Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಬೆಂಗಳೂರು: ಮಲ್ಟಿಫ್ಲೆಕ್ಸ್‌ಗಳು ಸಿನಿಮಾ ಮಂದಿರಗಳಲ್ಲಿ ದುಬಾರಿ ದರ ನಿಗದಿ ತಡೆಗೆ ರಾಜ್ಯದಾದ್ಯಂತ ಏಕರೂಪದ ಟಿಕೆಟ್ ದರ ನಿಗದಿ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಗುರುವಾರ ಜೆಡಿಎಸ್ ನ ಗೋವಿಂದರಾಜು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಟಿಕೆಟ್ ದರಗಳನ್ನು ನಿಗದಿ ಮಾಡುವ ಅಧಿಕಾರವನ್ನು ಚಿತ್ರಮಂದಿರಗಳ ಮಾಲೀಕರಿಗೆ ನೀಡಲಾಗಿದೆ. ದರವನ್ನು ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕೂ ಇದ್ದು, ಅಗತ್ಯವೆನಿಸಿದರೆ ಅದನ್ನು ಬಳಸಬಹುದು ಎಂದರು. 2017–18ನೇ ಸಾಲಿನ ಆಯವ್ಯಯದಲ್ಲಿ ಎಲ್ಲಾ ಚಿತ್ರಮಂದಿರಗಳನ್ನು ಏಕ ರೂಪದ ದರ ಜಾರಿ ಮಾಡಲು ಘೋಷಣೆ ಮಾಡಲಾಗಿತ್ತು. ಆಯವ್ಯಯದ ಘೋಷಣೆಯಂತೆ 2018, ಮೇ 11ರಂದು ಸರ್ಕಾರದ ಆದೇಶವೂ ಸಹ ಆಗಿತ್ತು. ಆದರೆ ಆ ಸರ್ಕಾರಿ ಆದೇಶಕ್ಕೆ ತಡೆಯಾಜ್ಞೆ ತಂದ ನಿಟ್ಟಿನಲ್ಲಿ ಆದೇಶವನ್ನು ವಾಪಸ್ಸು ತೆಗೆದುಕೊಳ್ಳಲಾಯಿತು. ಚಿತ್ರಮಂದಿರಗಳ ಟಿಕೆಟ್ ದರಗಳನ್ನು ಚಿತ್ರಮಂದಿರಗಳ ಮಾಲೀಕರೇ ನಿರ್ಧಾರ ಮಾಡುವ ಪದ್ದತಿ ಜಾರಿಯಲ್ಲಿದೆ. ಮಲ್ಟಿಪ್ಲೆಕ್ಸ್ ಚಿತ್ರಮಂದಿಗಳ ಮಾಲಿಕರು ಚಿತ್ರಮಂದಿಗಳನ್ನು ವಾಣಿಜ್ಯ ಚಟುವಟಿಕೆಗಳಾಗಿ ರೂಪಿಸಿಕೊಂಡಿದ್ದಾರೆ. ಆವಶ್ಯವೆನಿಸಿದಲ್ಲಿ…
ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬಳ್ಳಾರಿ: ಬಳ್ಳಾರಿಯಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಈವರೆಗೂ 20,000ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಕಪ್ಪಗಲ್ಲುವಿನ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 3 ದಿನಗಳ ಹಿಂದೆ 8,000 ಕೋಳಿಗಳು ಸಾವನ್ನಪ್ಪಿದ್ದವು. ಇದೀಗ ಮತ್ತಷ್ಟು ಕೋಳಿಗಳು ಸಾವನ್ನಪ್ಪಿದೆ. ಕುರೇಕೊಪ್ಪ ಮತ್ತು ಕಪ್ಪಗಲ್ಲು ಕೋಳಿ ಸಾಕಣೆ ಕೇಂದ್ರಗಳಲ್ಲಿ ಸಾವಿರಾರು ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿಗಳು ದೃಢಪಡಿಸಿದ್ದಾರೆ. ಈ ನಡುವೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಹಕ್ಕಿ ಜ್ವರಕ್ಕೆ ಕಾರಣವಾಗಿರುವ H5N1 ಸೋಂಕು ಹರಡುವಿಕೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಪಂಚ ಯೋಜನೆಗಳಿಂದ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಸರ್ಕಾರ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಎಂದು ಜೆಡಿಎಸ್ ಪಕ್ಷದ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಗಿಲುಮುಟ್ಟಿದೆ. ಇದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಗ್ಯಾರಂಟಿ ಭರವಸೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಫಲವಾಗಿದೆ ಮತ್ತು ಮೈಕ್ರೋ ಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಸಾಲಗಾರರ ಮತ್ತು ರೈತರ ಆತ್ಮಹತ್ಯೆ ಹೆಚ್ಚಾಗಿವೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್.ಭೋಜೇಗೌಡ ಅವರು ಇಂದು ಪ್ರಶ್ನೋತ್ತರ ಕಲಾಪ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಕೇಳಿದ ವಿವಿಧ ಪ್ರಶ್ನೆಗಳಿಗೆ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಉತ್ತರಿಸಿರುವ ಪ್ರಮುಖ ಅಂಶಗಳು:- ರಾಜ್ಯಾದ್ಯಂತ 136 ವ್ಹಿಲಿಂಗ್ ಪ್ರಕರಣಗಳನ್ನು ದಾಖಲಿಸಿ, ಈ ಪ್ರಕರಣಗಳಲ್ಲಿ 128 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2024ರಲ್ಲಿ 266 ಪ್ರಕರಣಗಳಲ್ಲಿ 179 ಜನರನ್ನು ಬಂಧಿಸಲಾಗಿದೆ. 2025ರಲ್ಲಿ ಈವರೆಗೆ 47 ಪ್ರಕರಣಗಳಲ್ಲಿ 30 ಜನರನ್ನು ಬಂಧಿಸಲಾಗಿದೆ. ಮಾರಕಾಸ್ತ್ರ ಗಳನ್ನು ಹಿಡಿದು ಪುಂಡಾಟಿಕೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2023ರಲ್ಲಿ 68 ಪ್ರಕರಣ ದಾಖಲಿಸಿ, 147 ಆರೋಪಿಗಳನ್ನು ಬಂಧಿಸಲಾಗಿದೆ. 2024ರಲ್ಲಿ 66 ಪ್ರಕರಣಗಳಲ್ಲಿ 187 ಆರೋಪಿಗಳು , 2025ರ ಫೇಬ್ರವರಿವರೆಗೆ 26 ಕೇಸ್ ದಾಖಲಿಸಿ 86 ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಇಂತ ಪ್ರಕರಣಗಳು ಬೆಳಕಿಗೆ ಬಂದ ತಕ್ಷಣ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಂಡು, ಕಠಿಣ ಶಿಕ್ಷೆ ಆಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.…
ತುಮಕೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ ಗುಬ್ಬಿ ತಾಲ್ಲೂಕು ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಬಳಿ ನೂತನವಾಗಿ ನಿರ್ಮಾಣ ಮಾಡುವ 110/11ಕೆವಿ ಉಪಸ್ಥಾವರಕ್ಕೆ ಮಾರ್ಚ್ 7 ಅಥವಾ ತದನಂತರ ಹಾಲಿ ಇರುವ 110ಕೆವಿ ನಿಟ್ಟೂರು–ಕೆ.ಜಿ.ಟೆಂಪಲ್ ಏಕಮುಖ ವಿದ್ಯುತ್ ಮಾರ್ಗದಿಂದ 5.771 ಕಿಮೀ ಉದ್ದದ ದ್ವಿಮುಖ ಗೋಪುರಗಳ ಮೇಲೆ ಲಿಲೋ ವಿದ್ಯುತ್ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಲಾಗುವುದು. ಸಾರ್ವಜನಿಕರು ಈ ಉಪಸ್ಥಾವರದ ಗೋಪುರವನ್ನು ಹತ್ತುವುದು, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ, ಮತ್ತಿತರ ವಸ್ತುಗಳನ್ನು ಪ್ರಸರಣ ಮಾರ್ಗಕ್ಕೆ ಎಸೆಯುವುದು, ದನ–ಕರು ಮತ್ತಿತರ ಜಾನುವಾರುಗಳನ್ನು ವಿದ್ಯುತ್ ಗೋಪುರಕ್ಕೆ ಕಟ್ಟುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ನಿರ್ಬಂಧಿತ ಚಟುವಟಿಕೆಗಳನ್ನು ನಡೆಸಿ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ನಿಗಮವು ಯಾವುದೇ ರೀತಿಯಲ್ಲಿ ಜವಾಬ್ದಾರಿಯಾಗಿರುವುದಿಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಈ ಪ್ರಸರಣ ಮಾರ್ಗವು ಜಿಲ್ಲೆಯ ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಸುರಿಗೇನಹಳ್ಳಿ ಕಾವಲ್, ಕೊನೆಮಾದೇನಹಳ್ಳಿ, ಕಟ್ಟಿಗೇನಹಳ್ಳಿ ಮತ್ತು ಜಿ. ಹೊಸಹಳ್ಳಿ ಗ್ರಾಮಗಳ ಸರಹದ್ದಿನಲ್ಲಿ ಹಾದುಹೋಗಿದೆ ಎಂದು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ನೀರುಗಂಟಿ(ನೀರು ಸರಬರಾಜು ನೌಕರರು)ಗಳ ಮುಷ್ಕರದಿಂದ ಕಳೆದ 3 ದಿನಗಳಿಂದ ನಗರದಲ್ಲಿ ಉಲ್ಬಣಗೊಂಡಿದ್ದ ನೀರಿನ ತೀವ್ರ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ರಾತ್ರಿ 8:30 ಗಂಟೆಗೆ 26ನೇ ವಾರ್ಡು ಅಶೋಕ್ ನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ನಿವಾಸಿಗಳಿಂದ ನೀರಿನ ಸಮಸ್ಯೆ ಕುರಿತು ಅಹವಾಲುಗಳನ್ನು ಆಲಿಸಿದ ಅವರು ತಕ್ಷಣದ ಪರಿಹಾರವಾಗಿ ಒಂದು ದಿನದ ಮಟ್ಟಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನಿರ್ದೇಶನ ನೀಡಿದರು. ನೀರು ಸರಬರಾಜು ನೌಕರರ ಮುಷ್ಕರದಿಂದ ನೀರಿನ ಸಮಸ್ಯೆ ಉಂಟಾಗಿದೆ. ಇನ್ನು ಮುಂದೆ ಎಂದಿನಂತೆ ನೀರು ಸರಬರಾಜು ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮಾಧಾನದ ಮಾತುಗಳನ್ನು ಹೇಳಿದರು. ಸ್ವಚ್ಛತೆ ಇಲ್ಲದಿರುವುದರಿಂದ ವಿಷಜಂತುಗಳ ಸಮಸ್ಯೆಯನ್ನು ಎದುರಿಸುತ್ತಿದ್ದು, ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಮನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ…
ಬೀದರ್: ಭಾಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನರಿಗೆ ಸುಗಮ ಸಂಚಾರ ಒದಗಿಸುವ ನಿಟ್ಟಿನಲ್ಲಿ ವಳಂಡಿ–ಹೈದ್ರಾಬಾದ್ (ಆಳವಾಯಿ, ಮೆಹಕರ್, ಸಾಯಿಗಾವ್) ಹಾಗೂ ಭಾಲ್ಕಿ–ಉದಗೀರ್ (ಸೋಂಪುರ, ಅತನೂರ್, ಲಖನಗಾವ್) ಮಾರ್ಗದ ಹೊಸ ಬಸ್ ಸೇವೆಗೆ ಬೀದರ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ಹಸಿರು ನಿಶಾನೆ ತೋರಿದ್ದಾರೆ. ಈ ಸೇವೆಯಿಂದ ಪ್ರಯಾಣ, ಉದ್ಯೋಗ, ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿತ ಸಂಚಾರ ಸುಗಮಗೊಳ್ಳಲಿದೆ. ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಸಾಗರ್ ಖಂಡ್ರೆ ವಿನಂತಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆಯುತ್ತಿದ್ದ ಚಾಂಪಿಯನ್ಸ್ ಟ್ರೋಫಿ–2025 ಪಂದ್ಯದ ವೇಳೆ ಸಾರ್ವಜನಿಕರಿಂದ ಹಣ ಪಡೆದುಕೊಂಡು ಕ್ರಿಕೆಟ್ ಆಟದ ಮೇಲೆ ಕಾನೂನು ಬಾಹಿರವಾಗಿ ಬೆಟ್ಟಿಂಗ್ ಕಟ್ಟಿಕೊಂಡು ಹಣ ಪಡೆಯುತ್ತಿದ್ದ ಅಡ್ಡೆ ಮೇಲೆ ಬೀದರ್ ಸೆನ್ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ವಾಹನ ಹಾಗೂ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಬೀದರ್ ಸೆನ್ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಎನ್.ಡಿ ಸನಾದಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಆರೋಪಿಗಳಿಂದ 17 ಸಾವಿರ ರೂ. ನಗದು, 2 ಮೊಬೈಲ್ ಹಾಗೂ 1 ಕಾರು ಸೇರಿದಂತೆ ಒಟ್ಟು 10,41,000 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಯಿತು. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸಿದ್ರಾಮೇಶ, ಪ್ರಶಾಂತ, ಸಂಜುಕುಮಾರ ಭಾಗವಹಿಸಿದ್ದರು. ಬೆಟ್ಟಿಂಗ್ ಜೂಜಾಟದ ಮೇಲೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯ…
ಕೊರಟಗೆರೆ : ಪಟ್ಟಣದ ಶಿವಗಂಗಾ ಚಿತ್ರಮಂದಿರದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಯೂರ ಬೇಕರಿ ಮತ್ತು ಸ್ವೀಟ್ಸ್ ಅಂಗಡಿಯಲ್ಲಿ ತಯಾರಿಸಿದ ಪದಾರ್ಥಗಳು ಕಳಪೆಯಿಂದ ಕೂಡಿದ್ದು ಹಳಸಿದ ಎಗ್ ರೋಲ್ ಗ್ರಾಹಕರಿಗೆ ನೀಡಿದ್ದಾರೆ ಎಂದು ಭೀಮ್ ಆರ್ಮಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ನವೀನ್ ಕುಮಾರ್ ರವರು ದೂರು ನೀಡಿರುವ ಘಟನೆ ನಡೆದಿದೆ. ದಿನಾಂಕ 3 ಮಾರ್ಚ್ ರಂದು ಸಂಜೆ 8:30 ರ ವೇಳೆಯಲ್ಲಿ ನಾನು ಊರಿಗೆ ಸಮಯದಲ್ಲಿ ಮಕ್ಕಳಿಗೆ ಹಾಗೂ ನನಗೆ ಸದರಿ ಬೇಕರಿಯಲ್ಲಿ ಎಗ್ ರೋಲ್ ಅನ್ನು ಖರೀದಿಸಿ ಮನೆಗೆ ಪಟ್ಟಣ ಕಟ್ಟಿಸಿಕೊಂಡು ಹೋಗಿ ಮಕ್ಕಳಿಗೆ ನೀಡಿ ಹಾಗೂ ನಾನು ತಿನ್ನಲು ಹೋದಾಗ ಈ ಆಹಾರದಿಂದ ಕೊಳೆತ ವಾಸನೆ ಬಂದಾಗ ಪರಿಶೀಲಿಸಿದಾಗ ಪದಾರ್ಥವು ಹಳಸಿರುವುದು ಕಂಡು ಬಂದ ಹಿನ್ನಲೆ ಕೂಡಲೇ ಕೊರಟಗೆರೆಯ ಮಯೂರ ಬೇಕರಿಗೆ ತೆರಳಿ ತಿಳಿಸಿದಾಗ ಅಲ್ಲಿನ ಸಿಬ್ಬಂದಿಗಳು ಉಡಾಫೆ ಮಾತಗಳನ್ನಾಡಿದರು. ಕೂಡಲೇ ಆಹಾರ ಸಂರಕ್ಷಾಣಾಧಿಕಾರಿಗಳು ಕೊರಟಗೆರೆಯ ಮಯೂರ ಬೇಕರಿ ಅಂಡ್ ಸ್ವೀಟ್ಸ್ ಅಂಗಡಿಯಲ್ಲಿ ತಯಾರಾಗುವ ಎಲ್ಲಾ ಪದಾರ್ಥಗಳನ್ನು ಪರಿಶೀಲಿಸಿ ಕೂಡಲೇ…