗುತ್ತೆ. ಪ್ರತಿ ಕ್ವಿಂಟಾಲ್ ರಾಗಿ ಖರೀದಿಗೆ…
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ನಿರ್ಧಾರಿಸಿರುವುದಾಗಿ ಮುಖ್ಯುಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿಯನ್ನು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮಕ್ಕೆ ಉದ್ಯಮ ಸ್ಥಾನಮಾನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ ನೀಡಲಾಗುವುದು ಮತ್ತು ಕೈಗಾರಿಕಾ ನೀತಿಯಡಿಯಲ್ಲಿ ಒದಗಿಸಲಾದ ಸೌಲಭ್ಯಗಳನ್ನು ಚಲನಚಿತ್ರೋದ್ಯಮಕ್ಕೂ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ ಒಪ್ಪಿದ್ದು, ಬಜೆಟ್ ನಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು 200 ರೂಪಾಯಿಗೆ ಸಿಎಂ ನಿಗದಿಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆಗೆ ನಿರ್ಧರಿಸಲಾಗಿದೆ. ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ವಿಜಯಪುರದಲ್ಲಿ 348 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತದೆ. ರಾಯಚೂರು ಏರ್ ಪೋರ್ಟ್ ಕಾಮಗಾರಿಗೆ 53 ಕೋಟಿ ರೂ. ಅನುದಾನ ನೀಡಲಾಗುವುದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ : ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರ್ಯಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯ ಪರಿಣಾಮ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಟ್ರ್ಯಾಕ್ಟರ್ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸಮೀಪದ ಟ್ರ್ಯಾಕ್ಟರ್ ಮತ್ತುದ್ವಿಚಕ್ರ ವಾಹನದ ನಡುವೆ ಅಪಘಾತ ನಡೆದಿದ್ದು, ಅಲಪನಹಳ್ಳಿಯ ಲಿಂಗಪ್ಪ(50) ಮೃತ ದುರ್ದೈವಿ ಆಗಿದ್ದಾನೆ. ಕ್ಯಾಮೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಂಪುಗಾನಹಳ್ಳಿಯಿಂದ ಲಂಕೇನಹಳ್ಳಿ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯೆ ಈ ಘಟನೆ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ಅಕ್ರಮ ಮಣ್ಣು ಸಾಗಾಟ ಮಾಡಲಾಗುತ್ತಿತ್ತು. ಅಪಘಾತವಾದ ತಕ್ಷಣವೇ ಟ್ರ್ಯಾಕ್ಟರ್ ಚಾಲಕ ಸಮೇತ ಪರಾರಿ ಆಗಿದ್ದಾನೆ. ಅಪಘಾತ ಸ್ಥಳಕ್ಕೆ ಕೊರಟಗೆರೆ ಸಿಪಿಐ ಅನಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಟ್ರ್ಯಾಕ್ಟರ್ ಚಾಲಕನ ಬಂಧನಕ್ಕೆ ಈಗಾಗಲೇ ಪೊಲೀಸರು ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ…
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಬಜೆಟ್ ಭಾಷಣದಲ್ಲಿ ಈ ಮಹತ್ವದ ಘೋಷಣೆ ಮಾಡಿದ ಅವರು, ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: 2025–26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿದ್ದಾರೆ. ಮುಖ್ಯಾಂಶಗಳು: ರಾಜ್ಯ ಬಜೆಟ್ ನಲ್ಲಿ ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗುವುದು. ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4