Author: admin

ತುಮಕೂರು: ಜಿಲ್ಲಾಸ್ಪತ್ರೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನರ್ಸಿಂಗ್ ಕಾಲೇಜಿಗೆ ಇದೇ ಮೊದಲ ಬಾರಿಗೆ 10 ರ‍್ಯಾಂಕುಗಳು ಲಭಿಸಿದ್ದು, ರ‍್ಯಾಂಕು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಅಸ್ಗರ್ ಬೇಗ್ ಹಾಗೂ ಸ್ಥಾನೀಯ ವೈದ್ಯಾಧಿಕಾರಿ ಡಾ.ನಾಗರಾಜ್ ಜಿ. ಅಭಿನಂದನೆ ತಿಳಿಸಿದ್ದಾರೆ. ಸರ್ಕಾರಿ ನರ್ಸಿಂಗ್ ಕಾಲೇಜು 2019ರಲ್ಲಿ ಪ್ರಾರಂಭವಾಗಿದ್ದು, ಇದುವರೆಗೆ ಒಟ್ಟು 6 ತಂಡಗಳು ನರ್ಸಿಂಗ್ ತರಗತಿಗೆ ದಾಖಲಾಗಿವೆ. 2020–24ನೇ ಸಾಲಿನ 2ನೇ ತಂಡವು ವಿಷಯವಾರು ರಾಜ್ಯದ 10 ರ‍್ಯಾಂಕುಗಳಲ್ಲಿ ತುಮಕೂರು ಸರ್ಕಾರಿ ನರ್ಸಿಂಗ್ ಕಾಲೇಜಿಗೆ ಇದೇ ಪ್ರಥಮ ಬಾರಿಗೆ 10 ರ‍್ಯಾಂಕುಗಳು ಲಭಿಸಿದ್ದು, 1ನೇ ಬಿ.ಎಸ್ಸಿ ನರ್ಸಿಂಗ್ ತರಗತಿಯ ವಿದ್ಯಾರ್ಥಿನಿಯರಾದ ಸುಷ್ಮಾ 8ನೇ ರ‍್ಯಾಂಕ್, ಸಂಗೀತಾ ಮಾದರ್ 9 ಹಾಗೂ ಅಂಜಲಿ ಕಿರಸೂರು ಹಾಗೂ ಗಗನ ಎಂ.ಎಸ್. 10ನೇ ರ‍್ಯಾಂಕ್; 2ನೇ ಬಿ.ಎಸ್ಸಿ ನರ್ಸಿಂಗ್ ತರಗತಿ ವಿದ್ಯಾರ್ಥಿನಿ ದಿವ್ಯ ಎನ್. 8ನೇ ರ‍್ಯಾಂಕ್, 3ನೇ ಬಿ.ಎಸ್ಸಿ ನರ್ಸಿಂಗ್ ತರಗತಿ ವಿದ್ಯಾರ್ಥಿನಿ ಅಂಜಲಿ ಕಿರಸೂರು ಹಾಗೂ ಗಗನ್ ಕುಮಾರ್ ಹೆಚ್. 4ನೇ ರ‍್ಯಾಂಕ್; 4ನೇ…

Read More

ತುಮಕೂರು:  ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಹಳೇವೂರು ಗ್ರಾಮದ ಶ್ರೀ ಹುಲಿಯೂರಮ್ಮ ದೇವಾಲಯದ ಜಾತ್ರಾ ಮಹೋತ್ಸವವು ಮಾರ್ಚ್ 16 ರಿಂದ 21ರವರೆಗೆ ನಡೆಯಲಿದೆ. ಜಾತ್ರೆ ಅಂಗವಾಗಿ ಮಾ.16ರಂದು ಬೆಳಿಗ್ಗೆ 6 ಗಂಟೆಗೆ ಹೊನ್ನಾರು, ರಾತ್ರಿ 9 ಗಂಟೆಗೆ ಅರಮನೆ ಆರತಿ; ಮಾ.17ರಂದು ಮಧ್ಯಾಹ್ನ ಕುರ್ಜಿನ ಉತ್ಸವ, ರಾತ್ರಿ ಘಟೆ ಉತ್ಸವ, ಸೂರ್ಯಮಂಡಲೋತ್ಸವ, ದೇವರ ಉತ್ಸವ, ಹುಯಿಲ್ ಬಂಡಿ ಉತ್ಸವ; ಮಾ.18ರಂದು ಬೆಳಿಗ್ಗೆ ಅಗ್ನಿಕೊಂಡೋತ್ಸವ, ಸಂಜೆ ರಥೋತ್ಸವ, ಅರವಂಟಿಕೆ ಹಾಗೂ ಪಲ್ಲಕ್ಕಿ ಉತ್ಸವ; ಮಾ.19ರಂದು ಕುದುರೆ ವಾಹನೋತ್ಸವ; ಮಾ. 20ರಂದು ಹುಲಿ ವಾಹನೋತ್ಸವ; ಮಾ.21ರಂದು ಮಧ್ಯಾಹ್ನ ಉಯ್ಯಾಲೋತ್ಸವ, ಸಂಜೆ ತೆಪ್ಪೋತ್ಸವ, ಅರವಂಟಿಕೆ ಮತ್ತು ಕಂಭ ವಿಸರ್ಜನೆ ಕಾರ್ಯಕ್ರಮಗಳು ಜರುಗಲಿವೆ. ಈ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವ ಮೂಲಕ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು:  ಪ್ರಸಕ್ತ ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಮುನ್ನವೇ ಕೆಲವು ಖಾಸಗಿ ಶಾಲೆಗಳು ಮಕ್ಕಳನ್ನು ದಾಖಲು ಮಾಡುವಂತೆ ಪೋಷಕರನ್ನು ಒತ್ತಾಯ ಮಾಡುತ್ತಿರುವ ಬಗ್ಗೆ ಜಿಲ್ಲಾ ಖಾಸಗಿ ಶಾಲಾ ಮಕ್ಕಳ ಪೋಷಕರ ಸಂಘ ಆರೋಪಿಸಿದೆ. ಮಕ್ಕಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾಗದ ಕಾರಣ 2025–26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೂ ಮುನ್ನ ಮಕ್ಕಳ ದಾಖಲಾತಿ ಮಾಡಿಕೊಂಡ ಬಗ್ಗೆ ಪೋಷಕರಿಂದ/ಸಾರ್ವಜನಿಕರಿಂದಾಗಲಿ ದೂರುಗಳು ಬಂದಲ್ಲಿ ಸಂಬಂಧಿಸಿದ ಶಾಲೆ/ ಶಾಲಾ ಆಡಳಿತ ಮಂಡಳಿಯನ್ನು ನೇರ ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತುಮಕೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ತುಮಕೂರು ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಕೆರೆಯಲ್ಲಿ ಪ್ರಸ್ತುತ 204 ಎಂ.ಸಿ.ಎಫ್.ಟಿ ನೀರು ಲಭ್ಯವಿದ್ದು, ಲಭ್ಯವಿರುವ ನೀರನ್ನು ಬೇಸಿಗೆ ಅಂತ್ಯದವರೆಗೂ ಸರಬರಾಜು ಮಾಡಬೇಕಾಗಿರುವುದರಿಂದ ನಾಗರಿಕರು ನೀರಿನ್ನು ಮಿತವಾಗಿ ಬಳಕೆ ಮಾಡಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದರು. ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಜಲಸಂಗ್ರಹಗಾರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, 363 ಎಂ.ಸಿ.ಎಫ್.ಟಿ. ಸಾಮರ್ಥ್ಯದ ಬುಗುಡನಹಳ್ಳಿ ಕೆರೆಯಲ್ಲಿ ಲಭ್ಯವಿರುವ 204 ಎಂ.ಸಿ.ಎಫ್.ಟಿ. ನೀರನ್ನು ಜೂನ್ ಅಂತ್ಯದವರಗೆ ನಗರಕ್ಕೆ ನೀರು ಸರಬರಾಜು ಮಾಡಬಹುದಾಗಿದೆ. ನೀರಿನ ಸಮಸ್ಯೆ ತಲೆದೋರದಂತೆ ಕೊಳವೆಬಾವಿಗಳ ಮೂಲಕವೂ ನಾಗರಿಕರಿಗೆ ನೀರು ಸರಬರಾಜು ಮಾಡಲು ಕ್ರಮವಹಿಸಲಾಗಿದೆ. ನಗರಕ್ಕೆ ನೀರು ಸರಬರಾಜು ಮಾಡುವ ಎಲ್ಲಾ ಜಲಶುದ್ಧೀಕರಣ ಘಟಕ, ಜ್ಯಾಕ್‌ ವೆಲ್ ಹಾಗೂ ಪಂಪ್‌ಹೌಸ್‌ಗಳ ಪರಿವೀಕ್ಷಣೆ ನಡೆಸಲಾಗಿದೆ. ಪಂಪ್–ಮೋಟಾರ್‌ಗಳು ಸುಸ್ಥಿತಿಯಲ್ಲಿದ್ದು, ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ. ಪಾಲಿಕೆಗೆ ಸಂಬಂಧಿಸಿದ 4 ವಾಟರ್ ಟ್ಯಾಂಕರ್‌ಗಳಿದ್ದು ಅವಶ್ಯವಿರುವ ಕಡೆ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲು ಟ್ಯಾಂಕರ್‌ಗಳನ್ನು ಉಪಯೋಗಿಸಲಾಗುತ್ತಿದೆ.…

Read More

ತುಮಕೂರು:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಏಮ್’ ಸ್ಕ್ವೇರ್ ಕಾರ್ಪೊರೇಷನ್ ಹಾಗೂ ಅಗಸ್ತ್ಯ ಫೌಂಡೇಶನ್ ವತಿಯಿಂದ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಿರುದ್ಯೋಗಿಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಎಸ್.ಎಸ್.ಎಲ್.ಸಿ, ಬಿ.ಎಸ್ಸಿ ಬಿ.ಎಡ್, ಎಂ.ಎಸ್ಸಿ ಬಿ.ಎಡ್, ಬಿ.ಎ ಬಿ.ಎಡ್ ಹಾಗೂ ಎಂ.ಕಾಂ ತೆರ್ಗಡೆಯಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ತಾಲೂಕು ವ್ಯಾಪ್ತಿಯಲ್ಲಿರುವ  ಮೀಸಲು ಅರಣ್ಯ ಪ್ರದೇಶ ನಾಮದಚಿಲುಮೆಯಲ್ಲಿ ಪೂರ್ವನುಮಾತಿಯಿಲ್ಲದೇ  ಚಿತ್ರೀಕರಣ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಸಿನಿಮಾದ ಶೂಟಿಂಗ್ ಸ್ಥಗಿತಗೊಳಿಸಿದ್ದಾರೆ. ಇನ್ನೂ ಹೆಸರಿಡದ ಸಿನಿಮಾದ ಶೂಟಿಂಗ್ ಕಳೆದ ಐದು ದಿನಗಳಿಂದ ನಾಮದಚಿಲುಮೆಯಲ್ಲಿ ಸಾಗಿತ್ತು. ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಅವರು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಹೊಸ ಸಿನಿಮಾದ ಚಿತ್ರೀಕರಣ ಅನುಮತಿ ಇಲ್ಲದೆ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಶೂಟಿಂಗ್ ನಿಲ್ಲಿಸುವ ಕ್ರಮ ತೆಗೆದುಕೊಂಡಿದ್ದಾರೆ. ಚಿತ್ರೀಕರಣ ನಡೆಯುತ್ತಿರೋ  ಮಾಹಿತಿ ಪಡೆದ ಅರಣ್ಯ ಇಲಾಖೆ ಎಸಿಎಫ್​ ಪವಿತ್ರಾ ನೇತೃತ್ವದ ಸಿಬ್ಬಂದಿ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಬಂದ್ ಮಾಡಿಸಿ, ಶೂಟಿಂಗ್‌ ಗೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣಾ, ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು. ಸುಮಾರು 70–100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅರಣ್ಯ ಇಲಾಖೆ ದಾಳಿ…

Read More

ತುಮಕೂರು:  ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ರಾಜ್ಯಶಾಸ್ತ್ರ ವಿಷಯದಲ್ಲಿ 630 ಹಾಗೂ ಸಂಖ್ಯಾಶಾಸ್ತ್ರ ವಿಷಯದಲ್ಲಿ 14 ವಿದ್ಯಾರ್ಥಿಗಳು ಸೇರಿ ಒಟ್ಟು 644 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ರಾಜ್ಯ ಶಾಸ್ತ್ರ ವಿಷಯಕ್ಕೆ ಒಟ್ಟು 5,465 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 4,835 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ ಸಂಖ್ಯಾಶಾಸ್ತ್ರ ವಿಷಯಕ್ಕೆ ಒಟ್ಟು 926 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 912 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್: ಭಾಡಸಾಂಗವಿ ಗ್ರಾಮದ ಸಂಗಮ–ಶಿವಣಿ ರಸ್ತೆಯ  ಬಳಿ ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭಾಲ್ಕಿ ಗ್ರಾಮೀಣ ವೃತ್ತ ಪೊಲೀಸರು ದಾಳಿ ಮಾಡಿ 6,885 ರೂ. ಬೆಲೆ ಬಾಳುವ ಅಕ್ರಮ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಭಾಲ್ಕಿ ಗ್ರಾಮೀಣ ವೃತ್ತದ ಸಿ.ಪಿ.ಐ  ಹಣಮರಡ್ಡಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 6,885 ರೂಪಾಯಿ ಬೆಲೆ ಬಾಳುವ ವಿಸ್ಕಿ ಬಾಟಲ್/ಪೌಚ್ ಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರ ವಿರುದ್ಧ ಕಾನೂನಿನ ರೀತಿಯ ಕ್ರಮಕೈಕೊಳ್ಳಲಾಗಿದೆ. ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿಯಲ್ಲಿ ಶ್ರಮಿಸಿದ ಭಾಲ್ಕಿ ಗ್ರಾಮೀಣ ವೃತ್ತದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪ್ರದೀಪ್ ಗುಂಟಿ ಅವರು  ಶ್ಲಾಘಿಸಿದ್ದಾರೆ. ವರದಿ:  ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಔರಾದ್:  ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೀದರ್ ಜಿಲ್ಲೆಯ ಔರಾದ ಪಟ್ಟಣದ ಅಲೆಮಾರಿ ಬುಡಕಟ್ಟು ಜನಾಂಗದ ಕಾಲೋನಿಗೆ ಭೇಟಿ ನೀಡಿದರು. ಜನರ ಕುಂದುಕೊರತೆ ಆಲಿಸಿದ ಅವರು, ಇದೇ ವೇಳೆ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗೈರಾಗಿರುವುದನ್ನು ಕಂಡು, ಅಧಿಕಾರಿಗಳ ವಿರುದ್ಧ ಗರಂ ಆದರು. “ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಸೈಟ್ ಮತ್ತು ಮನೆ ನೀಡಲಿಕ್ಕೆ ಇನ್ನೆಷ್ಟು ದಿನಗಳು ಬೇಕು?” ಅಂತಾ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ವರದಿ:  ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚೆನ್ನೈ: ಇಂಡಿಯಾವನ್ನು ‘ಹಿಂದಿಯಾ’ವನ್ನಾಗಿ ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಕಮಲ್ ಹಾಸನ್ ಹೇಳಿದ್ದಾರೆ. ತ್ರಿಭಾಷಾ ಸೂತ್ರ ವಿವಾದ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರವಾಗಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕಮಲ್ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕೇಂದ್ರವು ಎಲ್ಲಾ ರಾಜ್ಯಗಳು ಹಿಂದಿ ಮಾತನಾಡುವಂತೆ ಒತ್ತಾಯಿಸುತ್ತಿದೆ. ಅಲ್ಲದೇ ತನ್ನಿಷ್ಟದ ಪ್ರಕಾರದ ಬಹುಮತದೊಂದಿಗೆ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು. ನಮ್ಮ ಕನಸು ಭಾರತವಾಗಿದ್ದರೆ, ಅವರದ್ದು ‘ಹಿಂದಿಯಾ’ ಆಗಿದೆ. ಕೇಂದ್ರ ಸರ್ಕಾರ ಇಂಡಿಯಾವನ್ನು ‘ಹಿಂದಿಯಾ’ವನ್ನಾಗಿ ಪರಿವರ್ತಿಸಲು ಬಯಸಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More